ಎಸ್.ಡಿ.ಪಿ.ಐ ಪಕ್ಷದ ಕುರಿತು ಸುಳ್ಳಾರೋಪ | ಪ್ರತಿಭಟನಾಕಾರರ ವಿರುದ್ದ ಠಾಣೆಗೆ ದೂರು

(ನ್ಯೂಸ್‌ ಕಡಬ) ಕಡಬ, ಆ. 15, ಡಿಜೆ ಹಳ್ಳಿಗೆ ಸಂಬಂಧಿಸಿದಂತೆ ಸಂಘ ಪರಿವಾರದ ಕಾರ್ಯಕರ್ತರು ನಡೆಸಿದ ಪ್ರತಿಭಟನೆಯಲ್ಲಿ ಕೋಮು ವಿಷಬೀಜ ಬಿತ್ತಿ ಗಲಭೆಗೆ ಪ್ರಚೋದನೆ ಮತ್ತು ಸುಳ್ಳು ಸುದ್ದಿ ಆರೋಪ ಮಾಡಿದ್ದಾರೆಂದು ಕಡಬ‌ ಎಸ್.ಡಿ.ಪಿ.ಐ ಕಾರ್ಯಕರ್ತರು ಪ್ರತಿಭಟನಾಕಾರರ ವಿರುದ್ದ ಠಾಣೆಗೆ ದೂರು ನೀಡಿದ್ದಾರೆ. ಶಾಂತಿಪ್ರಿಯವಾದ ಕಡಬದಲ್ಲಿ ಕೋಮು ಪ್ರಚೋದನೆ ಮಾಡುವ ಮೂಲಕ ನಾಗರಿಕರಲ್ಲಿ ಭಯ, ಆತಂಕ ಮೂಡಿರುವುದಲ್ಲದೇ ಪಕ್ಷದ ವಿರುದ್ದ ಸುಳ್ಳು ಆರೋಪವನ್ನು ಎತ್ತಿಕಟ್ಟಿ, ಪ್ರತಿಭಟನೆಯ ಮೂಲಕ ವಿದ್ವಂಸಕ ಕೃತ್ಯ ನಡೆಸುವುದಾಗಿ ಬಹಿರಂಗ ಸವಾಲೆಸೆದಿರುವುದು ಕಡಬದ ಸ್ವಾಸ್ಥ್ಯವನ್ನು […]

ಎಸ್.ಡಿ.ಪಿ.ಐ ಪಕ್ಷದ ಕುರಿತು ಸುಳ್ಳಾರೋಪ | ಪ್ರತಿಭಟನಾಕಾರರ ವಿರುದ್ದ ಠಾಣೆಗೆ ದೂರು Read More »

ಕರಾವಳಿ

ಕಡಬ ತಾ. ಆಡಳಿತದ ವತಿಯಿಂದ ಸರಳವಾಗಿ ಸ್ವಾತಂತ್ರ್ಯೋತ್ಸ ಆಚರಣೆ ➤ ಧ್ವಜಾರೋಹಣ ನೆರವೇರಿಸಿದ ಕಡಬ ತಹಶೀಲ್ದಾರ್

(ನ್ಯೂಸ್ ಕಡಬ) newskadaba.com ಕಡಬ, ಆ,15:  ಕಡಬ ತಾಲೂಕು ಆಡಳಿತದ ವತಿಯಿಂದ ಕಡಬ  ಕಚೇರಿಯ ಮುಂಭಾಗದಲ್ಲಿ 74ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಸರಳವಾಗಿ ಆಚರಿಸಲಾಯಿತು.   ಕಡಬ ತಹಶೀಲ್ದಾರ್ ಜಾನ್ ಪ್ರಕಾಶ್ ರೋಡ್ರಿಗಸ್ ಧ್ವಜಾರೋಹಣ ನೆರವೇರಿಸಿ ಬಳಿಕ ಕಡಬದ ಎಪಿಎಂಸಿ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಜಿಲ್ಲಾ ಪಂಚಾಯತ್ ಸದಸ್ಯ ಪಿ.ಪಿ. ವರ್ಗೀಸ್ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪಂಚಾಯತ್ ಸದಸ್ಯರಾದ ವಲ್ಸಮ್ಮ ಕೆ.ಟಿ., ಗಣೇಶ್ ಕೈಕುರೆ, ಎಪಿಎಂಸಿ ನಿರ್ದೇಶಕಿ ಪುಲಸ್ತ್ಯಾ ರೈ, ಪುತ್ತೂರು ತಾಲೂಕು ಪಂಚಾಯತ್ ಮಾಜಿ

