ಕಡಬ ತಾಲೂಕಿನ ಗ್ರಾಮಗಳ ವಿವರ ಪಂಚಮಿತ್ರ ವೆಬ್ ತಾಣದಲ್ಲಿ ಸೇರ್ಪಡೆ…!

(ನ್ಯೂಸ್ ಕಡಬ) newskadaba.com ಕಡಬ, ಜ. 09. ಕರ್ನಾಟಕ ಸರ್ಕಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪಂಚಮಿತ್ರ ವೆಬ್ ತಾಣದಲ್ಲಿ ನೂತನ ಕಡಬ ತಾಲೂಕು ಕೂಡಾ ಸೇರ್ಪಡೆಯಾಗಿದೆ. ತಾಲೂಕಿನ ನಕ್ಷೆಯ ಮೇಲೆ ಕ್ಲಿಕ್ ಮಾಡಿದಾಗ ಎಲ್ಲಾ 21 ಗ್ರಾ.ಪಂ ಗಳ ವಿವರ ಪ್ರಸ್ತುತ ಲಭ್ಯವಾಗುತ್ತಿದೆ. ಈ ವೆಬ್ ತಾಣದಲ್ಲಿ ಆಯಾ ತಾಲೂಕಿನ ನಕ್ಷೆಯ ಮೇಲೆ ಕ್ಲಿಕ್ ಮಾಡಿದ ಕೂಡಲೇ ತಾಲೂಕಿಗೆ ಸಂಬಂಧಿಸಿದ ಗ್ರಾ.ಪಂ ಗಳ ಸಂಪೂರ್ಣ ಮಾಹಿತಿ ಸಿಗಲಿದೆ.

ಕಡಬ ತಾಲೂಕಿನ ಗ್ರಾಮಗಳ ವಿವರ ಪಂಚಮಿತ್ರ ವೆಬ್ ತಾಣದಲ್ಲಿ ಸೇರ್ಪಡೆ…! Read More »

ಕರಾವಳಿ, ಕರ್ನಾಟಕ

ಬಂಟ್ವಾಳ: ಶಾಸಕ ಯು. ರಾಜೇಶ್ ನಾಯಕ್ ಅವರಿಂದ ಅಟೋ ರಿಕ್ಷಾ ಹಸ್ತಾಂತರ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 09. ಶಾಸಕ ಯು. ರಾಜೇಶ್ ನಾಯ್ಕ್ ಅವರು ಬಿ.ಆರ್. ಅಂಬೇಡ್ಕರ್ ಅಭಿವೃದ್ದಿ ನಿಗಮ ಮತ್ತು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ ಇದರ ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಡಿ ಮಂಜೂರಾತಿ ಪತ್ರ ಸಹಿತ ಅಟೋ ರಿಕ್ಷಾವನ್ನು ವಿಧಾನಸಭಾ ಕ್ಷೇತ್ರದ ಫಲಾನುಭವಿಗಳಿಗೆ ವಿತರಣೆ ಮಾಡಿದರು.

ಬಂಟ್ವಾಳ: ಶಾಸಕ ಯು. ರಾಜೇಶ್ ನಾಯಕ್ ಅವರಿಂದ ಅಟೋ ರಿಕ್ಷಾ ಹಸ್ತಾಂತರ Read More »

ಕರಾವಳಿ, ಕರ್ನಾಟಕ

ಬೈಕಂಪಾಡಿ: ಸ್ಪ್ರಿಂಗ್ ಉತ್ಪಾದನಾ ಕೇಂದ್ರದಲ್ಲಿ ಬೆಂಕಿ ಅನಾಹುತ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 09. ಕೈಗಾರಿಕಾ ವ್ಯಾಪ್ತಿಯ ಸ್ಪ್ರಿಂಗ್ ಉತ್ಪಾದನಾ ಕೇಂದ್ರದಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ ಬೈಕಂಪಾಡಿಯಲ್ಲಿ ನಡೆದಿದೆ. ಶುಕ್ರವಾರ ಸಂಜೆ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ. ತಕ್ಷಣ ಸ್ಥಳೀಯ ಎಂ.ಸಿ.ಎಫ್ ಮತ್ತು ಕದ್ರಿಯ ಅಗ್ನಿಶಾಮಕ ಸಿಬಂದಿಗಳು ಆಗಮಿಸಿ ಬೆಂಕಿ ನಂದಿಸುವಲ್ಲಿ ಹರಸಾಹಸಪಟ್ಟರು. ಈ ಘಟನೆಯ ವೇಳೆ ರಾತ್ರಿ ಪಾಳಿಯ ಕಾರ್ಮಿಕರು ಕೆಲಸ ಮಾಡುತ್ತಿದ್ದು, ವಿರಾಮದ ಕಾರಣ ಕೆಲವರು ಚಹಾಕ್ಕೆಂದು ಹೊರಗೆ ತೆರಳಿದ್ದರು. ಅದೃಚ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಬೈಕಂಪಾಡಿ: ಸ್ಪ್ರಿಂಗ್ ಉತ್ಪಾದನಾ ಕೇಂದ್ರದಲ್ಲಿ ಬೆಂಕಿ ಅನಾಹುತ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ತೊಕ್ಕೊಟ್ಟು: ಅಕ್ರಮ ಬೀಫ್ ಸ್ಟಾಲ್ ಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

