100 ರೂ. ಹಳೆಯ ನೋಟು ನಿಮ್ಮಲ್ಲಿದೆಯೇ..? ಹಾಗಾದರೆ ಈಗಲೇ ಬ್ಯಾಂಕ್‌ಗೆ ನೀಡಿ ➤ ಹಳೆಯ ನೋಟುಗಳನ್ನು ಹಿಂಪಡೆದ ರಿಸರ್ವ್ ಬ್ಯಾಂಕ್

(ನ್ಯೂಸ್ ಕಡಬ) newskadaba.com ನವದೆಹಲಿ, ಜ.22. ನೀವು 100 ರೂಪಾಯಿಯ ಹಳೆಯ ನೋಟುಗಳನ್ನು ತೆಗೆದಿರಿಸುವುದಾದರೆ ಇಲ್ಲಿ ಗಮನಿಸಲೇಬೇಕಿದೆ. ಹಳೆಯ 100 ರೂ. ನೋಟುಗಳನ್ನು ಮಾರ್ಚ್ ಅಂತ್ಯದೊಳಗೆ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧರಿಸಿದೆ ಎಂದು ಸಹಾಯಕ ಮಹಾಪ್ರಬಂಧಕ ಬಿ.ಎಂ.ಮಹೇಶ್ ತಿಳಿಸಿದ್ದಾರೆ. ಹಳೆಯ ನೋಟುಗಳನ್ನು ಹೋಲುವ ಖೋಟಾ ನೋಟುಗಳು ಹೆಚ್ಚಾಗಿರುವುದರಿಂದ 100 ರ ಮುಖಬೆಲೆಯ ಹಳೆಯ ನೋಟುಗಳನ್ನು ಹಿಂಪಡೆಯಲಾಗುತ್ತಿದ್ದು, ಕಳೆದ 6 ವರ್ಷಗಳಿಂದ ಈ ನೋಟುಗಳು ಮುದ್ರಣವಾಗುತ್ತಿಲ್ಲ. ಚಲಾವಣೆಯಲ್ಲಿರುವ ಹಳೆಯ ನೋಟುಗಳನ್ನು ಹಂತ ಹಂತವಾಗಿ ಹಿಂಪಡೆಯಲಾಗುತ್ತಿದ್ದು, ಮಾರ್ಚ್ ಅಂತ್ಯಕ್ಕೆ […]

100 ರೂ. ಹಳೆಯ ನೋಟು ನಿಮ್ಮಲ್ಲಿದೆಯೇ..? ಹಾಗಾದರೆ ಈಗಲೇ ಬ್ಯಾಂಕ್‌ಗೆ ನೀಡಿ ➤ ಹಳೆಯ ನೋಟುಗಳನ್ನು ಹಿಂಪಡೆದ ರಿಸರ್ವ್ ಬ್ಯಾಂಕ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರೈಲ್ವೇ ಕ್ರಷರ್ ನಲ್ಲಿ ಭೀಕರ ಸ್ಫೋಟ ➤ 15ಕ್ಕೂ ಹೆಚ್ಚು ಕಾರ್ಮಿಕರು ಮೃತ್ಯು

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಜ. 22. ಇಲ್ಲಿನ ರೈಲ್ವೇ ಕ್ರಷರ್ ಒಂದರಲ್ಲಿ ಭಾರೀ ಸ್ಫೋಟ ಉಂಟಾಗಿದ್ದು, ಇದರಲ್ಲಿ ಸುಮಾರು ಕನಿಷ್ಠ 15 ಕಾರ್ಮಿಕರು ಮೃತಪಟ್ಟ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಅಕ್ರಮ ಕಲ್ಲು ಗಣಿಗಾರಿಕೆಗೆಂದು ಸುಮಾರು 50 ಡೈನಮೈಟ್‌ ಗಳನ್ನು ಸಾಗಿಸುತ್ತಿದ್ದ ಸಂದರ್ಭದಲ್ಲಿ ಡೈನಮೈಟ್ ಸಿಡಿದ ಪರಿಣಾಮ ಈ ಅನಾಹುತ ಸಂಭವಿಸಿದೆ. ಘಟನೆಯಲ್ಲಿ ಕಾರ್ಮಿಕರ ದೇಹಗಳು ಛಿದ್ರ ಛಿದ್ರವಾಗಿವೆ. ಲಾರಿಯ ತುಂಬಾ ಡೈನಮೈಟ್‌ ಗಳನ್ನು ಸಾಗಿಸಲಾಗುತ್ತಿದ್ದ ವೇಳೆ ಈ ಸ್ಫೋಟ ಸಂಭವಿಸಿದೆ. ಆ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಎಲ್ಲ

