ಪುತ್ತೂರು: ಚಿರತೆ ಪ್ರತ್ಯಕ್ಷ ➤ ಕಾರ್ಯಾಚರಣೆಗಿಳಿದ ಅಧಿಕಾರಿಗಳು

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 06. ಚಿರತೆಯೊಂದು ತಾಲೂಕಿನ ಪುರುಷರಕಟ್ಟೆ ಎಂಬಲ್ಲಿ ಪ್ರತ್ಯಕ್ಷವಾಗಿದೆ. ಪುರುಷರಕಟ್ಟೆಯ ನಡುಗುಡ್ಡೆ ಚಂದಪ್ಪ ಪೂಜಾರಿ ಎಂಬವರ ಜಾಗದಲ್ಲಿ ಚಿರತೆ ಹಾದು ಹೋಗಿದ್ದು, ಸ್ಥಳದಲ್ಲಿ ಪೊಲೀಸರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಬೋನು ಅಳವಡಿಸಿದ್ದಾರೆ. ಚಿರತೆ ಅಲ್ಲಲ್ಲಿ ಕಾಣಿಸಿಕೊಳ್ಳುತ್ತಿರುವುದರಿಂದ ಜನತೆ ಕೂಡಾ ಭಯಭೀತರಾಗಿದ್ದಾರೆ.

ಪುತ್ತೂರು: ಚಿರತೆ ಪ್ರತ್ಯಕ್ಷ ➤ ಕಾರ್ಯಾಚರಣೆಗಿಳಿದ ಅಧಿಕಾರಿಗಳು Read More »

ಕರಾವಳಿ, ಕರ್ನಾಟಕ

ರಾಜ್ಯದಲ್ಲಿ ರದ್ದಾಗುತ್ತಾ ತಾಲೂಕು ಪಂಚಾಯತ್..? ➤ ಸರಕಾರದಿಂದ ಚಿಂತನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 06. ತಾಲೂಕು ಪಂಚಾಯತ್ ವ್ಯವಸ್ಥೆಯನ್ನು ರದ್ದುಗೊಳಿಸಬೇಕು ಎಂಬ ಪ್ರಸ್ತಾಪ ಕೇಳಿಬಂದಿದ್ದು, ಮುಖ್ಯಮಂತ್ರಿ ಬಿಎಸ್.ವೈ ಅವರೊಂದಿಗೆ ಬಿಜೆಪಿ ಶಾಸಕರ ಸಭೆಯಲ್ಲಿ ತಾ.ಪಂ. ವ್ಯವಸ್ಥೆ ಕಾನೂನು ತಿದ್ದುಪಡಿ ತರುವಂತೆ ಸಲಹೆ ನೀಡಿರುವುದಾಗಿ ಕೇಳಿಬಂದಿದೆ. ಗ್ರಾ.ಪಂ, ತಾ.ಪಂ. ಹಾಗೂ ಜಿ.ಪಂ. ಹೀಗೆ ಮೂರು ವ್ಯವಸ್ಥೆಗಳಿದ್ದರೂ ತಾ.ಪಂ. ಗೆ ಯಾವುದೇ ಕೆಲಸ ಇಲ್ಲದಂತಾಗುತ್ತದೆ. ಅವಶ್ಯವಿಲ್ಲದ ಈ ವ್ಯವಸ್ಥೆಯಿಂದ ಆರ್ಥಿಕ ಹೊರೆ ಉಂಟಾಗುತ್ತದೆ ಎಂಬ ಅಭಿಪ್ರಾಯವೂ ಇದೆ. ಪಂಚಾಯತ್ ರಾಜ್ ಕಾಯ್ದೆಯಲ್ಲಿ ತಾ.ಪಂ. ಕೈಬಿಡಲು ಅವಕಾಶವಿದ್ದು, ಕಾನೂನು

ರಾಜ್ಯದಲ್ಲಿ ರದ್ದಾಗುತ್ತಾ ತಾಲೂಕು ಪಂಚಾಯತ್..? ➤ ಸರಕಾರದಿಂದ ಚಿಂತನೆ Read More »

ಕರ್ನಾಟಕ

ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಖಾಸಗಿ ಶಿಕ್ಷಕರಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 06. ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಇಂದು ಖಾಸಗಿ ಶಾಲಾ ಒಕ್ಕೂಟ(ರುಪ್ಸಾ) ರಾಜಧಾನಿಯಲ್ಲಿ ಬೃಹತ್ ಪ್ರತಿಭಟನೆಯನ್ನು ನಡೆಸಿದ್ದಾರೆ. ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕೋಟೆ ನೇತೃತ್ವದಲ್ಲಿ ನಡೆದ ಪ್ರತಿಭಟನೆಗೆ ಸಿದ್ದಗಂಗಾ ಶ್ರೀಗಳು ಬೆಂಬಲ ವ್ಯಕ್ತಪಡಿಸಿದ್ದು, ರಾಜ್ಯದ ವಿವಿಧ ಭಾಗಗಳಿಂದ ಬಂದಿದ್ದ ಸಹಸ್ರಾರು ಶಿಕ್ಷಕರು ಹಾಗೂ ಆಡಳಿತ ಮಂಡಳಿ ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ್ದಾರೆ.

ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಖಾಸಗಿ ಶಿಕ್ಷಕರಿಂದ ಪ್ರತಿಭಟನೆ Read More »

ಕರ್ನಾಟಕ

ಮಕ್ಕಳಿಗೆ ವಿಷಕೊಟ್ಟು ನೇಣಿಗೇರಿದ ದಂಪತಿ

(ನ್ಯೂಸ್ ಕಡಬ) newskadaba.com ಬಳ್ಳಾರಿ, ಜ. 06. ಮಕ್ಕಳಿಗೆ ವಿಷಕೊಟ್ಟು ದಂಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಗಾದಿಗನೂರು ಎಂಬಲ್ಲಿ ನಡೆದಿದೆ. ಮೃತರನ್ನು ನಂಜುಂಡೇಶ್ವರ, ಪತ್ನಿ ಪಾರ್ವತಿ ಹಾಗೂ ಮಕ್ಕಳಾದ ಗೌತಮಿ(3), ಸ್ವರೂಪ್ (2) ಎಂದು ಗುರುತಿಸಲಾಗಿದೆ. ನಂಜುಂಡೇಶ್ವರ ಅವರು ಜಿಂದಾಲ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರೆನ್ನಲಾಗಿದರೆ. ಡೆತ್ ನೋಟ್ ಬರೆದು ಮಕ್ಕಳಿಗೆ ವಿಷಕೊಟ್ಟು ದಂಪತಿಗಳು ನೇಣು ಬಿಗಿದು ಆತ್ಮಹತ್ಯೆ ಮಾಡಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕ ಗಾದಿಗನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ

ಮಕ್ಕಳಿಗೆ ವಿಷಕೊಟ್ಟು ನೇಣಿಗೇರಿದ ದಂಪತಿ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ದ್ವಿಚಕ್ರ ವಾಹನ ಕಳವು ➤ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಜ. 06. ಬೈಕ್ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಝಮೀರ್ ಅಹ್ಮದ್ ಹಾಗೂ ಶಾರೂಖ್ ಎಂದು ಗುರುತಿಸಲಾಗಿದೆ. ಶಿರಾಳಕೊಪ್ಪ ಠಾಣೆಯಲ್ಲಿ ದಾಖಲಾದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಪೊಲೀಸರು ಆರೋಪಿಗಳ ಜೊತೆಗೆ ಮೂರು ಲಕ್ಷ ರೂ. ಮೌಲ್ಯದ ಒಟ್ಟು ಏಳು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.

ದ್ವಿಚಕ್ರ ವಾಹನ ಕಳವು ➤ ಇಬ್ಬರ ಬಂಧನ Read More »

ಕರ್ನಾಟಕ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆ ಸಾಧ್ಯತೆ

(ನ್ಯೂಸ್ ಕಡಬ) newskadaba.com ಬೆಂಗಳೂರು , ಜ.06: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿರುವ ಕಾರಣದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಮಳೆಯಾಗುವ ಸಾಧ್ಯತೆ ಇದ್ದು, ನಾಲ್ಕು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.   ರಾಜ್ಯದ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೊ ಅಲರ್ಟ್

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆ ಸಾಧ್ಯತೆ Read More »

ಕರಾವಳಿ

ಬೆಳ್ತಂಗಡಿ: ಪಾಕಿಸ್ತಾನ ಪರ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರನ್ನು ಬಂಧಿಸುವಂತೆ ಠಾಣೆಗೆ ಮುತ್ತಿಗೆ ಹಾಕಿದ ಎಸ್ಡಿಪಿಐ ಕಾರ್ಯಕರ್ತರು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ. 06. ಪಾಕಿಸ್ತಾನದ ಪರ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರ ವಿರುದ್ದ ದೂರು ನೀಡಿ ಮೂರು ದಿನ ಕಳೆದರೂ ಆರೋಪಿಗಳನ್ನು ಬಂದಿಸಿಲ್ಲ ಎಂದು ಎಸ್ಡಿಪಿಐ ಕಾರ್ಯಕರ್ತರು ಇಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದಾರೆ. ಠಾಣೆಯ ಎದರು ನೂರಾರು ಜನ ಜಮಾಯಿಸಿದ್ದು, ಆರೋಪಿಗಳ ಬಂಧನಕ್ಕೆ ಒತ್ತಾಯಿಸಿದ್ದಾರೆ. ಈ ಸಂದರ್ಭ ಎಸ್ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ಅಲ್ಫೋನ್ಸ ಫ್ರಾಂಕೊ, ದ.ಕ. ಜಿಲ್ಲಾ ಉಪಾಧ್ಯಕ್ಷ ಪಿ.ಡಿ. ಆಂಟನಿ, ವಿಧಾನಸಭಾ ಸಮಿತಿ ಸದಸ್ಯ ನವಾಝ್ ಕಟ್ಟೆ ಮೊದಲಾದವರು

