ಕರ್ತವ್ಯ ನಿರತ ಕುಟ್ರುಪ್ಪಾಡಿ ಪಿ.ಡಿ.ಒ ಮೇಲೆ ಹಲ್ಲೆ ಪ್ರಕರಣ ➤ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು

(ನ್ಯೂಸ್ ಕಡಬ) newskadaba.com ಕಡಬ, ಜ.16. ಕಡಬ ತಾಲ್ಲೂಕಿನ ಕುಟ್ರುಪ್ಪಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಿಲ್ಫ್ರೆಡ್ ಲಾರೆನ್ಸ್ ರೊಡ್ರಿಗಸ್ ಅವರು ಕರ್ತವ್ಯದ ಮೇರೆಗೆ ತೆರಳಿದ್ದ ಸಂದರ್ಭದಲ್ಲಿ ಹೊಸ್ಮಠ ಸಮೀಪದ ದೇರಾಜೆ ಕ್ರಾಸ್ ಬಳಿಯ ನಿವಾಸಿ ಯಾಕೂಬ್ ಸೇರಿದಂತೆ ಐವರು ಕಾರನ್ನು ತಡೆದು ಹಲ್ಲೆ ನಡೆಸಿ, ಮೊಬೈಲ್ ಫೋನ್ ಕಸಿದು ದಾಖಲೆಗಳನ್ನು ಡಿಲೀಟ್ ಮಾಡಿದ್ದಾರೆಂದು ಪಿಡಿಒ ಅವರು ಕಡಬ ಠಾಣೆಗೆ ದೂರು ನೀಡಿದ್ದರು. ಆರೋಪಿಗಳು ತಲೆಮರೆಸಿಕೊಂಡು ವಕೀಲರ ಮೂಲಕ ನ್ಯಾಯಾಲಯಕ್ಕೆ ನಿರೀಕ್ಷಣ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು […]

ಕರ್ತವ್ಯ ನಿರತ ಕುಟ್ರುಪ್ಪಾಡಿ ಪಿ.ಡಿ.ಒ ಮೇಲೆ ಹಲ್ಲೆ ಪ್ರಕರಣ ➤ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು Read More »

ಕರಾವಳಿ, ಕ್ರೈಮ್ ನ್ಯೂಸ್

ತೊಕ್ಕೊಟ್ಟು ಬೀಫ್ ಸ್ಟಾಲ್ ಗಳಿಗೆ ಬೆಂಕಿ ಹಚ್ಚಿದ ಪ್ರಕರಣ ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 16. ಕಳೆದ ವಾರ ತೊಕ್ಕೊಟ್ಟು ಎಂಬಲ್ಲಿ ಬೀಫ್ ಸ್ಟಾಲ್ ಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ತೊಕ್ಕೊಟ್ಟು ಒಳಪೇಟೆ ನಿವಾಸಿ ನಾಗರಾಜ (37) ಎಂದು ಗುರುತಿಸಲಾಗಿದೆ. ಆರೋಪಿಯು ಇದೇ ಬೀಫ್ ಸ್ಟಾಲ್‌ ನಿಂದ ಹಲವು ಬಾರಿ ಮಾಂಸ ಖರೀದಿಸಿ ತನ್ನ ಸ್ನೇಹಿತನ ಮನೆಯಲ್ಲಿ ಅಡುಗೆ ಮಾಡಿ ಸೇವಿಸುತ್ತಿದ್ದನು. ಈ ಹಿಂದೆ ಮಾಂಸದಂಗಡಿಯ ಮಾಲಕರ ಜೊತೆ ನಿಗದಿತ ಬೆಲೆಗಿಂತ ಅಧಿಕ ಮಾಂಸ ನೀಡುವಂತೆ

ತೊಕ್ಕೊಟ್ಟು ಬೀಫ್ ಸ್ಟಾಲ್ ಗಳಿಗೆ ಬೆಂಕಿ ಹಚ್ಚಿದ ಪ್ರಕರಣ ➤ ಆರೋಪಿ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭ್ರಷ್ಟಾಚಾರ ಆರೋಪದಡಿ ತನ್ನ ಕೇಂದ್ರ ಕಛೇರಿಯ ಮೇಲೆಯೇ ದಾಳಿ ನಡೆಸಿದ ಸಿಬಿಐ…!

