ಪರೀಕ್ಷೆಗೆ ಮುನ್ನವೇ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ

(ನ್ಯೂಸ್‌ ಕಡಬ) newskadaba.com,  ಫೆ.28:  ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬಂಬಲವಾಡ ಗ್ರಾಮದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು  ಪರೀಕ್ಷೆಗೂ ಮುನ್ನವೇ ಹೃದಯಾಘಾತದಿಂದ ಸಾವನ್ನಪ್ಪಿರುವ ದುರದೃಷ್ಟಕರ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು 17 ವರ್ಷ ಎಂದು ಗುರುತಿಸಲಾಗಿದೆ. ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಇದ್ದ ಕಾರಣ,ಬೆಳಗ್ಗೆಯಿಂದಲೇ ಪರೀಕ್ಷೆಗೆ ಉತ್ಸಾಹದಿಂದ ಸಿದ್ಧತೆ ಮಾಡಿಕೊಳ್ಳುತ್ತಿದ್ದಳು. ಸ್ನಾನ ಮುಗಿಸಿ ಮನೆಯಿಂದ ಹೊರಬರುತ್ತಿದ್ದ ಸನ್ನಿವೇಶದಲ್ಲಿ ಆಕೆಗೆ ದಿಢೀರ್ ಆಗಿ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾಳೆ. ತಕ್ಷಣವೇ ಆತಂಕಗೊಂಡ ಪೋಷಕರು ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ […]

ಪರೀಕ್ಷೆಗೆ ಮುನ್ನವೇ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

593 ಕೋಟಿ GST ವಂಚನೆ ಪತ್ತೆ; ಬೃಹತ್ ನಕಲಿ ITC ಜಾಲದ ಮಾಸ್ಟರ್‌ಮೈಂಡ್ ಆರೆಸ್ಟ್

(ನ್ಯೂಸ್‌ ಕಡಬ) newskadaba.com,  ಫೆ.28:  ರಾಜ್ಯದಲ್ಲಿ ಮತ್ತೊಂದು ಬೃಹತ್ ಜಿಎಸ್ ಟಿ ವಂಚನೆ ಜಾಲ ಬಯಲಾಗಿದ್ದು, ಬೃಹತ್ ನಕಲಿ ITC ಜಾಲದ ಮಾಸ್ಟರ್‌ಮೈಂಡ್ ನನ್ನು ಪೊಲೀಸರು ಬಂಧಿಸಿದ್ದಾರೆ. ಹೌದು.. ರಾಜ್ಯದಲ್ಲಿ ನಡೆದ ಪ್ರಮುಖ ಜಿಎಸ್‌ಟಿ ವಂಚನೆಯ ಶಿಸ್ತುಕ್ರಮದಲ್ಲಿ, ಬೆಳಗಾವಿ ವಲಯ ಘಟಕದ ಜಿಎಸ್‌ಟಿ ಗುಪ್ತಚರ ನಿರ್ದೇಶನಾಲಯ (ಡಿಜಿಜಿಐ) ಅಧಿಕಾರಿಗಳು 593 ಕೋಟಿ ರೂ. ಮೌಲ್ಯದ ವಂಚನೆ ಇನ್‌ವಾಯ್ಸ್‌ಗಳನ್ನು ಒಳಗೊಂಡ ಬೃಹತ್ ನಕಲಿ ಇನ್‌ಪುಟ್ ತೆರಿಗೆ ಕ್ರೆಡಿಟ್ ಜಾಲವನ್ನು ಬಯಲು ಮಾಡಿದ್ದಾರೆ.ಇದು ರಾಜ್ಯಗಳಾದ್ಯಂತ ಕಾರ್ಯನಿರ್ವಹಿಸುತ್ತಿರುವ ಶೆಲ್ ಸಂಸ್ಥೆಗಳ ಅತ್ಯಾಧುನಿಕ

593 ಕೋಟಿ GST ವಂಚನೆ ಪತ್ತೆ; ಬೃಹತ್ ನಕಲಿ ITC ಜಾಲದ ಮಾಸ್ಟರ್‌ಮೈಂಡ್ ಆರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಜಾತಿ ನಿಂದನೆ ಪ್ರಕರಣ- ಒಂದು ವರ್ಷ ಜೈಲು ಶಿಕ್ಷೆ, ದಂಡ