ಕಡಬ ತಾ. ಆಡಳಿತದ ವತಿಯಿಂದ ಸರಳವಾಗಿ ಸ್ವಾತಂತ್ರ್ಯೋತ್ಸ ಆಚರಣೆ ➤ ಧ್ವಜಾರೋಹಣ ನೆರವೇರಿಸಿದ ಕಡಬ ತಹಶೀಲ್ದಾರ್ Read More »

ಕರಾವಳಿ, ಕರ್ನಾಟಕ

74ನೇ ಸ್ವಾತಂತ್ರ್ಯ ದಿನಾಚರಣೆ ➤ ಜನತೆಗೆ ಶುಭಾಶಯ ಕೋರಿದ ಸಿಎಂ ಬಿ.ಎಸ್.ಯಡಿಯೂರಪ್ಪ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ,15: 74ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಜನತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಭಾಶಯಗಳನ್ನು ಕೋರಿದ್ದು, ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಸ್ವಾತಂತ್ರ್ಯಕ್ಕಾಗಿ ಹೋರಾಡಿ ತ್ಯಾಗ ಬಲಿದಾನ ಮಾಡಿದವರನ್ನು ಸ್ಮರಿಸಿದರು.   ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಸಮಸ್ತ ಜನತೆಗೆ 74ನೇ ಸ್ವಾತಂತ್ರ್ಯ ದಿನಾಚರಣೆಯ ಹಾರ್ದಿಕ ಶುಭಾಶಯಗಳು. ನಿರಂತರ ಹೋರಾಟ, ತ್ಯಾಗ, ಬಲಿದಾನಗಳ ಮೂಲಕ ನಮ್ಮ ಹಿರಿಯರು ಗಳಿಸಿಕೊಟ್ಟ ಸ್ವಾತಂತ್ರ್ಯದ ಸಂಭ್ರಮಾಚರಣೆಯ

74ನೇ ಸ್ವಾತಂತ್ರ್ಯ ದಿನಾಚರಣೆ ➤ ಜನತೆಗೆ ಶುಭಾಶಯ ಕೋರಿದ ಸಿಎಂ ಬಿ.ಎಸ್.ಯಡಿಯೂರಪ್ಪ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕಾಸರಗೋಡು: ಅಕ್ರಮ 440 ವಿದೇಶಿ ಬಾಟಲಿಗಳ ಸಹಿತ ಆರೋಪಿ ಅರೆಸ್ಟ್

(ನ್ಯೂಸ್‌ ಕಡಬ) ಕಾಸರಗೋಡು, ಆ. 15, ಮನೆಯ ಹಿತ್ತಲಿನಲ್ಲಿ ಅಕ್ರಮವಾಗಿ ಬಚ್ಚಿಡಲಾಗಿದ್ದ 440 ವಿದೇಶಿ ಬಾಟ್ಲಿಗಳನ್ನು ಕಾಸರಗೋಡು ಅಬಕಾರಿ ದಳದ ಸಿಬ್ಬಂದಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಕೋಳಿಯಡ್ಕ ಸಮೀಪದ ರಾಮಕೃಷ್ಣ ಎಂಬವರು ತನ್ನ ಮನೆಯ ಹಿತ್ತಲಿನಲ್ಲಿ ಮೂರು ಗೋಣಿ ಚೀಲಗಳಲ್ಲಿ ಮದ್ಯವನ್ನು ತುಂಬಿಸಿಟ್ಟಿದ್ದರು ಎನ್ನಲಾಗಿದೆ. ಈ ಬಗ್ಗೆ ಅಬಕಾರಿ ಇಲಾಖೆಗೆ ಲಭಿಸಿದಂತ ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಕಾಸರಗೋಡು: ಅಕ್ರಮ 440 ವಿದೇಶಿ ಬಾಟಲಿಗಳ ಸಹಿತ ಆರೋಪಿ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದಿನ ಭವಿಷ್ಯ – ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್

ಶ್ರೀ ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ ರಾಶಿ ವೈವಾಹಿಕ ಜೀವನದಲ್ಲಿ

ದಿನ ಭವಿಷ್ಯ – ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಸರಳಿಕಟ್ಟೆ: ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯದಿನಾಚರಣೆ