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 16. ಬ್ಯಾಂಕ್ ವಂಚನೆ ಪ್ರಕರಣಗಳಿಗೆ ಸಂಬಂಧಿಸಿ ಲಂಚ ಪಡೆಯುತ್ತಿದ್ದ ಆರೋಪದ ಮೇರೆಗೆ ಸಿಬಿಐ ಅಧಿಕಾರಿಗಳು ತನ್ನ ಕೇಂದ್ರ ಕಚೇರಿಯ ಮೇಲೆಯೇ ದಾಳಿ ನಡೆಸಿದ್ದಾರೆ. ಸಿಬಿಐ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಪನಿಯೊಂದರಿಂದ ಲಂಚ ಸ್ವೀಕರಿಸಿದ ಆರೋಪದಲ್ಲಿಡಿಎಸ್.ಪಿ ಸೇರಿದಂತೆ ನಾಲ್ವರ ಮೇಲೆ ಸಿಬಿಐ ದೂರು ದಾಖಲಿಸಿಕೊಂಡಿದೆ. ಸಿಬಿಐ ಡಿವೈಎಸ್ ಪಿ ಆರ್.ಕೆ ರಿಷಿ, ಆರ್.ಕೆ ಸಾಂಗ್ವಾನ್, ಸ್ಟೆನೊಗ್ರಾಫರ್ ಸಮೀರ್ ಕುಮಾರ್ ಸಿಂಗ್ ಮತ್ತು ಇನ್ಸ್‌ಪೆಕ್ಟರ್ ಕಪಿಲ್ ಧಂಕಡ್ ವಿರುದ್ದ ಪ್ರಕರಣ ದಾಖಲಿಸಿ ತನಿಖೆ ಮುಂದುವರಿದಿದೆ.

ಭ್ರಷ್ಟಾಚಾರ ಆರೋಪದಡಿ ತನ್ನ ಕೇಂದ್ರ ಕಛೇರಿಯ ಮೇಲೆಯೇ ದಾಳಿ ನಡೆಸಿದ ಸಿಬಿಐ…! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಕರಾವಳಿಯ ವಿವಿಧ ದೇವಾಲಯಗಳಲ್ಲಿ ದರೋಡೆ ಮಾಡುತ್ತಿದ್ದ ಆರು ಮಂದಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 16. ಕರ್ನಾಟಕದ ವಿವಿಧ ದೇವಾಲಯಗಳಲ್ಲಿ ನಡೆದ ಹಲವಾರು ಕಳ್ಳತನಕ್ಕೆ ಸಂಬಂಧಿಸಿ ನಾಲ್ಕು ಮಹಿಳೆಯರು ಸೇರಿದಂತೆ ಆರು ಜನರನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಯಮುನಪ್ಪ ಮುತ್ತಪ್ಪ ಚಲವಾಡಿ (55), ಪ್ರಕಾಶ್ ಚೆನ್ನಪ್ಪ (26), ಶೋಭಾ ಮುತ್ತಾಗರ್ (40), ಕುಮಾರಮ್ಮ ಮಾರುತಿ ಮುತ್ತಾಗರ್ (45), ಶಾಂತಮ್ಮ ಮುತ್ತಾಗರ್ (55) ಹಾಗೂ ಚಂದ್ರಶೇಖರ್ ಶಿವರೆದಪ್ಪ (49) ಎಂಬವರನ್ನು ಬಂಧಿಸಿದ್ದಾರೆ. ಜೊತೆಗೆ ಇವರಲ್ಲಿದ್ದ ಏಳು ಮೊಬೈಲ್ ಫೋನ್‌, 21,540 ರೂ. ನಗದು, ಮತ್ತು

ಮಂಗಳೂರು: ಕರಾವಳಿಯ ವಿವಿಧ ದೇವಾಲಯಗಳಲ್ಲಿ ದರೋಡೆ ಮಾಡುತ್ತಿದ್ದ ಆರು ಮಂದಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿಕಲ ಚೇತನ ಕೈದಿಯನ್ನು ಕೊಚ್ಚಿಗೆ ಸ್ಥಳಾಂತರ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 16. ಕೇರಳ ಕೊಲಮಾಸೆರಿ ಎಂಬಲ್ಲಿ ಕಾಸಿಂ ಮಸೀದಿಯ ಹುಂಡಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ 2020ರ ಜೂನ್ 25ರಂದು ವಿಕಲಚೇತನ ವ್ಯಕ್ತಿಯೋರ್ವನನ್ನು ಕೇಸ್ ನಂ: 567/2020 ರಂತೆ ಕಕ್ಕನಾಡಿನ ಜಿಲ್ಲಾ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿತ್ತು. ಆರೋಪಿಯೊಂದಿಗೆ ಜೈಲಿನ ಅಧಿಕಾರಿಗಳು ಸಂವಹನ ನಡೆಸುವ ಎಲ್ಲಾ ಪ್ರಯತ್ನ ನಡೆಸಿದ್ದಾರೆ. ಜೈಲಿನಲ್ಲಿ ಆರೋಪಿಯು ಸಹ ಕೈದಿಗಳೊಂದಿಗೆ ಬೆರೆಯುತ್ತಿರಲಿಲ್ಲ. 2020ರ ಡಿಸೆಂಬರ್ 16ರಂದು ಆರೋಪಿಯನ್ನು ಖುಲಾಸೆಗೊಳಿಸಿ, ಡಿಸೆಂಬರ್ 17 ರಂದು ಆರೋಪಿಯನ್ನು ಪಲ್ಲುರುತಿ, ವಿಲಿ, ಕೊಚ್ಚಿಗೆ

