ಉಡುಪಿ :ಸಾಲಬಾಧೆಯಿಂದ ವ್ಯಕ್ತಿ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಉಡುಪಿ, ಡಿ.24: ಮನನೊಂದ ವ್ಯಕ್ತಿಯೋರ್ವರು ಮನೆಯ ಮಲಗುವ ಕೊಠಡಿಯಲ್ಲಿ ಫ್ಯಾನಿಗೆ ನೇಣುಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ನಗರದ ಪುತ್ತೂರು ಗ್ರಾಮದ ನಾರಾಯಣ ನಗರದಲ್ಲಿ ಇಂದು ನಡೆದಿದೆ.   ವಿಠಲ ಪ್ರಭು ಎಂಬವರ ಮಗ ಕೃಷ್ಣ ಪ್ರಭು (53) ಆತ್ಮಹತ್ಯೆ ಮಾಡಿಕೊಂಡವರು. ಮೃತರು ಸಾಲ ಬಾಧೆಯಿಂದ ಕಂಗೆಟ್ಟಿದ್ದರು ಎನ್ನಲಾಗಿದೆ.ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಜರು ಪ್ರಕ್ರಿಯೆಯನ್ನು ಪೋಲಿಸರು ನಡೆಸಿದರು.  

ಉಡುಪಿ :ಸಾಲಬಾಧೆಯಿಂದ ವ್ಯಕ್ತಿ ಆತ್ಮಹತ್ಯೆಗೆ ಶರಣು Read More »

ಕರಾವಳಿ

ಸುರಕ್ಷಾದಲ್ಲಿ ದಂತ ವೈದ್ಯರ ದಿನಾಚರಣೆ ಸಂಭ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.24:ಇಂದು ‘ರಾಷ್ಟ್ರೀಯ ದಂತ ವೈದ್ಯರ ದಿನ’ದ ಅಂಗವಾಗಿ ಪೂರ್ವಾಹ್ನ 10 ರಿಂದ ಸಾಯಂಕಾಲ 6 ರವರೆಗೆ ದಂತ ಆರೋಗ್ಯ ಮಾಹಿತಿ ಶಿಬಿರ ನಡೆಯಿತು. ಸುರಕ್ಷಾ ದಂತ ಚಿಕಿತ್ಸಾಲಯ ಮತ್ತು ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ ಇದರ ಜಂಟಿ ಆಶ್ರಯದಲ್ಲಿ ಈ ಕಾರ್ಯಕ್ರಮ ಜರುಗಿತು. ಮುಖ್ಯ ಅತಿಥಿಗಳಾಗಿ ಹೊಸಂಗಡಿಯ ಖ್ಯಾತ ಉದ್ಯಮಿ ಶ್ರೀ ಪೇಮ್‍ಕುಮಾರ್ ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಸುರಕ್ಷಾ ದಂತ ಚಿಕಿತ್ಸಾಲಯದ ಡಾ|| ಮುರಲೀಮೋಹನ್ ಚೂಂತಾರು ಇವರು ಭಾರತ ಕಂಡ ಶ್ರೇಷ್ಠ

ಸುರಕ್ಷಾದಲ್ಲಿ ದಂತ ವೈದ್ಯರ ದಿನಾಚರಣೆ ಸಂಭ್ರಮ Read More »

