ಸೈಕಲ್‌ನಲ್ಲಿ ಆಟವಾಡುವಾಗ ಆಯತಪ್ಪಿ ನೀರಿನ ಸಂಪ್‌ಗೆ ಬಿದ್ದು 4 ವರ್ಷದ ಬಾಲಕ ದಾರುಣ ಸಾವು

(ನ್ಯೂಸ್‌ ಕಡಬ) newskadaba.com,ಡಿ.16 ಸೈಕಲ್‌ನಲ್ಲಿ ಆಟವಾಡುತ್ತಿದ್ದ ವೇಳೆ ಆಯತಪ್ಪಿ ನೀರಿನ ಸಂಪ್‌ಗೆ ಬಿದ್ದು 4 ವರ್ಷದ ಬಾಲಕ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನದ ಅಣಚಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕನನ್ನು ಎಡನ್ ಸ್ವೀವ್ (4) ಎಂದು ಗುರುತಿಸಲಾಗಿದೆ. ಮನೆಯ ಮುಂದೆ ಎಡನ್ ಸ್ವೀವ್ ಆಟವಾಡುತ್ತಿದ್ದನು. ಈ ವೇಳೆ ಪೋಷಕರು ಮನೆಯೊಳಗಿದ್ದರು. ಸ್ವಲ್ಪ ಹೊತ್ತಿನ ಬಳಿಕ ಮನೆಯಿಂದ ಹೊರ ಬಂದ ಪೋಷಕರು ಮಗುವನ್ನು ಹುಡುಕಿದ್ದಾರೆ. ಈ ವೇಳೆ ನೀರಿನ ಸಂಪ್ ಬಳಿ ಮಗುವಿನ ಸೈಕಲ್ ಬಿದ್ದಿದ್ದು ಸಂಪ್ ಪರಿಶೀಲಿಸಿದಾಗ […]

ಸೈಕಲ್‌ನಲ್ಲಿ ಆಟವಾಡುವಾಗ ಆಯತಪ್ಪಿ ನೀರಿನ ಸಂಪ್‌ಗೆ ಬಿದ್ದು 4 ವರ್ಷದ ಬಾಲಕ ದಾರುಣ ಸಾವು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೊಟ್ಟೆಯಿಂದ ಕ್ಯಾನ್ಸರ್‌ ವಿಚಾರ-‘ ಪರೀಕ್ಷೆ ಆಗುತ್ತಿದೆ, 3,4 ದಿನಗಳಲ್ಲಿ ವರದಿ ಬರಲಿದೆ’- ದಿನೇಶ್‌ ಗುಂಡೂರಾವ್‌

(ನ್ಯೂಸ್‌ ಕಡಬ) newskadaba.com,ಡಿ.16 ಮೊಟ್ಟೆಯಿಂದ ಕ್ಯಾನ್ಸರ್‌ ಬರುತ್ತೆ ಎಂಬ ಅಘಾತಕಾರಿ ಸುದ್ದಿ ವಿಚಾರವಾಗಿ ಮೊಟ್ಟೆಗಳ ಪರಿಶೀಲನೆಗೆ ಕ್ರಮ ವಹಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಮೊಟ್ಟೆಯಿಂದ ಕ್ಯಾನ್ಸರ್ ಬರುತ್ತದೆ ಎಂಬ ಅತಂಕ ವಿಷಯ ಕುರಿತು ಶೂನ್ಯವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ರಮೇಶ್ ಬಾಬು ವಿಷಯ ಪ್ರಸ್ತಾಪ‌ ಮಾಡಿದರು. ಭಾರತ ಮೊಟ್ಟೆ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿದೆ. ಪೌಷ್ಟಿಕಾಹಾರವಾಗಿ ಮೊಟ್ಟೆ ಬಳಕೆ ಮಾಡಲಾಗುತ್ತಿದೆ. ಶಾಲಾ ಮಕ್ಕಳಿಗೆ ಮೊಟ್ಟೆ ಕೊಡಲಾಗುತ್ತಿದೆ. ಈಗ ಮೊಟ್ಟೆ ಬಳಕೆಯಿಂದ ಕ್ಯಾನ್ಸರ್ ಬರುತ್ತದೆ ಅಂತ ಎಗೋಸ್ ಕಂಪನಿ

