ಮಂಗಳೂರು: ಸಿಸಿಬಿ ಪೋಲಿಸರಿಂದ ಮತ್ತೊಬ್ಬ ಡ್ರಗ್ಸ್ ಪೆಡ್ಲರ್ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.27: ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಇನ್ನಷ್ಟು ಜೋರಾಗಿ ಸದ್ದು ಮಾಡುತ್ತಿದೆ. ನಿನ್ನೆ ನಟಿ ನಿರೂಪಕಿ ಕರಾವಳಿ ಬೆಡಗಿ ಅನುಶ್ರೀ ಅವರಿಂದ ಡ್ರಗ್‌ ಕುರಿತ ಹೇಳಿಕೆ ಪಡೆದ ಬೆನ್ನಲ್ಲೇ ಮಂಗಳೂರು ಸಿಸಿಬಿ ಪೊಲೀಸರು ಇಂದು ಮತ್ತೊಬ್ಬ ಡ್ರಗ್‌ ಪೆಡ್ಲರ್‌ ನನ್ನು ಬಂಧಿಸಿದ್ದಾರೆ. ಇಂದು ಮುಂಜಾನೆ ಕಾರ್ಯಚರಣೆ ನಡೆಸಿದ ಸಿಸಿಬಿ ಪೊಲೀಸರು ಡ್ರಗ್‌ ಪೂರೈಕೆ ಮಾಡುತ್ತಿದ್ದ ಮಂಗಳೂರು ಹೊರವಲಯದ ಸೂರಿಂಜೆ ನಿವಾಸಿ ಮೊಹಮ್ಮದ್‌ ಶಾಕಿರ್‌ ಎಂಬಾತನನ್ನು ಬಂಧಿಸಿದ್ದಾರೆ. ಮಹಮ್ಮದ್ ಶಾಕೀರ್ ಗೆ ಸಂಬಂಧಿಸಿ […]

ಮಂಗಳೂರು: ಸಿಸಿಬಿ ಪೋಲಿಸರಿಂದ ಮತ್ತೊಬ್ಬ ಡ್ರಗ್ಸ್ ಪೆಡ್ಲರ್ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಸೆ.28: ರೈತ ಪರ ಸಂಘಟನೆಗಳಿಂದ , ರಾಜಕೀಯ ಪಕ್ಷಗಳಿಂದ ರಾಜ್ಯ ಬಂದ್

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.27: ಕೇಂದ್ರ ಹಾಗೂ ರಾಜ್ಯ ಸರಕಾರಗಳು ಅಂಗೀಕರಿಸಿರುವ ಕೃಷಿ ಸಂಬಂಧಿತ ಕಾನೂನುಗಳು ರೈತ ವಿರೋಧಿ ಎಂದು ಆರೋಪಿಸಿ ನಾಳೆ (ಸೋಮವಾರ)  ಬಂದ್‌ಗೆ ಕರೆ ನೀಡಿರುವ ದಕ್ಷಿಣ ಕನ್ನಡದ ವಿವಿಧ ರೈತ ಪರ ಸಂಘಟನೆಗಳು ಮತ್ತು ಕೆಲವು ರಾಜಕೀಯ ಪಕ್ಷಗಳು ಬೆಂಬಲ ಸೂಚಿಸಿದ್ದು, ಅಂದು ಜಿಲ್ಲೆಯ ವಿವಿಧೆಡೆ ಪ್ರತಿಭಟನ ಸಭೆ, ಮೆರವಣಿಗೆ, ರಸ್ತೆ ತಡೆ ಚಳವಳಿ ನಡೆಯಲಿದೆ. ಮಂಗಳೂರಿನಲ್ಲಿ ಮಿನಿ ವಿಧಾನಸೌಧದ ಎದುರು ಕೆಲವು ರಾಜಕೀಯ ಪಕ್ಷಗಳ ಸಹಯೋಗದಲ್ಲಿ ಪ್ರತಿಭಟನ ಸಭೆ ಮತ್ತು