(ನ್ಯೂಸ್ ಕಡಬ) newskadaba.com ಸರಳಿಕಟ್ಟೆ, ಆ.15, 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಕೋವಿಡ್-19 ಹಿನ್ನೆಲೆಯಲ್ಲಿ ಸರಳವಾಗಿ ಸರಕಾರಿ ಪ್ರೌಢ ಶಾಲೆ ಸರಳಿಕಟ್ಟೆಯಲ್ಲಿ ಆಚರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರು ಜಾವೇದ್ ಆರ್, ಧ್ವಜಾರೋಹಣಗೈದರು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರಾದ ರಾಜೇಸಾಬ್, ವಿಜಯಶ್ರೀ, ಸಪ್ನಾ ರಾವ್, ಶಾಂತಾ, ಹಲೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಕೆ.ಪಿ ಬಾತಿಶ್ ತೆಕ್ಕಾರು ಮತ್ತು ಹಳೆ ವಿದ್ಯಾರ್ಥಿಗಳು ಪೋಷಕರು ಉಪಸ್ಥಿತರಿದ್ದರು. ಶಾಲಾ ಸಹಶಿಕ್ಷಕ ಹನೀಫ್ ಬಿ. ಸ್ವಾಗತಿಸಿ ವಂದಿಸಿದರು. ಶಾಲಾ ದೈಹಿಕ ಶಿಕ್ಷಕಿ ನಳಿನಾಕ್ಷಿ ಕಾರ್ಯಕ್ರಮವನ್ನು ನಿರೂಪಿಸಿದರು.

ಸರಳಿಕಟ್ಟೆ: ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯದಿನಾಚರಣೆ Read More »

ಕರಾವಳಿ

ತೆಕ್ಕಾರು: 74ನೇ ಸ್ವಾತಂತ್ರ್ಯ ದಿನಾಚರಣೆ

(ನ್ಯೂಸ್ ಕಡಬ) newskadaba.com ತೆಕ್ಕಾರು, ಆ. 15, 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಹಿದಾಯತುಲ್ ಇಸ್ಲಾಂ ಮದ್ರಸ ತೆಕ್ಕಾರಿನಲ್ಲಿ ಆಚರಿಸಲಾಯಿತು. ಧ್ವಜಾರೋಹಣ ನಡೆಸಿ ಸ್ವಾತಂತ್ರ್ಯ ಸಂದೇಶವನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ಬದ್ರಿಯಾ ಜುಮ್ಮಾ ಮಸ್ಜಿದ್ ತೆಕ್ಕಾರು ಅಧ್ಯಕ್ಷ M.T ಆದಂ ಬಾಜಾರ ಧ್ವಜಾರೋಹಣಗೈದರು. SYS ತೆಕ್ಕಾರು ಬ್ರಾಂಚ್ ಅಧ್ಯಕ್ಷ ಉಸ್ಮಾನ್ ಸಹದಿ ತೆಕ್ಕಾರು ಉದ್ಘಾಟಿಸಿ ಸ್ವಾತಂತ್ರ್ಯ ಸಂದೇಶ ನೀಡಿದರು. ಕಾರ್ಯಕ್ರಮದಲ್ಲಿ BJM ಪ್ರಧಾನ ಕಾರ್ಯದರ್ಶಿ ಅತಾವುಲ್ಲ T.H ಕಾರ್ಯದರ್ಶಿ ನಝೀರ್ T.K, SSF ತೆಕ್ಕಾರು ಶಾಖಾ ಅಧ್ಯಕ್ಷ ನೌಫಲ್ T.H,

ತೆಕ್ಕಾರು: 74ನೇ ಸ್ವಾತಂತ್ರ್ಯ ದಿನಾಚರಣೆ Read More »

ಕರಾವಳಿ

ಜಿಲ್ಲಾ ಗೃಹರಕ್ಷಕ ದಳ ಕಛೇರಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಕಛೇರಿ ಮೇರಿಹಿಲ್, ಮಂಗಳೂರು ಇಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರು ಮತ್ತು ಪೌರರಕ್ಷಣಾ ತಂಡದ ಮುಖ್ಯಪಾಲಕರಾದ ಡಾ|| ಮುರಲೀಮೋಹನ ಚೂಂತಾರು ಇವರು ಧ್ವಜಾರೋಹಣ ನೆರವೇರಿಸಿ ಗೃಹರಕ್ಷಕರನ್ನು ಉದ್ದೇಶಿಸಿ ಮಾತನಾಡಿದರು. ಮಹಾತ್ಮಾಗಾಂಧಿ, ಸರ್ದಾರ್ ಪಟೇಲ್, ಸುಭಾಸ್‍ಚಂದ್ರ ಬೋಸ್ ಮುಂತಾದ ಮಹನೀಯರ ತ್ಯಾಗ ಬಲಿದಾನದಿಂದ ನಮಗೆ 73 ವರ್ಷಗಳ ಹಿಂದೆ ಬ್ರಿಟಿಷರಿಂದ ಸ್ವಾತಂತ್ರ್ಯ ದೊರಕಿದೆ. ನಮಗೆ ದೊರೆತ ಸ್ವಾತಂತ್ರ್ಯವನ್ನು ಸ್ವೇಚ್ಛಾಚಾರ ಎಂದು ಯುವಜನರು ತಿಳಿದುಕೊಂಡು ತಪ್ಪು ದಾರಿ ಹಿಡಿಯಬಾರದು.