ವಿಕಲ ಚೇತನ ಕೈದಿಯನ್ನು ಕೊಚ್ಚಿಗೆ ಸ್ಥಳಾಂತರ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೋವಿಡ್ ಲಸಿಕೆ ಪಡೆದ 23 ಮಂದಿ ಮೃತ್ಯು

(ನ್ಯೂಸ್ ಕಡಬ) newskadaba.com ನಾರ್ವೆ, ಜ. 16. ಮೊದಲ ಹಂತದ ಕೋವಿಡ್ ಲಸಿಕೆ ಪಡೆದ ಅಲ್ಪಾವಧಿಯಲ್ಲೇ 23 ಮಂದಿ ಮೃತಪಟ್ಟ ಘಟನೆ ನಡೆದಿದ್ದು, ವಯೋವೃದ್ದರು ಹಾಗೂ ತೀವ್ರ ಅಸ್ವಸ್ಥರು ಲಸಿಕೆ ಪಡೆಯುವುದು ಅಪಾಯಕಾರಿ ಎಂದು ನಾರ್ವೆ ಸರಕಾರ ಅಧಿಕೃತವಾಗಿ ಪ್ರಕಟಿಸಿದೆ. ನಾರ್ವೆಯಲ್ಲಿ ಮೃತಪಟ್ಟ 23 ಜನರ ಅಟಾಪ್ಸಿ ನಡೆಸಿದಾಗ, ತೀವ್ರತರದ ಅಡ್ಡ ಪರಿಣಾಮಗಳಿಗೆ ಲಸಿಕೆ ಕಾರಣವಾಗಿದೆ ಎಂದು ತಿಳಿದು ಬಂದಿದೆ. ಆರೋಗ್ಯವಂತರು ಈ ಲಸಿಕೆಯನ್ನು ಪಡೆಯಬಾರದು ಎಂಬುವುದಲ್ಲ ಇದರ ಅರ್ಥ ಆದರೆ, ಲಸಿಕೆ ನೀಡುವ ಬಗ್ಗೆ ಸುರಕ್ಷತಾ

ಕೋವಿಡ್ ಲಸಿಕೆ ಪಡೆದ 23 ಮಂದಿ ಮೃತ್ಯು Read More »

ಕರಾವಳಿ

ಸುಬ್ರಹ್ಮಣ್ಯ ದೇವಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ನೂತನ ಸಚಿವ ಎಸ್.ಅಂಗಾರ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜ. 16. ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಜಿಲ್ಲೆಗೆ ಆಗಮಿಸಿದ ಸಚಿವ ಎಸ್. ಅಂಗಾರ ಅವರು ಇಂದು ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.  

ಸುಬ್ರಹ್ಮಣ್ಯ ದೇವಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ನೂತನ ಸಚಿವ ಎಸ್.ಅಂಗಾರ Read More »

ಕರಾವಳಿ, ಕರ್ನಾಟಕ

ಮಲ್ಪೆ: ಮೀನುಗಾರಿಕೆಂದು ತೆರಳಿದ್ದ ಮೀನುಗಾರ ಸಮುದ್ರಪಾಲು

(ನ್ಯೂಸ್ ಕಡಬ) newskadaba.com ಉಡುಪಿ, ಜ. 16. ಮೀನುಗಾರಿಕೆಗೆಂದು ತೆರಳಿದ್ದ ವೇಳೆ ಬೋಟಿನಿಂದ ಕಾಲು ಜಾರು ಕೆಳಗೆ ಬಿದ್ದು ಮೀನುಗಾರನೋರ್ವ ಮೃತಪಟ್ಟ ಘಟನೆ ಜಿಲ್ಲೆಯ ಮಲ್ಪೆ ತೀರದಿಂದ ಸುಮಾರು‌13 ನಾಟಿಕಲ್ ಮೈಲಿ ದೂರದಲ್ಲಿ ನಡೆದಿದೆ. ಮೃತ ಮೀನುಗಾರನನ್ನು ಸುಧಾಕರ ವೆಂಕಣ್ಣ ಹೊಸಕಟ್ಟೆ(39) ಎಂದು ಗುರುತಿಸಲಾಗಿದೆ. ಜನವರಿ ಹತ್ತರ ಸಂಜೆ ನಾಲ್ಕು ಗಂಟೆಯ ವೇಳೆಗೆ ಆಳ ಸಮುದ್ರ ಮೀನುಗಾರಿಕೆಗೆಂದು ಮಲ್ಪೆ ಬಂದರಿನಿಂದ ತ್ರಿಜಲ್ ಬೋಟಿನ ಮೂಲಕ ತೆರಳಿದ್ದರು. ಜನವರಿ ಹದಿಮೂರರ ಮಧ್ಯರಾತ್ರಿ ಮಲ್ಪೆ ಬಂದರಿನಿಂದ ಸುಮಾರು 13 ನಾಟಿಕಲ್

