ಗುತ್ತಿಗಾರು :ಅನಾರೋಗ್ಯದ ಹಿನ್ನಲೆ ವಿದ್ಯಾರ್ಥಿನಿ ಮೃತ್ಯು

(ನ್ಯೂಸ್ ಕಡಬ) newskadaba.com ಗುತ್ತಿಗಾರು, ಡಿ.14: ಗುತ್ತಿಗಾರಿನ ವಿದ್ಯಾರ್ಥಿನಿಯೋರ್ವಳು ಅನಾರೋಗ್ಯದ ಹಿನ್ನಲೆಯಲ್ಲಿ ಮೃತ ಪಟ್ಟಿದ್ದಾರೆ. ಗುತ್ತಿಗಾರು ಗ್ರಾಮದ ಲಿಂಗಪ್ಪ ಗೌಡ ಪೈಲೂರವರ ಪುತ್ರಿ ಯಶಸ್ವಿನಿ ಇಂದು ಅನಾರೋಗ್ಯದಿಂದ ಮೃತಪಟ್ಟ ಘಟನೆ ವರದಿಯಾಗಿದೆ. ಈಕೆ ಗುತ್ತಿಗಾರಿನ ಕುರಿಯಾಕೋಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ಕೆಲವು ದಿನಗಳಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದಳೆಂದು ತಿಳಿದು ಬಂದಿದ್ದು, ಮೃತಳು ತಂದೆ ತಾಯಿ ಸಹೋದರಿಯನ್ನು ಅಗಲಿದ್ದಾರೆ.

ಗುತ್ತಿಗಾರು :ಅನಾರೋಗ್ಯದ ಹಿನ್ನಲೆ ವಿದ್ಯಾರ್ಥಿನಿ ಮೃತ್ಯು Read More »

ಕರಾವಳಿ

ಯುವ ಬ್ರಿಗೇಡ್ ಸುಬ್ರಹ್ಮಣ್ಯ ವತಿಯಿಂದ ಸ್ವಚ್ಚತಾ ಕಾರ್ಯ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ.14: ಯುವ ಬ್ರಿಗೇಡ್ ಸುಬ್ರಹ್ಮಣ್ಯ ಘಟಕದ ಸದಸ್ಯರಿಂದ ಡಿ.13ರ ಭಾನುವಾರದಂದು ಕುಕ್ಕೆ ಸುಬ್ರಹ್ಮಣ್ಯ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಕುಮಾರಧಾರ ನದಿ ಹಾಗೂ ಸುತ್ತಮುತ್ತಲಿನ ಪರಿಸರದಲ್ಲಿ ಸ್ವಚ್ಚತಾ ಕಾರ್ಯ ನಡೆಸಿದರು. ಈ ಕಾರ್ಯದಲ್ಲಿ ಸೂರ್ಯಭಟ್, ರಮೇಶ್ ಭಟ್, ಅಶ್ವಥ್ ಕೊನಡ್ಕ, ಮನೋಜ್ ದೇವರಗದ್ದೆ, ಆವನೀಶ್ ಭಟ್, ರತನ್, ಅಭಿಷೇಕ್ ಕಾರ್ತಿಕ್ ರಾವ್, ನಾಗೇಶ್ ಮಣಿಯಾನ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ಯುವ ಬ್ರಿಗೇಡ್ ಸುಬ್ರಹ್ಮಣ್ಯ ವತಿಯಿಂದ ಸ್ವಚ್ಚತಾ ಕಾರ್ಯ Read More »

