ನೆಲ್ಯಾಡಿ: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಯುವತಿ ಆತ್ಮಹತ್ಯೆ ➤ ಸುಟ್ಟು ಕರಕಲಾದ ಮೃತದೇಹ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜ.04. ಯುವತಿಯೋರ್ವಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರದಂದು ನೆಲ್ಯಾಡಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ನೆಲ್ಯಾಡಿಯ ಉದ್ಯಮಿ ಬೇಬಿ ಎಂಬವರ ಪುತ್ರಿ ನವ್ಯಾ ನಯನ ಎಂದು ಗುರುತಿಸಲಾಗಿದೆ. ಮಂಗಳೂರಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದ ಯುವತಿ ಡೆತ್ ನೋಟ್ ಬರೆದಿಟ್ಟು ತನ್ನ ಬೆಡ್ ರೂಂನಲ್ಲಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತದೇಹವು ಸುಟ್ಟು ಕರಕಲಾಗಿದೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ […]

ನೆಲ್ಯಾಡಿ: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಯುವತಿ ಆತ್ಮಹತ್ಯೆ ➤ ಸುಟ್ಟು ಕರಕಲಾದ ಮೃತದೇಹ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿಟ್ಲ: ಎಸ್ಡಿಪಿಐ ಕಛೇರಿಗೆ ಬೆಂಕಿ‌ ಹಚ್ಚಿದ ದುಷ್ಕರ್ಮಿಗಳು

(ನ್ಯೂಸ್ ಕಡಬ) newskadaba.com ವಿಟ್ಲ, ಜ. 04. ಎಸ್ಡಿಪಿಐ ಕಛೇರಿಗೆ ಯಾರೋ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ವಿಟ್ಲದಲ್ಲಿ ನಡೆದಿದೆ. ಇಂದು ಘಟನೆ ಬೆಳಕಿಗೆ ಬಂದಿದ್ದು, ಭಾನುವಾರ ರಾತ್ತಿ ಈ ಕೃತ್ಯ ನಡೆದಿದೆ ಎನ್ನಲಾಗಿದೆ. ಘಟನಾ ಸ್ಥಳದಲ್ಲಿ ಪೈಂಟ್ ಡಬ್ಬ ಪತ್ತೆಯಾಗಿದ್ದು, ಪೈಂಟ್ ಸುರಿದು ಬೆಂಕಿ ಹಚ್ಚಿರಬಹುದೆಂದು ಶಂಕಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ವಿಟ್ಲ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳನ್ನು ಶೀಘ್ರವೇ ಬಂಧಿಸುವಂತೆ ಎಸ್ಡಿಪಿಐ ಮುಖಂಡರು ಆಗ್ರಹಿಸಿದ್ದಾರೆ.

ವಿಟ್ಲ: ಎಸ್ಡಿಪಿಐ ಕಛೇರಿಗೆ ಬೆಂಕಿ‌ ಹಚ್ಚಿದ ದುಷ್ಕರ್ಮಿಗಳು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಕಛೇರಿಗೆ ಮಾನ್ಯ ಡಿಜಿಪಿ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 04.  ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ  ದಳ ಮೇರಿಹಿಲ್ ಮಂಗಳೂರು ಕಛೇರಿಗೆ  ಡಾ|| ಅಮರ್ ಕುಮಾರ್ ಪಾಂಡೆ, ಐಪಿಎಸ್ ಆರಕ್ಷಕ ಮಹಾನಿರ್ದೇಶಕರು   ಹಾಗೂ ಗೃಹರಕ್ಷಕ ದಳದ ಮಹಾ ಸಮಾದೇಷ್ಟರು ಮತ್ತು ನಿರ್ದೇಶಕರು ಪೌರರಕ್ಷಣೆ  ಇವರು ಭೇಟಿ ನೀಡಿದರು.  ಈ ಸಂದರ್ಭದಲ್ಲಿ ಕಛೇರಿ ಕಡತಗಳನ್ನು  ಪರಿಶೀಲಿಸಿದರು. ಕಾಲಕಾಲಕ್ಕೆ  ಗೃಹರಕ್ಷಕರಿಗೆ ಸೂಕ್ತ  ತರಬೇತಿ ನೀಡಬೇಕು ಮತ್ತು ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆ ಮತ್ತು ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುವ ಗೃಹರಕ್ಷಕರಿಗೆ ಹೆಚ್ಚಿನ

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಕಛೇರಿಗೆ ಮಾನ್ಯ ಡಿಜಿಪಿ ಭೇಟಿ Read More »

ಕರಾವಳಿ, ಕರ್ನಾಟಕ

ಶ್ರೀ ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಯನ್ನು ನೆನೆಯುತ್ತ ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ

