ಕಡಬ: ಇಂದು ಮತ್ತೆ ಓರ್ವರಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಕಡಬ: ಜು.22, ತಾಲೂಕಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ತನ್ನ ಆರ್ಭಟವನ್ನು ಮುಂದುವರೆಸುತ್ತಿದ್ದು, ಇಂದು ಕೂಡಾ ಓರ್ವರಲ್ಲಿ ಸೋಂಕು ದೃಢಪಟ್ಟಿದೆ. ಕೇರಳದಿಂದ ಆಗಮಿಸಿ ಮಂಗಳೂರು ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಾಲೂಕಿನ ಸುಂಕದಕಟ್ಟೆ ನಿವಾಸಿ 53 ವರ್ಷ ಪ್ರಾಯದ ವ್ಯಕ್ತಿಯಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.  

ಕಡಬ: ಇಂದು ಮತ್ತೆ ಓರ್ವರಿಗೆ ಕೊರೋನಾ ಪಾಸಿಟಿವ್ Read More »

ಕರಾವಳಿ, ಕರ್ನಾಟಕ

ಗೊಬ್ಬರ ಹೊತ್ತು ಕೃಷಿ ಬೇಸಾಯ ಮಾಡುತ್ತಿರುವ ಬಿಗ್ ಬಾಸ್‌ ಫೈನಲ್ ಸ್ಪರ್ಧಿ ಭೂಮಿ ಶೆಟ್ಟಿ… !!!

(ನ್ಯೂಸ್ ಕಡಬ) newskadaba.com ಕುಂದಾಪುರ: ಜು.22., ಬಿಗ್ ಬಾಸ್‌ ಸೀಸನ್‌ನಲ್ಲಿ 7ನಲ್ಲಿ ಫೈನಲ್ ಸ್ಪರ್ಧಿಯಾಗಿ ಗುರುತಿಸಿಕೊಂಡ ಕರಾವಳಿ ಕುವರಿ ಭೂಮಿ ಶೆಟ್ಟಿ ಸದ್ಯ ಬೆಂಗಳೂರು  ಸಿಟಿಯಿಂದ ದೂರವಿದ್ದು, ಇದೀಗ ತನ್ನ ಹುಟ್ಟೂರಿನಲ್ಲಿ ಕೃಷಿ ಕಾಯಕದಲ್ಲಿ ಖುಷಿ ಕಾಣುತ್ತಿದ್ದಾರೆ. ಮೂಲತಃ ಉಡುಪಿ ಜಿಲ್ಲೆ ಬೈದೂಂರು ತಾಲೂಕಿನ ಬೀಜೂರು ಗ್ರಾಮದ ಗಂಟಿಹೊಳೆಯ ಭೂಮಿ ಶೆಟ್ಟಿ, ವಿದ್ಯಾಭ್ಯಾಸ ನಟನೆ ಅಂತ ಬೆಂಗಳೂರಿನಲ್ಲೇ ಇದ್ದರು. ಸದ್ಯ ಕೊರೋನಾ ಹಿನ್ನಲೆ ಲಾಕ್ ಡೌನ್ ಅದ ಕಾರಣ ಊರಲ್ಲೇ ಇದ್ದು, ಕೃಷಿ ಕಾಯಕದಲ್ಲಿ ತೊಡಗಿಸಿಕೊಂಡಿದ್ದಾರೆ. ಭೂಮಿ

ಗೊಬ್ಬರ ಹೊತ್ತು ಕೃಷಿ ಬೇಸಾಯ ಮಾಡುತ್ತಿರುವ ಬಿಗ್ ಬಾಸ್‌ ಫೈನಲ್ ಸ್ಪರ್ಧಿ ಭೂಮಿ ಶೆಟ್ಟಿ… !!! Read More »

ಕರಾವಳಿ

ಪತ್ರಕರ್ತನ ಹತ್ಯೆ ಖಂಡಿಸಿದ ಬೆಂಗಳೂರು ಕಮಿಷನರ್ ಭಾಸ್ಕರ್ ರಾವ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.22:  ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದ ಪತ್ರಕರ್ತನ ಹತ್ಯೆ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದೆ. ನಡು ಬೀದಿಯಲ್ಲಿ ಪತ್ರಕರ್ತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಈ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಹೇಳಿದ್ದಾರೆ. ಪತ್ರಕರ್ತನ ಹತ್ಯೆ ಕುರಿತು ಟ್ವಿಟ್ಟರ್‌ನಲ್ಲಿ ಸಂತಾಪ ವ್ಯಕ್ತಪಡಿಸಿರುವ ಭಾಸ್ಕರ್ ರಾವ್ ‘ಇದು ಬಹಳ ದುಃಖಕರ ಸಂಗತಿ. ಇನ್ನೊಬ್ಬರನ್ನು ರಕ್ಷಿಸುವ ಸಲುವಾಗಿ ತನ್ನ ಜೀವ ಕಳೆದುಕೊಳ್ಳಬೇಕಾಯಿತು. ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಲಿ’