ರೈಲ್ವೇ ಕ್ರಷರ್ ನಲ್ಲಿ ಭೀಕರ ಸ್ಫೋಟ ➤ 15ಕ್ಕೂ ಹೆಚ್ಚು ಕಾರ್ಮಿಕರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ಪೆಟ್ರೋಲ್ ಸುರಿದು ಬಸ್ ಚಾಲಕನ ಹತ್ಯೆಗೆ ಯತ್ನ- ಆರೋಪಿ ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 21. ಖಾಸಗಿ ಬಸ್ ಚಾಲಕನಿಗೆ ಪೆಟ್ರೋಲ್ ಎರಚಿ ಬೆಂಕಿ ಕೊಡಲು ಪ್ರಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಫೈಸಲ್ ನಗರದ ಮಹಮ್ಮದ್ ಅಶ್ರಫ್ (26) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಜ.19ರ ಮಂಗಳವಾರ ರಾತ್ರಿ 8.30ರ ಸುಮಾರಿಗೆ ಸ್ಟೇಟ್ ಬ್ಯಾಂಕ್ ಕಡೆಯಿಂದ 23 ನಂಬರಿನ ಸುವರ್ಣ ಹೆಸರಿನ ಖಾಸಗಿ ಬಸ್ ಪಡೀಲ್ ಫೈಸಲ್ ನಗರಕ್ಕೆ ತೆರಳುತ್ತಿದ್ದ ವೇಳೆ ಸೈಡ್ ಕೊಡದ ವಿಚಾರದಲ್ಲಿ ಬೈಕ್ ಸವಾರ ರೌಡಿಸಂ ತೋರಿಸಿ, ಬೈಕನ್ನು ಅಡ್ಡ ಇಟ್ಟು ಬೈದಿದ್ದಲ್ಲದೆ,

ಮಂಗಳೂರು: ಪೆಟ್ರೋಲ್ ಸುರಿದು ಬಸ್ ಚಾಲಕನ ಹತ್ಯೆಗೆ ಯತ್ನ- ಆರೋಪಿ ಖಾಕಿ ಬಲೆಗೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ: ಎಸ್ಡಿಪಿಐ ಮಠ ಬ್ರಾಂಚ್ ವತಿಯಿಂದ ಕುಡಿಯುವ ನೀರಿನ ಟ್ಯಾಂಕ್ ಸ್ವಚ್ಚತೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ.21. ಇಲ್ಲಿನ 6ನೇ ವಾರ್ಡ್ ಮಠದ ಹಿರ್ತಡ್ಕ ಎಂಬಲ್ಲಿ ಕುಡಿಯುವ ನೀರಿನ ಟ್ಯಾಂಕಿಯಲ್ಲಿ ನೀರು ಕಲುಷಿತವಾಗಿದೆ ಎಂಬ ದೂರಿನನ್ವಯ ನೂತನ ಪಂಚಾಯತ್ ಸದಸ್ಯ ರಶೀದ್ ಮಠರವರ ನೇತೃತ್ವದಲ್ಲಿ ಮೂರು ದಿನಗಳ ಹಿಂದೆ ಪರಿಶೀಲನೆ ನಡೆಸಿ ಸ್ವಚ್ಛಗೊಳಿಸುವುದಾಗಿ ಊರವರಿಗೆ ಭರವಸೆ ಕೂಟ್ಟಿದ್ದು, ವಾರದೊಳಗೆ ನೀಡಿದ ಭರವಸೆಯನ್ನು ಪೂರೈಸುವ ಹಠದೊಂದಿಗೆ ರಶೀದ್ ಮಠರವರು ತಮ್ಮ ಪಕ್ಷದ ಕಾರ್ಯಕರ್ತರೊಂದಿಗೆ ಸೇರಿ ನೀರಿನ ಟ್ಯಾಂಕನ್ನು ತೊಳೆದು ಸ್ವಚ್ಛಗೊಳಿಸಿದ್ದಾರೆ. ಈ ಸಂಧರ್ಭದಲ್ಲಿ ಟ್ಯಾಂಕಿಯಲ್ಲಿರುವ ಕೆಸರು, ಕಸ ಕಡ್ಡಿಗಳು ಮತ್ತು

