ಕುಕ್ಕೆಯಲ್ಲಿ ಮನೆಮಾಡಿದ ಲಕ್ಷದೀಪೋತ್ಸವದ ಸಂಭ್ರಮ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ ಡಿ.15:ಪವಿತ್ರ ಸುಪ್ರಸಿದ್ದ ನಾಗಕ್ಷೇತ್ರದಲ್ಲಿ ಷಷ್ಠಿ ಸಂಭ್ರಮ ಮನೆ ಮಾಡಿದೆ. ಡಿ,11ರಿಂದ ಮೂಲ ಮೃತಿಕಾ ಪ್ರಸಾದ ತೆಗೆಯುವ ಮೂಲಕ ಆರಂಭಗೊಂಡಿದೆ.ಇನ್ನು ಕಳೆದ ದಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಲಕ್ಷದೀಪೋತ್ಸವವು ಯಶಸ್ವಿಯಾಗಿ ಮೂಡಿ ಬಂದಿದೆ. ಭಕ್ತರು ಸಾಮಾಜಿಕ ಅಂತರ ಕಾಯ್ದುಕೊಂಡು ಲಕ್ಷದೀಪೋತ್ಸವವು ಯಶಸ್ವಿಗೊಳಿಸಿದ್ದಾರೆ. ಕುಕ್ಕೆ ಶ್ರೀ ದೇವಳದ ಹೊರಾಂಗಣದಲ್ಲಿ ಶ್ರೀ ಸುಬ್ರಹ್ಮಣ್ಯನನ್ನು ಪಲ್ಲಕ್ಕಿಯಲ್ಲಿ ಸುತ್ತುಗಳನ್ನು ಮುಗಿಸಿ, ಬಳಿಕ ರಥದೊಂದಿಗೆ ಬೀದಿಗಿಳಿದು ಹಲವು ಕಟ್ಟೆ ಪೂಜೆಗಳನ್ನು ಮುಗಿಸಿಕೊಂಡು ಕಾಶಿ ಕಟ್ಟೆ ಶ್ರೀ ಗಣಪತಿ ದೇವಸ್ಥಾನಕ್ಕೆ ತೆರಳಿ […]

ಕುಕ್ಕೆಯಲ್ಲಿ ಮನೆಮಾಡಿದ ಲಕ್ಷದೀಪೋತ್ಸವದ ಸಂಭ್ರಮ Read More »

ಕರಾವಳಿ

ಕಡಬ: ಜಾಂಡೀಸ್ ಗೆ ಕಾಲೇಜು ವಿದ್ಯಾರ್ಥಿನಿ ಬಲಿ

(ನ್ಯೂಸ್ ಕಡಬ) newskadaba.com ಕಡಬ, ಡಿ.15. ಅನಾರೋಗ್ಯಕ್ಕೆ ಒಳಗಾಗಿ ಕಾಲೇಜು ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಕಡಬದಿಂದ ವರದಿಯಾಗಿದೆ. ಮೃತ ಯುವತಿಯನ್ನು ಕಡಬ ತಾಲೂಕು ಕೋಡಿಂಬಾಳ ಗ್ರಾಮದ ಹಮೀದ್ ನ್ಯಾಷನಲ್ ಎಂಬವರ ಏಕೈಕ ಪುತ್ರಿ ಫಾತಿಮತ್ ತಬ್’ಶೀರಾ (18) ಎಂದು ಗುರುತಿಸಲಾಗಿದೆ. ಕಳೆದ ನಾಲ್ಕು ದಿನಗಳ ಹಿಂದೆ ಜಾಂಡೀಸ್ (ಹಳದಿ ರೋಗ) ಕಾಣಿಸಿಕೊಂಡಿದ್ದು, ಚಿಕಿತ್ಸೆ ನೀಡಲಾಗಿತ್ತು. ಸೋಮವಾರ ರಾತ್ರಿ ಏಕಾಏಕಿ ಅನಾರೋಗ್ಯ ಕಾಡಿದ ಹಿನ್ನೆಲೆಯಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಹಾದಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಕಡಬ: ಜಾಂಡೀಸ್ ಗೆ ಕಾಲೇಜು ವಿದ್ಯಾರ್ಥಿನಿ ಬಲಿ Read More »