(ನ್ಯೂಸ್ ಕಡಬ) newskadaba.com ಉಳ್ಳಾಲ, ಜ. 09. ಅಕ್ರಮವಾಗಿ ನಡೆಸುತ್ತಿದ್ದರೆನ್ನಲಾದ ಬೀಫ್ ಸ್ಟಾಲ್ ಗಳಿಗೆ ಕಿಡಿಗೇಡಿಗಳು ರಾತ್ರಿ ಬೆಂಕಿ ಹಚ್ಚಿದ ಘಟನೆ ತೊಕ್ಕೊಟ್ಟು ಒಳಪೇಟೆಯಲ್ಲಿ ನಡೆದಿದೆ. ಖಾದರ್, ಅಬ್ದುಲ್ಲ ಹಾಗೂ ಹನೀಫ್ ಎಂಬವರ ಸ್ಟಾಲ್ ಗಳಿಗೆ ಬೆಂಕಿ‌ ಹಚ್ಚಲಾಗಿದೆ. ಒಳಪೇಟೆಯ ಹಳೆ ಮಾರುಕಟ್ಟೆ ಇದ್ದ ವೇಳೆ ಈ ಮೂರು ಸ್ಟಾಲ್ ಗಳು ಕಾರ್ಯಚರಿಸುತ್ತಿದ್ದು, ಇದೀಗ ಹಳೆ ಮಾರುಕಟ್ಟೆಯ ಕಾಮಗಾರಿ ನಡೆಯುತ್ತಿದ್ದರಿಂದ ಮೂರು ಸ್ಟಾಲ್ ಗಳು ಮಾರುಕಟ್ಟೆಯ ಪಕ್ಕದ ರೈಲ್ವೇ ಇಲಾಖೆಗೆ ಸೇರಿದ ಜಾಗದಲ್ಲಿ ಅಕ್ರಮವಾಗಿ ನಡೆಸುತ್ತಿದ್ದರೆನ್ನಲಾಗಿದೆ. ಇದೀಗ

ತೊಕ್ಕೊಟ್ಟು: ಅಕ್ರಮ ಬೀಫ್ ಸ್ಟಾಲ್ ಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಕ್ಕಳಿಗೆ ಸಿಹಿತಿಂಡಿ ಹಂಚಿ ಕೆಲಕಾಲ ಮಕ್ಕಳ ಕಳ್ಳರಾದ ಯುವ ಕಾಂಗ್ರೆಸ್ ಸದಸ್ಯರು ➤ ದೇರಳಕಟ್ಟೆಯಲ್ಲಿ ನಡೆಯಿತು ಸ್ವಾರಸ್ಯಕರ ಘಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.09. ಯುವ ಕಾಂಗ್ರೆಸ್ ಅಧ್ಯಕ್ಷ ಚುನಾವಣಾ ಪ್ರಚಾರಕ್ಕೆ ಆಗಮಿಸಿದ್ದ ಯುವಕರ ಗುಂಪೊಂದು ಸ್ಥಳೀಯ ಮಕ್ಕಳಿಗೆ ಸಿಹಿತಿಂಡಿ ಹಂಚಿದ್ದರಿಂದ ಕೆಲಕಾಲ ಆತಂಕ ಸೃಷ್ಟಿಯಾದ ಘಟನೆ ದೇರಳಕಟ್ಟೆಯಲ್ಲಿ ನಡೆದಿದೆ. ಯುವ ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯ ಪ್ರಚಾರಕ್ಕೆಂದು ಮಹಮ್ಮದ್ ನಲಪಾಡ್ ಬೆಂಬಲಿಗರ ತಂಡವೊಂದು ಎರಡು ಕಾರುಗಳಲ್ಲಿ ಮಂಗಳೂರಿಗೆ ಆಗಮಿಸಿತ್ತು. ಕಾರನಲ್ಲಿದ್ದವರು ದೇರಳಕಟ್ಟೆಯ ಬೇಕರಿಯೊಂದರಲ್ಲಿ ಚಹಾ ಕುಡಿದು ಅಲ್ಲೇ ಹೊರಗಡೆ ಇದ್ದ ಮಕ್ಕಳಿಗೆ ಸಿಹಿತಿಂಡಿ ಹಂಚಿದ್ದಾರೆ ಎನ್ನಲಾಗಿದೆ. ಈ ವೇಳೆ ಅಲ್ಲಿದ್ದ ಮಗುವೊಂದು ಭಯದಿಂದ ಕಿರುಚಿದ್ದು, ತಕ್ಷಣವೇ

