ಭಾರತದ ವಸ್ತುಗಳಿಗೆ 50% ಸುಂಕ ವಿಧಿಸಲು ಮುಂದಾದ ಮೆಕ್ಸಿಕೋ

(ನ್ಯೂಸ್‌ ಕಡಬ) newskadaba.com,  ಡಿ.12 ಮೆಕ್ಸಿಕೋಸಿಟಿ:ಅಮೆರಿಕ ಸುಂಕ ಸಮರದ ಬೆನ್ನಲ್ಲೇ ಈಗ ಮೆಕ್ಸಿಕೋ ಭಾರತದ ಮೇಲೆ 50% ಸುಂಕ ವಿಧಿಸಲು ಮುಂದಾಗಿದೆ. 2026 ರಿಂದ ಭಾರತ, ಚೀನಾ ಸೇರಿದಂತೆ ಏಷ್ಯ ದೇಶಗಳಿಂದ ಬರುವ ಉತ್ಪನ್ನಗಳಿಗೆ 50% ಸುಂಕ ವಿಧಿಸುವ ಮಸೂದೆಗೆ ಅಲ್ಲಿನ ಮೇಲ್ಮನೆ ಒಪ್ಪಿಗೆ ನೀಡಿದೆ. ಮಸೂದೆಯು ಪರವಾಗಿ 76, ವಿರುದ್ಧವಾಗಿ 5 ಮಂದಿ ಸದಸ್ಯರು ಮತ ಚಲಾಯಿಸುವ ಮೂಲಕ ಮಸೂದೆ ಪಾಸ್‌ ಆಗಿದೆ. ಡೊನಾಲ್ಡ್ ಟ್ರಂಪ್ ಅವರ ‘ಅಮೇರಿಕಾ ಫಸ್ಟ್’ ಕಾರ್ಯಸೂಚಿಯಂತೆಯೇ ಮೆಕ್ಸಿಕನ್ ಅಧ್ಯಕ್ಷೆ ಕ್ಲೌಡಿಯಾ […]

ಭಾರತದ ವಸ್ತುಗಳಿಗೆ 50% ಸುಂಕ ವಿಧಿಸಲು ಮುಂದಾದ ಮೆಕ್ಸಿಕೋ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಡುಪಿ: ಟೆಂಪೋ ಟೈರ್ ಸ್ಫೋಟಗೊಂಡು ಪಲ್ಟಿ ಮಹಿಳಾ ಕಾರ್ಮಿಕರೊಬ್ಬರು ಮೃತ್ಯು- ಹಲವರಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ಡಿ.12 ಉಡುಪಿ : ಕಾರ್ಮಿಕರು ಮತ್ತು ಕಾಂಕ್ರೀಟ್ ಉಪಕರಣಗಳನ್ನು ಸಾಗಿಸುತ್ತಿದ್ದ ಟೆಂಪೋ ಟೈರ್ ಸ್ಫೋಟಗೊಂಡು ಪಲ್ಟಿಯಾದ ಪರಿಣಾಮ ಒಬ್ಬ ಮಹಿಳಾ ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದು, ಹಲವು ಮಂದಿಗೆ ಗಾಯಗೊಂಡ ಹೆಜಮಾಡಿ ಕನ್ನಂಗಾರು ಬ್ರಹ್ಮಬೈದರ್ಕಳ ಗರಡಿ ಬಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಗುರುವಾರ ಘಟನೆ ನಡೆದಿದೆ.ಮೃತರನ್ನು ಪಾರ್ವತಿ (30) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಸಾವಿತ್ರಮ್ಮ, ಮಹಾಂತೇಶ್ ಮತ್ತು ಇತರ 5 ಮಂದಿ ಗಾಯಗೊಂಡಿದ್ದಾರೆ. ಮೂಲ್ಕಿಯಿಂದ ಉಡುಪಿ ಕಡೆಗೆ ಸಾಗಿಸುತ್ತಿದ್ದ ಟೆಂಪೋ ವಾಹನದಲ್ಲಿ ಪುರುಷರು ಮತ್ತು

ಉಡುಪಿ: ಟೆಂಪೋ ಟೈರ್ ಸ್ಫೋಟಗೊಂಡು ಪಲ್ಟಿ ಮಹಿಳಾ ಕಾರ್ಮಿಕರೊಬ್ಬರು ಮೃತ್ಯು- ಹಲವರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಡಿ.12: ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂಜಾನೆ ಹಾಗೂ ಸಂಜೆ ವೇಳೆಗೆ ಚಳಿಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅದರ ಜೊತೆ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇಂದಿನ ಹವಾಮಾನ ವರದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಡುಬಿದ್ರೆ: ರಸ್ತೆ ಅಪಘಾತದಲ್ಲಿ ಗೌಜಿ ಇವೆಂಟ್ಸ್ ಮಾಲಕ ಅಭಿಷೇಕ್ ಸಾವು