ಕರಾವಳಿ, ಕರ್ನಾಟಕ

ಅಪ್ರಾಪ್ತೆಯನ್ನು ವಿವಾಹವಾಗಿ ಬಳಿಕ ಕೊಂದು ಹೂತಿಟ್ಟ ಗಂಡ ➤ 15 ದಿನಗಳ ನಂತರ ಪ್ರಕರಣ ಬೆಳಕಿಗೆ

(ನ್ಯೂಸ್ ಕಡಬ) newskadaba.com ಮಧುಗಿರಿ , ಡಿ.24: ಕುಟುಂಬಸ್ಥರ ವಿರೋಧದ ನಡುವೆಯೂ ಅಪ್ರಾಪ್ತ ಬಾಲಕಿಯನ್ನು ಮದುವೆಯಾಗಿ ಕೊಲೆ ಮಾಡಿ ಮನೆಯಲ್ಲೇ ಹೂತುಹಾಕಿರುವ ಘಟನೆ ನಡೆದಿದ್ದು, ಆರೋಪಿ ಗಂಡ ತಲೆಮರೆಸಿಕೊಂಡಿದ್ದಾನೆ. ಮಧುಗಿರಿ ತಾಲೂಕಿನ ಹೊಸಇಟಕಲೋಟಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪೊಲೀಸ್ ತಪಾಸಣೆಯ ವೇಳೆ ಮನೆಯಲ್ಲೇ 16 ವರ್ಷದ ಬಾಲಕಿ ಶವ ಪತ್ತೆಯಾಗಿದ್ದು, ಮೃತ ಬಾಲಕಿಯ ಅಕ್ಕ ಶ್ವೇತಾಳಿಂದ ಪ್ರಕರಣ ಬೆಳಕಿಗೆ ಬಂದಿದೆ.   ಅಪ್ರಾಪ್ತ ವಯಸ್ಸಿನ ಬಾಲಕಿ ವಿವಾಹಿತೆಯೂ ಆಗಿದ್ದಳು. 9 ತಿಂಗಳ ಹಿಂದಷ್ಟೇ ಮದುವೆಯಾಗಿದ್ದಳು. ಬಾಲಕಿ

ಅಪ್ರಾಪ್ತೆಯನ್ನು ವಿವಾಹವಾಗಿ ಬಳಿಕ ಕೊಂದು ಹೂತಿಟ್ಟ ಗಂಡ ➤ 15 ದಿನಗಳ ನಂತರ ಪ್ರಕರಣ ಬೆಳಕಿಗೆ Read More »

ಕರ್ನಾಟಕ

ಮಂಗಳೂರು :ರಾಷ್ಟ್ರೀಯ ವರ್ಚುವಲ್‌ ವಿಚಾರ ಸಂಕಿರಣ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.24: ಶ್ರೀನಿವಾಸ್‌ ವಿಶ್ವವಿದ್ಯಾಲಯದ ಹೋಟೆಲ್‌ ಮ್ಯಾನೇಜ್‌ಮೆಂಟ್‌ ಮತ್ತು ಟೂರಿಸಂ ನ ವಿಭಾಗದಿಂದ ಭಾರತದಲ್ಲಿ ಗ್ರಾಮಿಣ ಮತ್ತು ನಗರ ಪ್ರವಾಸೋದ್ಯಮ, ಪ್ರಸ್ತುತ ಪ್ರವೃತ್ತಿಗಳು ಮತ್ತು ಸಮಸ್ಯೆಗಳು ಎಂಬ ವಿಷಯದಲ್ಲಿ ಒಂದು ದಿನದ ರಾಷ್ಟ್ರೀಯ ವರ್ಚುವಲ್ ವಿಚಾರ ಸಂಕಿರಣವನ್ನು ಪಾಂಡೇಶ್ವರದಲ್ಲರುವ ಸಿಟಿಕ್ಯಾಂಪಸ್‌ನಲ್ಲಿ ಡಿಸೆಂಬರ್‌ 24ರಂದು ಆಯೋಜಿಸಿತು.   ಮ್ಯಾರಿಯೇಟ್‌ ಸಿಂಗಾಪುರದ ಯೋಜನೆ ಮತ್ತು ಸೇವಾ ವ್ಯವಸ್ಥಾಪಕ ಸೂರಜ್‌ ಕನ್ನಾ ಕಾರ್ಯಕ್ರಮದ ಉದ್ಘಾಟಿಸಿ, ಕೋವಿಡ್‌ 19ರ ಪ್ರಭಾವದಿಂದ ಪ್ರವಾಸೋದ್ಯಮ ಮತ್ತು ಆತಿಥ್ಯ ಕ್ಷೇತ್ರದಲ್ಲಾದ ಭಾರಿ ಬದಲಾವಣೆಗಳ

ಮಂಗಳೂರು :ರಾಷ್ಟ್ರೀಯ ವರ್ಚುವಲ್‌ ವಿಚಾರ ಸಂಕಿರಣ Read More »