ಕರಾವಳಿ, ಕ್ರೈಮ್ ನ್ಯೂಸ್

ಶಬರಿಮಲೆಯಲ್ಲಿ ಜರುಗುವ ಮಂಡಲ-ಮಕರವಿಳಕ್ಕು ಪರ್ವದ ಕಾರ್ಯಕ್ರಮಕ್ಕೆ ಮಾರ್ಗಸೂಚಿ ಕಡ್ಡಾಯ

(ನ್ಯೂಸ್ ಕಡಬ) newskadaba.com ಶಬರಿಮಲೆ, ಡಿ.15: ಪ್ರಸ್ತುತ ಸಾಲಿನಲ್ಲಿ ಕೇರಳ ರಾಜ್ಯದ ಶಬರಿಮಲೆಯಲ್ಲಿ ಜರುಗುವ ಮಂಡಲ-ಮಕರವಿಳಕ್ಕು ಪರ್ವದ ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯದಿಂದ ಆಗಮಿಸುವ ಭಕ್ತಾದಿಗಳ ಆರೋಗ್ಯ ರಕ್ಷಣೆ ಹಾಗೂ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಭಕ್ತಾದಿಗಳು ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ ಮತ್ತು ಸೂಚನೆಗಳಂತೆ ಈ ಕೆಳಗಿನ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸಲು ತಿಳಿಸಲಾಗಿದೆ. ಯಾತ್ರಾರ್ಥಿಗಳು ಕಡ್ಡಾಯವಾಗಿ ವೆಬ್‍ಸೈಟ್‍ನ ಪೋರ್ಟಲ್‍ನಲ್ಲಿ ನೋಂದಣಿ ಮಾಡಿಕೊಂಡಿದ್ದರೆ ಅನುಮತಿಸಿದ ನಂತರದಲ್ಲಿ ಮಾತ್ರ ಶಬರಿ ಮಲೆ ದರ್ಶನಕ್ಕೆ ಅವಕಾಶ ಇರಲಿದೆ. ಪ್ರಥಮವಾಗಿ ಪ್ರತಿ

ಶಬರಿಮಲೆಯಲ್ಲಿ ಜರುಗುವ ಮಂಡಲ-ಮಕರವಿಳಕ್ಕು ಪರ್ವದ ಕಾರ್ಯಕ್ರಮಕ್ಕೆ ಮಾರ್ಗಸೂಚಿ ಕಡ್ಡಾಯ Read More »

ಕರಾವಳಿ

ಶಾಲೆಗೆ ಮಕ್ಕಳ ಮರುದಾಖಲಾತಿ ಕಡ್ಡಾಯ ➤ಶಿಕ್ಷಣ ಸಚಿವ ಸುರೇಶ್ ಕುಮಾರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.15:ಪೋಷಕರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಹಾಗೂ ಕಡ್ಡಾಯ ಶಿಕ್ಷಣ ಕಾಯ್ದೆಯ ಆಶಯದಂತೆ ಮಕ್ಕಳನ್ನು ಮುಂದಿನ ತರಗತಿಗಳಿಗೆ ಮರು ದಾಖಲಾತಿ ಮಾಡುವುದು ಕಡ್ಡಾಯವಾಗಿದೆ ಎಂದು ತಿಳಿಸಿದ್ದಾರೆ.   ಪೋಷಕರು ತಮ್ಮ ಮಕ್ಕಳನ್ನು ಮರುದಾಖಲಾತಿ ಮಾಡುವುದರಿಂದ ರಾಜ್ಯದ ಶಾಲೆಗಳಲ್ಲಿ ತರಗತಿವಾರು ಮಕ್ಕಳ ದಾಖಲಾತಿ ಸಂಖ್ಯೆ ಲೆಕ್ಕಕ್ಕೆ ದೊರೆಯಲಿದ್ದು, ಅದು ಮುಂದಿನ ತರಗತಿಗಳಿಗೆ ಮಕ್ಕಳನ್ನು ಉತ್ತೀರ್ಣಗೊಳಿಸಲು ಅನುವಾಗಲಿದೆ. ಮಕ್ಕಳ ಮರು ದಾಖಲಾತಿಗೆ