ಮಲ್ಪೆ: ಮೀನುಗಾರಿಕೆಂದು ತೆರಳಿದ್ದ ಮೀನುಗಾರ ಸಮುದ್ರಪಾಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ: ಮನೆಗೆ ನುಗ್ಗಿದ ಕಳ್ಳರು ➤ ಲಕ್ಷಾಂತರ ರೂ. ಮೌಲ್ಯದ ನಗದು ಕಳವು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ‌.16. ಇಲ್ಲಿನ ಮನೆಯೊಂದಕ್ಕೆ ಮುಂಬಾಗಿಲ ಬೀಗ ಮುರಿದು ಒಳನುಗ್ಗಿದ ಕಳ್ಳರು ಲಕ್ಷಾಂತರ ರೂ. ನಗದು ಕದ್ದೊಯ್ದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಕಲ್ಲೇರಿ ಎಂಬಲ್ಲಿ ಅಯದಯಂಗಾರ್ ಬೇಕರಿ ನಡೆಸುತ್ತಿದ್ದ ಶರತ್ ಎಂಬವರ ಮನೆಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ನುಗ್ಗಿದ ಕಳ್ಳರು 180 ಗ್ರಾಂ. ತೂಕದ ಚಿನ್ನಾಭರಣ, ಹತ್ತು ಸಾವಿರಕ್ಕೂ ಮಿಕ್ಕ ನಗದು ಹಾಗೂ ದೇವರ ಕೋಣೆಯಲ್ಲಿದ್ದ ಬೆಳ್ಳಿ ಸಾಮಾಗ್ರಿಗಳನ್ನು ಕದ್ದೊಯ್ದಿದ್ದಾರೆ. ರಾತ್ರಿ ಅಂಗಡಿ ಮುಚ್ಚಿ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ.

ಉಪ್ಪಿನಂಗಡಿ: ಮನೆಗೆ ನುಗ್ಗಿದ ಕಳ್ಳರು ➤ ಲಕ್ಷಾಂತರ ರೂ. ಮೌಲ್ಯದ ನಗದು ಕಳವು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಹಿಂದಿ ಜಾಗತಿಕ ಭಾಷೆಯಾಗಿ ಹೊರಹೊಮ್ಮಿದೆ ➤ ಡಾ. ಮನ್ಪಾಲ್ ದೇಸಾಯಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 16. ಭಾರತೀಯರು ವಿಶ್ವದೆಲ್ಲೆಡೆ ತಮ್ಮ ಭಾಷೆ ಮತ್ತು ಸಂಸ್ಕೃತಿಯ  ಮೂಲಕ ಅಸ್ಥಿತ್ವ ಸ್ಥಾಪಿಸಿದ್ದಾರೆ. ಹೀಗಾಗಿ ಹಿಂದಿಯೂ ಜಾಗತಿಕ ಭಾಷೆಯಾಗಿ ಹೊರಹೊಮ್ಮಿದೆ, ಎಂದು ಧಾರವಾಡದ ಕರ್ನಾಟಕ ಕಾಲೇಜಿನ ನಿವೃತ್ತ ಪ್ರಾಧ್ಯಾಪಿಕೆ ಡಾ. ಡಾ. ಮನ್ಪಾಲ್ ದೇಸಾಯಿ ಅಭಿಪ್ರಾಯಪಟ್ಟಿದ್ದಾರೆ. ವಿಶ್ವವಿದ್ಯಾನಿಲಯ ಕಾಲೇಜಿನ ಹಿಂದಿ  ಸಂಘ ಮತ್ತು ಸ್ನಾತಕೋತ್ತರ ವಿಭಾಗಗಳು ಜಂಟಿಯಾಗಿ ಶಿವರಾಮ ಕಾರಂತ ಸಭಾಭವನದಲ್ಲಿ ಬುಧವಾರ ಆಯೋಜಿಸಿದ್ದ ವಿಶ್ವ ಹಿಂದಿ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಆನ್‍-ಲೈನ್ ನಲ್ಲಿ ಭಾಗವಹಿಸಿದ್ದ ಅವರು, 2006 ರಿಂದ

ಹಿಂದಿ ಜಾಗತಿಕ ಭಾಷೆಯಾಗಿ ಹೊರಹೊಮ್ಮಿದೆ ➤ ಡಾ. ಮನ್ಪಾಲ್ ದೇಸಾಯಿ Read More »

ಕರಾವಳಿ, ಕರ್ನಾಟಕ
Scroll to Top