ಕರಾವಳಿ

ಬಂಟ್ವಾಳ :ತಡರಾತ್ರಿ ಟೆರೇಸ್ ನಿಂದ ಬಿದ್ದು ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.24: ಕಳೆದ ದಿನ ತಡರಾತ್ರಿ ಯುವಕನೊಬ್ಬ ಟೆರೇಸ್ ನಿಂದ ಬಿದ್ದು ಮೃತಪಟ್ಟ ಘಟನೆ  ಬಂಟ್ವಾಳ ತಾಲೂಕಿನ ಕೇಪು ಗ್ರಾಮದಲ್ಲಿ ನಡೆದಿದೆ. ಬೆಳ್ತಂಗಡಿ ನಿವಾಸಿ ಪ್ರಸಾದ್ ಆಚಾರ್ಯ(28) ಮೃತಪಟ್ಟವರು. ಅವರು ಕೇಪು ಕುಕ್ಕೆಬೆಟ್ಟುವಿನಲ್ಲಿ ಸಂಬಂಧಿಕರ ಮನೆಯಲ್ಲಿ ಚಿನ್ನದ ಕೆಲಸವನ್ನು ಮಾಡುತ್ತಿದ್ದರು.ಬುಧವಾರ ತಡರಾತ್ರಿ ಟೆರೇಸ್ ನಿಂದ ಬಿದ್ದಿದ್ದಾರೆ. ತತ್ ಕ್ಷಣ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ವಿಟ್ಲದ ಕಡೆಗೆ ಬರುತ್ತಿದ್ದಾಗ ದಾರಿ ಮಧ್ಯೆ ಸಾವನ್ನಪ್ಪಿದರು.ಘಟನೆ ಸಂಬಂಧಿಸಿದಂತೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಬಂಟ್ವಾಳ :ತಡರಾತ್ರಿ ಟೆರೇಸ್ ನಿಂದ ಬಿದ್ದು ಯುವಕ ಮೃತ್ಯು Read More »

ಕರಾವಳಿ

ಮಂಗಳೂರು :ಶಕ್ತಿ ವಸತಿ ಶಾಲೆಯಲ್ಲಿ ಕ್ರಿಸ್‍ಮಸ್‍ಆಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.24: ಪ್ರಸ್ತುತ ದಿನದ ಒತ್ತಡದಿಂದ ಶಾಲೆಯ ವಾತಾವರಣ ಮನೋರಂಜನೆಯಿಂದ ವಂಚಿತರಾದ ಶಕ್ತಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಸಂಸ್ಥೆಯು ಆನ್‍ಲೈನ್ ತರಗತಿಯ ಮೂಲಕ ಶಿಕ್ಷಣವನ್ನು ನೀಡುವುದರ ಜೊತೆಗೆ ಹಲವಾರು ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳನ್ನು ಏರ್ಪಡಿಸುತ್ತಾ ಬಂದಿದ್ದು, ರಾಷ್ಟ್ರೀಯ ಹಬ್ಬಗಳ ಸಂದರ್ಭ ಬಗೆ ಬಗೆಯ ಸ್ಪರ್ಧೆಯನ್ನು ಏರ್ಪಡಿಸಿತ್ತು. ಮಕ್ಕಳ ದಿನಾಚರಣೆಯ ಪ್ರಯುಕ್ತ ಪ್ರತೀ ವರ್ಷದಂತೆ ‘ಶಕ್ತಿ ಸಿರಿ, ಶಕ್ತಿ ಶ್ರೀ’ ಎಂಬ ಸ್ಪರ್ಧೆಯನ್ನು ಏರ್ಪಡಿಸಿ ಸುಂದರವಾದ ಉಡುಪು, ಅಲಂಕಾರದೊಂದಿಗೆ ರ್ಯಾಂಪ್ ವಾಕ್ ಮಾಡಿ

ಮಂಗಳೂರು :ಶಕ್ತಿ ವಸತಿ ಶಾಲೆಯಲ್ಲಿ ಕ್ರಿಸ್‍ಮಸ್‍ಆಚರಣೆ Read More »

ಕರಾವಳಿ, ಕರ್ನಾಟಕ

ಕೊರೋನಾ 2ನೇ ಅಲೆಯ ಭೀತಿ ➤ ಇನ್ಮುಂದೆ ಕಡಬದಲ್ಲಿ ಮಾಸ್ಕ್ ಧರಿಸದವರಿಗೆ ದಂಡ | ಸಭೆ – ಸಮಾರಂಭಗಳಿಗೆ ಅನುಮತಿ ಕಡ್ಡಾಯ