ಶಾಲೆಗೆ ಮಕ್ಕಳ ಮರುದಾಖಲಾತಿ ಕಡ್ಡಾಯ ➤ಶಿಕ್ಷಣ ಸಚಿವ ಸುರೇಶ್ ಕುಮಾರ್ Read More »

ಕರಾವಳಿ, ಕರ್ನಾಟಕ

ಧರ್ಮಸ್ಥಳ: ಲಕ್ಷ ದೀಪೋತ್ಸವ ಸಂಭ್ರಮಕ್ಕೆ ತೆರೆ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಡಿ.15: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂಭ್ರಮ, ಸಡಗರಕ್ಕೆ ತೆರೆ ಬಿದ್ದಿದೆ.ಲಕ್ಷದೀಪೋತ್ಸವದ ಅಂಗವಾಗಿ ಅಮೃತವರ್ಷಿಣಿ ಸಭಾಭವನದಲ್ಲಿ ನಾನಾ ವಿಷಯ ಮಂಥನದ 88ನೇ ಸಾಹಿತ್ಯ ಸಮ್ಮೇಳನವೂ ನಡೆಯಿತು.   ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಸಾಹಿತ್ಯ ಸಮ್ಮೇಳನ ನಡೆದಿದ್ದು, ಹಿರಿಯ ವಿದ್ವಾಂಸ, ವೇದಭೂಷಣ ಡಾ.ಎಸ್. ರಂಗನಾಥ್ ಉದ್ಘಾಟಿಸಿದರು.ಲಕ್ಷದೀಪೋತ್ಸವ ಈ ಬಾರಿ ಕೊರೊನಾ ಆತಂಕದ ನಡುವೆಯೂ ನಡೆದಿದ್ದು, ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಿರಾರು ಮಂದಿ ಭಕ್ತರು ಧರ್ಮಸ್ಥಳಕ್ಕೆ ಆಗಮಿಸಿ ಶ್ರೀ ಮಂಜುನಾಥ ಸ್ವಾಮಿಯ

ಧರ್ಮಸ್ಥಳ: ಲಕ್ಷ ದೀಪೋತ್ಸವ ಸಂಭ್ರಮಕ್ಕೆ ತೆರೆ Read More »

ಕರಾವಳಿ

ಕಬಕ :ಬೈಕ್ ಅಪಘಾತ ➤ ಹಿರಿಯ ಆರ್.ಎಸ್.‌ಎಸ್ ಕಾರ್ಯಕರ್ತ ನಿಧನ

(ನ್ಯೂಸ್ ಕಡಬ) newskadaba.com ಕಬಕ, ಡಿ.15: ಕಬಕ ಬಳಿ ಡಿವೈಡರ್‍ಗೆ ಬೈಕ್ ಹೊಡೆದ ಪರಿಣಾಮ ಹಿರಿಯ ಆರ್‍ಎಸ್‍ಎಸ್ ಕಾರ್ಯಕರ್ತ ಮೃತಪಟ್ಟಿದ್ದಾರೆ. ಘಟನೆ ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿ ಕಬಕ ಸಮೀಪದ ಪೋಳ್ಯ ಎಂಬಲ್ಲಿ ಇಂದು (ಡಿ15) ಮುಂಜಾನೆ ನಡೆದಿದೆ. ಮೃತ ಪಟ್ಟವರನ್ನು ಆರ್‍ಎಸ್‍ಎಸ್ ನ ಹಿರಿಯ ಕಾರ್ಯಕರ್ತ ಬಂಟ್ವಾಳದ ನಿವಾಸಿ ವೆಂಕಟರಮಣ ಹೊಳ್ಳ ಎಂದು ಗುರುತಿಸಲಾಗಿದೆ. ಇವರು ಪುತ್ತೂರಿನಿಂದ ಬಂಟ್ವಾಳಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ ಸಂದರ್ಭ ಕಬಕ ಸಮೀಪದ ಪೋಳ್ಯದಲ್ಲಿ ಅಳವಡಿಸಿರುವ ಡಿವೈಡರ್ ಬಳಿ ಈ ಅಪಘಾತ ಸಂಭವಿಸಿದೆ.

