ಉಡುಪಿ: ಸಿಡಿಲು ಬಡಿದು ಬೆಂಕಿಗಾಹುತಿಯಾದ ಹೋಟೆಲ್

(ನ್ಯೂಸ್ ಕಡಬ) newskadaba.com ಉಡುಪಿ, ಜ. 07. ಬುಧವಾರದಂದು ಸಂಜೆ ಸುರಿದ ಭಾರೀ ಮಳೆಯ ಮರಿಣಾಮ ಸಿಡಿಲು ಬಡಿದು ಹೋಟೆಲ್ ಬೆಂಕಿಗಾಹುತಿಯಾದ ಘಟನೆ ಉಡುಪಿಯಲ್ಲಿ ನಡೆದಿದೆ. ಬ್ರಹ್ಮಾವರದ ಸಪ್ತಮಿ ಎಂಬ ಹೋಟೆಲೊಂದಕ್ಕೆ ಸಿಡಿಲು ಬಡಿದು ಬೆಂಕಿಗಾಹುತಿಯಾಗಿದೆ.

ಉಡುಪಿ: ಸಿಡಿಲು ಬಡಿದು ಬೆಂಕಿಗಾಹುತಿಯಾದ ಹೋಟೆಲ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾಂಗ್ರೆಸ್ ಗೆ ಮತ್ತೆ ಆಘಾತ ➤ ಪ್ರಭಾವಿ ಕಾಂಗ್ರೆಸ್ ನಾಯಕ ಜೆಡಿಎಸ್ ಗೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 07. ಕಾಂಗ್ರೆಸ್ ಪಕ್ಷಕ್ಕೆ ಇದೀಗ ಮತ್ತೊಂದು ಆಘಾತ ಎದುರಾಗಿದ್ದು, ಕಾಂಗ್ರೆಸ್ ನಾಯಕ ವಿಧಾನಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಜೆಡಿಎಸ್ ಸೇರುವುದಾಗಿ ಘೋಷಿಸಿಕೊಂಡಿದ್ದಾರೆ. ಬುಧವಾರದಂದು ಬೆಂಗಳೂರಿನಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಖಚಿತಪಡಿಸಿದ್ದ ಸಿ.ಎಂ.ಇಬ್ರಾಹಿಂ, ಇಂದು ಬೆಳಿಗ್ಗೆ ಬೆಂಗಳೂರಿನ ಪದ್ಮನಾಭನಗರದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಸಮಾಲೋಚನೆ ನಡೆಸಿದ್ದಾರೆ. ಮೊದಲು ಜನತಾ ದಳದಲ್ಲಿದ್ದ ಇಬ್ರಾಹಿಂ ತದನಂತರ ಕಾಂಗ್ರಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ಸಿದ್ಧರಾಮಯ್ಯರ ಆಪ್ತರಾಗಿದ್ದ ಇವರು ಕೆಲಕಾಲ ಕಾಂಗ್ರೆಸ್

ಕಾಂಗ್ರೆಸ್ ಗೆ ಮತ್ತೆ ಆಘಾತ ➤ ಪ್ರಭಾವಿ ಕಾಂಗ್ರೆಸ್ ನಾಯಕ ಜೆಡಿಎಸ್ ಗೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಅಂಗಡಿಗೆ ನುಗ್ಗಿದ ಪೊಲೀಸ್ ವಾಹನ ➤ ಮಹಿಳೆಗೆ ಗಾಯ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ. 07. ನಿಯಂತ್ರಣ ತಪ್ಪಿದ ಪೊಲೀಸ್ ವಾಹನವೊಂದು ದಿನಸಿ ಅಂಗಡಿಗೆ ನುಗ್ಗಿದ ಘಟನೆ ತಾಲೂಕಿನ ನಾರಾವಿ ಕೆಳಗಿನಪೇಟೆಯಲ್ಲಿ ನಡೆದಿದೆ. ಬೆಂಗಳೂರಿಗೆ ತೆರಳುತ್ತಿದ್ದ ಕಾರ್ಕಳ ಆರಕ್ಷಕ ಠಾಣೆಯ ಬೊಲೆರೊ ವಾಹನವೊಂದು ನಿಯಂತ್ರಣ ತಪ್ಪಿ ರಮೇಶ್ ಎಂಬವರ ಅಂಗಡಿಗೆ ನುಗ್ಗಿದ ಪರಿಣಾಮ ಮಹಿಳೆಯೋರ್ವರು ಗಾಯಗೊಂಡು, ಅಂಗಡಿ ಮಾಲಕ ಅಪಾಯದಿಂದ ಪಾರಾಗಿದ್ದಾರೆ.