ಜಿಲ್ಲಾ ಗೃಹರಕ್ಷಕ ದಳ ಕಛೇರಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ Read More »

ಕರಾವಳಿ, ಕರ್ನಾಟಕ

ಅರಂತೋಡು: ಅನ್ವಾರುಲ್ ಹುದಾ ಅಸೋಸಿಯೇಷನ್ ವತಿಯಿಂದ 74ನೇ ಸ್ವಾತಂತ್ರ್ಯ ದಿನಾಚರಣೆ

(ನ್ಯೂಸ್ ಕಡಬ) newskadaba.com ಸುಳ್ಯ, ಆ.15, ಅರಂತೋಡು ಬದ್ರಿಯಾ ಜುಮ್ಮಾ ಮಸೀದಿ ವಠಾರದಲ್ಲಿ ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಶನ್ ಹಾಗೂ ನುಸ್ರತುಲ್ ಇಸ್ಲಾಂ ಮದರಸ ಮ್ಯಾನೇಜ್‌ಮೆಂಟ್ ವತಿಯಿಂದ 74 ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು. ಬದ್ರಿಯಾ ಜಮ್ಮಾ ಮಸೀದಿ ಅಧ್ಯಕ್ಷರಾದ ಹಾಜಿ ಅಶ್ರಫ್ ಗುಂಡಿ ಧ್ವಜಾರೋಹಣ ಗೈದರು. ಮಸೀದಿ ಖತೀಬರಾದ ಅಲ್ ಹಾಜ್ ಇಸ್ಹಾಖ್ ಬಾಖವಿ ದುವಾ ನೇರವೇರಿಸಿ ಮಾತನಾಡಿ ಸ್ವಾತಂತ್ರ್ಯ ಹೋರಾಟದಲ್ಲಿ ಹೋರಾಡಿದ ವೀರ ಪುರುಷರನ್ನು ಸ್ಮರಿಸಬೇಕಾದದ್ದು ಪ್ರತಿ ಭಾರತೀಯ ಪ್ರಜೆಯ ಕರ್ತವ್ಯ ಎಂದು

ಅರಂತೋಡು: ಅನ್ವಾರುಲ್ ಹುದಾ ಅಸೋಸಿಯೇಷನ್ ವತಿಯಿಂದ 74ನೇ ಸ್ವಾತಂತ್ರ್ಯ ದಿನಾಚರಣೆ Read More »

ಕರಾವಳಿ

ಅಕ್ಷರದಾಸೋಹ ಆಹಾರ ಸಾಮಾಗ್ರಿಗಳ ಸಾಗಾಣಿಕೆ – ಇ-ಟೆಂಡರ್ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 14, ಆಗಸ್ಟ್ 2020 ರಿಂದ ಜುಲೈ 2021 ರ ವರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಕೆ.ಎಫ್. ಮತ್ತು ಸಿ.ಎಸ್.ಸಿ ಸಗಟು ಮಳಿಗೆಯಿಂದ ಆಯಾ ತಾಲ್ಲೂಕಿನ ಅಕ್ಷರದಾಸೋಹ ಶಾಲಾ ಅಡುಗೆ ಕೇಂದ್ರಗಳಿಗೆ ಪೂರಕ ಆಹಾರ ಸಾಮಾಗ್ರಿಗಳನ್ನು ಸಾಗಾಣಿಕೆ ಮಾಡಲು ಅರ್ಹ ಟೆಂಡರ್‍ದಾರರಿಂದ ಅಲ್ಪಾವಧಿ ಇ-ಟೆಂಡರ್ ಕರೆಯಲಾಗಿದೆ. ಆಸಕ್ತ ಟೆಂಡರುದಾರರು ಅರ್ಜಿ ಫಾರಂಗಳನ್ನು ಸೆಪ್ಟೆಂಬರ್ 1 ರೊಳಗೆ ಇ-ಪ್ರೊಕ್ಯೂರ್‍ಮೆಂಟ್ ಪೋರ್ಟಲ್ www.eproc.karnataka.gov.in ನಿಂದ ಡೌನ್‍ಲೋಡ್ ಮಾಡಿ ಸೆಪ್ಟೆಂಬರ್ 2 ರೊಳಗೆ

ಅಕ್ಷರದಾಸೋಹ ಆಹಾರ ಸಾಮಾಗ್ರಿಗಳ ಸಾಗಾಣಿಕೆ – ಇ-ಟೆಂಡರ್ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ
Scroll to Top