ಕರಾವಳಿ

ಮಂಗಳೂರು :ಸರ್ಜಿಕಲ್ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.14: ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯ ಆವರಣದಲ್ಲಿ ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿ ರೂ.37.52 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸರ್ಜಿಕಲ್ ಕಟ್ಟಡ ಕಾಮಗಾರಿಗೆ ಸೋಮವಾರ ಸಂಸದ ನಳಿನ್ ಕುಮಾರ್ ಕಟೀಲು ಶಿಲಾನ್ಯಾಸ ನೆರವೇರಿಸಿದರು.   ಬಳಿಕ ಮಾತನಾಡಿದ ಅವರು, ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿ ಕಾಮಗಾರಿಗಳು ವೇಗ ಪಡೆದುಕೊಳ್ಳುತ್ತಿವೆ. ದೇಶದಲ್ಲಿಯೇ ಮಂಗಳೂರು ನಗರವನ್ನು ನಂಬರ್ ವನ್ ಮತ್ತು ಮಾದರಿ ನಗರವಾಗಿಸುವಲ್ಲಿ ಕೆಲಸ ಕಾರ್ಯಗಳು ಸಾಗುತ್ತಿವೆ ಎಂದರು.ವೆನ್ಲಾಕ್ ಆಸ್ಪತ್ರೆಯನ್ನು ಸುಸಜ್ಜಿತಗೊಳಿಸುವಲ್ಲಿ ಆದ್ಯತೆ ನೀಡಲಾಗಿದೆ. ಆದಷ್ಟು

ಮಂಗಳೂರು :ಸರ್ಜಿಕಲ್ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸ Read More »

ಕರಾವಳಿ

ಬೈಕ್ ಡಿಕ್ಕಿ ಹೊಡೆದು ಪಾದಚಾರಿ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಮುಲ್ಕಿ , ಡಿ.14: ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಸಮೀಪದ ಬಪ್ಪನಾಡು ಬಳಿ ನಡೆದ ಅಪಘಾತದಲ್ಲಿ ಮಹಿಳೆ ಮೃತ ಪಟ್ಟಿದ್ದಾರೆ. ಮೃತ ಮಹಿಳೆಯನ್ನು ಹೆಜಮಾಡಿ ಕೊಕ್ರಾಣಿ ನಿವಾಸಿ ಅಪ್ಪಿ ಸಾಲ್ಯಾನ್(85) ಎಂದು ಗುರುತಿಸಲಾಗಿದೆ. ಮೃತ ಮಹಿಳೆಯು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಮಂಗಳೂರಿನಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಬೈಕ್ ಡಿಕ್ಕಿ ಹೊಡೆದಿದೆ.ಅಪಘಾತದ ತೀವ್ರತೆಗೆ ಮಹಿಳೆಯ ತಲೆಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ. ಅಪಘಾತದಿಂದ ಬೈಕ್ ಸವಾರ ಮತ್ತು ಸಹ ಸವಾರ ಗಂಭೀರ

ಬೈಕ್ ಡಿಕ್ಕಿ ಹೊಡೆದು ಪಾದಚಾರಿ ಮಹಿಳೆ ಮೃತ್ಯು Read More »

ಕರಾವಳಿ

ಸೇವೆಯಿಂದಲೇ ಸಾರ್ಥಕತೆ ಪಡೆಯಿರಿ: ಡಾ|| ಚೂಂತಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.14: ಡಿ.13ರ ರವಿವಾರ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಮೂಡಬಿದಿರೆ ಘಟಕದ ಗೃಹಕ್ಷಕರ ಪದೋನ್ನತಿ ಹಾಗೂ ಸನ್ಮಾನ ಕಾರ್ಯಕ್ರಮವು ಮೂಡಬಿದಿರೆಯ ಅಮರಾವತಿ ಸಭಾಭವನದಲ್ಲಿ ನಡೆಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಸುದೀಪ್ ಎಂ.ವಿ., ಮೂಡಬಿದ್ರಿ ಠಾಣೆಯ ಪೊಲೀಸ್ ಉಪ ನಿರೀಕ್ಷಕರು ಮತ್ತು ಕಾನೂನು ಸುವ್ಯವಸ್ಥಾಪಕರು, ದಯಾನಂದ ಪೈ ಮಾಜಿ ಘಟಕಾಧಿಕಾರಿಗಳು, ಪಡುಮಾರ್ನಾಡು ಹಾಲು ಉತ್ಪಾದಕ ಸಹಕಾರ ಸಂಘದ ಅಧ್ಯಕ್ಷರು ಹಾಗೂ ಡಾ|| ಮುರಳೀಕೃಷ್ಣ ಆರ್.ವಿ. ಮಕ್ಕಳ ತಜ್ಞರು, ಅಧ್ಯಕ್ಷರು ರೋಟರಿ