ಬೆಳ್ತಂಗಡಿ: ಪಾಕಿಸ್ತಾನ ಪರ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರನ್ನು ಬಂಧಿಸುವಂತೆ ಠಾಣೆಗೆ ಮುತ್ತಿಗೆ ಹಾಕಿದ ಎಸ್ಡಿಪಿಐ ಕಾರ್ಯಕರ್ತರು Read More »

ಕರಾವಳಿ, ಕರ್ನಾಟಕ

ಹೆಜಮಾಡಿ: ಬಾವಿಗೆ ಹಾರಿ ವೃದ್ದೆ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಹೆಜಮಾಡಿ, ಜ. 06. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವೃದ್ದೆಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿದ ಘಟನೆ ಹೆಜಮಾಡಿಯಲ್ಲಿ ನಡೆದಿದೆ. ಮೃತ ವೃದ್ದೆಯನ್ನು ಕುಸುಮ ಎಚ್.ರಾವ್ (70) ಎಂದು ಗುರುತಿಸಲಾಗಿದೆ. ಪುತ್ತೂರಿನವರಾದ ಇವರ ಪತಿಯು ಎರಡು ವರ್ಷಗಳ ಹಿಂದೆ ತೀರಿಕೊಂಡಿದ್ದು, ಇವರಿಗೆ ಮಕ್ಕಳಾಗಿರಲಿಲ್ಲ. ಹೀಗಾಗಿ ಎರಡು ತಿಂಗಳ ಹಿಂದೆ ಹೆಜಮಾಡಿಯ ಸಹೋದರನ ಮನೆಗೆ ಬಂದಿದ್ದು ಅಧಿಕ ರಕ್ತದೊತ್ತಡ ಹಾಗೂ ಮಧುಮೇಹ ಬಳಲುತ್ತಿದ್ದ ಇವರು ಸೋಮವಾರದಂದು ನಾಪತ್ತೆಯಾಗಿದ್ದರು. ಬಳಿಕ ಹುಡುಕಾಟ ನಡೆಸಿದಾಗ ಶಿವನಗರ ರೋಹಿತ್ ರಾವ್

ಹೆಜಮಾಡಿ: ಬಾವಿಗೆ ಹಾರಿ ವೃದ್ದೆ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪಂಜ: ಜ. 09ರಂದು ಬಿಜೆಪಿ ಪ್ರತಿಜ್ಞಾ ಸಮಾವೇಶ

(ನ್ಯೂಸ್ ಕಡಬ) newskadaba.com ಪಂಜ, ಜ. 06. ಕಳೆದ ಗ್ರಾ.ಪಂ. ಚುನಾವಣೆಯಲ್ಲಿ ಬೆಜೆಪಿ ಬೆಂಬಿಲತರಾಗಿ ಗೆಲುವು ಸಾಧಿಸಿದ ಜನಪ್ರತಿನಿಧಿಗಳು ಗ್ರಾಮ ಸ್ವರಾಜ್ಯ ಕಲ್ಪನೆಯನ್ನು ಸಾಕಾರಗೊಳಿಸುವ ಉದ್ದೇಶದಿಂದ ಪ್ರತಿಜ್ಞಾ ಸಮಾವೇಶವು ಜನವರಿ ಒಂಬತ್ತರಂದು ಪಂಜಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದಿರೆ, ಶಾಸಕ ಎಸ್. ಅಂಗಾರ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಪಂಜ: ಜ. 09ರಂದು ಬಿಜೆಪಿ ಪ್ರತಿಜ್ಞಾ ಸಮಾವೇಶ Read More »

ಕರಾವಳಿ, ಕರ್ನಾಟಕ

ಜನವರಿ ತಿಂಗಳ ಪ್ರತೀ ಗುರುವಾರ ವಿದ್ಯುತ್ ಕಟ್ ➤ ಮೆಸ್ಕಾಂ ಪ್ರಕಟಣೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 06. 110/33/11 ಕೆ.ವಿ ಪುತ್ತೂರು ಕೇಂದ್ರದಿಂದ ಹೊರಡುವ ಉಪ್ಪಿನಂಗಡಿ ಓಲ್ಟ್, ರಾಮಕುಂಜ ಮತ್ತು ವಾಟರ್ ಸಪ್ಲೈ ಫೀಡರ್ ಗಳಿಂದ ಹೊರಡುವ ವಿದ್ಯುತನ್ನು ಜನವರಿ ತಿಂಗಳ ಪ್ರತೀ ಗುರುವಾರದಂದು ಬೆಳಗ್ಗೆ 10ರಿಂದ ಅಪರಾಹ್ನ ಸಂಜೆ 5ರ ವರೆಗೆ ನಿಲುಗಡೆಗೊಳಿಸಲಾಗುವುದು. ಆದುದರಿಂದ ಸಾರ್ವಜನಿಕರು ಗಮನಹರಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಜನವರಿ ತಿಂಗಳ ಪ್ರತೀ ಗುರುವಾರ ವಿದ್ಯುತ್ ಕಟ್ ➤ ಮೆಸ್ಕಾಂ ಪ್ರಕಟಣೆ Read More »

ಕರಾವಳಿ, ಕರ್ನಾಟಕ
Scroll to Top