ಉಪ್ಪಿನಂಗಡಿ: ಎಸ್ಡಿಪಿಐ ಮಠ ಬ್ರಾಂಚ್ ವತಿಯಿಂದ ಕುಡಿಯುವ ನೀರಿನ ಟ್ಯಾಂಕ್ ಸ್ವಚ್ಚತೆ Read More »

ಕರಾವಳಿ, ಕರ್ನಾಟಕ

ಉಡುಪಿ: ಹತ್ತನೇ ತರಗತಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬ್ರಹ್ಮಾವರ, ಜ. 21. ಹತ್ತನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರ ಠಾಣಾ ವ್ಯಾಪ್ತಿಯ ಚಾಂತಾರು ಎಂಬಲ್ಲಿ ನಡೆದಿದೆ. ಆತ್ಮಹತ್ಯೆಗೈದವರನ್ನು ಅನುಶ್ರೀ ಎಂದು ಗುರುತಿಸಲಾಗಿದೆ. ಅನುಶ್ರೀ ಬ್ರಹ್ಮಾವರದ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿಯ ಪುತ್ರಿಯಾಗಿದ್ದು, ಆಕೆ ಅದೇ ಶಾಲೆಯ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು ಎನ್ನಲಾಗಿದೆ. ಇಂದು ಸಂಜೆ ತಾಯಿ ಮನೆಗೆ ಬಂದಾಗ ಮಗಳು ನೇಣು ಬಿಗಿದ ಸ್ಥಿತಿಯಲ್ಲಿದ್ದು, ಗಾಬರಿಗೊಂಡ ತಾಯಿಯು ಸಮೀಪದದಲ್ಲಿದ್ದ ನಿರ್ಮಾಣ ಕಟ್ಟಡದ ಕೂಲಿ

ಉಡುಪಿ: ಹತ್ತನೇ ತರಗತಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಇನ್ಮುಂದೆ ಫ್ಲೆಕ್ಸ್, ಬ್ಯಾನರ್ ಹಾಕಿದರೆ 6 ತಿಂಗಳ ಜೈಲು ಶಿಕ್ಷೆಯ ಜೊತೆ ಬೀಳುತ್ತೆ ಭಾರೀ ದಂಡ…!