ಸೋಮವಾರದ ಜಾತಕವನ್ನು ನಾವು ನಿಮಗೆ ಹೇಳುತ್ತಿದ್ದೇವೆ. ಜಾತಕವು ನಮ್ಮ ಜೀವನದಲ್ಲಿ ಹೆಚ್ಚಿನ ಪ್ರಾಮುಖ್ಯತೆಯನ್ನು ಹೊಂದಿದೆ. ಜಾತಕವು ಭವಿಷ್ಯದ ಘಟನೆಗಳ ಕಲ್ಪನೆಯನ್ನು ನೀಡುತ್ತದೆ. ಜಾತಕವು ಗ್ರಹಗಳ ಸಾಗಣೆ ಮತ್ತು ನಕ್ಷತ್ರಪುಂಜಗಳ ಆಧಾರದ ಮೇಲೆ ರೂಪುಗೊಳ್ಳುತ್ತದೆ. ಪ್ರತಿದಿನ ಗ್ರಹಗಳ ಸ್ಥಾನಗಳು ನಮ್ಮ ಭವಿಷ್ಯದ ಮೇಲೆ ಪರಿಣಾಮ ಬೀರುತ್ತವೆ. ಈ ಜಾತಕದಲ್ಲಿ, ಉದ್ಯೋಗಗಳು, ವ್ಯವಹಾರ, ಆರೋಗ್ಯ ಶಿಕ್ಷಣ ಮತ್ತು ವೈವಾಹಿಕ ಮತ್ತು ಪ್ರೀತಿಯ ಜೀವನಕ್ಕೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನೀವು ಪಡೆಯುತ್ತೀರಿ. ಇಂದಿನ ದಿನವು ನಿಮಗಾಗಿ ಹೇಗೆ ಇರುತ್ತದೆ ಎಂದು ನೀವು

ಶ್ರೀ ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಯನ್ನು ನೆನೆಯುತ್ತ ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ Read More »

ಕರ್ನಾಟಕ, ಭವಿಷ್ಯ

ಮಂಗಳೂರು: ಫಲ್ಗುಣಿ ನದಿಯಲ್ಲಿ ನವಜಾತ ಶಿಶುವಿನ‌ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 03, ನವಜಾತ ಶಿಶುವಿನ ಮೃತದೇಹವೊಂದು ಫಲ್ಗುಣಿ ನದಿಯಲ್ಲಿ ತೇಲುತ್ತಿದ್ದುದನ್ನು ಕಂಡ ಮೀನುಗಾರರು ಈ ಕುರಿತು ಪಣಂಬೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೀನುಗಾರಿಕೆಯಿಂದ ಮರಳುತ್ತಿದ್ದ ಮೀನುಗಾರರಿಗೆ ನದಿಯು ಸಮುದ್ರವನ್ನು ಸೇರುವ ತೋಟ ಬೆಂಗ್ರೆಯಲ್ಲಿ ಮಗುವಿನ ಮೃತದೇಹ ಕಂಡುಬಂದಿದ್ದು, ಮೃತದೇಹವನ್ನು ಮೇಲಕ್ಕೆತ್ತಿದ ಮೀನುಗಾರರು ಪಣಂಬೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಕುರಿತಂತೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು: ಫಲ್ಗುಣಿ ನದಿಯಲ್ಲಿ ನವಜಾತ ಶಿಶುವಿನ‌ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮರ್ಧಾಳ: ಚಲಿಸುತ್ತಿದ್ದ ಡಿಯೋ ವಾಹನದ ಹಿಂಬದಿ ಚಕ್ರ ಸ್ಫೋಟ ➤ ಸವಾರ ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಕಡಬ, ಜ.03. ಚಲಿಸುತ್ತಿದ್ದ ಹೋಂಡಾ ಡಿಯೋ ವಾಹನದ ಹಿಂಬದಿ ಚಕ್ರ ಸ್ಫೋಟಗೊಂಡ ಪರಿಣಾಮ ಡಿಯೋ ರಸ್ತೆಗೆಸೆಯಲ್ಪಟ್ಟು ಸವಾರ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ನೆಕ್ಕಿತ್ತಡ್ಕ ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ. ಗಾಯಾಳುವನ್ನು ಕಡಬ ತಾಲೂಕಿನ ಕಳಾರ ನಿವಾಸಿ ಅಶ್ರಫ್ ಎಂದು ಗುರುತಿಸಲಾಗಿದೆ. ಅಶ್ರಫ್ ಹೋಂಡಾ ಡಿಯೋ ವಾಹನದಲ್ಲಿ ಕಡಬದಿಂದ ಮರ್ಧಾಳ ಕಡೆಗೆ ತೆಳುತ್ತಿದ್ದ ವೇಳೆ ವಾಹನದ ಹಿಂಬದಿ ಚಕ್ರ ಸ್ಫೋಟಗೊಂಡಿದೆ. ಘಟನೆಯಲ್ಲಿ