ಮೊಟ್ಟೆಯಿಂದ ಕ್ಯಾನ್ಸರ್‌ ವಿಚಾರ-‘ ಪರೀಕ್ಷೆ ಆಗುತ್ತಿದೆ, 3,4 ದಿನಗಳಲ್ಲಿ ವರದಿ ಬರಲಿದೆ’- ದಿನೇಶ್‌ ಗುಂಡೂರಾವ್‌ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದೆಹಲಿಯಲ್ಲಿ ಕಡಿಮೆ ಗೋಚರತೆ ಹಿನ್ನೆಲೆ 120ಕ್ಕೂ ಹೆಚ್ಚು ವಿಮಾನಗಳು ರದ್ದು

(ನ್ಯೂಸ್‌ ಕಡಬ) newskadaba.com,ಡಿ.16 ಬೆಳ್ತಂಗಡಿ: ಉತ್ತರ ಭಾರತದಲ್ಲಿ ಚಳಿಗಾಲದಲ್ಲಿ ಬೆಳಗಿನ ವೇಳೆ ಆಗಾಗ್ಗೆ ದಟ್ಟವಾದ ಮಂಜು ಕವಿದಿರುತ್ತದೆ. ಇದು ವಿಮಾನಗಳ ಚಲನೆಯನ್ನು ನಿಧಾನಗೊಳಿಸುತ್ತದೆ. ಇದೀಗ ಕಡಿಮೆ ಗೋಚರತೆಯ ಹಿನ್ನೆಲೆ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಒಟ್ಟು 49 ನಿರ್ಗಮನ ಮತ್ತು 77 ಆಗಮನ ವಿಮಾನಗಳನ್ನು ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂಡಿಗೋ ಏರ್ಲೈನ್ಸ್ ತನ್ನ ನೆಟ್‌ವರ್ಕ್‌ನಾದ್ಯಂತ 110 ವಿಮಾನಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದೆ. “ಕಡಿಮೆ ಗೋಚರತೆಯಿಂದಾಗಿ, ದೆಹಲಿ ವಿಮಾನ ನಿಲ್ದಾಣದಲ್ಲಿ ವಿಮಾನ ಕಾರ್ಯಾಚರಣೆಗಳ ಮೇಲೆ ತೀವ್ರ

ದೆಹಲಿಯಲ್ಲಿ ಕಡಿಮೆ ಗೋಚರತೆ ಹಿನ್ನೆಲೆ 120ಕ್ಕೂ ಹೆಚ್ಚು ವಿಮಾನಗಳು ರದ್ದು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಳ್ತಂಗಡಿ: ನಿಡ್ಲೆ ಬಳಿ ಕೆಎಸ್‌ಆರ್‌ಟಿಸಿ, ಖಾಸಗಿ ಬಸ್ ಡಿಕ್ಕಿ-7 ಜನರಿಗೆ ಗಾಯ

(ನ್ಯೂಸ್‌ ಕಡಬ) newskadaba.com,ಡಿ.16 ಬೆಳ್ತಂಗಡಿ: ಧರ್ಮಸ್ಥಳ-ಪೆರಿಯಶಾಂತಿ ಹೆದ್ದಾರಿಯ ನಿಡ್ಲೆಯ ಕುದುರೆಯ ತಲೆಕ್ಕಿ ಕ್ರಾಸ್ ಬಳಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಖಾಸಗಿ ಮಿನಿ ಬಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗೊಂಡ ಘಟನೆ ನಡೆದಿದೆ. ಅಪಘಾತದ ಸಮಯದಲ್ಲಿ ಅಯ್ಯಪ್ಪ ಭಕ್ತರು ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಡಿಕ್ಕಿ ಹೊಡೆದ ನಂತರ, ಕೆಎಸ್‌ಆರ್‌ಟಿಸಿ ಬಸ್‌ನ ಚಾಲಕ ಮತ್ತು ನಿರ್ವಾಹಕ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಕೆಎಸ್‌ಆರ್‌ಟಿಸಿ ಬಸ್ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿತ್ತು, ಖಾಸಗಿ ಬಸ್