(ನ್ಯೂಸ್‌ ಕಡಬ) newskadaba.com,  ಫೆ.28:  ವೇಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2021 ರಲ್ಲಿ ವರದಿಯಾದ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪಿ ಖಾಲಿದ್ ಅಬ್ದುಲ್ ಖಾದರ್ ಗೆ ಒಂದು ವರ್ಷ ಜೈಲು ಶಿಕ್ಷೆ ಮತ್ತು 10,000 ರೂ. ದಂಡ ವಿಧಿಸಿದೆ. ಎರಡೂ ಕಡೆಯ ವಾದಗಳನ್ನು ಆಲಿಸಿದ ನಂತರ ನ್ಯಾಯಾಧೀಶ ಜಗದೀಶ್ ವಿ.ಎನ್ ಶಿಕ್ಷೆಯನ್ನು ಪ್ರಕಟಿಸಿ ಆದೇಶ ಹೊರಡಿಸಿದರು. ದೂರುದಾರರ ಪರವಾಗಿ ಸರ್ಕಾರಿ ಅಭಿಯೋಜಕ ಜ್ಯೋತಿ ನಾಯಕ್ ಪ್ರಕರಣದಲ್ಲಿ

ಮಂಗಳೂರು: ಜಾತಿ ನಿಂದನೆ ಪ್ರಕರಣ- ಒಂದು ವರ್ಷ ಜೈಲು ಶಿಕ್ಷೆ, ದಂಡ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನದ ದರದಲ್ಲಿ ಭಾರೀ ಹೆಚ್ಚಳ

(ನ್ಯೂಸ್‌ ಕಡಬ) newskadaba.com,  ಫೆ.28:  ಕೆಲವು ದಿನಗಳಿಂದ ಏರಿಕೆಯ ಹಾದಿಯಲ್ಲಿರುವ ಚಿನ್ನದ ದರ ಇಂದು ಕೂಡ ಗಗನಮುಖಿಯಾಗಿದೆಯಾಗಿದೆ. ಶನಿವಾರ ಆಭರಣಪ್ರಿಯರ ನಿದ್ದೆಗೆಡಿಸಿ ಹಳದಿಲೋಹದ ಬೆಲೆ ಭಾರಿ ಹೆಚ್ಚಳ ಕಂಡಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 290 ರುಪಾಯಿ ಏರಿಕೆಯಾಗಿ 15,100 ರುಪಾಯಿಗೆ ಬಂದು ತಲುಪಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನ 316 ಅಧಿಕವಾಗಿದ್ದು, 16,473 ರುಪಾಯಿ ಇದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,20,800 ರುಪಾಯಿ ಆಗಿದ್ದರೆ,

ಚಿನ್ನದ ದರದಲ್ಲಿ ಭಾರೀ ಹೆಚ್ಚಳ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೇಡಿಕೆ ಈಡೇರಿಸದಿದ್ದರೆ ಸೇವೆ ಸ್ಥಗಿತ- ಎಚ್ಚರಿಕೆ ನೀಡಿದ ಸರಕಾರಿ ವೈದ್ಯಾಧಿಕಾರಿಗಳ ಸಂಘ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 28. ಮಾರ್ಚ್ 10ರೊಳಗೆ ಸರಕಾರಿ ವೈದ್ಯರ ಬೇಡಿಕೆಗಳನ್ನು ಈಡೇರಿಸದಿದ್ದರೆ ಸರಕಾರಿ ಸೇವೆ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸುವುದಾಗಿ ಸರಕಾರಿ ವೈದ್ಯಾಧಿಕಾರಿಗಳ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಘಟಕ ಎಚ್ಚರಿಕೆಯನ್ನು ನೀಡಿದೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಘಟಕದ ಅಧ್ಯಕ್ಷ ಡಾ. ದೀಪಕ್ ರೈ, ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಮಾರ್ಚ್ 11ರಿಂದ 15ರ ವರೆಗೆ ಕಪ್ಪುಪಟ್ಟಿ ಧರಿಸಿ ಕೇವಲ ತುರ್ತು ಸೇವೆಯನ್ನು ಮಾತ್ರ ಒದಗಿಸಲಾಗುವುದು. ಮಾರ್ಚ್ 16ರಿಂದ ಸಂಪೂರ್ಣವಾಗಿ ಸೇವೆಯನ್ನು ಸ್ಥಗಿತಗೊಳಿಸುವುದಾಗಿ