(ನ್ಯೂಸ್ ಕಡಬ) newskadaba.com ಕಡಬ, ಡಿ.24. ಎರಡನೆಯ ಹಂತದ ಕೊರೋನಾ ವೈರಸ್ ಭೀತಿ ಎದುರಾಗಿರುವ ಹಿನ್ನಲೆಯಲ್ಲಿ ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಮಾಸ್ಕ್ ಹಾಕದವರಿಗೆ ನೋಡಲ್ ಅಧಿಕಾರಿಗಳು ದಂಡ ವಿಧಿಸಲಿದ್ದಾರೆ. ಕಡಬ ಪೇಟೆಯಲ್ಲಿ ಸಾರ್ವಜನಿಕರು ಮಾಸ್ಕ್ ಹಾಕಿಕೊಳ್ಳುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಸ್ಯಾನಿಟೈಸರ್‌ಗಳನ್ನು ಬಳಸುವಂತೆ ಸೂಚಿಸಲಾಗಿದೆ. ಸಾರ್ವಜನಿಕರು ಮುಂಜಾಗ್ರತಾ ಕ್ರಮಗಳನ್ನು ಉಲ್ಲಂಘಿಸಿದಲ್ಲಿ ದಂಡ ವಿಧಿಸುವ ಬಗ್ಗೆ ಎಚ್ಚರಿಕೆ ನೀಡಲಾಗಿದೆ. ಪಂಚಾಯತ್ ವ್ಯಾಪ್ತಿಯಲ್ಲಿ ಸಭೆ, ಸಮಾರಂಭಗಳನ್ನು ನಡೆಸಲು ಪಂಚಾಯತ್ ಅನುಮತಿ ಕಡ್ಡಾಯವಾಗಿದೆ. ಕಾರ್ಯಕ್ರಮಗಳಿಗೆ ಅನುಮತಿ ನೀಡಿದರೂ ಅಲ್ಲಿ

ಕೊರೋನಾ 2ನೇ ಅಲೆಯ ಭೀತಿ ➤ ಇನ್ಮುಂದೆ ಕಡಬದಲ್ಲಿ ಮಾಸ್ಕ್ ಧರಿಸದವರಿಗೆ ದಂಡ | ಸಭೆ – ಸಮಾರಂಭಗಳಿಗೆ ಅನುಮತಿ ಕಡ್ಡಾಯ Read More »

ಕರಾವಳಿ

ಬೆಳ್ತಂಗಡಿ :ಮುಂಜಾನೆ ಅಡಿಕೆ ಕಳ್ಳನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.24:ಬೆಳ್ತಂಗಡಿ ತಾಲೂಕಿನ ಮಚ್ಚಿನ ಗ್ರಾಮದಲ್ಲಿ ಇಂದು (ಗುರುವಾರ) ಮುಂಜಾನೆ ಓರ್ವ ಕಳ್ಳನನ್ನು ಸ್ಥಳೀಯರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.ಮಚ್ಚಿನ ಗ್ರಾಮದ ಪುಂಚಪಾದೆ ಎಂಬಲ್ಲಿ 50 ಕೆ.ಜಿ. (14) ಗೋಣಿ ಅಡಿಕೆ ಸಹಿತ ಇಬ್ಬರು ಆರೋಪಿಗಳನ್ನು ಸ್ಥಳೀಯರಾದ ಕರಾಟೆ ಕಿಟ್ಟ ಎಂಬುವರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಒಂದೂವರೆ ತಿಂಗಳುಗಳಿಂದ ಪಿಲಿಗೂಡು, ದೇವರುಪಲಿಕೆ ಆಸುಪಾಸಿನಲ್ಲಿ ಅಡಿಕೆ ಕಳ್ಳ ಸಾಗಾಣಿಕೆ ನಡೆಯುತ್ತಿದ್ದು, ಕಳ್ಳರ ಪತ್ತೆಗಾಗಿ ಸ್ಥಳೀಯರೇ ಕಾರ್ಯಾಚರಣೆಗೆ ಇಳಿದಿದ್ದರು. ಚುನಾವಣೆ ಸಮಯವಾದ್ದರಿಂದ ಕೃಷಿಕರ ಬಂದೂಕು

