ಮರ್ಧಾಳ: ರಬ್ಬರ್ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಅ.22. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ರಬ್ಬರ್ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರದಂದು ಮರ್ಧಾಳದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಸುಲೈಮಾನ್ ಎಂಬವರ ಪುತ್ರ ಅಂದುಕುಂಞಿ(38) ಎಂದು ಗುರುತಿಸಲಾಗಿದೆ. ಕಳೆದ ಕೆಲ ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಇವರು ಬುಧವಾರ ತಡರಾತ್ರಿ ತನ್ನ ಮನೆಯ ಪಕ್ಕದ ರಬ್ಬರ್ ತೋಟದಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮರ್ಧಾಳ: ರಬ್ಬರ್ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ಮನೆಯಲ್ಲಿ ಅಕ್ರಮ ಮರ ದಾಸ್ತಾನು ➤ ದಾಳಿ ನಡೆಸಿ ಮರ ವಶಕ್ಕೆ ಪಡೆದ ಅರಣ್ಯಾಧಿಕಾರಿಗಳು

(ನ್ಯೂಸ್ ಕಡಬ) newskadaba.com ಕಡಬ, ಅ. 21. ಮರವನ್ನು  ಕಡಿದು ಮನೆಯೊಂದರಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿರುವ ಬಗ್ಗೆ ಖಚಿತ ಮಾಹಿತಿ ಪಡೆದು ಅರಣ್ಯಾಧಿಕಾರಿಗಳು ದಾಳಿ ನಡೆಸಿದ ಘಟನೆ ಬಿಳಿನೆಲೆ ಗ್ರಾಮದ ನೆಟ್ಟಣ ಎಂಬಲ್ಲಿ ಇಂದು ನಡೆದಿದೆ. ನೆಟ್ಟಣ ವಾಲ್ತಾಜೆ ಶ್ರೀನಿವಾಸ ಎಂಬವರು ಅಕ್ರಮವಾಗಿ ಮರ ಕಡಿದು ಅವರ ಮಗನ ಮನೆಯಲ್ಲಿ ದಾಸ್ತಾನು ಇರಿಸಿದ್ದು, ಈ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಅರಣ್ಯಾಧಿಕಾರಿಗಳು ದಾಳಿ ನಡೆಸಿ ಮರದ ಸೈಜುಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. ದಾಳಿಯಲ್ಲಿ ವಲಯ ಅರಣ್ಯಾಧಿಕಾರಿ ರಾಘವೇಂದ್ರ

ಕಡಬ: ಮನೆಯಲ್ಲಿ ಅಕ್ರಮ ಮರ ದಾಸ್ತಾನು ➤ ದಾಳಿ ನಡೆಸಿ ಮರ ವಶಕ್ಕೆ ಪಡೆದ ಅರಣ್ಯಾಧಿಕಾರಿಗಳು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಟ್ಲ: ಹಾರ್ಡ್ ವೇರ್ ಅಂಗಡಿಯಲ್ಲಿ ಕಳ್ಳತನ ➤ ಆರೋಪಿಯನ್ನು 24 ಗಂಟೆಯಲ್ಲಿ ಬಂಧಿಸಿದ ವಿಟ್ಲ ಪೊಲೀಸರು

(ನ್ಯೂಸ್ ಕಡಬ) newskadaba.com ವಿಟ್ಲ, ಅ. 21. ಇಲ್ಲಿನ ಹಾರ್ಡ್ ವೇರ್ ಅಂಗಡಿಯಲ್ಲಿ ಕಳ್ಳತನಗೈದ ಆರೋಪಿಯನ್ನು ಕೇವಲ 24 ಗಂಟೆಗಳ ಒಳಗೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಬಜ್ಪೆ ಆದ್ಯಪಾಡಿ ಕೊಂಚಾರು ನಿವಾಸಿ  ಮೊಹಮ್ಮದ್ ರಫೀಕ್ (32) ಎಂದು ಗುರುತಿಸಲಾಗಿದೆ. ಈತನಲ್ಲಿ ‘ಕರಾವಳಿ ಮಾರುತ’ ಮಾಧ್ಯಮ ಸಂಸ್ಥೆಗೆ ಸೇರಿದ ಗುರುತಿನ ಚೀಟಿಯೊಂದು ಪತ್ತೆಯಾಗಿದ್ದು, ಇದರ ಜೊತೆಗೆ ಪ್ರೆಸ್ ಸ್ಟಿಕರ್ ಅಂಟಿಸಿದ ದ್ವಿಚಕ್ರ ವಾಹನವನ್ನು ಕೂಡಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಟ್ಲ ಕಸಬ ಗ್ರಾಮದ ಮಾರ್ಣಮಿಗುಡ್ಡೆಯ ಚರ್ಚ್

