ಚಿನ್ನದ ದರದಲ್ಲಿ ಭಾರೀ ಇಳಿಕೆ

(ನ್ಯೂಸ್‌ ಕಡಬ) newskadaba.com,ಜ.30 ಬೆಂಗಳೂರು: ಕಳೆದೊಂದು ತಿಂಗಳಿಂದ ಭಾರೀ ಏರಿಕೆಯಲ್ಲಿದ್ದ ಚಿನ್ನದ ದರದಲ್ಲಿಂದ ಭಾರೀ ಇಳಿಕೆ ಕಂಡು ಬಂದಿದೆ. 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 755 ರೂ. ಇಳಿಕೆ ಕಂಡು ಬಂದು, 15,640 ರೂ. ಆಗಿದೆ. ಇನ್ನು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 823 ರೂ. ಇಳಿಕೆಯಾಗಿ 17,062 ರೂ. ಆಗಿದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,25,120 ರೂ. ಹಾಗೂ 10 ಗ್ರಾಂಗೆ 1,56,400 ರೂ. ಹಾಗೂ 100 […]

ಚಿನ್ನದ ದರದಲ್ಲಿ ಭಾರೀ ಇಳಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ : ರಿಕ್ಷಾಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು – ಮಡಿಕೇರಿಯಲ್ಲಿ ವಶ

(ನ್ಯೂಸ್‌ ಕಡಬ) newskadaba.com,ಜ.30 ಸುಳ್ಯ: ಜ.28ರಂದು ಅಪರಾಹ್ನ ಕೊಡಗು ಸಂಪಾಜೆಯಲ್ಲಿ ರಿಕ್ಷಾಕ್ಕೆ ಹಿಂದಿನಿಂದ ಗುದ್ದಿ ಪಲ್ಟಿಯಾದ ರಿಕ್ಷಾದ ಚಾಲಕ ಸುಂದರ ಅವರ ಸಾವಿಗೆ ಕಾರಣವಾದ ಕಾರನ್ನು ಮಡಿಕೇರಿ ಸಮೀಪದ ಕಾಟಕೇರಿಯಲ್ಲಿ ಮಡಿಕೇರಿ ಪೋಲೀಸರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಕಾರಲ್ಲಿದ್ದವರು ಮೈಸೂರಿನವರೆಂದು ತಿಳಿದುಬಂದಿದ್ದು ಅವರನ್ನು ಪೋಲೀಸರು ತಮ್ಮ ವಶ ಇರಿಸಿಕೊಂಡಿದ್ದಾರೆ. ವಿಚಾರಣೆ ಮುಂದುವರಿದಿದೆ. ರಿಕ್ಷಾ ಸಂಪಾಜೆ ಗೇಟಿನಿಂದ ಚೆಡಾವು ಕಡೆ ತೆರಳುತ್ತಿದ್ದು ಕೊಡಗು ಸಂಪಾಜೆ ಪೆಟ್ರೋಲ್‌ ಪಂಪ್‌ ಬಳಿಯ ತಿರುವಿನಲ್ಲಿ ಹಿಂದಿನಿಂದ ಬಂದ ಕಾರು ಢಿಕ್ಕಿ ಹೊಡೆದು ಪರಾರಿಯಾಗಿತ್ತು.

ಸುಳ್ಯ : ರಿಕ್ಷಾಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು – ಮಡಿಕೇರಿಯಲ್ಲಿ ವಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಟ ಮಯೂರ್ ಪಟೇಲ್ ಕಿರಿಕ್ ಕುಡಿದು ಕಾರು ಚಲಾಯಿಸಿ ಸರಣಿ ಅಪಘಾತ!

(ನ್ಯೂಸ್‌ ಕಡಬ) newskadaba.com,ಜ.30   ಬೆಂಗಳೂರು: ಕುಡಿದು ವಾಹನ ಚಲಾಯಿಸಿ ಕಾರುಗಳಿಗೆ ಸರಣಿ ಅಪಘಾತ ಮಾಡಿದ ಸ್ಯಾಂಡಲ್‌ವುಡ್ ನಟ ಮಯೂರ್ ಪಟೇಲ್ ವಿರುದ್ಧ ಎಫ್‌ಐಆರ್ ದಾಖಲಾಗಿದೆಓಲ್ಡ್ ಏರ್‌ರ್ಪೋರ್ಟ್  ರಸ್ತೆಯ ಕಮಾಂಡೊ ಆಸ್ಪತ್ರೆ ಸಿಗ್ನಲ್ ಬಳಿ ಬುಧವಾರ ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಸಿಗ್ನಲ್‌ನಲ್ಲಿ ನಿಂತಿದ್ದ ಕಾರುಗಳಿಗೆ ಹಿಂಬದಿಯಿಂದ ಡಿಕ್ಕಿ ಹೊಡೆಯಲಾಗಿದೆ. ಈ ವೇಳೆ ಒಂದಕ್ಕೊಂದು ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ಪಾರ್ಚೂನರ್ ಕಾರಿನಲ್ಲಿ ಮಯೂರ್ ಪಟೇಲ್ ಬರುತ್ತಿದ್ದರು. ತಾನೇ ಕಾರು ಚಲಾಯಿಸುತ್ತಿದ್ದರು. ವೇಗ ಮತ್ತು ಅಜಾಗರೂಕ