ಮಕ್ಕಳಿಗೆ ಸಿಹಿತಿಂಡಿ ಹಂಚಿ ಕೆಲಕಾಲ ಮಕ್ಕಳ ಕಳ್ಳರಾದ ಯುವ ಕಾಂಗ್ರೆಸ್ ಸದಸ್ಯರು ➤ ದೇರಳಕಟ್ಟೆಯಲ್ಲಿ ನಡೆಯಿತು ಸ್ವಾರಸ್ಯಕರ ಘಟನೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಶ್ರೀ ಶ್ರೀ ಅಯ್ಯಪ್ಪ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಇಂದು ಶುಭ ಮತ್ತು ಲಾಭ, ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ

ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಪಂಡಿತ್ ದಾಮೋದರ್ ಭಟ್ ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ ಅಂಜನ ಶಾಸ್ತ್ರ ದೈವಪ್ರಶ್ನೆ ಜಾತಕ ಆಧಾರಿತವಾಗಿ ನಿಮ್ಮ ಸಮಸ್ಯೆಗಳಿಗೆ ಶ್ರೀ ಕಟೀಲು ದುರ್ಗಾಪರಮೇಶ್ವರೀ ಅಮ್ಮನವರ ದೈವಿಕ ಪೂಜಾ ಶಕ್ತಿಯಿಂದ ನಿಮ್ಮ ಸಮಸ್ಯೆಗಳಿಗೆ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ಕರೆ ಮಾಡಿ.9008993001 ಮೇಷ ರಾಶಿ ನಿಮ್ಮ ವ್ಯಾವಹಾರಿಕ ದೃಷ್ಟಿಕೋನ ಭವಿಷ್ಯದ ಅಭಿವೃದ್ಧಿಗೆ ಪೂರಕವಾಗಲಿದೆ. ನಿಮ್ಮಲ್ಲಿನ ವ್ಯಕ್ತಿತ್ವಕ್ಕೆ ಅಡ್ಡಿಯಾಗಿರುವ ಕೆಲವು ಅಂಶಗಳನ್ನು ತೆಗೆದುಹಾಕಿ ಮುನ್ನಡೆಯಿರಿ. ನಿಮ್ಮ ಯೋಜನೆಗಳಿಗೆ

ಶ್ರೀ ಶ್ರೀ ಅಯ್ಯಪ್ಪ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಇಂದು ಶುಭ ಮತ್ತು ಲಾಭ, ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ Read More »

ಕರ್ನಾಟಕ, ಭವಿಷ್ಯ

ಬೆಳ್ತಂಗಡಿ: ಮೇಲ್ವಿಚಾರಕ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 08. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮ ಪಂಚಾಯತ್‍ ನ ಗ್ರಂಥಾಲಯ ಮೇಲ್ವಿಚಾರಕರ ಸ್ಥಾನವನ್ನು ಭರ್ತಿ ಮಾಡಲು ಎಸ್.ಎಸ್.ಎಲ್.ಸಿ ಪಾಸಾದ ಹಾಗೂ ಅದೇ ಪಂಚಾಯತ್ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಅರ್ಹ ಅಭ್ಯರ್ಥಿಗಳಿಂದ ಫೆಬ್ರವರಿ 5 ರೊಳಗೆ ಅರ್ಜಿ  ಆಹ್ವಾನಿಸಲಾಗಿದೆ. ಗ್ರಂಥಾಲಯ ಮೇಲ್ವಿಚಾರಕರ ಸ್ಥಾನವು ಪರಿಶಿಷ್ಟ ಜಾತಿ (ಮಹಿಳಾ ಅಭ್ಯರ್ಥಿ)ಗೆ ಮೀಸಲಾಗಿರುತ್ತದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂ:0824-2441905 ಸಂಪರ್ಕಿಸಬಹುದು ಎಂದು ಮಂಗಳೂರು ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿಗಳು ಪ್ರಕಟಣೆಯಲ್ಲಿ