ಬೆಳ್ತಂಗಡಿ: ನಿಡ್ಲೆ ಬಳಿ ಕೆಎಸ್‌ಆರ್‌ಟಿಸಿ, ಖಾಸಗಿ ಬಸ್ ಡಿಕ್ಕಿ-7 ಜನರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿಕನ್ ಬೆಲೆ ಏರಿಕೆ -270 ರೂ. ತಲುಪಿದ ಕೋಳಿ ಮಾಂಸದ ದರ!

(ನ್ಯೂಸ್‌ ಕಡಬ) newskadaba.com,ಡಿ.16 ಬೆಂಗಳೂರು: ಮಾಂಸ ಪ್ರಿಯರಿಗೆ ಮತ್ತೊಂದು ದರ ಏರಿಕೆ ಶಾಕ್ ಎದುರಾಗಿದೆ. ಈಗಾಗಲೇ ಮೊಟ್ಟೆ ಬೆಲೆ 8 ರೂ.ಗೆ ತಲುಪಿದೆ. ಇದೀಗ ಕೋಳಿ ಮಾಂಸದ ಬೆಲೆ ಏರಿಕೆಯಾಗುತ್ತಿದೆ. ಇನ್ನಷ್ಟು ಬೆಲೆ ಏರಿಕೆಯಾಗಲಿದೆ ಎಂದು ಹೇಳುತ್ತಾರೆ ವ್ಯಾಪಾರಿಗಳು. ಡಿಸೆಂಬರ್ ಆರಂಭದಿಂದಲೇ ಕೋಳಿ ಮೊಟ್ಟೆ ಬೆಲೆ 6 ರೂ.ನಿಂದ 8 ರೂ.ಗೆ ತಲುಪಿತ್ತು. ಕ್ರಿಸ್ಮಸ್ ಕೇಕ್‌ಗೆ ಡಿಮ್ಯಾಂಡ್ ಹೆಚ್ಚಾಗಿದ್ದು, ಹೊರ ದೇಶಗಳಿಗೆ ಕೋಳಿ ಮೊಟ್ಟೆ ರಫ್ತು ಹೆಚ್ಚಾಗಿದೆ. ಜನವರಿಯಲ್ಲಿ ಕಡಿಮೆಯಾಗುವ ನಿರೀಕ್ಷೆ ಕೂಡ ಇತ್ತು. ಈಗ ಕೋಳಿ

ಚಿಕನ್ ಬೆಲೆ ಏರಿಕೆ -270 ರೂ. ತಲುಪಿದ ಕೋಳಿ ಮಾಂಸದ ದರ! Read More »

ಬ್ರೇಕಿಂಗ್ ನ್ಯೂಸ್

ರಾಜ್ಯದ ಹಲವು ಕಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

(ನ್ಯೂಸ್‌ ಕಡಬ) newskadaba.com,ಡಿ.16 ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳ್ಳಂಬೆಳಗ್ಗೆ ಹಲವು ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದು, ಶಿವಮೊಗ್ಗ, ಧಾರವಾಡ ಹಾಗೂ ವಿಜಯನಗರ ಸೇರಿದಂತೆ ರಾಜ್ಯದ ಹಲವು ಕಡೆ ಅಧಿಕಾರಿಗಳಿಗೆ ಸೇರಿದ ಮನೆ, ಕಚೇರಿ ಮೇಲೆ ದಾಳಿ ನಡೆಸಿ, ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಅಕ್ರಮ ಆಸ್ತಿಗಳಿಕೆ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ರೂಪ್ಲಾ ನಾಯ್ಕ್ ಅವರ ಮನೆ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಶಿವಮೊಗ್ಗ ನಗರದ

ರಾಜ್ಯದ ಹಲವು ಕಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ Read More »