ವಿಟ್ಲ: ಹಾರ್ಡ್ ವೇರ್ ಅಂಗಡಿಯಲ್ಲಿ ಕಳ್ಳತನ ➤ ಆರೋಪಿಯನ್ನು 24 ಗಂಟೆಯಲ್ಲಿ ಬಂಧಿಸಿದ ವಿಟ್ಲ ಪೊಲೀಸರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಟ್ಲ: ದೇವಸ್ಥಾನದಲ್ಲಿ ಕಳವು ಪ್ರಕರಣ – ಆರೋಪಿಯ ಬಂಧನ ➤ 3 ವರ್ಷಗಳಲ್ಲಿಆರೋಪಿಯ ವಿರುದ್ದ ಜಿಲ್ಲೆಯ ವಿವಿಧ ಠಾಣೆಗಳಲ್ಲಿ 13 ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ವಿಟ್ಲ, ಅ. 21. ಇಲ್ಲಿನ ದೇವಸ್ಥಾನವೊಂದರಲ್ಲಿ ಒಂದೂವರೆ ವರ್ಷಗಳ ಹಿಂದೆ ನಡೆದಿದ್ದ ಕಳ್ಳತನ ಪ್ರಕರಣದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ಪುತ್ತೂರು ಮೂಲದ ಮುಡಿಪು ನವಗ್ರಾಮ ನಿವಾಸಿ ಮಹಮ್ಮದ್ ಸಾಧಿಕ್ ಯಾನೆ ಸಾಧಿಕ್ (21 ) ಎಂದು ಹೇಳಲಾಗಿದೆ. ಬಂಧಿತ ಆರೋಪಿಯು ಕುಖ್ಯಾತ ಕಳ್ಳನಾಗಿದ್ದು, ಆತನ ವಿರುದ್ದ ಜಿಲ್ಲೆಯ ವಿವಿಧ ಠಾಣೆಗಳಲ್ಲಿ 13 ಪ್ರಕರಣಗಳು ದಾಖಲಾಗಿವೆ. ಈತ ತನ್ನ ಹದಿನೆಂಟನೇ ವಯಸ್ಸಿನಲ್ಲಿ ಕಳ್ಳತನಕ್ಕೆ ಇಳಿದಿದ್ದು, ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ಐದು

ವಿಟ್ಲ: ದೇವಸ್ಥಾನದಲ್ಲಿ ಕಳವು ಪ್ರಕರಣ – ಆರೋಪಿಯ ಬಂಧನ ➤ 3 ವರ್ಷಗಳಲ್ಲಿಆರೋಪಿಯ ವಿರುದ್ದ ಜಿಲ್ಲೆಯ ವಿವಿಧ ಠಾಣೆಗಳಲ್ಲಿ 13 ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಲ್ಪೆ: ಮೀನುಗಾರರ ಬಲೆಗೆ ಬಿತ್ತು ಬರೋಬ್ಬರಿ 750 ಕೆ.ಜಿ ತೂಕದ ಫಿಶ್

(ನ್ಯೂಸ್ ಕಡಬ) newskadaba.com ಉಡುಪಿ, ಅ.21: ಉಡುಪಿ ಜಿಲ್ಲೆ ಮಲ್ಪೆಯ ಸರ್ವ ಋತು ಬಂದರಿನಲ್ಲಿ ಆಗಾಗ ಅಪರೂಪದ ಮೀನುಗಳು ಬಲೆಗೆ ಬೀಳುವುದುಂಟು. ಕೆಲವೊಮ್ಮೆ ಭಾರೀ ಗಾತ್ರದ ಮೀನುಗಳು ಬಲೆಗೆ ಬಿದ್ದರೆ, ಇನ್ನು ಕೆಲವೊಮ್ಮೆ ಅಪರೂಪದ, ವಿಚಿತ್ರ ಮೀನುಗಳು ಸಿಕ್ಕಿ ಗಮನ ಸೆಳೆಯುತ್ತವೆ.     ಆದರೆ ಮಲ್ಪೆ ಮೀನುಗಾರರಿಗೆ ಇಂದು (ಮಂಗಳವಾರ) ಸಿಕ್ಕ ಮೀನು ಮಾತ್ರ ಬಲು ಅಪರೂಪವಾಗಿದ್ದು ಮಾತ್ರವಲ್ಲ, ಗಾತ್ರದಲ್ಲೂ ದಾಖಲೆ ನಿರ್ಮಿಸಿದೆ. ಈ ಮೀನನ್ನು ಕರಾವಳಿಗರು ತೊರಕೆ ಮೀನು ಎನ್ನುತ್ತಾರೆ. ಬಹಳ ರುಚಿಯಾದ ಮೀನಿದು,