ಸೇವೆಯಿಂದಲೇ ಸಾರ್ಥಕತೆ ಪಡೆಯಿರಿ: ಡಾ|| ಚೂಂತಾರು Read More »

ಕರಾವಳಿ

ಮದ್ಯಪಾನ ಸ್ವಯಂ ಮಂಡಳಿ ಹೆಸರು ಬದಲಾವಣೆಗೆ ಪತ್ರ ➤ ಸಿಎಂಗೆ ಧರ್ಮಾಧಿಕಾರಿ ಡಿ ವೀರೇಂದ್ರ ಹೆಗ್ಗಡೆ ಮನವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.14: ಕರ್ನಾಟಕ ರಾಜ್ಯ ಮದ್ಯಪಾನ ಸ್ವಯಂ ಮಂಡಳಿಯ ಹೆಸರನ್ನು ‘ವ್ಯಸನಮುಕ್ತ ಜಾಗೃತಿ ಮತ್ತು ಸಲಹಾ ಮಂಡಳಿ’ ಎಂದು ಮರುನಾಮಕರಣ ಮಾಡಿ, ಮಂಡಳಿಯ ಕಾರ್ಯಚಟುವಟಿಕೆಗಳನ್ನು ವಿಸ್ತರಿಸಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ, ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮನವಿ ಮಾಡಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಪತ್ರ ಬರೆದಿರುವ ವೀರೇಂದ್ರ ಹೆಗ್ಗಡೆ, ಇತ್ತೀಚಿನ ದಿನಗಳಲ್ಲಿ ರಾಜ್ಯ ಸರಕಾರ ಮಾದಕ ದ್ರವ್ಯಗಳ ಬಳಕೆ ಮಾಡುವವರು, ದಂಧೆಯಾಗಿ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದು ಕರ್ನಾಟಕ, ದೇಶಕ್ಕೆ

ಮದ್ಯಪಾನ ಸ್ವಯಂ ಮಂಡಳಿ ಹೆಸರು ಬದಲಾವಣೆಗೆ ಪತ್ರ ➤ ಸಿಎಂಗೆ ಧರ್ಮಾಧಿಕಾರಿ ಡಿ ವೀರೇಂದ್ರ ಹೆಗ್ಗಡೆ ಮನವಿ Read More »

ಕರಾವಳಿ

ಮಂಗಳೂರು: ಇಂದು ಹಳೆ ಬಂದರ್ ನಿಂದ ಮಾಲ್ದೀವ್ಸ್ ಗೆ ಪ್ರಥಮ ಸರಕು ನೌಕೆ ಯಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.14: ದ್ವೀಪ ರಾಷ್ಟ್ರಗಳಲ್ಲಿ ಒಂದಾದ ಮಾಲ್ದೀವ್ಸ್ ಗೆ ಮಂಗಳೂರು ಹಳೆ ಬಂದರ್‌ನಿಂದ ಪ್ರಥಮ ಬಾರಿಗೆ ಸರಕು ಸಾಗಾಟ ನೌಕೆಯು ಡಿ.14ರ  ಇಂದು  ಹೊರಡಲಿದೆ.   ಕೃಷಿ, ತೋಟಕ್ಕೆ ಗೊಬ್ಬರವಾಗಿ ಬಳಸಲು ತೆಂಗಿನ ಗೆರಟೆ ಹುಡಿ, ತರಕಾರಿ ಮತ್ತು ಹಣ್ಣು ಹಂಪಲು ಸಾಗಾಟ ಮಾಡಲಿದ್ದು, ಅದಕ್ಕೆ ಪೂರ್ವಭಾವಿಯಾಗಿ ರವಿವಾರ ಕ್ರೇನ್‌ಗಳ ಮೂಲಕ ಸಾಮಗ್ರಿಗಳನ್ನು ಲೋಡ್ ಮಾಡಲಾಯಿತು. ಕ್ಯಾಪ್ಟನ್ ಕಣ್ಣನ್ ನೇತೃತ್ವದಲ್ಲಿ ಸಿಬ್ಬಂದಿ ಕಾತೋರಾಯನ್, ಹರಿದಾಸ್, ಸಗಾಯಂ, ಶ್ರೀನಿವಾಸನ್, ವಿಘ್ನೇಶ್ ಪ್ರಥಮ ಯಾನದಲ್ಲಿ ತೆರಳಲಿದ್ದಾರೆ.ಲಕ್ಷದ್ವೀಪದ