(ನ್ಯೂಸ್‌ ಕಡಬ) newskadaba.com, ಡಿ.10 ಉಡುಪಿ: ಭೀಕರ ರಸ್ತೆ ಅಪಘಾತದಲ್ಲಿ ಮಂಗಳೂರು ಮೂಲದ ಯುವ ಉದ್ಯಮಿಯೋರ್ವರು ಮೃತಟಪಟ್ಟ ಘಟನೆ ಪಡುಬಿದ್ರೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ನಸುಕಿನ ಜಾವ ಸಂಭವಿಸಿದೆ.ಮೃತ ವ್ಯಕ್ತಿಯನ್ನು ಅಭಿಷೇಕ್ ಯಾನೆ ಅಭಿ (32) ಎಂದು ಗುರುತಿಸಲಾಗಿದೆ. ಬುಧವಾರ ನಸುಕಿನ ಜಾವ 2.20 ರ ಸಮಾರಿಗೆ ಕಾಪುವಿನಲ್ಲಿ ಕಾರ್ಯಕ್ರಮ ಮುಗಿಸಿ ವಾಪಾಸು ತೆರಳುತ್ತಿದ್ದ ವೇಳೆ ಅವರ ಕಾರು ಎರ್ಮಾಳು ತೆಂಕ ಸೇತುವೆ ಸಮೀಪ ತಿರುವಿನಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬಳಿಕ ಪಕ್ಕದ ತೆಂಗಿನ ಮರಕ್ಕೆ ಡಿಕ್ಕಿ

ಪಡುಬಿದ್ರೆ: ರಸ್ತೆ ಅಪಘಾತದಲ್ಲಿ ಗೌಜಿ ಇವೆಂಟ್ಸ್ ಮಾಲಕ ಅಭಿಷೇಕ್ ಸಾವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರಿನಲ್ಲಿ ರಸ್ತೆ ಅಪಘಾತ: ಬಂಟ್ವಾಳದ ಯುವಕ ಮೃತ್ಯು

(ನ್ಯೂಸ್‌ ಕಡಬ) newskadaba.com, ಡಿ.10 ಬೆಂಗಳೂರು: ಬೆಂಗಳೂರಿನ ಕೂಡ್ಲು ಗೇಟ್ ಸಮೀಪ ಮಧ್ಯಾಹ್ನ ನಡೆದ ರಸ್ತೆ ಅಪಘಾತವೊಂದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಯುವಕನೋರ್ವ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಜಿಲಮೊಗರು ಸಮೀಪದ ಅಲ್ಲಿಪಾದೆ ಎಂಬಲ್ಲಿನ ಯುವಕ ಮುಹಮ್ಮದ್ ಹಾರಿಸ್ (34) ಮೃತಪಟ್ಟ ಯುವಕ. ಮುಹಮ್ಮದ್ ಹಾರಿಸ್ ಬೆಂಗಳೂರಿನ ಏಸಿ ಕಂಪನಿಯೊಂದರಲ್ಲಿ ಮೆಕ್ಯಾನಿಕ್ ಕೆಲಸ ಮಾಡುತ್ತಿದ್ದು, ಕೆಲಸದ ನಿಮಿತ್ತ ಇಂದು ತನ್ನ ಸಹೋದ್ಯೋಗಿಯೋರ್ವನೊಡನೆ ಬೈಕಿನಲ್ಲಿ ತೆರಳುತ್ತಿದ್ದಾಗ ಗೂಡ್ಸ್ ವಾಹನವು ಹಿಂಬದಿಯಿಂದ ಢಿಕ್ಕಿಯಾಗಿದೆ

ಬೆಂಗಳೂರಿನಲ್ಲಿ ರಸ್ತೆ ಅಪಘಾತ: ಬಂಟ್ವಾಳದ ಯುವಕ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಹಿಳಾ ನೌಕರರಿಗೆ ಮುಟ್ಟಿನ ರಜೆ: ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ನಲ್ಲಿ ಹಿನ್ನಡೆ