ಕರ್ನಾಟಕ

ಬ್ರೆಜಿಲ್‌: ಭಾರೀ ಚಂಡಮಾರುತ – ನೆಲಕ್ಕುರುಳಿದ ಗುವಾಯ್ಬಾದ ಲಿಬರ್ಟಿ ಪ್ರತಿಮೆ

(ನ್ಯೂಸ್‌ ಕಡಬ) newskadaba.com,ಡಿ.16 ಬೆಂಗಳೂರು: ದಕ್ಷಿಣ ಬ್ರೆಜಿಲ್‌ನ ಗುವಾಯ್ಬಾ ನಗರದಲ್ಲಿ ಭಾರಿ ಚಂಡಮಾರುತ ಅಪ್ಪಳಿಸಿದ್ದು, ಬಲವಾದ ಗಾಳಿಗೆ ಲಿಬರ್ಟಿ ಪ್ರತಿಮೆಯ ಪ್ರತಿಕೃತಿ ನೆಲಕ್ಕುರುಳಿ ಬಿದ್ದ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ. ಬಿದ್ದಿರುವುದು ಅಮೆರಿಕದ ನ್ಯೂಜರ್ಸಿಯಲ್ಲಿ ಇರುವ ಪ್ರಸಿದ್ಧ ಲಿಬರ್ಟಿ ಪ್ರತಿಮೆಯ ಪ್ರತಿಕೃತಿಯಾಗಿದ್ದು, ಇದನ್ನು 2020ರಲ್ಲಿ ಗುವಾಯ್ಬಾದಲ್ಲಿ ಸ್ಥಾಪಿಸಲಾಗಿತ್ತು. ಚಂಡಮಾರುತದ ವೇಳೆ ಗಂಟೆಗೆ ಸುಮಾರು 80ರಿಂದ 90 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಿದ್ದರಿಂದ ಪ್ರತಿಮೆ ಮೊದಲಿಗೆ ಓರೆಯಾಗಿ, ಬಳಿಕ ಸಮೀಪದ

ಬ್ರೆಜಿಲ್‌: ಭಾರೀ ಚಂಡಮಾರುತ – ನೆಲಕ್ಕುರುಳಿದ ಗುವಾಯ್ಬಾದ ಲಿಬರ್ಟಿ ಪ್ರತಿಮೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ನ್ಯಾಷನಲ್ ಹೆರಾಲ್ಡ್ ಪ್ರಕರಣ – ಗಾಂಧಿ ಕುಟುಂಬಕ್ಕೆ ತಾತ್ಕಾಲಿಕ ರಿಲೀಫ್

(ನ್ಯೂಸ್‌ ಕಡಬ) newskadaba.com,ಡಿ.16 ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಗಾಂಧಿ ಕುಟುಂಬಕ್ಕೆ ದೊಡ್ಡ ತಾತ್ಕಾಲಿಕ ಪರಿಹಾರ ದೊರೆತಿದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಆರೋಪಿಗಳ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಚಾರ್ಜ್‌ಶೀಟ್ ಅನ್ನು ದೆಹಲಿ ನ್ಯಾಯಾಲಯವು ಈ ಹಂತದಲ್ಲಿ ಸ್ವೀಕರಿಸಲು ನಿರಾಕರಿಸಿದೆ. ಆದರೆ ಪ್ರಕರಣದ ತನಿಖೆಯನ್ನು ಮುಂದುವರಿಸಬೇಕೆಂದು ನ್ಯಾಯಾಲಯ ಇಡಿಗೆ ಸೂಚಿಸಿದೆ. ಚಾರ್ಜ್‌ಶೀಟ್‌ನ ವಿಷಯದಲ್ಲಿ ನ್ಯಾಯಾಲಯ ಹಸ್ತಕ್ಷೇಪ ಮಾಡಲು ನಿರಾಕರಿಸಿದ್ದು, ಇದು ಖಾಸಗಿ ದೂರನ್ನು ಆಧರಿಸಿರುವುದರಿಂದ ಹಾಗೂ ಈ ಪ್ರಕರಣದಲ್ಲಿ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ

ನ್ಯಾಷನಲ್ ಹೆರಾಲ್ಡ್ ಪ್ರಕರಣ – ಗಾಂಧಿ ಕುಟುಂಬಕ್ಕೆ ತಾತ್ಕಾಲಿಕ ರಿಲೀಫ್ Read More »

ಕರ್ನಾಟಕ

ನೈರುತ್ಯ ರೈಲ್ವೆ ವ್ಯಾಪ್ತಿಯಲ್ಲಿ ಟಿಕೆಟ್‌ ಪರಿಶೀಲನೆ ಕಾರ್ಯಾಚರಣೆ ಜೋರು

(ನ್ಯೂಸ್‌ ಕಡಬ) newskadaba.com,ಡಿ.16 ಬೆಂಗಳೂರು: ನೈಋುತ್ಯ ರೈಲ್ವೆ ತನ್ನ ವ್ಯಾಪ್ತಿಯಾದ್ಯಂತ ಟಿಕೆಟ್‌ ಪರಿಶೀಲನೆ ಮತ್ತು ನಿಯಮ ಜಾರಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ ಪರಿಣಾಮವಾಗಿ, ಪ್ರಸಕ್ತ ಆರ್ಥಿಕ ವರ್ಷದಲ್ಲಿ ಟಿಕೆಟ್‌ ರಹಿತ ಮತ್ತು ಅಕ್ರಮ ಪ್ರಯಾಣ ಪ್ರಕರಣಗಳು ಗಣನೀಯವಾಗಿ ಪತ್ತೆಯಾಗಿದ್ದು, ರೈಲ್ವೆ ಆದಾಯದಲ್ಲಿ ಭಾರೀ ಹೆಚ್ಚಳವಾಗಿದೆ. ನೈಋುತ್ಯ ರೈಲ್ವೆ ವ್ಯಾಪ್ತಿಯಲ್ಲಿ ಹೆಚ್ಚಿದ ಆದಾಯ 2025-26ರ ಪ್ರಸಕ್ತ ಆರ್ಥಿಕ ವರ್ಷದ ನವೆಂಬರ್‌ ತಿಂಗಳಲ್ಲಿಒಟ್ಟು 67,000 ಟಿಕೆಟ್‌ ತಪಾಸಣಾ ಪ್ರಕರಣಗಳನ್ನು ನೈಋುತ್ಯ ರೈಲ್ವೆ ದಾಖಲಿಸಿದ್ದು, ಇದರಿಂದ ಬರೋಬ್ಬರಿ 5.36 ಕೋಟಿ ರೂ. ಆದಾಯ ಸಂಗ್ರಹವಾಗಿದೆ. ಕಳೆದ

ನೈರುತ್ಯ ರೈಲ್ವೆ ವ್ಯಾಪ್ತಿಯಲ್ಲಿ ಟಿಕೆಟ್‌ ಪರಿಶೀಲನೆ ಕಾರ್ಯಾಚರಣೆ ಜೋರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,ಡಿ.16: ರಾಜ್ಯದಲ್ಲಿ ಚಳಿ ಹೆಚ್ಚಾದ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ 9 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ್, ವಿಜಯಪುರ, ಬೆಳಗಾವಿ, ಬಾಗಲಕೋಟೆ, ಹಾವೇರಿ, ಯಾದಗಿರಿ, ಧಾರವಾಡ, ಕೊಪ್ಪಳ ಜಿಲ್ಲೆಗಳಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಶೀತಗಾಳಿ ಬೀಸಲಿದೆ. ಜನರು ಆದಷ್ಟು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಈ 9 ಜಿಲ್ಲೆಗಳಲ್ಲಿ ತಾಪಮಾನ ದಿಢೀರ್ ಕುಸಿತ ಕಂಡಿದೆ. ಇನ್ನೂ ತಾಪಮಾನ ಕುಸಿಯುವ ಸಾಧ್ಯತೆ ಇದೆ ಎಂದು ಇಲಾಖೆ

ಇಂದಿನ ಹವಾಮಾನ ವರದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top