ಬೆಳ್ತಂಗಡಿ: ಅಂಗಡಿಗೆ ನುಗ್ಗಿದ ಪೊಲೀಸ್ ವಾಹನ ➤ ಮಹಿಳೆಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜೂನ್ ನಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಮೇ ಎರಡನೇ ವಾರ ದ್ವಿತೀಯ ಪಿಯುಸಿ ಪರೀಕ್ಷೆ ➤ ಸಚಿವ ಸುರೇಶ್ ಕುಮಾರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 07. ಜೂನ್ ಮೊದಲ ವಾರದಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಹಾಗೂ ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಜೂನ್ ನಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಮೇ ಎರಡನೇ ವಾರ ದ್ವಿತೀಯ ಪಿಯುಸಿ ಪರೀಕ್ಷೆ ➤ ಸಚಿವ ಸುರೇಶ್ ಕುಮಾರ್ Read More »

ಕರ್ನಾಟಕ

ಪಡಿತರ ಚೀಟಿದಾರರಿಗೆ ಸಿಹಿಸುದ್ದಿ ನೀಡಿದ ರಾಜ್ಯ ಸರಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 07. ಪಡಿತರ ಚೀಟಿದಾರರಿಗೆ ರಾಜ್ಯ ಸರಕಾರವು ಭರ್ಜರಿ ಸಿಹಿ ಸುದ್ದಿ ನೀಡಿದೆ. ಇನ್ನು ಮುಂದೆ ರಾಜ್ಯದ ನ್ಯಾಯಬೆಲೆ ಅಂಗಡಿಗಳಲ್ಲಿ ಸ್ಯಾಂಡಲ್ ಸೋಪ್, ಅಡುಗೆ ಎಣ್ಣೆ ಹಾಗೂ ಉಪ್ಪು ಸಿಗಲಿದೆ ಎಂದು ಕರ್ನಾಟಕ ರಾಜ್ಯ ಸರಕಾರಿ ಪಡಿತರ ವಿತರಕರ ಸಂಘದಿಂದ ಹಮ್ಮಿಕೊಳ್ಳಲಾದ ರಾಜ್ಯ ಮಟ್ಟದ ಸಮ್ಮೇಳನದಲ್ಲಿ ಆಹಾರ ನಾಗರಿಕ ಸರಬರಾಜು ಸಚಿವ ಕೆ.ಗೋಪಾಲಯ್ಯ ತಿಳಿಸಿದ್ದಾರೆ. ಈ ಯೋಜನೆಯನ್ನು ಹಂತ ಹಂತವಾಗಿ ರಾಜ್ಯದಾದ್ಯಂತ ವಿತರಿಸಲಾಗುವುದು ಎಂದಿದ್ದಾರೆ.

ಪಡಿತರ ಚೀಟಿದಾರರಿಗೆ ಸಿಹಿಸುದ್ದಿ ನೀಡಿದ ರಾಜ್ಯ ಸರಕಾರ Read More »

ಕರ್ನಾಟಕ

ನೆಲ್ಯಾಡಿ: ಕಮರಿಗೆ ಬಿದ್ದ ಖಾಸಗಿ ಬಸ್

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜ.07. ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ರಸ್ತೆ ಬದಿಯ ಕಮರಿಗೆ ಬಿದ್ದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಬಳಿ ಗುರುವಾರ ಬೆಳಿಗ್ಗೆ ನಡೆದಿದೆ. ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಲಾವತ್ತಡ್ಕ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬಲಬದಿಯ ಕಮರಿಗೆ ಬಿದ್ದಿದೆ. ಘಟನೆಯಲ್ಲಿ ಬಸ್ ನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ನೆಲ್ಯಾಡಿ: ಕಮರಿಗೆ ಬಿದ್ದ ಖಾಸಗಿ ಬಸ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಶ್ರೀ ಸದ್ಗುರು ಸಾಯಿಬಾಬಾ ಸ್ವಾಮಿಯನ್ನು ನೆನೆಯುತ್ತ ಇಂದಿನ ನಿಮ್ಮ ಜೀವನದ ಭವಿಷ್ಯ ತಿಳಿದುಕೊಳ್ಳಿ

ಪಂಡಿತ್ ದಾಮೋದರ್ ಭಟ್ ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9008993001 ಮೇಷ ರಾಶಿ ನಿಮ್ಮ ಕೆಲಸಗಳಲ್ಲಿ ಅನೇಕ ಸಕಾರಾತ್ಮಕ ಬದಲಾವಣೆಗಳನ್ನು ಕಾಣಬಹುದು ನಿಮ್ಮ ದೀರ್ಘಕಾಲದ

ಶ್ರೀ ಸದ್ಗುರು ಸಾಯಿಬಾಬಾ ಸ್ವಾಮಿಯನ್ನು ನೆನೆಯುತ್ತ ಇಂದಿನ ನಿಮ್ಮ ಜೀವನದ ಭವಿಷ್ಯ ತಿಳಿದುಕೊಳ್ಳಿ Read More »

