ಅಸ್ವಸ್ಥರಾಗಿದ್ದ ಡಿ.ವಿ ಸದಾನಂದ ಗೌಡರನ್ನು ಝೀರೋ ಟ್ರಾಫಿಕ್ ಮೂಲಕ ಬೆಂಗಳೂರಿಗೆ ಶಿಫ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 03. ಸಕ್ಕರೆ ಪ್ರಮಾಣ ಕಡಿಮೆಯಾದ ಪರಿಣಾಮ ಅಸ್ವಸ್ಥರಾಗಿದ್ದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರನ್ನು ಝೀರೋ ಟ್ರಾಫಿಕ್ ಮೂಲಕ ಬೆಂಗಳೂರಿಗೆ ರವಾನಿಸಲಾಗಿದೆ. ಶಿವಮೊಗ್ಗದಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡಿದ್ದ ಇವರು ಬೆಂಗಳೂರಿನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಚಿತ್ರದುರ್ಗ ಮೂಲಕ ಬೆಂಗಳೂರಿಗೆ ಹೊರಟಿದ್ದು, ಈ ವೇಳೆ ಊಟ ಮಾಡಲೆಂದು ಹೊಟೇಲೊಂದರ ಬಳಿ ಕಾರಿನಿಂದ ಇಳಿದಿದ್ದು, ಕೆಲವೇ ನಿಮಿಷಗಳಲ್ಲಿ ಅವರು ಕುಸಿದು ಬಿದ್ದಿದ್ದರು. ಇದರಿಂದಾಗಿ ಇಲ್ಲಿನ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಇದೀಗ […]

ಅಸ್ವಸ್ಥರಾಗಿದ್ದ ಡಿ.ವಿ ಸದಾನಂದ ಗೌಡರನ್ನು ಝೀರೋ ಟ್ರಾಫಿಕ್ ಮೂಲಕ ಬೆಂಗಳೂರಿಗೆ ಶಿಫ್ಟ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಲಿಸುತ್ತಿದ್ದ ರೈಲಿನಲ್ಲಿ ಯುವತಿಯ ಅತ್ಯಾಚಾರಕ್ಕೆ ಯತ್ನಿಸಿದ ಕಾಮಪಿಶಾಚಿ

(ನ್ಯೂಸ್ ಕಡಬ) newskadaba.com ಮುಂಬೈ, ಜ. 03. ಚಲಿಸುತ್ತಿದ್ದ ರೈಲಿನಲ್ಲಿ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಮುಂಬೈ ಸಮೀಪದ ವಡಾಲದಲ್ಲಿ ನಡೆದಿದೆ. ಪ್ರಿಯಕರನನ್ನು ಭೇಟಿ ಮಾಡಲೆಂದು ಯುವತಿಯೋರ್ವಳು ಮುಂಜಾನೆ ನಾಲ್ಕು ಗಂಟೆಯ ರೈಲಿನಲ್ಲಿ ಸಂಚರಿಸುತ್ತಿದ್ದ ವೇಳೆ ಮಹಿಳೆಯರ ಬೋಗಿಯಲ್ಲಿ ಒಬ್ಬಳೇ ಇರುವುದನ್ನು ಕಂಡ ಕಿರಾತಕ ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಇದರಿಂದ ತಪ್ಪಿಸಿಕೊಳ್ಳಲು ಯುವತಿಯು ಪ್ರಯತ್ನಿಸಿದಾಗ ಸಿಟ್ಟಿಗೆದ್ದ ಕಿರಾತಕ ಆಕೆಯನ್ನು ರೈಲಿನಿಂದ ಹೊರದಬ್ಬಿ ಪರಾರಿಯಾಗಿದ್ದಾನೆ. ಯುವತಿಯನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ದುಷ್ಕರ್ಮಿಯ ಬಂದನಕ್ಕೆ ತನಿಖೆ ಮುಂದುವರಿದಿದೆ.