ಬೇಡಿಕೆ ಈಡೇರಿಸದಿದ್ದರೆ ಸೇವೆ ಸ್ಥಗಿತ- ಎಚ್ಚರಿಕೆ ನೀಡಿದ ಸರಕಾರಿ ವೈದ್ಯಾಧಿಕಾರಿಗಳ ಸಂಘ Read More »

ಕರಾವಳಿ

ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ- ಕಾರು ಜಖಂ

(ನ್ಯೂಸ್ ಕಡಬ) newskadaba.com ಫೆ. 28.  ವಿದ್ಯುತ್ ಕಂಬಕ್ಕೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ಜಖಂಗೊಂಡ ಘಟನೆ ಘಟನೆ ವಿಟ್ಲ ಸಮೀಪದ ಉಕ್ಕುಡದಲ್ಲಿ ಸಂಭವಿದೆ. ಘಟನೆಯಲ್ಲಿ ವಿದ್ಯುತ್ ಕಂಬ ತುಂಡಾಗಿ ಬಿದ್ದಿದ್ದು ಕಾರಿನ ಮುಂಭಾಗ ಸಂಪೂರ್ಣ ಜಖಂ ಗೊಂಡಿದೆ. ವಿದ್ಯುತ್ ಪ್ರವಹಿಸುವ ತಂತಿಗಳು ರಸ್ತೆಗೆ ಬಿದ್ದರೂ ಭಾರೀ ಅನಾಹುತ ತಪ್ಪಿಹೋಗಿದೆ. ಕಾರಿನಲ್ಲಿದ್ದವರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ- ಕಾರು ಜಖಂ Read More »

ಕರಾವಳಿ, ಕ್ರೈಮ್ ನ್ಯೂಸ್

ಹೊಸ ಕರೆನ್ಸಿ ನೋಟು ಸಾಗಿಸುತ್ತಿದ್ದ ವಿಮಾನ ಪತನ ಕನಿಷ್ಠ 15 ಮಂದಿ ಮೃತ್ಯು..!

(ನ್ಯೂಸ್ ಕಡಬ) newskadaba.com ಫೆ. 28. ಹೊಸ ಕರೆನ್ಸಿ ನೋಟುಗಳನ್ನು ಸಾಗಿಸುತ್ತಿದ್ದ ಬೊಲಿವಿಯನ್ ವಾಯುಪಡೆಗೆ ಸೇರಿದ ಸೇನಾ ಸರಕು ವಿಮಾನವೊಂದು ಪತನಗೊಂಡು ಕನಿಷ್ಠ 15 ಮಂದಿ ಮೃತಪಟ್ಟಿರುವ  ಕುರಿತು ವರದಿಯಾಗಿದೆ. ಟೇಕ್-ಆಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷದಿಂದಾಗಿ ವಿಮಾನವು ನೇರವಾಗಿ ಹೆದ್ದಾರಿಯ ಮೇಲೆ ಅಪ್ಪಳಿಸಿದೆ. ಕ್ಷಣಾರ್ಧದಲ್ಲಿ ರಸ್ತೆಯಲ್ಲಿದ್ದ ನೂರಾರು ವಾಹನಗಳು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸುಟ್ಟು ಕರಕಲಾಗಿವೆ. ಅಗ್ನಿಶಾಮಕ ದಳದ ಮುಖ್ಯಸ್ಥ ಪಾವೆಲ್ ಟೋವರ್ ಅವರ ಪ್ರಕಾರ, ಈ ಭೀಕರ ದುರಂತದಲ್ಲಿ 15 ಮಂದಿ ಮೃತಪಟ್ಟು,