ಬೆಳ್ತಂಗಡಿ: ಮೇಲ್ವಿಚಾರಕ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಫುಡ್ ಸೇಫ್ಟಿ ಲೈಸೆನ್ಸ್ – ಆನ್-ಲೈನ್ ನಲ್ಲಿ ಲಭ್ಯ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 08. ಜಿಲ್ಲೆಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದಿಂದ ಭ್ರಷ್ಟಾಚಾರ ವಿರೋಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದಿಂದ ಲೈಸೆನ್ಸ್‍ ಗಾಗಿ ಅರ್ಜಿ ಸಲ್ಲಿಸಿದವರಿಗೆ ಎಲ್ಲಾ ಫುಡ್ ಸೇಫ್ಟಿ ಲೈಸೆನ್ಸ್‍ ಗಳನ್ನು ಅಂಚೆ ಮೂಲಕ ಕಳಿಸಲಾಗುವುದು ಅಥವಾ ಆಹಾರ ಉದ್ಯಮಿಗಳು ತಾವು ಅರ್ಜಿ ಸಲ್ಲಿಸಿದ ಯೂಸರ್‍ ಐಡಿ ಮತ್ತು ಪಾಸ್ ವರ್ಡ್ ಮುಖಾಂತರ ತಮ್ಮ ಫುಡ್ ಸೇಫ್ಟಿ ಲೈಸೆನ್ಸ್‍ ಗಳನ್ನು ಮುದ್ರಿಸಿಕೊಳ್ಳಬಹುದು. ಇದಕ್ಕೆ ಯಾವುದೇ ಅಧಿಕಾರಿಗಳ ಸಹಿಯ

ಫುಡ್ ಸೇಫ್ಟಿ ಲೈಸೆನ್ಸ್ – ಆನ್-ಲೈನ್ ನಲ್ಲಿ ಲಭ್ಯ Read More »

ಕರಾವಳಿ, ಕರ್ನಾಟಕ

ರಾಜ್ಯದಾದ್ಯಂತ ಸೋಮವಾರದಿಂದ ಕೋವಿಡ್ ಲಸಿಕೆ ವಿತರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 08. ಸೋಮವಾರದಿಂದ ರಾಜ್ಯದಾದ್ಯಂತ  ಕೊರೊನಾ ಲಸಿಕೆ ವಿತರಣೆ ಮಾಡಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.   ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕೇಂದ್ರದಿಂದ ರಾಜ್ಯಕ್ಕೆ ನಾಳೆ ಲಸಿಕೆ ಬರಲಿದ್ದು, ಸೋಮವಾರದಿಂದ ಲಸಿಕೆ ವಿತರಣೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ಕೇಂದ್ರದಿಂದ ರಾಜ್ಯಕ್ಕೆ 13.90 ಲಕ್ಷ ಡೋಸ್ ಬರಲಿದ್ದು, ಇಂದು 263 ಸ್ಥಳಗಳಲ್ಲಿ ಡ್ರೈರನ್ ಪ್ರಾರಂಭವಾಗಲಿದೆ. ಇದಕ್ಕಾಗಿ ಆರೋಗ್ಯ ಇಲಾಖೆಯಿಂದ ಸಿದ್ಧತೆ ಮಾಡಲಾಗಿದೆ ಎಂದು ಹೇಳಿದರು.

ರಾಜ್ಯದಾದ್ಯಂತ ಸೋಮವಾರದಿಂದ ಕೋವಿಡ್ ಲಸಿಕೆ ವಿತರಣೆ Read More »

ಕರಾವಳಿ

ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್ ➤ ರಾಗಿಣಿ ಅರ್ಜಿ ವಿಚಾರಣೆ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 08.ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ನಟಿ ರಾಗಿಣಿ ಜಾಮೀನು ಅರ್ಜಿಯ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ.     ರಾಗಿಣಿ ಪರ ವಕೀಲರಾದ ಶಾಹಿಲ್ ಭಾಲೈಕ್, ವಿಚಾರಣೆಯನ್ನು ವಜಾಗೊಳಿಸಿದ್ದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಸುಪ್ರೀಂಕೋರ್ಟ್ ಜಾಮೀನು ಅರ್ಜಿಯ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ.  

ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್ ➤ ರಾಗಿಣಿ ಅರ್ಜಿ ವಿಚಾರಣೆ ಮುಂದೂಡಿಕೆ Read More »

ಕರ್ನಾಟಕ
Scroll to Top