ನಟ ಮಯೂರ್ ಪಟೇಲ್ ಕಿರಿಕ್ ಕುಡಿದು ಕಾರು ಚಲಾಯಿಸಿ ಸರಣಿ ಅಪಘಾತ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗನ ಕಾಯಿಲೆಗೆ ಮೊದಲ ಬಲಿ, ಮಲೆನಾಡಿನಲ್ಲಿ ಹೆಚ್ಚಿದ ಆತಂಕ

(ನ್ಯೂಸ್‌ ಕಡಬ) newskadaba.com,ಜ.30 ಶಿವಮೊಗ್ಗ: ಮಂಗನ ಕಾಯಿಲೆ ಸೋಂಕಿನಿಂದ ಬಳಲುತ್ತಿದ್ದ ತೀರ್ಥಹಳ್ಳಿ ತಾಲೂಕಿನ 29 ವರ್ಷದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಇದರೊಂದಿಗೆ, ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ ಹಾಗೂ ಚಿಕ್ಕಮಗಳೂರಿನಲ್ಲಿ ಆತಂಕ ಹೆಚ್ಚಿದೆ. ಮೃತ ಯುವಕನನ್ನು ಸಸಿ ತೋಟದ ನಿವಾಸಿ ಕಿಶೋರ್ ಎಂದು ಗುರುತಿಸಲಾಗಿದೆ. ಜ.20 ರಿಂದ ಕಿಶೋರ್ ವಿಪರೀತ ಜ್ವರದಿಂದ ಬಳಲುತ್ತಿದ್ದ. ಆರಂಭದಲ್ಲಿ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೂ ಜ್ವರದ ತೀವ್ರತೆ ಹೆಚ್ಚಾಗಿತ್ತು. ರೋಗಲಕ್ಷಣಗಳು ಉಲ್ಬಣಗೊಂಡ ಹಿನ್ನೆಲೆ, ಜ.25 ರಂದು ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ

ಮಂಗನ ಕಾಯಿಲೆಗೆ ಮೊದಲ ಬಲಿ, ಮಲೆನಾಡಿನಲ್ಲಿ ಹೆಚ್ಚಿದ ಆತಂಕ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಕ್ರಮ ವಲಸಿಗರ ಗಡಿಪಾರಿಗೆ ವಿಶೇಷ ತಂಡ ರಚನೆ: ರಾಜ್ಯ ಸರ್ಕಾರ

(ನ್ಯೂಸ್‌ ಕಡಬ) newskadaba.com,ಜ.30  ಬೆಂಗಳೂರು: ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ವಲಸಿಗರನ್ನು ಪತ್ತೆ ಮಾಡಿ, ಗಡಿಪಾರು ಮಾಡಲು ವಿಶೇಷ ತಂಡ ರಚನೆ ಮಾಡಲಾಗುವುದು ಎಂದು ರಾಜ್ಯ ಸರ್ಕಾರ ಗುರುವಾರ ಹೇಳಿದೆ. ಗುರುವಾರ ವಿಧಾನಸಭೆಯಲ್ಲಿ ಬಿಜೆಪಿ ಉಚ್ಛಾಟಿತ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್, ರಾಜ್ಯದಲ್ಲಿ ನೆಲೆಸಿರುವ ಅಕ್ರಮ ಬಾಂಗ್ಲಾ ವಲಸಿಗರ ಮಾಹಿತಿಯನ್ನು ನೀಡಿದ್ದ ಹಿಂದುತ್ವ ಕಾರ್ಯಕರ್ತರಿಗೆ ಪೊಲೀಸರಿಂದ ಕಿರುಕುಳ ಉಂಟಾಗುತ್ತಿರುವ ಕುರಿತು ಗಮನ ಸೆಳೆದ ಸೂಚನೆಗೆ ಗೃಹ ಸಚಿವರ ಪರವಾಗಿ ಸಾರಿಗೆ ಹಾಗೂ ಮುಜುರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಉತ್ತರಿಸಿದರು.