ಸೆ.28: ರೈತ ಪರ ಸಂಘಟನೆಗಳಿಂದ , ರಾಜಕೀಯ ಪಕ್ಷಗಳಿಂದ ರಾಜ್ಯ ಬಂದ್ Read More »

ಕರಾವಳಿ, ಕರ್ನಾಟಕ

ಬಿಜೆಪಿ ಹಿರಿಯ ನಾಯಕಿ ಉಮಾ ಭಾರತಿಗೆ ಕೊವಿಡ್ -19 ದೃಢ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 27:  ಬಿಜೆಪಿ ಹಿರಿಯ ನಾಯಕಿ ಉಮಾ ಭಾರತಿ ಅವರಿಗೆ ಕೊವಿಡ್ 19ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಕುರಿತಂತೆ ಉಮಾಭಾರತಿ ಅವರು ಮೈಕ್ರೋ ಬ್ಲಾಗಿಂಗ್ ತಾಣ ಟ್ವಿಟ್ಟರ್ ಮೂಲಕ ತಡರಾತ್ರಿ ತಿಳಿಸಿದ್ದಾರೆ.     ಉಮಾಭಾರತಿ ಅವರಿಗೆ ಸ್ವಲ್ಪ ಮಟ್ಟಿನ ಜ್ವರ ಕಾಣಿಸಿಕೊಂಡಿದೆ. ಕಳೆದ ಮೂರು ದಿನಗಳಿಂದ ಜ್ವರಕ್ಕಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಕೊವಿಡ್ ವಿರುದ್ಧ ಸುರಕ್ಷಿತಾ ಕ್ರಮಗಳನ್ನು ಅನುಸರಿಸುತ್ತಾ ಬಂದಿದ್ದರು. ಶನಿವಾರದಂದು ಕೊವಿಡ್ 19 ಪರೀಕ್ಷೆ ನಡೆಸಿದಾಗ ಸೋಂಕು ತಗುಲಿರುವುದು ಪತ್ತೆಯಾಗಿದ್ದು,

ಬಿಜೆಪಿ ಹಿರಿಯ ನಾಯಕಿ ಉಮಾ ಭಾರತಿಗೆ ಕೊವಿಡ್ -19 ದೃಢ Read More »

ರಾಷ್ಟ್ರೀಯ ನ್ಯೂಸ್

ಭೀಕರ ಅಪಘಾತ ➤ ಗರ್ಭಿಣಿ ಸೇರಿ 7 ಮಂದಿ ದುರ್ಮರಣ..!!

(ನ್ಯೂಸ್ ಕಡಬ) newskadaba.com ಕಲಬುರಗಿ, ಸೆ. 27:  ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರಗಿ ತಾಲೂಕಿನ ಸಾವಳಗಿ ಬಳಿ ಸಂಭವಿಸಿದೆ.   ಕಲಬುರಗಿ ತಾಲೂಕಿನ ಸಾವಳಗಿ ಬಳಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾದ ಪರಿಣಾಮ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸುವಾಗ ಈ ದುರಂತ ಸಂಭವಿಸಿದೆ ಎನ್ನಲಾಗಿದೆ ಮೃತರಲ್ಲಿ ನಾಲ್ವರು ಮಹಿಳೆಯರು ಮೂವರು ಪುರುಷರೂ ಸೇರಿದ್ದಾರೆ.