ಚಲಿಸುತ್ತಿದ್ದ ರೈಲಿನಲ್ಲಿ ಯುವತಿಯ ಅತ್ಯಾಚಾರಕ್ಕೆ ಯತ್ನಿಸಿದ ಕಾಮಪಿಶಾಚಿ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸೇತುವೆಯಲ್ಲಿ ನಿಂತು ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವೃದ್ದೆಯ ರಕ್ಷಿಸಿದ ಪೊಲೀಸ್

(ನ್ಯೂಸ್ ಕಡಬ) newskadaba.com ಕಲಬುರಗಿ, ಜ. 03. ಭೀಮಾ‌ ನದಿಗೆ ಹಾರಿ ಆತ್ಮಹತ್ಯೆಗೈಯಲು ಯತ್ನಿಸುತ್ತಿದ್ದ ವೃದ್ದೆಯೋರ್ವರನ್ನು ಪೊಲೀಸ್ ಪೇದೆಯೊಬ್ಬರು ರಕ್ಷಿಸಿದ ಘಟನೆ ಜಿಲ್ಲೆಯ ಕಟ್ಟಿಸಂಗಾವಿ ಬಳಿಯ ಭೀಮಾ ನದಿ ಸೇತುವೆಯಲ್ಲಿ ನಡೆದಿದೆ. ಆಳಂದ ಮೂಲದ ಗುರುಬಾಯಿ (60) ಎಂಬ ವೃದ್ದೆ ಭೀಮಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ತಿಸುತ್ತಿದ್ದ ವೇಳೆ ಗಸ್ತು ತಿರುಗುತ್ತಿದ್ದ ಜೇವರ್ಗಿ ಪೊಲೀಸ್ ಠಾಣೆ ಪೇದೆ ಅನಿಲ್‌ ಕುಮಾರ್ ಆಕೆಯನ್ನು ಗಮನಿಸಿ ರಕ್ಷಣೆ ಮಾಡಿದ್ದಾರೆ.    

ಸೇತುವೆಯಲ್ಲಿ ನಿಂತು ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವೃದ್ದೆಯ ರಕ್ಷಿಸಿದ ಪೊಲೀಸ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಳ್ಯ: ಮದುವೆ ದಿಬ್ಬಣಕ್ಕೆ ಹೊರಟ ಬಸ್ ಪಲ್ಟಿ ➤ ಐವರು ಮೃತ್ಯು, 20 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಳ್ಯ, ಜ. 03. ಪುತ್ತೂರು ಕಡೆಯಿಂದ ಆಲೆಟ್ಟಿ ಮೂಲಕ ಪಾಣತ್ತೂರು ಕಡೆಗೆ ಮದುವೆಗೆಂದು ಹೋಗುತ್ತಿದ್ದ ದಿಬ್ಬಣದ ಖಾಸಗಿ ಬಸ್ಸೊಂದು ಕೇರಳದ ಪಾನತ್ತೂರು ಎಂಬಲ್ಲಿ ಪಲ್ಟಿಯಾದ ಘಟನೆ ನಡೆದಿದೆ. ಪಾಣತ್ತೂರು ಬಳಿಯ ಗಡಿಗುಡ್ಡೆ ಪೆರಿಯಾರಂ ಎಂಬಲ್ಲಿಗೆ ತಲುಪುತ್ತಿದ್ದಂತೆಯೇ  ಮನೆಯೊಂದರ ಮೇಲೆ ಬಸ್ ಬಿದ್ದು ಈ ದುರಂತ ಸಂಭವಿಸಿದೆನ್ನಲಾಗಿದೆ. ಇದರಲ್ಲಿ ಸುಮಾರು 60 ಮಂದಿ ಪ್ರಯಾಣಿಸುತ್ತಿದ್ದು, ದುರಂತದಲ್ಲಿ ಒಂದು ಮಗು ಸೇರಿದಂತೆ ಐವರು ಮೃತಪಟ್ಟಿರುವುದಾಗಿ ವರದಿಗಳು ತಿಳಿಸಿದೆ. ಸುಮಾರು 20 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕಾಂಞಂಗಾಡ್

ಸುಳ್ಯ: ಮದುವೆ ದಿಬ್ಬಣಕ್ಕೆ ಹೊರಟ ಬಸ್ ಪಲ್ಟಿ ➤ ಐವರು ಮೃತ್ಯು, 20 ಮಂದಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸುಳ್ಯ: ಖಾಸಗಿ ಬಸ್ ಅಪಘಾತದಲ್ಲಿ ಐವರ ದುರ್ಮರಣ ➤ ಹಲವರು ಗಂಭೀರ