ಅಕ್ರಮ ವಲಸಿಗರ ಗಡಿಪಾರಿಗೆ ವಿಶೇಷ ತಂಡ ರಚನೆ: ರಾಜ್ಯ ಸರ್ಕಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗಗನಕ್ಕೇರಿದ ಚಿನ್ನದ ಬೆಲೆ ಇಳಿಕೆಗಾಗಿ ದೇವಿಗೆ ಭಕ್ತನ ವಿಭಿನ್ನ ಹರಕೆ!

(ನ್ಯೂಸ್‌ ಕಡಬ) newskadaba.com,ಜ.30  : ದಿನದಿಂದ ದಿನಕ್ಕೆ ಚಿನ್ನದ ಬೆಲೆ ಗಗನಕ್ಕೇರುತ್ತಿರುವ ಹಿನ್ನೆಲೆಯಲ್ಲಿ, ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಚಿಮ್ನಳ್ಳಿ ಗ್ರಾಮದ ಪ್ರಸಿದ್ಧ ಚಿಮ್ನಳ್ಳಿ ದುರ್ಗಮ್ಮ ದೇವಿಯ ಜಾತ್ರೆಯಲ್ಲಿ ಭಕ್ತನೊಬ್ಬ ಸಲ್ಲಿಸಿದ ವಿಭಿನ್ನ ಹರಕೆ ಇದೀಗ ಎಲ್ಲರ ಗಮನ ಸೆಳೆದಿದೆ. ಭಕ್ತ ಕೆ. ನಾಗರಾಜ ಉಲವತ್ತಿ ಅವರು, “ಚಿನ್ನದ ದರ ಇಳಿಯಲಿ, ಬಡವರು ಹಾಗೂ ಸಾಮಾನ್ಯ ಜನರೂ ಚಿನ್ನ ಖರೀದಿಸಲು ಸಾಧ್ಯವಾಗಲಿ” ಎಂಬ ಅಪರೂಪದ ಆಶಯದೊಂದಿಗೆ ದೇವಿಯ ಮುಂದೆ ಹರಕೆ ಸಲ್ಲಿಸಿದರು. ತಾಯಿಯ ರಥೋತ್ಸವದ ವೇಳೆ, ನಾಗರಾಜ

ಗಗನಕ್ಕೇರಿದ ಚಿನ್ನದ ಬೆಲೆ ಇಳಿಕೆಗಾಗಿ ದೇವಿಗೆ ಭಕ್ತನ ವಿಭಿನ್ನ ಹರಕೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,ಜ.30  ರಾಜ್ಯದ ಹವಾಮಾನದಲ್ಲಿ ಪ್ರತಿದಿನವೂ ಏರುಪೇರು ಉಂಟಾಗುತ್ತಿದ್ದು, ಕಳೆದ ಕೆಲವು ದಿನಗಳಿಂದ ಚಳಿಯ ತೀವ್ರ ಕಡಿಮೆಯಾಗುತ್ತಿದೆ ಎನ್ನುವಾಗಲೇ ಮತ್ತೆ ರಾಜ್ಯದಲ್ಲಿ ಚಳಿ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.. ರಾಜ್ಯದಲ್ಲಿ ಮುಂದಿನ ಎರಡು ದಿನ ತುಂತುರು ಮಳೆ ಜೊತೆಗೆ ಭಾರೀ ಚಳಿಯ ವಾತಾವರಣ ಮುಂದುವರೆಯಲಿದೆ ಎಂದು ಐಎಂಡಿ ಮುನ್ಸೂಚನೆ ಕೊಟ್ಟಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅಂತ್ಯಕ್ರಿಯೆ