ಮರ್ಧಾಳ: ಚಲಿಸುತ್ತಿದ್ದ ಡಿಯೋ ವಾಹನದ ಹಿಂಬದಿ ಚಕ್ರ ಸ್ಫೋಟ ➤ ಸವಾರ ಅಪಾಯದಿಂದ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ದೇಶದಲ್ಲಿ ಬೆಲೆಯೇರಿಕೆಯನ್ನು ಸಮರ್ಥಿಸುತ್ತಿರುವ ಅಂಧ ಭಕ್ತರು ➤ ಅಂದ ಭಕ್ತರಿಗೆ ಬೇಕಾದರೆ ಬೇರೆಯೇ ಪೆಟ್ರೋಲ್ ಪಂಪ್ ನಿರ್ಮಿಸಲಿ ➤ ಕಡಬದ ಕಾಂಗ್ರೆಸ್ ಸಭೆಯಲ್ಲಿ ಯು.ಟಿ.ಖಾದರ್ ಲೇವಡಿ

(ನ್ಯೂಸ್ ಕಡಬ) newskadaba.com ಕಡಬ, ಜ.03. ರಾಜ್ಯದಲ್ಲಿ ಬಿಜೆಪಿ ಸರಕಾರ ಬಂದು ಎರಡು ವರ್ಷವಾದರೂ ಜನ ಸಾಮಾನ್ಯರಿಗೆ ಯಾವುದೇ ಸೌಲಭ್ಯ ನೀಡದೆ ಜನರನ್ನು ಬೀದಿಗೆ ತಂದು ನಿಲ್ಲಿಸಿರುವುದೇ ಬಿಜೆಪಿಯ ಕೊಡುಗೆಯಾಗಿದೆ ಎಂದು ಶಾಸಕ ಯು.ಟಿ.ಖಾದರ್ ಲೇವಡಿ ಮಾಡಿದ್ದಾರೆ. ಭಾನುವಾರದಂದು ಕಡಬ ಒಕ್ಕಲಿಹ ಗೌಡ ಸಮುದಾಯ ಭವನದಲ್ಲಿ ನಡೆದ ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರಿಗೆ ಅಭಿನಂದನಾ ಸಮಾರಂಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಇಂದು ಬೆಲೆ ಏರಿಕೆಯಿಂದ ಜನರು ತತ್ತರಿಸಿದ್ದಾರೆ. ಆದರೆ ಅಂಧ ಭಕ್ತರು ಮಾತ್ರ ಇದನ್ನು

ದೇಶದಲ್ಲಿ ಬೆಲೆಯೇರಿಕೆಯನ್ನು ಸಮರ್ಥಿಸುತ್ತಿರುವ ಅಂಧ ಭಕ್ತರು ➤ ಅಂದ ಭಕ್ತರಿಗೆ ಬೇಕಾದರೆ ಬೇರೆಯೇ ಪೆಟ್ರೋಲ್ ಪಂಪ್ ನಿರ್ಮಿಸಲಿ ➤ ಕಡಬದ ಕಾಂಗ್ರೆಸ್ ಸಭೆಯಲ್ಲಿ ಯು.ಟಿ.ಖಾದರ್ ಲೇವಡಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ ಬ್ಲಾಕ್ ಕಾಂಗ್ರೆಸ್ ನಿಂದ ವಿಜೇತ ಗ್ರಾ.ಪಂ. ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ ➤ ಬಿಜೆಪಿಯವರು ಅಧಿಕಾರ ದುರುಪಯೋಗ ಮಾಡಿ ಹೆಚ್ಚು ಸ್ಥಾನ ಗಳಿಸಿದ್ದಾರೆ: ಐವನ್ ಡಿಸೋಜಾ