ಮಲ್ಪೆ: ಮೀನುಗಾರರ ಬಲೆಗೆ ಬಿತ್ತು ಬರೋಬ್ಬರಿ 750 ಕೆ.ಜಿ ತೂಕದ ಫಿಶ್ Read More »

ಕರಾವಳಿ

ಮಂಗಳೂರು: ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿರುವ ಈರುಳ್ಳಿ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 21. ಸಾಂಪ್ರದಾಯಿಕ ಆಹಾರ ಪದ್ಧತಿಯಲ್ಲಿ ಈರುಳ್ಳಿ ಬಹು ಪ್ರಮುಖವಾಗಿದೆ. ಆದರೆ ಈಗ ಈರುಳ್ಳಿಯ ದರವು ಜನ ಸಾಮಾನ್ಯರ ಕೈಗೆಟುಕದ ರೀತಿಯಲ್ಲಿ ಹೆಚ್ಚಾಗುತ್ತಿದ್ದು, ದಿನ ಕಳೆದಂತೆ ಈರುಳ್ಳಿ ಬೆಲೆಯು ಹತ್ತತ್ತು ರೂಪಾಯಿ ಏರಿಕೆಯಾಗುತ್ತಿದೆ. ಅಕ್ಟೋಬರ್ 20 ರ ಮಂಗಳವಾರ, ಮಾರುಕಟ್ಟೆಯಲ್ಲಿ ಈರುಳ್ಳಿಯ ಸಗಟು ದರಕ್ಕೆ ಕೆ.ಜಿ.ಗೆ 81 ರೂ. ಇದ್ದರೆ, ಚಿಲ್ಲರೆ ವ್ಯಾಪಾರಿಗಳು ಇದನ್ನು ಕೆಜಿಗೆ 90 ರೂ. ಗೆ ಮಾರಾಟ ಮಾಡಿದ್ದಾರೆ. ಈ ಬೆಲೆಯನ್ನು ಭಾನುವಾರದ ಈರುಳ್ಳಿಯ ಬೆಲೆಗೆ ಹೋಲಿಸಿದರೆ

ಮಂಗಳೂರು: ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿರುವ ಈರುಳ್ಳಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಂಜನಗೂಡು: ಕಾಡಾನೆ ದಾಳಿಯಿಂದ ಆದಿವಾಸಿ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಮೈಸೂರು, ಅ.21: ಕಾಡಾನೆಯೊಂದು ನಡೆಸಿದ ದಾಳಿಯಿಂದಾಗಿ ಆದಿವಾಸಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಂಜನಗೂಡು ಸಮೀಪದ ಡೋರನಕಟ್ಟೆ ಕಾಲೋನಿಯ ಸಮೀಪದಲ್ಲಿ ಈ ಘಟನೆ ನಡೆದಿದೆ. ಮೃತನನ್ನು ನಂಜನಗೂಡು ಜಿಲ್ಲೆಯಲ್ಲಿನ ವೆಂಕಟಗಿರಿ ಆದಿವಾಸಿ ಕಾಲೋನಿಯ ಗಣೇಶ (25) ಎಂದು ಗುರುತಿಸಲಾಗಿದೆ.     ಈತ ನಿನ್ನೆ ಬಂಕಹಳ್ಳಿ ಗ್ರಾಮದಿಂದ ಕೆಲಸವನ್ನು ಮುಗಿಸಿಕೊಂಡು ತನ್ನ ಮನೆಗೆ ಹಿಂದಿರುಗುತ್ತಿದ್ದ ವೇಳೆ ಈ ಸಂದರ್ಭದಲ್ಲಿ ವೆಂಕಟಗಿರಿ ಕಾಲೋನಿ ಮತ್ತು ಡೋರನಕಟ್ಟೆ ಕಾಲೋನಿಯ ಮಧ್ಯೆ ಕಾಡಾನೆಯ ತುಳಿತದಿಂದ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ನಂಜನಗೂಡು: ಕಾಡಾನೆ ದಾಳಿಯಿಂದ ಆದಿವಾಸಿ ಯುವಕ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾಸರಗೋಡು: ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಅ.21: ಬೇಕಲ ಠಾಣಾ ವ್ಯಾಪ್ತಿಯ ತೃಕ್ಕನ್ನಾಡ್ ಎಂಬಲ್ಲಿ ವಿದ್ಯಾರ್ಥಿಯೋರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಯನ್ನು ತೃಕ್ಕನ್ನಾಡ್ ನ ಪ್ರಸಾದ್ ರಾಘವರವರ ಪುತ್ರ ವಿಘ್ನೇಶ್ ( 13) ಎಂದು ಗುರುತಿಸಲಾಗಿದೆ.   ಕಾಸರಗೋಡಿನಲ್ಲಿರುವ ಅಜ್ಜಿ ಮನೆಯಲ್ಲಿದ್ದ ವಿಘ್ನೇಶ್ ಕೆಲ ದಿನಗಳ ಹಿಂದೆ  ತೃಕ್ಕನ್ನಾಡ್ ನಲ್ಲಿರುವ ಮನೆಗೆ ಬಂದಿದ್ದನು. ಈತ ಏಳನೇ ತರಗತಿ ವಿದ್ಯಾರ್ಥಿ. ಕಳೆದ ದಿನ ತಾಯಿ ಮತ್ತು ಸಹೋದರಿ ಹೊರಗಡೆ ತೆರಳಿದ್ದ ಸಂದರ್ಭದಲ್ಲಿ