(ನ್ಯೂಸ್ ಕಡಬ) newskadaba.com ಮೈಸೂರು, ಜ. 21. ಇನ್ನು ಮುಂದೆ ನಗರ ವ್ಯಾಪ್ತಿಯಲ್ಲಿ ಯಾವುದೇ ಪ್ಲೆಕ್ಸ್, ಬ್ಯಾನರ್ ಹಾಕಿದರೆ 10 ಸಾವಿರ ರೂ. ತನಕ ದಂಡ ವಿಧಿಸುವುದಾಗಿ ಮೈಸೂರು ಮಹಾನಗರ ಪಾಲಿಕೆ ಆದೇಶ ಹೊರಡಿಸಿದೆ. ಮೈಸೂರು ನಗರದಲ್ಲಿ ಬ್ಯಾನರ್, ಪ್ಲೆಕ್ಸ್ ಹಾಕದಂತೆ ಸಾಕಷ್ಟು ಜಾಗೃತಿ ಮೂಡಿಸಿದರಾದರೂ ಪ್ಲೆಕ್ಸ್ ಹಾಗೂ ಬ್ಯಾನರ್ ಗಳ ಆಟ ನಿಲ್ಲಲಿಲ್ಲ. ಹೀಗಾಗಿ ಮೈಸೂರು ಮಹಾನಗರ ಪಾಲಿಕೆ ಇನ್ಮುಂದೆ ಪ್ಲೆಕ್ಸ್, ಬ್ಯಾನರ್ ಅಳವಡಿಸಿದರೆ 10 ಸಾವಿರ ರೂ. ತನಕ ದಂಡ ಹಾಗೂ ಕ್ರಿಮಿನಲ್ ಮೊಕದಮ್ಮೆ

ಇನ್ಮುಂದೆ ಫ್ಲೆಕ್ಸ್, ಬ್ಯಾನರ್ ಹಾಕಿದರೆ 6 ತಿಂಗಳ ಜೈಲು ಶಿಕ್ಷೆಯ ಜೊತೆ ಬೀಳುತ್ತೆ ಭಾರೀ ದಂಡ…! Read More »

ಕರ್ನಾಟಕ

ಬಂಟ್ವಾಳ: ಸ್ಕೂಟರ್ ಸ್ಕಿಡ್ ಆಗಿ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 21. ಚಾಲಕನ ನಿಯಂತ್ರಣ ತಪ್ಪಿದ ದ್ವಿಚಕ್ರ ವಾಹನವೊಂದು ಪಲ್ಟಿಯಾಗಿ ಸವಾರ ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ಬುಧವಾರ ರಾತ್ರಿ ವೇಳೆ ನಡೆದಿದೆ. ಮೃತರನ್ನು ಮಂಗಳೂರು ಬೆಂಗ್ರೆ ನಿವಾಸಿ ಅಬ್ದುಲ್ ಅಜೀಜ್ (45) ಎಂದು ಗುರುತಿಸಲಾಗಿದೆ. ಇವರು ಸ್ಕೂಟರ್ ನಲ್ಲಿ ಮಂಗಳೂರಿನಿಂದ ಕಲ್ಲಡ್ಕಕ್ಕೆ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಸವಾರರನ್ನು ಸ್ಥಳೀಯರ ಸಹಕಾರದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಲಕಿದು ಬಂದಿದೆ.

ಬಂಟ್ವಾಳ: ಸ್ಕೂಟರ್ ಸ್ಕಿಡ್ ಆಗಿ ಸವಾರ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ➤ ಕೊನೆಗೂ ರಾಗಿಣಿ ದ್ವಿವೇದಿಗೆ ಜಾಮೀನು ಮಂಜೂರು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 21. ಡ್ರಗ್ಸ್ ಪ್ರಕರಣದಲ್ಲಿ ಭಾಗಿಯಾಗಿ ಜೈಲು ಸೇರಿದ್ದ ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿಗೆ ಸುಪ್ರೀಂ ಕೋರ್ಟ್ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ. ಕಳೆದ ಸೆಪ್ಟೆಂಬರ್ ತಿಂಗಳಿನಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ರಾಗಿಣಿಗೆ ಕೊನೆಗೂ ಜಾಮೀನು ಸಿಕ್ಕಿದ್ದು, ಇಂದು ಅಥವಾ ನಾಳೆ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ. ಕಳೆದ ವಾರ ಹೈಕೋರ್ಟಿನಲ್ಲಿ ಜಾಮೀನು ಅರ್ಜಿ ವಿಚಾರಣೆಗೆ ಬಂದಿತ್ತಾದರೂ ಕೊನೆಕ್ಷಣದಲ್ಲಿ ಜಾಮೀನು ನೀಡಲು ಹೈಕೋರ್ಟ್ ನಿರಾಕರಣೆ ಮಾಡಿದ್ದರಿಂದ ರಾಗಿಣಿ ಪರ