ಭೀಕರ ಅಪಘಾತ ➤ ಗರ್ಭಿಣಿ ಸೇರಿ 7 ಮಂದಿ ದುರ್ಮರಣ..!! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೇರಳಕ್ಕೆ ರಕ್ತ ಚಂದನ ಸಾಗಿಸುತ್ತಿದ್ದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 27:  ಕೇರಳಕ್ಕೆ ಅಕ್ರಮವಾಗಿ ರಕ್ತ ಚಂದನ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೋರ್ವರನ್ನು ವಿಟ್ಲ ಠಾಣಾ ಎಸ್.ಐ ವಿನೋದ್ ರೆಡ್ಡಿಯವರ ನೇತೃತ್ವದ ಪೊಲೀಸರ ತಂಡ ಸೆ.26ರಂದು ಬಂಧಿಸಿದೆ.     ಪುತ್ತೂರು ತಾಲೂಕು ಸವಣೂರು ಗ್ರಾಮದ ಅಬ್ಬು ಚಾಪಳ್ಳ ಅಲಿಯಾಸ್ ಉಮ್ಮರ್ ಫಾರೂಕ್ (32) ಬಂಧಿತ ಆರೋಪಿ.ಸೆ.26ರಂದು ವಿಟ್ಲ ಠಾಣಾ ಎಸ್.ಐ ವಿನೋದ್ ರೆಡ್ಡಿಯವರ ನೇತೃತ್ವದ ಪೊಲೀಸರ ತಂಡ ಗಸ್ತು ತಿರುಗುತ್ತಿದ್ದ ವೇಳೆ ವಿಟ್ಲ ಸರಕಾರಿ ಬಸ್ ನಿಲ್ದಾಣದ ಬಳಿ ವ್ಯಕ್ತಿಯೋರ್ವ ಪ್ಲಾಸ್ಟಿಕ್

ಕೇರಳಕ್ಕೆ ರಕ್ತ ಚಂದನ ಸಾಗಿಸುತ್ತಿದ್ದ ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅರಂತೋಡು: ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ ಹಾಗೂ ಪ್ಲಾಸ್ಮಾ ದಾನಿಗಳ ರಕ್ತದ ಮಾದರಿ ಸಂಗ್ರಹ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 27. ಎಸ್ಕೆಎಸ್ಸೆಸ್ಸೆಫ್ ವಿಖಾಯ ರಕ್ತದಾನಿ ಬಳಗ ದ.ಕ,ಜಿಲ್ಲೆ, ಎಸ್ಕೆಎಸ್ಸೆಸ್ಸೆಫ್ ಸುಳ್ಯ ಕ್ಲಸ್ಟರ್, ಎಸ್ಕೆಎಸ್ಸೆಸ್ಸೆಫ್ ಅರಂತೋಡು ಶಾಖೆ ಹಾಗೂ ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ (ರಿ), ಪಠೇಲ್ ಚಾರಿಟೇಬಲ್ ಟ್ರಸ್ಟ್ (ರಿ), ಪಠೇಲ್ ಮೆಡಿಕಲ್ & ಲ್ಯಾಬೋರೇಟರಿ ಸುಳ್ಯ ಮತ್ತು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಮಂಗಳೂರು, ಕೆ.ಎಸ್. ಹೆಗ್ಡೆ ಆಸ್ಪತ್ರೆ ಮಂಗಳೂರು ಇದರ ಸಹಭಾಗಿತ್ವದಲ್ಲಿ ಬೃಹತ್‌ ಸಾರ್ವಜನಿಕ ರಕ್ತದಾನ ಶಿಬಿರ, ರಕ್ತ ವರ್ಗೀಕರಣ ಶಿಬಿರ ಹಾಗೂ ಪ್ಲಾಸ್ಮಾ ದಾನಿಗಳ ರಕ್ತದ ಮಾದರಿ ಸಂಗ್ರಹ

ಅರಂತೋಡು: ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ ಹಾಗೂ ಪ್ಲಾಸ್ಮಾ ದಾನಿಗಳ ರಕ್ತದ ಮಾದರಿ ಸಂಗ್ರಹ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ ವಿಧಿವಶ