ಪತ್ರಕರ್ತನ ಹತ್ಯೆ ಖಂಡಿಸಿದ ಬೆಂಗಳೂರು ಕಮಿಷನರ್ ಭಾಸ್ಕರ್ ರಾವ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ: ಜು.22, ಕಾಶಿಪಟ್ಟಣ ಗ್ರಾಮದ ಕೇಳದಪೇಟೆ ಹೊಸಮನೆ ನಿವಾಸಿ, ಬೆಳ್ತಂಗಡಿ ಪಿ.ಎಲ್.ಡಿ‌ ಬ್ಯಾಂಕ್ ಮಾಜಿ ನಿರ್ದೇಶಕ ಅನೂಪ್ ಕುಮಾರ್ ಜೈನ್ (67) ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತರಾಗಿದ್ದ ಇವರು ಕಾಶಿಪಟ್ಟಣ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾಗಿ‌ ಹಾಗೂ ಕೇಳದಪೇಟೆ ಶ್ರೀ ಅನಂತನಾಥ ಸ್ವಾಮಿ ಬಸದಿಯ ಕಾರ್ಯಾಧ್ಯಕ್ಷರಾಗಿ‌ಯೂ ಪರಿಚಿತರಾಗಿದ್ದರು. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಪಾರ ಬಂಧುವರ್ಗದವರನ್ನೂ ಅಗಲಿದ್ದಾರೆ.

Read More »

ಕರಾವಳಿ

ಜು.23ರಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಯೂಟ್ಯೂಬ್‌ ತರಗತಿ ಪ್ರಾರಂಭ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು 22 : ಜು.23ರ ಗುರುವಾರದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಯೂಟ್ಯೂಬ್‌ ಮುಖಾಂತರ ಪ್ರೀ ರೆಕಾರ್ಡೆಡ್‌ ವಿಡಿಯೋ ತರಗಳು ಪ್ರಾರಂಭವಾಗಲಿವೆ.ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಈ ಪಾಠವನ್ನು ಕೇಳಲು ಸ್ಮಾರ್ಟ್‌ಫೋನ್‌, ಲ್ಯಾಪ್‌ಟಾಪ್‌ ಅಥವಾ ಇಂಟರ್‌ನೆಟ್‌ ಇರದೇ ಇದ್ದಲ್ಲಿ, ಕಾಲೇಜು ಆರಂಭವಾದ ಸಂದರ್ಭ ಇದೇ ಪಾಠಗಳನ್ನು ಉಪನ್ಯಾಸಕರು ಮತ್ತೊಮ್ಮೆ ಬೋಧನೆ ಮಾಡಲಿದ್ದಾರೆ ಎಂದು ಪಿಯು ಇಲಾಖೆ ನಿರ್ದೇಶಕಿ ಎಂ.ಕಂಗವಲ್ಲಿ ಹೇಳಿದ್ದಾರೆ. ಕೊರೊನಾ ಸೋಂಕು ಹೆಚ್ಚಾಗಿ ವ್ಯಾಪಿಸುತ್ತಿರುವ ಹಿನ್ನೆಲೆ ಸದ್ಯಕ್ಕೆ ಕಾಲೇಜು ಪ್ರಾರಂಭವಾಗುವ ಸಾಧ್ಯತೆ ಇಲ್ಲ.

ಜು.23ರಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಯೂಟ್ಯೂಬ್‌ ತರಗತಿ ಪ್ರಾರಂಭ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಗಾಯಗಳಿಂದ ರಸ್ತೆಯಲ್ಲಿ ಬಿದ್ದು ವ್ಯಕ್ತಿಯ ನರಳಾಟ ➤ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಬಜರಂಗದಳ

(ನ್ಯೂಸ್ ಕಡಬ) newskadaba.com ಪುತ್ತೂರು,ಜು.22:  ಮೊಣಕಾಲಿನ ಮಂಡಿ ಜಾರಿದಂತಿದ್ದು, ಎದ್ದು ನಿಲ್ಲಲಾಗುತ್ತಿಲ್ಲ, ಹೊಟ್ಟೆಯಲ್ಲಿ ಹೊಕ್ಕುಳ ಪಕ್ಕದಲ್ಲಿ ಮಾಂಸ ಸೀಳಿ ಹೊರಬಂದಂದಂತೆ ಕಾಣುತ್ತಿದ್ದು, ಅದಕ್ಕೆ ಪಂಚೆಯನ್ನು ಮುಚ್ಚಿಕೊಂಡು ನೋವನ್ನು ಸಹಿಸಿಕೊಂಡು ರಸ್ತೆ ಬದಿಯಲ್ಲಿ ಬಿದ್ದು ನರಳುತ್ತಿದ್ದ ವ್ಯಕ್ತಿಯೊಬ್ಬನ್ನು ಪುತ್ತೂರಿನ ಬಜರಂಗದಳದ ಕಾರ್ಯಕರ್ತರು ಸರಕಾರಿ ಆಸ್ಪತ್ರೆಗೆ ಸೇರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.     ಮೂಲತ: ಇವರು ಚಿಕ್ಕಮಗಳೂರು ಜಿಲ್ಲೆಯ ಕಡೂರು ನಿವಾಸಿ ಶಂಕರ ಯಾನೆ ಮುನ್ನ ಎಂದು ಗರುತಿಸಲಾಗಿದೆ. ಕೆಲ ದಿನಗಳ ಹಿಂದೆ ಮಂಗಳೂರು ಪರಿಸರದಲ್ಲಿ ನಡೆದಿದ್ದ ಹೊಡೆದಾಟ