ಮಂಗಳೂರು: ಇಂದು ಹಳೆ ಬಂದರ್ ನಿಂದ ಮಾಲ್ದೀವ್ಸ್ ಗೆ ಪ್ರಥಮ ಸರಕು ನೌಕೆ ಯಾನ Read More »

ಕರಾವಳಿ

ಸುಳ್ಯ :ಸೈಕಲ್ ಕಲಿಯಲು ತೆರಳಿದ್ದ ಬಾಲಕಿಗೆ ಶಾಲಾ ಆಡಳಿತಾಧಿಕಾರಿಯಿಂದ ಲೈಂಗಿಕ ಕಿರುಕುಳ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ.14: ಸೈಕಲ್ ಕಲಿಯಲು ತೆರಳಿದ್ದ ಬಾಲಕಿಗೆ ಶಾಲಾ ಆಡಳಿತಾಧಿಕಾರಿ ಲೈಂಗಿಕ ಕಿರುಕುಳ ನೀಡಿದ ಘಟನೆ ಸುಳ್ಯದಲ್ಲಿ ನಡೆದಿದೆ. ದೇವಚಳ್ಳ ಗ್ರಾಮದ ಎಲಿಮಲೆ ಎಂಬಲ್ಲಿ ಸೈಕಲ್ ಕಲಿಯಲು ಹೋದ ಬಾಲಕಿಯೊಬ್ಬಳನ್ನು ಕೊಠಡಿಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಾಲಾ ಆಡಳಿತಾಧಿಕಾರಿಯನ್ನು ವಜಾಗೊಳಿಸಲಾಗಿದೆ. ಎಲಿಮಲೆಯ ಪ್ರತಿಷ್ಠಿತ ಖಾಸಗಿ ಶಾಲೆಯಲ್ಲಿ ಬಾಲಕಿಯೊಬ್ಬಲು ತನ್ನ ಗೆಳತಿ ಜತೆ ಸೈಕಲ್ ಕಲಿಯುತ್ತಿದ್ದ ವೇಳೆ ಶಾಲೆಯಲ್ಲಿದ್ದ ಆಡಳಿತಾಧಿಕಾರಿ ಬಾಲಕಿಯನ್ನು ಕರೆದು ಸೈಕಲ್ ಕೊಡಿಸುವುದಾಗಿ ತಿಳಿಸಿ, ಬಳಿಕ ಕೊಠಡಿಗೆ

ಸುಳ್ಯ :ಸೈಕಲ್ ಕಲಿಯಲು ತೆರಳಿದ್ದ ಬಾಲಕಿಗೆ ಶಾಲಾ ಆಡಳಿತಾಧಿಕಾರಿಯಿಂದ ಲೈಂಗಿಕ ಕಿರುಕುಳ Read More »