ಕಬಕ :ಬೈಕ್ ಅಪಘಾತ ➤ ಹಿರಿಯ ಆರ್.ಎಸ್.‌ಎಸ್ ಕಾರ್ಯಕರ್ತ ನಿಧನ Read More »

ಕರಾವಳಿ

ಸುದ್ದಿ ಬಿಡುಗಡೆಯ ಕಡಬ ವರದಿಗಾರ ಖಾದರ್ ಸಾಹೇಬ್ ಕಲ್ಲುಗುಡ್ಡೆ ನಿಧನ

(ನ್ಯೂಸ್ ಕಡಬ) newskadaba.com ಕಡಬ, ಡಿ. 15. ಅನಾರೋಗ್ಯದಿಂದ ಬಳಲುತ್ತಿದ್ದ ಸುದ್ದಿ ಬಿಡುಗಡೆ ಕಡಬದ ವರದಿಗಾರ ಖಾದರ್ ಸಾಹೇಬ್ ಕಲ್ಲುಗುಡ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ ಸೋಮವಾರ ತಡರಾತ್ರಿ ಮೃತಪಟ್ಟಿದ್ದಾರೆ. ಸಾಮಾಜಿಕ, ರಾಜಕೀಯ ಹಾಗೂ ಧಾರ್ಮಿಕ ರಂಗದಲ್ಲಿ ಸೇವೆ ಸಲ್ಲಿಸಿದ್ದ ಇವರು ಹಲವು ವರ್ಷಗಳಿಂದ ಸುದ್ದಿ ಬಿಡುಗಡೆ ಪತ್ರಿಕೆಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದರು. ಕಳೆದ ಕೆಲವು ತಿಂಗಳುಗಳಿಂದ ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಇವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ತೀವ್ರ ಅನಾರೋಗ್ಯಕ್ಕೊಳಗಾದ ಇವರು ಸೋಮವಾರ ರಾತ್ರಿ

ಸುದ್ದಿ ಬಿಡುಗಡೆಯ ಕಡಬ ವರದಿಗಾರ ಖಾದರ್ ಸಾಹೇಬ್ ಕಲ್ಲುಗುಡ್ಡೆ ನಿಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕುಕ್ಕೇ ಸುಬ್ರಹ್ಮಣ್ಯದಲ್ಲಿ ಸರಳ ಚಂಪಾ ಷಷ್ಠಿ ಹಿನ್ನೆಲೆ ➤ ಡಿಸೆಂಬರ್ 17 ರಿಂದ 20 ರ ವರೆಗೆ ಭಕ್ತರಿಗೆ ದೇವಳ ಪ್ರವೇಶ ಸಂಪೂರ್ಣ ನಿಷೇಧ

(ನ್ಯೂಸ್ ಕಡಬ) newskadaba.com ಕುಕ್ಕೇ ಸುಬ್ರಹ್ಮಣ್ಯ, ಡಿ.13. ಚಂಪಾಷಷ್ಠಿ ಜಾತ್ರೆ ಆರಂಭಗೊಂಡಿದ್ದು, ಸಾವಿರಾರು ಭಕ್ತರು ಸೇರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮುಂಗಡ ನೋಂದಾಯಿಸಿರುವ ಭಕ್ತಾದಿಗಳನ್ನು ಹೊರತುಪಡಿಸಿ ಡಿಸೆಂಬರ್ 17 ರಿಂದ ಡಿಸೆಂಬರ್ 20ರ ವರೆಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಮತ್ತು ರಥಬೀದಿಗೆ ಭಕ್ತರ ಪ್ರವೇಶ ನಿರ್ಬಂಧಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ. ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ರಥೋತ್ಸವ ಸೇವೆಗಳಿಗೆ ಮುಂಗಡ ನೋಂದಾಯಿಸಿರುವ ಭಕ್ತಾದಿಗಳನ್ನು ಹೊರತುಪಡಿಸಿ, ಷಷ್ಠಿ ಮಹೋತ್ಸವದ ಪ್ರಯುಕ್ತ ಚೌತಿ, ಪಂಚಮಿ