(ನ್ಯೂಸ್‌ ಕಡಬ) newskadaba.com, ಡಿ.09  ಬೆಂಗಳೂರು: ಮಹಿಳಾ ಉದ್ಯೋಗಿಗಳಿಗೆ ಕಡ್ಡಾಯ ಮುಟ್ಟಿನ ರಜೆಯನ್ನು ನೀಡಿದ ರಾಜ್ಯ ಸರ್ಕಾರದ ಇತ್ತೀಚಿನ ಆದೇಶದ ವಿರುದ್ಧ ಬೆಂಗಳೂರು ಹೋಟೆಲ್ ಮಾಲೀಕರ ಸಂಘ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಪರ ವಕೀಲರ ವಾದ ಆಲಿಸಿದ ಹೈಕೋರ್ಟ್​, ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ. ಮಧ್ಯಂತರ ತಡೆಯಾಜ್ಞೆ ತೆರವಿಗೆ ಅರ್ಜಿ ಸಲ್ಲಿಸಲು ಸರ್ಕಾರ ಸ್ವತಂತ್ರವೆಂದು ಹೈಕೋರ್ಟ್ ಏಕಸದಸ್ಯ ಪೀಠ ಅಭಿಪ್ರಾಯ ಪಟ್ಟಿದೆ. ಉಚ್ಚ ನ್ಯಾಯಾಲಯದ ಮುಂದೆ ಇಂದು ಹೋಟೆಲ್

ಮಹಿಳಾ ನೌಕರರಿಗೆ ಮುಟ್ಟಿನ ರಜೆ: ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ನಲ್ಲಿ ಹಿನ್ನಡೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು : ಎಲ್ಎಲ್ಆರ್ ಪರೀಕ್ಷೆಗೆ ಹೊಸ ನಿಯಮ; ಅರ್ಜಿ ಸಲ್ಲಿಸಿದ 7 ದಿನಗಳಲ್ಲಿ ಟೆಸ್ಟ್ ಕಡ್ಡಾಯ

(ನ್ಯೂಸ್‌ ಕಡಬ) newskadaba.com, ಡಿ.09: ವಾಹನ ಚಾಲನಾ ಕಲಿಕಾ ಪರವಾನಗಿ ಪಡೆಯಲು ಅರ್ಜಿ ಸಲ್ಲಿಸುವವರಿಗೆ ಜನವರಿ 1, 2026 ರಿಂದ ಹೊಸ ಮತ್ತು ಕಟ್ಟುನಿಟ್ಟಿನ ನಿಯಮ ಜಾರಿಗೆ ಬರಲಿದೆ. ಅರ್ಜಿದಾರರು, ಅರ್ಜಿ ಸಲ್ಲಿಸಿದ ಏಳು ದಿನಗಳ ಒಳಗೆ ಕಡ್ಡಾಯವಾಗಿ ಆನ್‌ಲೈನ್ ಮೂಲಕ ಕಲಿಕಾ ಪರೀಕ್ಷೆಯನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತ ಎ.ಎಂ. ಯೋಗೀಶ್ ಅವರು ತಿಳಿಸಿದ್ದಾರೆ. ಎಲ್‌ಎಲ್‌ಆರ್‌ಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಎನ್‌ಐಸಿ ಅಭಿವೃದ್ಧಿಪಡಿಸಿರುವ ಕೇಂದ್ರೀಕೃತ ವೆಬ್ ಆಧಾರಿತ ಸಾರಥಿ ತಂತ್ರಾಂಶವನ್ನು ಬಳಸಬೇಕು.

ಬೆಂಗಳೂರು : ಎಲ್ಎಲ್ಆರ್ ಪರೀಕ್ಷೆಗೆ ಹೊಸ ನಿಯಮ; ಅರ್ಜಿ ಸಲ್ಲಿಸಿದ 7 ದಿನಗಳಲ್ಲಿ ಟೆಸ್ಟ್ ಕಡ್ಡಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆ

(ನ್ಯೂಸ್‌ ಕಡಬ) newskadaba.com, ಡಿ.09:  ಇಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆ ಕೊಂಚ ಇಳಿಕೆಯಾಗಿದ್ದು, 24 ಕ್ಯಾರಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹13,009 ಮತ್ತು 22 ಕ್ಯಾರಟ್ ಚಿನ್ನದ  ಬೆಲೆ ಪ್ರತಿ ಗ್ರಾಂಗೆ ₹11,925 ಇದೆ; ಬೆಳ್ಳಿ ಬೆಲೆ ಪ್ರತಿ ಗ್ರಾಂಗೆ ₹190ಕ್ಕೆ ಏರಿಕೆಯಾಗಿದೆ. ದೇಶದಾದ್ಯಂತ ಚಿನ್ನದ ಬೆಲೆಗಳು ಬದಲಾಗುತ್ತಿದೆ… ಬೆಂಗಳೂರಿನ ಚಿನ್ನದ ದರ 24 ಕ್ಯಾರಟ್ ಚಿನ್ನ (1 ಗ್ರಾಂ): ₹13,009 22 ಕ್ಯಾರಟ್ ಚಿನ್ನ (1 ಗ್ರಾಂ): ₹11,925 18 ಕ್ಯಾರಟ್ ಚಿನ್ನ (1

ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂಡಿಗೋ ವಿಮಾನದಲ್ಲಿ ಪಾರಿವಾಳದ ಹಾರಾಟ – ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೋ ವೈರಲ್

(ನ್ಯೂಸ್‌ ಕಡಬ) newskadaba.com, ಡಿ.09:  ಬೆಂಗಳೂರಿನಿಂದ ವಡೋದರಾ ಕಡೆ ಹೋಗುತ್ತಿದ್ದ ಇಂಡಿಗೋ ವಿಮಾನದಲ್ಲಿ ಹಾರಾಡುತ್ತಿದ್ದ ಪಾರಿವಾಳವು ಪ್ರಯಾಣಿಕರಿಗೆ ಅಚ್ಚರಿಯ ಕ್ಷಣಗಳನ್ನು ಉಂಟುಮಾಡಿದ್ದು, ವಿಡಿಯೋ  ವೈರಲ್ ಆಗಿದೆ.ವೈರಲ್ ವೀಡಿಯೊದಲ್ಲಿ, ಪ್ರಯಾಣಿಕರು ಹಾಗೂ ಸಿಬ್ಬಂದಿ ಹಾರಾಟದ ಸಮಯದಲ್ಲಿ ಪಾರಿವಾಳವನ್ನು ಹಿಡಿಯಲು ಯತ್ನಿಸುತ್ತಿರುವುದು ಕಾಣುತ್ತದೆ. ಆದರೆ ಅದು ಅವರಿಂದ ತಪ್ಪಿಸಿಕೊಂಡು ವಿಮಾನದ ಒಳಗೆ ಹಾರುತ್ತಲೇ ಮುಂದುವರಿಯುತ್ತಿತ್ತು. ಸಾಮಾಜಿಕ ಮಾಧ್ಯಮ ಬಳಕೆದಾರರು ಈ ದೃಶ್ಯವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ. “ವಿಮಾನದಲ್ಲಿ ಅಚ್ಚರಿಯ ಉಡುಗೊರೆಯನ್ನು ಪಡೆದೆ, ಪ್ರಯಾಣವು ಸಂತೋಷದಿಂದ ಮತ್ತು ನಗುವಿನ ವಾತಾವರಣದಲ್ಲಿ ಮುಗಿಯಿತು,” ಎಂದು

ಇಂಡಿಗೋ ವಿಮಾನದಲ್ಲಿ ಪಾರಿವಾಳದ ಹಾರಾಟ – ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೋ ವೈರಲ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಣಿಪಾಲ ಸಮೀಪದ ಮಂಚಿಯಲ್ಲಿ ಕೋಳಿ ಅಂಕಕ್ಕೆ ದಾಳಿ- 8 ಮಂದಿ ವಶಕ್ಕೆ

(ನ್ಯೂಸ್‌ ಕಡಬ) newskadaba.com, ಡಿ.09 ಮಣಿಪಾಲ: ಡಿ.7ರಂದು ಮಧ್ಯಾಹ್ನ ಕೋಳಿ ಅಂಕ ನಡೆಸುತ್ತಿದ್ದ ಎಂಟು ಮಂದಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಜಯ ದೇವಾಡಿಗ, ದಯಾನಂದ ಪೂಜಾರಿ, ಪ್ರಜ್ವಲ್, ಅಚ್ಚಣ್ಣ ಮೂಲ್ಯ, ಸಚಿನ್, ಪ್ರದೀಪ್, ಅಮೀರ್, ಫಾರೂಕ್ ಅಹಮ್ಮದ್ ಬಂಧಿತ ಆರೋಪಿಗಳು. ಇವರಿಂದ 6500ರೂ. ಮೌಲ್ಯದ 4 ಕೋಳಿಗಳು, 15 ವಾಹನಗಳು ಹಾಗೂ 22100ರೂ. ನಗದನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಣಿಪಾಲ ಸಮೀಪದ ಮಂಚಿಯಲ್ಲಿ ಕೋಳಿ ಅಂಕಕ್ಕೆ ದಾಳಿ- 8 ಮಂದಿ ವಶಕ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top