(ನ್ಯೂಸ್‌ ಕಡಬ) newskadaba.com,ಜ.29   ಮುಂಬೈ: ವಿಮಾನ ಅಪಘಾತದಲ್ಲಿ ನಿಧನರಾದ ಮಹಾರಾಷ್ಟ್ರ ಡಿಸಿಎಂ ಮತ್ತು ಎನ್‌ಸಿಪಿ ಮುಖ್ಯಸ್ಥ ಅಜಿತ್ ಪವಾರ್ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಬಾರಾಮತಿಯಲ್ಲಿ ನೆರವೇರಿತು. ಅಜಿತ್ ಪವಾರ್ ಅವರ ಪಾರ್ಥಿವ ಶರೀರಕ್ಕೆ ಮಕ್ಕಳಾದ ಪಾರ್ಥ ಹಾಗೂ ಜಯ್ ಅಗ್ನಿಸ್ಪರ್ಶ ಮಾಡಿದರು. ಅಂತ್ಯಕ್ರಿಯೆಯಲ್ಲಿ ಅಜಿತ್ ಪವಾರ್ ಪತ್ನಿ ಸುನೇತ್ರಾ, ಕೇಂದ್ರ ಗೃಹ ಸಚಿವ ಅಮಿತ್, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಿದ್ದರು. ಅಂತ್ಯಕ್ರಿಯೆಗೂ ಮುನ್ನ ಸಾವಿರಾರು ಜನ ಅಜಿತ್ ಪವಾರ್

ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅಂತ್ಯಕ್ರಿಯೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಯುಜಿಸಿಯ ಹೊಸ ನಿಯಮಾವಳಿಗೆ ಸುಪ್ರೀಂ ಕೋರ್ಟ್‌ ತಡೆ

(ನ್ಯೂಸ್‌ ಕಡಬ) newskadaba.com,ಜ.29  ದೆಹಲಿ: ವಿಶ್ವವಿದ್ಯಾಲಯಗಳ ವ್ಯಾಪ್ತಿಯ ಕಾಲೇಜು ಕ್ಯಾಂಪಸ್‌ಗಳಲ್ಲಿ ಜಾತಿ ಆಧಾರಿತ ತಾರತಮ್ಯ ತಡೆಯುವುದಕ್ಕಾಗಿ ವಿಶ್ವ ವಿದ್ಯಾಲಯ ಧನಸಹಾಯ ಆಯೋಗ ಹೊರಡಿಸಿರುವ ನಿಯಮಾವಳಿಯನ್ನು ಸುಪ್ರೀಂ ಕೋರ್ಟ್‌ ತಡೆ ಹಿಡಿದಿದೆ .. ನಿಯಮಾವಳಿ ವಿರುದ್ಧ ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಂದ ವ್ಯಾಪಕ ಪ್ರತಿಭಟನೆ ನಡೆದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್‌ ಈ ಕ್ರಮ ಕೈಗೊಂಡಿದೆ. ಹೊಸ ನಿಯಮಾವಳಿಯನ್ನು ತೀವ್ರವಾಗಿ ಟೀಕಿಸಿದ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠವು, ಇದು ಸಂಪೂರ್ಣ ಅಸ್ಪಷ್ಟತೆಯಿಂದ ಕೂಡಿದೆ ಎಂದು ಹೇಳಿದೆ. ವಿಶ್ವವಿದ್ಯಾಲಯಗಳ ವ್ಯಾಪ್ತಿಯ

ಯುಜಿಸಿಯ ಹೊಸ ನಿಯಮಾವಳಿಗೆ ಸುಪ್ರೀಂ ಕೋರ್ಟ್‌ ತಡೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ

(ನ್ಯೂಸ್‌ ಕಡಬ) newskadaba.com,ಜ.29   ನವದೆಹಲಿ: ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆಯ ನಾಗಲೋಟ ಮುಂದುವರೆದಿದ್ದು ಬುಧವಾರ ಚೆನ್ನೈ ಮತ್ತು ಹೈದರಾಬಾದ್‌ ಮಾರುಕಟ್ಟೆಯಲ್ಲಿ 1 ಕೇಜಿ ಬೆಳ್ಳಿ ಬೆಲೆಯು 4 ಲಕ್ಷ ರು.ಗೆ ತಲುಪಿದೆ. ಮತ್ತೊಂದೆಡೆ ಬೆಂಗಳೂರಿನಲ್ಲಿ ಬೆಳ್ಳಿ ದರ ಒಂದೇ ದಿನ 10,000 ರು. ಏರಿಕೆಯಾಗಿ 3.80 ಲಕ್ಷ ರು.ಗೆ ತಲುಪಿದೆ. ದೆಹಲಿಯಲ್ಲಿ ಕೂಡಾ 15,000 ರು. ಜಿಗಿದು 3.85 ಲಕ್ಷ ರು.ಗೆ ನೆಗೆದಿದೆ. ಇದು ಬೆಳ್ಳಿಯ ಸಾರ್ವಕಾಲಿಕ ಗರಿಷ್ಠ ದರವಾಗಿದೆ. ಕಳೆದ ಮೇ ತಿಂಗಳ ಅಂತ್ಯದ ವೇಳೆಗೆ

ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top