ಕುಕ್ಕೇ ಸುಬ್ರಹ್ಮಣ್ಯದಲ್ಲಿ ಸರಳ ಚಂಪಾ ಷಷ್ಠಿ ಹಿನ್ನೆಲೆ ➤ ಡಿಸೆಂಬರ್ 17 ರಿಂದ 20 ರ ವರೆಗೆ ಭಕ್ತರಿಗೆ ದೇವಳ ಪ್ರವೇಶ ಸಂಪೂರ್ಣ ನಿಷೇಧ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೊರೊನಾ ವೈರಸ್​ಗೆ ಹೈಕೋರ್ಟ್​ ನ್ಯಾಯಮೂರ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಮಧ್ಯಪ್ರದೇಶ, ಡಿ.14: ಮಧ್ಯಪ್ರದೇಶ ಹೈಕೋರ್ಟ್​ನ ಇಂದೋರ್ ಪೀಠದ ನ್ಯಾಯಮೂರ್ತಿ ವಂದನಾ ಕಸರೇಕರ್ ಅವರು ಭಾನುವಾರ ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್​-19 ಚಿಕಿತ್ಸೆ ಪಡೆಯುತ್ತಿದ್ದಾಗ ಮೃತಪಟ್ಟಿದ್ದಾರೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. 60 ವರ್ಷದ ಕಸಾರೇಕರ್ ಅವರು ಬಹಳ ಹಿಂದಿನಿಂದಲೂ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಹೇಳಿದ್ದಾರೆ.ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ನ್ಯಾಯಮೂರ್ತಿ ವಂದನಾ ಕಸರೇಕರ್ ಅವರು ಮೃತಪಟ್ಟಿದ್ದಾರೆ. ಕಳೆದ ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿತ್ತು ಎಂದು ಕೋವಿಡ್​-19ಜಿಲ್ಲಾ ನೋಡಲ್

ಕೊರೊನಾ ವೈರಸ್​ಗೆ ಹೈಕೋರ್ಟ್​ ನ್ಯಾಯಮೂರ್ತಿ ಮೃತ್ಯು Read More »

ಕರಾವಳಿ

ಮುಲ್ಕಿ :ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.14: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಪಡುಪಣಂಬೂರು ಕಲ್ಲಾಪು ಬಳಿ ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಸೋಮವಾರ ಮಧ್ಯಾಹ್ನ ಬೆಳಕಿಗೆ ಬಂದಿದೆ.   ಮೃತರನ್ನು ಮೂಲತಃ ಮುಂಬೈ ನಿವಾಸಿ ಇಂದಿರಾ ಎಂಬವರ ಬಾಡಿಗೆ ಮನೆಯಲ್ಲಿ ವಾಸವಿದ್ದ ವಿನೋದ್ ಸಾಲ್ಯಾನ್ (38), ಪತ್ನಿ ರಚನಾ (38), ಮಗು ಸಾಧ್ಯ (10) ಎಂದು ಗುರುತಿಸಲಾಗಿದೆ. ಮೃತ ವಿನೋದ್ ಸಾಲ್ಯಾನ್ ಮುಂಬೈಯಲ್ಲಿ ಟಾಟಾ ಹೌಸಿಂಗ್ ನಲ್ಲಿ ಕೆಲಸಕ್ಕಿದ್ದು

ಮುಲ್ಕಿ :ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ
Scroll to Top