ಹೊಸ ಕರೆನ್ಸಿ ನೋಟು ಸಾಗಿಸುತ್ತಿದ್ದ ವಿಮಾನ ಪತನ ಕನಿಷ್ಠ 15 ಮಂದಿ ಮೃತ್ಯು..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಹೆಜ್ಜೇನು ದಾಳಿ- ಪಂಚಾಯತ್ ನೀರಿನ ನೌಕರನಿಗೆ ಗಾಯ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಫೆ. 28. ಪಂಚಾಯತ್ ನೀರಿನ ಟ್ಯಾಂಕ್ ಮೀಟರ್ ಸರಿಪಡಿಸುತ್ತಿದ್ದ ಸಂದರ್ಭ ಹೆಜ್ಜೇನು ದಾಳಿ ನಡೆಸಿದ ಪರಿಣಾಮ ಪಟ್ಟಣ ಪಂಚಾಯತ್ ನೀರಿನ ನೌಕರ ರೊನಾಲ್ಡ್ ಸಂಜಯನಗರ ಎಂಬವರು ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿ ಕೋರ್ಟ್ ಅವರಣದಲ್ಲಿ ನಡೆದಿದೆ. ಇದನ್ನು ಗಮನಿಸಿ ತಕ್ಷಣ ಕಾರ್ಯಪ್ರವೃತರಾದ ಮುಳುಗು ತಜ್ಞ ಇಸ್ಮಾಯಿಲ್ ಸಂಜಯನಗರ ಅವರು ಕೂಡಲೇ ರಕ್ಷಣಾ ಕಾರ್ಯಕ್ಕೆ ಧಾವಿಸಿ ಹೆಜ್ಜೇನನ್ನು ಓಡಿಸಿ ನೌಕರನನ್ನು ನೀರಿನ ಟ್ಯಾಂಕಿನ ಮೇಲಿಂದ ಕೆಳಗಿಳಿಸಿ ರಕ್ಷಿಸಿದ್ದಾರೆ. ಗಂಭೀರ ಗಾಯಗೊಂಡಿರುವ ನೌಕರ ರೊನಾಲ್ಡ್

ಹೆಜ್ಜೇನು ದಾಳಿ- ಪಂಚಾಯತ್ ನೀರಿನ ನೌಕರನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಮನೆ ಕೆಡವಿ, ಸೊತ್ತುಗಳನ್ನು ನಾಶ ಮಾಡಿದ ಆರೋಪ- ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಫೆ. 28. ಸರಕಾರಿ ಸ್ಥಳದಲ್ಲಿ ಮನೆ ನಿರ್ಮಿಸಿ ವಾಸವಿದ್ದ ಮಹಿಳೆಯೋರ್ವರ ಮನೆಯನ್ನು ಪಕ್ಕದ ಮನೆ ನಿವಾಸಿ ಕೆಡವಿ ಮನೆಯ ಸೊತ್ತುಗಳನ್ನು ಬೀದಿಗೆಸೆದ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ವರದಿಯ ಪ್ರಕಾರ, ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಸರ್ವೇ ನಂಬ್ರ 406/1 ರ ಸರಕಾರಿ ಸ್ಥಳದಲ್ಲಿ ಉಜಿರೆ ಗ್ರಾಮದ ಕಕ್ಕರೆಬೆಟ್ಟು ನಿವಾಸಿ ರಾಜೀವಿ ಎಂಬವರು ಮನೆ ನಿರ್ಮಿಸಿಕೊಂಡು ವಾಸವಿದ್ದು, ಈ ಮನೆಯನ್ನು ಸ್ಥಳೀಯ ನಿವಾಸಿ ರಫೀಕ್ ಎಂಬಾತ ಕೆಡವಿ ಮನೆಯ ಸೊತ್ತುಗಳನ್ನು ಬೀದಿಗೆಸೆದಿರುವುದಾಗಿದೆ.

ಮನೆ ಕೆಡವಿ, ಸೊತ್ತುಗಳನ್ನು ನಾಶ ಮಾಡಿದ ಆರೋಪ- ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಡಾ.ಬಿ.ಆರ್.ಅಂಬೇಡ್ಕರ್, ಡಾ.ಬಾಬು ಜಗಜೀವನರಾಂ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 28. ಎಪ್ರಿಲ್ 5ರಂದು ಡಾ.ಬಾಬು ಜಗಜೀವನರಾಂ 119ನೇ ಜನ್ಮ ದಿನಾಚರಣೆ ಹಾಗೂ ಎಪ್ರಿಲ್ 14 ರಂದು ಡಾ.ಬಿ.ಆರ್.ಅಂಬೇಡ್ಕರ್ 135ನೇ ಜನ್ಮ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಸರ್ಕಾರದ ವತಿಯಿಂದ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಿಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ 2026-27ನೇ ಸಾಲಿನ ಡಾ.ಬಾಬು ಜಗಜೀವನರಾಂ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗಳನ್ನು ನೀಡಿ ಗೌರವಿಸಲು ಉದ್ದೇಶಿಸಲಾಗಿರುತ್ತದೆ. ಆದ್ದರಿಂದ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ

ಡಾ.ಬಿ.ಆರ್.ಅಂಬೇಡ್ಕರ್, ಡಾ.ಬಾಬು ಜಗಜೀವನರಾಂ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ
Scroll to Top