ಕಡಬ, ಜ.03. ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿಯವರು ಅಧಿಕಾರ ದುರುಪಯೋಗ ಮಾಡುವ ಮೂಲಕ ಹೆಚ್ಚು ಸ್ಥಾನವನ್ನು ಪಡೆದುಕೊಂಡಿದ್ದಾರೆ ಎಂದು ಎ.ಐ.ಸಿ.ಸಿ.ಕಾರ್ಯದರ್ಶಿ ಐವನ್ ಡಿಸೋಜಾ ಆರೋಪಿಸಿದ್ದಾರೆ. ಅವರು ಭಾನುವಾರದಂದು ಕಡಬ ಒಕ್ಕಲಿಗ ಸಮುದಾಯ ಭವನದಲ್ಲಿ ಕಡಬ ಬ್ಲಾಕ್ ಕಾಂಗ್ರೆಸ್ ವತಿಯಿಂದ ನಡೆದ ವಿಜೇತ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾಧ್ಯಮವರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಒಟ್ಟಾರೆಯಾಗಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಸೀಟುಗಳು ಲಭ್ಯವಾಗಿದ್ದು ಇದು ಆಡಳಿತಾರೂಢ ಬಿಜೆಪಿಗೆ ಎಚ್ಚರಿಕೆ ಗಂಟೆಯಾಗಿದೆ. ದ.ಕ. ಹಾಗೂ ಕೆಲವು ಕಡೆ ಬಿಜೆಪಿಗೆ ಹೆಚ್ಚು ಸೀಟು

ಕಡಬ ಬ್ಲಾಕ್ ಕಾಂಗ್ರೆಸ್ ನಿಂದ ವಿಜೇತ ಗ್ರಾ.ಪಂ. ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ ➤ ಬಿಜೆಪಿಯವರು ಅಧಿಕಾರ ದುರುಪಯೋಗ ಮಾಡಿ ಹೆಚ್ಚು ಸ್ಥಾನ ಗಳಿಸಿದ್ದಾರೆ: ಐವನ್ ಡಿಸೋಜಾ Read More »

ಕರ್ನಾಟಕ

ಕಡಬವನ್ನು ತಲ್ಲಣಗೊಳಿಸಿದ್ದ ಸ್ಟೇಟಸ್ ಪ್ರಕರಣ ➤ ಆರೋಪಿಗೆ ಜಾಮೀನು ಮಂಜೂರು

(ನ್ಯೂಸ್ ಕಡಬ) newskadaba.com ಪುತ್ತೂರು, ಜ.03. ಜ್ಯೂಸ್ ಕುಡಿಯಲು ಬಂದ‌ ಹುಡುಗಿಯ ಫೋಟೋ ತೆಗೆದು ವಾಟ್ಸ್ಅಪ್ ಸ್ಟೇಟಸ್ ಹಾಕಿದ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿಗೆ ಜಾಮೀನು ಮಂಜೂರಾಗಿದೆ. ಕಡಬವನ್ನು ತಲ್ಲಣಗೊಳಿಸಿದ್ದ ಈ ಪ್ರಕರಣದಲ್ಲಿ ಅಂಗಡಿ ಮಾಲಕನಿಗೆ ಹೆಚ್ಚುವರಿ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಯಫ್.ಸಿ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಆರೋಪಿಯ ಪರವಾಗಿ ಕಡಬದ ವಕೀಲ ಮುಸ್ತಾಫಾ ಎಂ. ವಾದಿಸಿದ್ದರು.

ಕಡಬವನ್ನು ತಲ್ಲಣಗೊಳಿಸಿದ್ದ ಸ್ಟೇಟಸ್ ಪ್ರಕರಣ ➤ ಆರೋಪಿಗೆ ಜಾಮೀನು ಮಂಜೂರು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ ತಾಲೂಕಿನ ವಿವಿಧೆಡೆ ಉತ್ತಮ ಮಳೆ

(ನ್ಯೂಸ್ ಕಡಬ) newskadaba.com ಕಡಬ, ಜ.03. ಕಡಬ ತಾಲೂಕಿನ ವಿವಿಧೆಡೆ ಭಾನುವಾರ ಸಂಜೆ ವೇಳೆ ಭಾರೀ ಮಳೆಯಾಗಿದ್ದು, ಕೆಲವೆಡೆ ಸಾಧಾರಣ ಮಳೆ ಸುರಿದಿದೆ. ಕಡಬದಲ್ಲಿ ಸಾಧಾರಣ ಮಳೆಯಾದರೆ, ಇಚಿಲಂಪಾಡಿ, ನೂಜಿಬಾಳ್ತಿಲ, ಬಿಳಿನೆಲೆ, ಸುಬ್ರಹ್ಮಣ್ಯ ಭಾಗದಲ್ಲಿ ಉತ್ತಮ ಮಳೆಯಾಗಿದೆ. ಆಲಂಕಾರು, ಕೊಯಿಲ, ಸವಣೂರು ಭಾಗದಲ್ಲಿ ಮೋಡ ಕವಿದ ವಾತಾವರಣ ಕಂಡುಬಂದಿದೆ.

ಕಡಬ ತಾಲೂಕಿನ ವಿವಿಧೆಡೆ ಉತ್ತಮ ಮಳೆ Read More »

ಕರಾವಳಿ
Scroll to Top