ಬೆಳ್ತಂಗಡಿ :ಮುಂಜಾನೆ ಅಡಿಕೆ ಕಳ್ಳನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು Read More »

ಕರಾವಳಿ, ಕ್ರೈಮ್ ನ್ಯೂಸ್

ನೈಟ್ ಕರ್ಫ್ಯೂ ವಿಚಾರವನ್ನು ಜಾತಿ-ಧರ್ಮದ ಬಣ್ಣದಲ್ಲಿ ನೋಡಬೇಡಿ ➤ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.24: ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ ವಿಚಾರವನ್ನು ಜಾತಿ, ಧರ್ಮದ ಬಣ್ಣದಲ್ಲಿ ನೋಡಬಾರದು. ಯಾವುದೇ ಜಾತಿ, ಮತ, ಧರ್ಮಗಳು ರೋಗಕ್ಕಿಲ್ಲ. ಆದರಿಂದ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ದ.ಕ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹೇಳಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ರೋಗಾಣು ಎಲ್ಲರಿಗೂ ಬಂದೇ ಬರುತ್ತದೆ. ರಾಜ್ಯದಲ್ಲಿ ಆಡಳಿತ ನಡೆಸುವವರಿಗೆ ಪ್ರತಿಯೊಬ್ಬರ ಪ್ರಾಣ ಮುಖ್ಯವಾಗೊದೆ. ಡಬ್ಲ್ಯುಹೆಚ್‌ಒ ಮಾರ್ಗಸೂಚಿ ಪ್ರಕಾರ ಸರ್ಕಾರ ತೀರ್ಮಾನ ಕೈಗೊಳ್ಳುತ್ತದೆ ಎಂದರು.

ನೈಟ್ ಕರ್ಫ್ಯೂ ವಿಚಾರವನ್ನು ಜಾತಿ-ಧರ್ಮದ ಬಣ್ಣದಲ್ಲಿ ನೋಡಬೇಡಿ ➤ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ Read More »

ಕರಾವಳಿ, ಕರ್ನಾಟಕ

ಶಾಸಕ ಯು.ಟಿ.ಖಾದರ್ ಕಾರನ್ನು ಹಿಂಬಾಲಿಸಿದ ಪ್ರಕರಣ ➤ ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.24. ಶಾಸಕ ಯು.ಟಿ.ಖಾದರ್ ಪ್ರಯಾಣಿಸುತ್ತಿದ್ದ ಕಾರನ್ನು ಅಪರಿಚಿತ ಬೈಕೊಂದು ಹಿಂಬಾಲಿಸಿದ ಪ್ರಕರಣದಲ್ಲಿ ಓರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಶಾಸಕ ಯು.ಟಿ.ಖಾದರ್ ರವರು ಬುಧವಾರದಂದು ದೇರಳಕಟ್ಟೆಯಲ್ಲಿ ನಡೆದ ಕಾರ್ಯಕ್ರಮವೊಂದನ್ನು ಮುಗಿಸಿ ರಾತ್ರಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದರು. ಈ ನಡುವೆ ದೇರಳಕಟ್ಟೆಯಿಂದ ಬೈಕೊಂದರಲ್ಲಿ ಇಬ್ಬರು ಅಪರಿಚಿತರು ಶಾಸಕರ ಕಾರನ್ನು ಅನುಮಾನಾಸ್ಪದವಾಗಿ ಹಿಂಬಾಲಿಸಿಕೊಂಡು ಬರುತ್ತಿರುವುದು ಗಮನಕ್ಕೆ ಬಂದಿದೆ ಎನ್ನಲಾಗಿದೆ. ನಂತೂರು ತಲುಪುವ ವೇಳೆ ಶಾಸಕರ ಎಸ್ಕಾರ್ಟ್ ವಾಹನವು ಬೈಕ್ ಸವಾರರನ್ನು ತಡೆದಿದ್ದು, ಈ

ಶಾಸಕ ಯು.ಟಿ.ಖಾದರ್ ಕಾರನ್ನು ಹಿಂಬಾಲಿಸಿದ ಪ್ರಕರಣ ➤ ಓರ್ವನ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top