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ➤ ಕೊನೆಗೂ ರಾಗಿಣಿ ದ್ವಿವೇದಿಗೆ ಜಾಮೀನು ಮಂಜೂರು..! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ಪೆಟ್ರೋಲ್ ಸುರಿದು ಬಸ್ ಚಾಲಕನ ಹತ್ಯೆಗೆ ಯತ್ನ ಪ್ರಕರಣ ➤ ಆರೋಪಿಯನ್ನು ಕೂಡಲೇ ಬಂಧಿಸುವಂತೆ ವಿಹಿಂಪ ಆಗ್ರಹ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 21. ಓವರ್ ಟೇಕ್ ಮಾಡುವ ನೆಪದಲ್ಲಿ ಖಾಸಗಿ ಬಸ್ ಚಾಲಕ ಸಂಪತ್ ಪೂಜಾರಿಯನ್ನು ಪೆಟ್ರೋಲ್ ಸುರಿದು ಕೊಲೆ ಮಾಡಲು ಯಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ, ಈ ಕೃತ್ಯವನ್ನು ಎಸಗಿದ ಆರೋಪಿಯನ್ನು ಕೂಡಲೇ ಬಂಧಿಸುವಂತೆ ವಿಹಿಂಪ ಬಜರಂಗದಳ ಮನವಿ ಮಾಡಿದೆ. ಇತ್ತೀಚಿನ ದಿನಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸರ ಹತ್ಯೆಯ ಯತ್ನ, NRC ಹೆಸರಿನಲ್ಲಿ ಗಲಭೆ, ಹನಿ ಟ್ರ್ಯಾಪ್, ಹಿಂದೂಗಳ ಮೇಲೆ ಹಲ್ಲೆ ಮುಂತಾದ ಪ್ರಕರಣಗಳು ನಡೆಯುತ್ತಿದ್ದು, ಇದೀಗ ಖಾಸಗಿ ಬಸ್ ಚಾಲಕರೋರ್ವರಿಗೆ

ಮಂಗಳೂರು: ಪೆಟ್ರೋಲ್ ಸುರಿದು ಬಸ್ ಚಾಲಕನ ಹತ್ಯೆಗೆ ಯತ್ನ ಪ್ರಕರಣ ➤ ಆರೋಪಿಯನ್ನು ಕೂಡಲೇ ಬಂಧಿಸುವಂತೆ ವಿಹಿಂಪ ಆಗ್ರಹ Read More »

ಕರಾವಳಿ, ಕರ್ನಾಟಕ

ನೂತನ ಸಚಿವರಿಗೆ ಖಾತೆ ಹಂಚಿಕೆ ➤ ಬಂದರು ಮತ್ತು ಮೀನುಗಾರಿಕಾ ಸಚಿವರಾಗಿ ಎಸ್.ಅಂಗಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 21. ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಸುಳ್ಯ ಶಾಸಕ ಎಸ್. ಅಂಗಾರ ಅವರಿಗೆ ಮಾನ್ಯ ಮುಖ್ಯಮಂತ್ರಿಯವರು ಖಾತೆ ಹಂಚಿಕೆ ಮಾಡಿದ್ದಾರೆ. ನೂತನ ಸಚಿವರ ಖಾತೆ ಪಟ್ಟಿಯನ್ನು ರಾಜಭವನಕ್ಕೆ ಕಳುಹಿಸಿಕೊಡಲಾಗಿದ್ದು, ಅಂಗಾರ ಅವರಿಗೆ ಮೀನುಗಾರಿಕೆ ಮತ್ತು ಬಂದರು ಖಾತೆಯನ್ನು ನೀಡಲಾಗಿದೆ.

ನೂತನ ಸಚಿವರಿಗೆ ಖಾತೆ ಹಂಚಿಕೆ ➤ ಬಂದರು ಮತ್ತು ಮೀನುಗಾರಿಕಾ ಸಚಿವರಾಗಿ ಎಸ್.ಅಂಗಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top