(ನ್ಯೂಸ್ ಕಡಬ) newskadaba.com ಸುಳ್ಯ, ಜ.03. ಸುಳ್ಯದಿಂದ ಪಾಣತ್ತೂರು ಕಡೆಗೆ ಸಂಚರಿಸುತ್ತಿದ್ದ ಖಾಸಗಿ ಬಸ್ಸೊಂದು ಪಲ್ಟಿಯಾದ ಪರಿಣಾಮ ಐವರು ಮೃತಪಟ್ಟು, ಹಲವರು ಗಂಭೀರ ಗಾಯಗೊಂಡ ಘಟನೆ ಭಾನುವಾರದಂದು ಪಾಣತ್ತೂರು ಕಲ್ಲಪ್ಪಳ್ಳಿ ಬಳಿ ನಡೆದಿದೆ. ಪುತ್ತೂರಿನ ಸುರಕ್ಷಾ ಸಂಸ್ಥೆಯ ಖಾಸಗಿ ಬಸ್ ಮದುವೆ ಸಮಾರಂಭಕ್ಕೆಂದು ಜನರನ್ನು ಕರೆದೊಯ್ಯುತ್ತಿದ್ದ ವೇಳೆ ಪಾಣತ್ತೂರು ಕಲ್ಲಪ್ಪಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯಲ್ಲಿ ಐವರು ಮೃತಪಟ್ಟಿದ್ದು, ಹಲವರು ಗಂಭೀರ ಗಾಯಗೊಂಡಿದ್ದಾರೆ. ಕೆಲವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಸುಳ್ಯ: ಖಾಸಗಿ ಬಸ್ ಅಪಘಾತದಲ್ಲಿ ಐವರ ದುರ್ಮರಣ ➤ ಹಲವರು ಗಂಭೀರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೇಂದ್ರ ಸಚಿವ ಸದಾನಂದ ಗೌಡ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಚಿತ್ರದುರ್ಗ,ಜ. 03. ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರಿಗೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆ ಅವರನ್ನ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಸಕ್ಕರೆ ಪ್ರಮಾಣ ಕಡಿಮೆಯಾಗಿ ಅಸ್ವಸ್ಥಗೊಂಡಿದ್ದು, ಆದ್ದರಿಂದ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೇಂದ್ರ ಸಚಿವ ಸದಾನಂದ ಗೌಡ ಆಸ್ಪತ್ರೆಗೆ ದಾಖಲು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮತ್ತೆ ನಾಡಿಗೆ ಲಗ್ಗೆಯಿಟ್ಟ ಕಾಡಾನೆ ➤ ಕಾಡಾನೆ ದಾಳಿಗೆ ಇಬ್ಬರು ಬಲಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.03. ಇತ್ತೀಚೆಗೆ ಕಾಡಾನೆಯ ಉಪಟಳ ಹೆಚ್ಚಾಗಿದ್ದು, ಪ್ರತ್ಯೇಕ ಪ್ರಕರಣಗಳಲ್ಲಿ ಕಾಡಾನೆ ದಾಳಿಗೆ ರೈತ ಮತ್ತು ಕೂಲಿ ಕಾರ್ಮಿಕ ಸೇರಿ ಇಬ್ಬರು ಬಲಿಯಾದ ಹೃದಯ ವಿದ್ರಾವಕ ಘಟನೆ ರಾಜ್ಯದಲ್ಲಿ ನಡೆದಿದೆ. ಚಾಮರಾಜನಗರ ತಾಲೂಕಿನ ಯಣಗುಂಬ ಗ್ರಾಮದ ರೈತ ಸ್ವಾಮಿ(61) ಎಂಬವರು ಮುಸುಕಿನ ಜೋಳ ಬೆಳೆದಿದ್ದು, ಕಾಡುಪ್ರಾಣಿಗಳ ದಾಳಿಯಿಂದ ಬೆಳೆಯನ್ನು ರಕ್ಷಿಸಲು ಶನಿವಾರ ರಾತ್ರಿ ತನ್ನ ಜಮೀನಿನ ಬಳಿ ಠಿಕಾಣಿ ಹೂಡಿದ್ದರು. ತಡರಾತ್ರಿ ಕಾಡಾನೆಯ ತುಳಿತಕ್ಕೊಳಗಾದ ಸ್ವಾಮಿಯವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೊಂದೆಡೆ ಹಾಸನ ಜಿಲ್ಲೆಯಲ್ಲೂ