(ನ್ಯೂಸ್ ಕಡಬ) newskadaba.com ನವದೆಹಲಿ:, ಸೆ. 27: ಮಾಜಿ ಕೇಂದ್ರ ಸಚಿವ ಜಸ್ವಂತ್ ಸಿಂಗ್ ಅವರು ಇಂದು ಬೆಳಿಗ್ಗೆ ದೆಹಲಿಯಲ್ಲಿ ನಿಧನರಾದರು. ಅವರಿಗೆ 82 ವರ್ಷ ವಯಸ್ಸಾಗಿತ್ತು.   ವಾಜಪೇಯಿ ಯವರ ಸಚಿವ ಸಂಪುಟದಲ್ಲಿ ಸಚಿವರಾಗಿದ್ದರು.ರಾಜಸ್ಥಾನ ಮೂಲದ ಜಸ್ವಂತ್ ಸಿಂಗ್ ಅವರು ಭಾರತದ ವಿದೇಶಾಂಗ ಸಚಿವರು, ರಕ್ಷಣಾ ಸಚಿವರು ಮತ್ತು ಹಣಕಾಸು ಸಚಿವರಾಗಿ ಸೇವೆ ಸಲ್ಲಿಸಿದ್ದರು. ಅವರು 1950 ಮತ್ತು 60 ರ ದಶಕಗಳಲ್ಲಿ ಭಾರತೀಯ ಸೇನೆಯಲ್ಲಿ ಅಧಿಕಾರಿಯಾಗಿದ್ದರು, ಆದರೆ ನಂತರ ಅವರು ರಾಜಕೀಯ ವೃತ್ತಿಯನ್ನು ಮುಂದುವರಿಸಲು

ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ ವಿಧಿವಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅರಂತೋಡು: ಬೃಹತ್‌ ರಕ್ತದಾನ ಶಿಬಿರ ಮತ್ತು ಪ್ಲಾಸ್ಮಾ ದಾನಿಗಳ ಶಿಬಿರ

(ನ್ಯೂಸ್ ಕಡಬ) newskadaba.com ಅರಂತೋಡು, ಸೆ.26: ದ.ಕ ಜಿಲ್ಲಾ ಕೆ ಎಸ್‌ ಎಸ್‌ ಎಫ್‌ ವಿಖಾಯ ರಕ್ತದಾನಿ ಬಳಗ, ಸುಳ್ಯ ಕ್ಲಸ್ಟರ್‌, ಅರಂತೋಡು ಶಾಖೆ ಹಾಗೂ ತೆಕ್ಕಿಲ್‌ ಗ್ರಾಮಾಭಿವೃದ್ದಿ ಪ್ರತಿಷ್ಠಾನ ಅರಂತೋಡು, ಪಠೇಲ್‌ ಚಾರಿಟೇಬಲ್‌ ಟ್ರಸ್ಟ್‌, ಮೆಡಿಕಲ್‌ ಮತ್ತು ಲ್ಯಾಬೋರೇಟರಿ ಸುಳ್ಯ, ಇಂಡಿಯನ್‌ ರೆಡ್‌ ಕ್ರಾಸ್‌ ಸೊಸೈಟಿ ಮಂಗಳೂರು, ಕೆ ಎಸ್‌ ಹೆಗ್ಡೆ ಆಸ್ಪತ್ರೆ ಮಂಗಳೂರು ಇದರ ಸಹಭಾಗಿತ್ವದಲ್ಲಿ ಬೃಹತ್‌ ರಕ್ತದಾನ ಶಿಬಿರ ಮತ್ತು ಪ್ಲಾಸ್ಮಾ ದಾನಿಗಳ ರಕ್ತದ ಮಾದರಿ ಸಂಗ್ರಹ ಶಿಬಿರವು ಇಂದು ತೆಕ್ಕಿಲ್‌ ಸಮುದಾಯ

ಅರಂತೋಡು: ಬೃಹತ್‌ ರಕ್ತದಾನ ಶಿಬಿರ ಮತ್ತು ಪ್ಲಾಸ್ಮಾ ದಾನಿಗಳ ಶಿಬಿರ Read More »