ಕರ್ನಾಟಕ, ಭವಿಷ್ಯ

690 ಎ.ಎಸ್.ಐ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜ. 06. 690 ಅಸಿಸ್ಟೆಂಟ್ ಸಬ್ ಇನ್‌ಸ್ಪೆಕ್ಟರ್ (ಎಕ್ಸಿಕ್ಯುಟಿವ್) ಹುದ್ದೆಗಳನ್ನು ಭರ್ತಿ ಮಾಡಲು ಸಿಐಎಸ್‌ಎಫ್ ಅರ್ಜಿ ಆಹ್ವಾನಿಸಿದೆ.  ವಿದ್ಯಾರ್ಹತೆ: ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ವಯೋಮಿತಿ: ಆಗಸ್ಟ್ 1,2020ರ ಅನ್ವಯ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.   ಆಯ್ಕೆ ಪ್ರಕ್ರಿಯೆ: ಅಸಿಸ್ಟೆಂಟ್ ಸಬ್ ಇನ್‌ಸ್ಪೆಕ್ಟರ್ (ಎಕ್ಸಿಕ್ಯುಟಿವ್)

690 ಎ.ಎಸ್.ಐ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಕರ್ನಾಟಕ

ಸ್ನೇಹಿತನನ್ನೇ ಕೊಂದ ಯುವಕ…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 06. ಸ್ನೇಹಿತನನ್ನೇ ಕೊಲೆ ಮಾಡಿ ನೀರಿನ ಸಂಪ್ ನಲ್ಲಿ ಹಾಕಿರುವ ಘಟನೆ ಬೆಂಗಳೂರಿನ ಅಶೋಕ ನಗರದಲ್ಲಿ ನಡೆದಿದೆ.    ಮೃತ ಯುವಕನನ್ನು ಮಿಸ್ಬಾ ಹುಸೇನ್ ಲಷ್ಕರ್ (20) ಎಂದು ಗುರುತಿಸಲಾಗಿದೆ. ಇವರಿಬ್ಬರೂ ರೂಂಮೇಟ್ ಗಳಾಗಿದ್ದು, ಇವರಿಬ್ಬರ ನಡುವೆ ಸಣ್ಣ ಜಗಳವಾಗಿ ಆತನನ್ನು ಕೊಲೆಗೈದಿದ್ದಾನೆ. ಮಿಸ್ಬಾ, ವಿಠಲ್ ಮಲ್ಯ ರಸ್ತೆಯ ಆದರ್ಶ ಡೆವಲಪರ್ಸ್‌ ನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ. ಜನವರಿ 2ರಿಂದಲೂ ಈತ ನಾಪತ್ತೆಯಾಗಿದ್ದು, ಕಬ್ಬನ್ ಪಾರ್ಕ್ ಠಾಣೆಯಲ್ಲಿ

ಸ್ನೇಹಿತನನ್ನೇ ಕೊಂದ ಯುವಕ…! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಸ್ ನಿಲ್ದಾಣದಲ್ಲಿ ಯುವತಿಯರಿಗೆ ಕಿರುಕುಳ ಕೊಟ್ಟ ಪುಂಡರು ➤ ಸಾರ್ವಜನಿಕರಿಂದ ಹಿಗ್ಗಾಮುಗ್ಗ ಥಳಿತ

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ಜ. 06. ಬಸ್ ನಿಲ್ದಾಣದಲ್ಲಿ ಯುವತಿಯರನ್ನು ಚುಡಾಯಿಸುತ್ತಿದ್ದ ಯುವಕನಿಗೆ ಸ್ಥಳೀಯರು ಹಿಡಿದು ಧರ್ಮದೇಟು ಕೊಟ್ಟಿರುವ ಘಟನೆ ನಡೆದಿದೆ. ಮೂಲತಃ ಆಂಧ್ರ ದವರಾಗಿದ್ದ ಇವರು ಬಸ್ ನಿಲ್ದಾಣದಲ್ಲಿ ಆಂಧ್ರದ ಯುವತಿಯರನ್ನು ಚುಡಾಯಿಸುತ್ತಿದ್ದ ಎನ್ನಲಾಗಿದೆ. ಇದನ್ನು ಗಮನಿಸಿದ ಸಾರ್ವಜನಿಕರು ಯುವಕರನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಬಸ್ ನಿಲ್ದಾಣದಲ್ಲಿ ಯುವತಿಯರಿಗೆ ಕಿರುಕುಳ ಕೊಟ್ಟ ಪುಂಡರು ➤ ಸಾರ್ವಜನಿಕರಿಂದ ಹಿಗ್ಗಾಮುಗ್ಗ ಥಳಿತ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top