ಕಾಸರಗೋಡು: ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಸರಗೋಡು: ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಅ. 21. ವಿದ್ಯಾರ್ಥಿಯೋರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೇಕಲ ಠಾಣಾ ವ್ಯಾಪ್ತಿಯ ತೃಕ್ಕನ್ನಾಡ್ ಎಂಬಲ್ಲಿ ನಡೆದಿದೆ. ಮೃತಪಟ್ಟ ಬಾಲಕನನ್ನು ಏಳನೇ ತರಗತಿ ವಿದ್ಯಾರ್ಥಿ ಕೆ. ವಿಘ್ನೇಶ್ ( 13) ಎಂದು ಗುರುತಿಸಲಾಗಿದೆ. ತಾಯಿ ಮತ್ತು ಸಹೋದರಿ ಹೊರಗಡೆ ತೆರಳಿದ್ದ ಸಂದರ್ಭದಲ್ಲಿ ಈತ ಈ ಕೃತ್ಯ ನಡೆಸಿದ್ದಾನೆ ಎನ್ನಲಾಗಿದೆ. ಬಳಿಕ ಇಬ್ಬರು ಮನೆಗೆ ಬಂದು ನೋಡಿದಾಗ ವಿಘ್ನೇಶ್ ಫ್ಯಾನ್ ಗೆ ನೇಣು ಬಿಗಿದಿರುವುದು ಕಂಡು ಬಂದಿದೆ. ಕೂಡಲೇ ಈತನನ್ನು

ಕಾಸರಗೋಡು: ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿಷವಿಕ್ಕಿದ ಕೋತಿಗಳನ್ನು ಎಸೆದು ಹೋದ ಕಿಡಿಗೇಡಿಗಳು

(ನ್ಯೂಸ್ ಕಡಬ) newskadaba.com ಕಾರ್ಕಳ, ಅ. 21. ಮಾರುತಿ ಓಮ್ನಿ ಕಾರಿನಲ್ಲಿ ಬಂದ ತಂಡವೊಂದು ವಿಷವಿಕ್ಕಿದ ಸುಮಾರು 15 ಮಂಗಗಳನ್ನು ಎಸೆದು ಹೋದ ಘಟನೆ ಕಾಂತಾವರದ ಬಾರಾಡಿಯ ಕಂಬಳ ರಸ್ತೆಯಲ್ಲಿ ನಡೆದಿದೆ. ಘಟನಾ ಸ್ಥಳದಲ್ಲಿ 3 ಮಂಗಗಳು ಮೃತಪಟ್ಟಿದ್ದರೆ, ಉಳಿದ ಮಂಗಗಳು ಅರೆಪ್ರಜ್ಞಾ ಸ್ಥಿತಿಯಲ್ಲಿ ವಿವಿವಿಲನೆ ಹೊರಳಾಡುತ್ತಿದ್ದ ದೃಶ್ಯವು ಮನಕಲಕುವಂತಿತ್ತು. ಯಾವುದೋ ತೋಟದಲ್ಲಿ ದುಷ್ಕರ್ಮಿಗಳು ಉದ್ದೇಶ ಪೂರ್ವಕವಾಗಿ ಮಂಗಗಳಿಗೆ ವಿಷವಿಟ್ಟು ಅದರ ಸಾವಿಗೆ ಕಾರಣರಾಗಿದ್ದು, ಈ ಮಂಗಗಳನ್ನು ಮಾರುತಿ ಓಮ್ನಿಕಾರಿನಲ್ಲಿ ತುಂಬಿಸಿ ಬಾರಾಡಿ ಕಂಬಳದ ನಿರ್ಜನ ಪ್ರದೇಶದಲ್ಲಿ

ವಿಷವಿಕ್ಕಿದ ಕೋತಿಗಳನ್ನು ಎಸೆದು ಹೋದ ಕಿಡಿಗೇಡಿಗಳು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top