ಕರಾವಳಿ

ಚಿತ್ರೀಕರಣದ ವೇಳೆ ನಟ ಶರಣ್ ಅಸ್ವಸ್ಥ ➤ ಆಸ್ಪತ್ರೆಗೆ ದಾಖಲು..!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 26:  ಕೊರೊನಾ ಲಾಕ್​ಡೌನ್ ಬಳಿಕ ಈಗ ಚಿತ್ರರಂಗ ಪತ್ತೆ ಸಿನಿಮಾ ಶೂಟಿಂಗ್ ಶುರು ಮಾಡಿದೆ. ಅರ್ಥಕ್ಕೆ ನಿಂತಿದ್ದ ಸಿನಿಮಾಗಳನ್ನು ನಿರ್ಮಾಪಕರು ಪೂರ್ಣಗೊಳಿಸುತ್ತಿದ್ದರೆ.   ಇದೀಗ ಸುನಿ ನಿರ್ದೇಶನದ ಅವತಾರ ಪುರುಷ ಚಿತ್ರೀಕರಣದ ಸಂದರ್ಭದಲ್ಲಿ ಚಿಕ್ಕ ಅವಘಡ ಸಂಭವಿಸಿದೆ. ಹೀಗಾಗಿ ನಟ ಶರಣ್ ಆಸ್ಪತ್ರೆ ಸೇರಿದ್ದಾರೆ.ಮೊದಲೇ ಅವರಿಗೆ ಹೊಟ್ಟೆ ನೋವು ಇದ್ದುದರಿಂದ  ,ಅವತಾರ ಪುರುಷ ಆಕ್ಷನ್ ಸೀಕ್ವೆನ್ಸ್ ವೇಳೆ  ಮತ್ತಷ್ಟು ನೋವು ಹೆಚ್ಚಾಗಿದೆ ಹಾಗೂ ಮಸಲ್ ಕ್ಯಾಚ್ ಆಗಿದೆ.  ಸದ್ಯ ಯಾವುದೇ

ಚಿತ್ರೀಕರಣದ ವೇಳೆ ನಟ ಶರಣ್ ಅಸ್ವಸ್ಥ ➤ ಆಸ್ಪತ್ರೆಗೆ ದಾಖಲು..!! Read More »

ಕರ್ನಾಟಕ

ಮಾಸ್ಕ್ ಧರಿಸದಿರುವುದಕ್ಕೆ ಪೊಲೀಸರಿಂದ ದಂಡ ➤ ದಂಡ ಹಾಕಿದ ಪೊಲೀಸರ ಬೈಕನ್ನೇ ಕಳ್ಳತನ ಮಾಡಿದ ಭೂಪ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 26:  ಮಾಸ್ಕ್ ಹಾಕದ ಕಾರಣ ಠಾಣೆಗೆ ಕರೆದೊಯ್ದು ದಂಡ ಹಾಕಿದ ಪೊಲೀಸ್ ಪೇದೆಯ ಬೈಕ್ ಅನ್ನೇ ಖದೀಮನೋರ್ವ ಕಳ್ಳತನ ಮಾಡಿದ ಘಟನೆ ಜಿಲ್ಲೆಯ ಹೊಸನಗರದಲ್ಲಿ ನಡೆದಿದೆ. ಹೊಸನಗರ ಪೊಲೀಸ್ ಠಾಣೆ ಪಕ್ಕದಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನ ಮಾಡಿದ್ದ ಆರೋಪಿ ಚೇತನ್ ನನ್ನು ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬಂಧಿಸಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸದ ಕಾರಣದಿಂದ ಚೇತನ್ ಗೆ ಪೊಲೀಸರು ಠಾಣೆಗೆ ಕರೆದೊಯ್ದು ದಂಡ ವಿಧಿಸಿದ್ದರು. ಇದರಿಂದ ರೊಚ್ಚಿಗೆದ್ದ ಆತ ಪೊಲೀಸ್

ಮಾಸ್ಕ್ ಧರಿಸದಿರುವುದಕ್ಕೆ ಪೊಲೀಸರಿಂದ ದಂಡ ➤ ದಂಡ ಹಾಕಿದ ಪೊಲೀಸರ ಬೈಕನ್ನೇ ಕಳ್ಳತನ ಮಾಡಿದ ಭೂಪ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top