ಮತ್ತೆ ನಾಡಿಗೆ ಲಗ್ಗೆಯಿಟ್ಟ ಕಾಡಾನೆ ➤ ಕಾಡಾನೆ ದಾಳಿಗೆ ಇಬ್ಬರು ಬಲಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತಮಿಳು ಸಿನೆಮಾದ ಖ್ಯಾತ ನಿರ್ಮಾಪಕ ಕೆ.ಬಾಲು ನಿಧನ

(ನ್ಯೂಸ್ ಕಡಬ) newskadaba.com ಜ. 03. ತಮಿಳಿನ ಖ್ಯಾತ ಸಿನಿಮಾ ನಿರ್ಮಾಪಕ ಕೆ. ಬಾಲು ಇಂದು ನಿಧನರಾಗಿದ್ದಾರೆ. ಇವರ ನಿಧನಕ್ಕೆ ತಮಿಳು ಚಿತ್ರರಂಗದ ಹಲವಾರು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ತಮಿಳು ಸಿನೆಮಾದ ಖ್ಯಾತ ನಿರ್ಮಾಪಕ ಕೆ.ಬಾಲು ನಿಧನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬ್ರೇಕಿಂಗ್ | ಸುಳ್ಯ: ಖಾಸಗಿ ಬಸ್ ಪಲ್ಟಿ ➤ ಹಲವರು ಗಂಭೀರ

(ನ್ಯೂಸ್ ಕಡಬ) newskadaba.com ಸುಳ್ಯ, ಜ.03. ಸುಳ್ಯದಿಂದ ಪಾಣತ್ತೂರು ಕಡೆಗೆ ಸಂಚರಿಸುತ್ತಿದ್ದ ಖಾಸಗಿ ಬಸ್ಸೊಂದು ಪಲ್ಟಿಯಾದ ಪರಿಣಾಮ ಹಲವರು ಗಂಭೀರ ಗಾಯಗೊಂಡ ಘಟನೆ ಭಾನುವಾರದಂದು ಆಲೆಟ್ಟಿ ಸಮೀಪದ ಬಡ್ಡಡ್ಕ ಎಂಬಲ್ಲಿ ನಡೆದಿದೆ. ಪುತ್ತೂರಿನ ಸುರಕ್ಷಾ ಸಂಸ್ಥೆಯ ಖಾಸಗಿ ಬಸ್ ಮದುವೆ ಸಮಾರಂಭಕ್ಕೆಂದು ಜನರನ್ನು ಕರೆದೊಯ್ಯುತ್ತಿದ್ದ ವೇಳೆ ಆಲೆಟ್ಟಿ ಸಮೀಪದ ಬಡ್ಡಡ್ಕ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯಲ್ಲಿ ಹಲವರು ಗಂಭೀರ ಗಾಯಗೊಂಡಿದ್ದು, ಕಲೆವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬ್ರೇಕಿಂಗ್ | ಸುಳ್ಯ: ಖಾಸಗಿ ಬಸ್ ಪಲ್ಟಿ ➤ ಹಲವರು ಗಂಭೀರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಬವಿಸದಂತೆ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿ ➤ ಎ. ಪೊನ್ನುರಾಜ್

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 03. ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಮುಂಬರುವ ದಿನಗಳಲ್ಲಿ ಜನಸಾಮಾನ್ಯರಿಗೆ ಕುಡಿಯುವ ನೀರಿನ ತೊಂದರೆ ಉಂಟಾಗದಂತೆ ವ್ಯವಸ್ಥಿತವಾಗಿ ಪೂರೈಕೆ ಮಾಡಲು ಕಾರ್ಯ ಪ್ರವೃತ್ತರಾಗಬೇಕು ಎಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎ. ಪೊನ್ನುರಾಜ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಇಂದು ನಗರದ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಪ್ರತಿವರ್ಷವು

ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಬವಿಸದಂತೆ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿ ➤ ಎ. ಪೊನ್ನುರಾಜ್ Read More »

ಕರಾವಳಿ, ಕರ್ನಾಟಕ
Scroll to Top