ಕರಾವಳಿ

ಮೃಗಾಲಯದಲ್ಲಿದ್ದ 6 ತಿಂಗಳ ಆನೆ ಮರಿ ಅನಾರೋಗ್ಯದಿಂದ ಸಾವು

(ನ್ಯೂಸ್ ಕಡಬ) newskadaba.com ಮೈಸೂರು, ಡಿ.14: ಜಯಚಾಮರಾಜೇಂದ್ರ ಮೃಗಾಲಯದಲ್ಲಿದ್ದ 6 ತಿಂಗಳ ಆನೆ ಮರಿ ವೇದಾವತಿ ಅನಾರೋಗ್ಯದಿಂದ ಭಾನುವಾರ ಮೃತಪಟ್ಟಿದೆ. ತಾಯಿಯಿಂದ ತಪ್ಪಿಸಿಕೊಂಡಿದ್ದ ಈ ಆನೆ ಮರಿಯನ್ನು ಬಿಳಿಗಿರಿರಂಗನ ಬೆಟ್ಟದಲ್ಲಿ ಆರು ತಿಂಗಳ ಹಿಂದೆಯಷ್ಟೆ ರಕ್ಷಣೆ ಮಾಡಲಾಗಿತ್ತು.ವೇದಾವತಿ ಆನೆಮರಿಯು ಅನಾರೋಗ್ಯದಿಂದ ಚೇತರಿಸಿಕೊಳ್ಳದೆ ಭಾನುವಾರ (ಡಿ.13) ಬೆಳಿಗ್ಗೆ 11 ಗಂಟೆ ಸಮಯದಲ್ಲಿ ತೀರಿಕೊಂಡಿದೆ. ಸಹಜವಾಗಿ ಯಾವುದೇ ಆನೆಮರಿಗಳು ಹುಟ್ಟಿದ ಒಂದು ವರ್ಷದೊಳಗೆ ಅವುಗಳ ಆರೈಕೆ ತುಂಬಾ ಸೂಕ್ಷ್ಮತೆಯಿಂದ ಕೂಡಿರುತ್ತದೆ.ಅದರಲ್ಲೂ ವೇದಾವತಿ ಆನೆಮರಿಗೆ ಸ್ವತಃ ಆಹಾರ ಸೇವಿಸುವ ಶಕ್ತಿ ಇರಲಿಲ್ಲ.

ಮೃಗಾಲಯದಲ್ಲಿದ್ದ 6 ತಿಂಗಳ ಆನೆ ಮರಿ ಅನಾರೋಗ್ಯದಿಂದ ಸಾವು Read More »

ಕರಾವಳಿ

ಕಾರ್ಕಳ: ಪೊಲೀಸರ ಅತಿಥಿಯಾದ ಗೋಕಳ್ಳರಿಗೆ ನೆರವಾಗುತ್ತಿದ್ದ ಅನಿಲ್ ಪ್ರಭು

(ನ್ಯೂಸ್ ಕಡಬ) newskadaba.com ಕಾರ್ಕಳ, ಡಿ.14: ಕಳವುಗೈದ ಹಸುಗಳನ್ನು ಕೊಂದು ಅದರ ಮಾಂಸ ಮಾರಾಟ ಮಾಡುತ್ತಿದ್ದ ಬಜರಂಗದಳ ಕಾರ್ಕಳ ನಗರ ಘಟಕದ ಮಾಜಿ ಸಂಚಾಲಕ, ತೆಳ್ಳಾರು ರಸಯ ನಿವಾಸಿ ಅನಿಲ್ ಪ್ರಭುನನ್ನು ಪೊಲೀಸರು ಬಂಧಿಸಿದ್ದಾರೆ.   ನವಂಬರ್ 6ರಂದು ಬಂಗ್ಲೆಗುಡ್ಡೆ ಜಂಕ್ಷನ್ ಬಳಿಯಲ್ಲಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದಾಗ, ಹೆಲ್ಮೆಟ್ ಇಲ್ಲದೇ ಸಂಚರಿಸುತ್ತಿದ್ದ ಹುಡ್ಕೋ ಕಾಲನಿಯ ಮುಹಮ್ಮದ್ ಯಾಸೀನ್ ಎಂಬಾತನನ್ನು ತಡೆದಿದ್ದರು. ಆದರೆ, ಅರ್ಧದಲ್ಲಿಯೇ ಪರಾರಿಯಾಗಿದ್ದ ಆತನ ವಾಹನ ಪರಿಶೀಲನೆ ನಡೆಸಿದ ಪೊಲೀಸರಿಗೆ ಪ್ಲಾಸ್ಟಿಕ್ ಚೀಲದೊಳಗೆ ದನದ

ಕಾರ್ಕಳ: ಪೊಲೀಸರ ಅತಿಥಿಯಾದ ಗೋಕಳ್ಳರಿಗೆ ನೆರವಾಗುತ್ತಿದ್ದ ಅನಿಲ್ ಪ್ರಭು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top