ಗಾಯಗಳಿಂದ ರಸ್ತೆಯಲ್ಲಿ ಬಿದ್ದು ವ್ಯಕ್ತಿಯ ನರಳಾಟ ➤ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಬಜರಂಗದಳ Read More »

ಕರಾವಳಿ, ಕರ್ನಾಟಕ

ದುಷ್ಕರ್ಮಿಗಳ ಗುಂಡಿನ ದಾಳಿಗೆ ಗಾಯಗೊಂಡಿದ್ದ ಪತ್ರಕರ್ತ ಬಲಿ

(ನ್ಯೂಸ್ ಕಡಬ) newskadaba.com ಲಕ್ನೋ, ಜು. 22, ಉತ್ತರ ಪ್ರದೇಶದಲ್ಲಿ ದುಷ್ಕರ್ಮಿಗಳ ಗುಂಡಿ ದಾಳಿಗೆ ಗಾಯಗೊಂಡಿದ್ದ ಪತ್ರಕರ್ತ ವಿಕ್ರಮ್ ಜೋಶಿ ನಿಧನ ಹೊಂದಿದ್ದಾರೆ. ಘಾಜಿಯಾಬಾದ್ ನಲ್ಲಿ ಪತ್ರಕರ್ತರಾಗಿದ್ದ ವಿಕ್ರಮ್ ಜೋಶಿ ಅವರ ಮೇಲೆ ಅಪರಿಚಿತರು ಜುಲೈ 20 ರಂದು ಗುಂಡಿನ ದಾಳಿ ನಡೆಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಇವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು 9 ಜನರನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ದುಷ್ಕರ್ಮಿಗಳ ಗುಂಡಿನ ದಾಳಿಗೆ ಗಾಯಗೊಂಡಿದ್ದ ಪತ್ರಕರ್ತ ಬಲಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪಿಕಪ್ ವಾಹಣದಲ್ಲಿ 1 ಕ್ವಿಂಟಾಲ್ ಗೂ ಅಧಿಕ ಗಾಂಜಾ ಸಾಗಾಟ ➤ ಆರೋಪಿಗಳು ಪರಾರಿ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜು.22:  ಪಿಕಪ್ ವ್ಯಾನ್‌ನಲ್ಲಿ ಬಾಳೆ ಗೊನೆಗಳ ನಡುವೆ ಬಚ್ಚಿಟ್ಟು ಸಾಗಾಟ ಮಾಡುತ್ತಿದ್ದ ಸುಮಾರು ಒಂದು ಕ್ವಿಂಟಾಲ್ ಗಾಂಜಾವನ್ನು ಮಂಜೇಶ್ವ ರ ಠಾಣಾ ಪೊಲೀಸರು ವಶಪಡಿಸಿಕೊಂಡಿದ್ದು ಆರೋಪಿಗಳು ಪರಾರಿಯಾಗಿದ್ದಾರೆ.       ಮಂಜೇಶ್ವರ ಕುಂಜತ್ತೂರು ಪದವಿನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಈ ದಾರಿಯಾಗಿ ಬಂದ ಪಿಕಪ್ ವ್ಯಾನ್‌ನ್ನು ವೇಗವಾಗಿ ಒಳ ರಸ್ತೆಯಾಗಿ ಚಲಾಯಿಸಿಕೊಂಡು ಹೋಗಿದ್ದು, ಬೆನ್ನಟ್ಟಿದ ಪೊಲೀಸರು ಪಿಕಪ್ ವ್ಯಾನನ್ನು ತಡೆದು ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ವ್ಯಾನ್‌ನಲ್ಲಿದ್ದ ಇಬ್ಬರು ಪರಾರಿಯಾಗಿದ್ದಾರೆ. ತಪಾಸಣೆ

ಪಿಕಪ್ ವಾಹಣದಲ್ಲಿ 1 ಕ್ವಿಂಟಾಲ್ ಗೂ ಅಧಿಕ ಗಾಂಜಾ ಸಾಗಾಟ ➤ ಆರೋಪಿಗಳು ಪರಾರಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಏನೆಕಲ್ ದೇವರಗುಂಡಿಯಲ್ಲಿ ಮೀನು ಹಿಡಿಯುತ್ತಿದ್ದ ಯುವಕರ ಬಂಧನ

(ನ್ಯೂಸ್ ಕಡಬ) newskadaba.com ಏನೆಕಲ್ಲು, ಜು.22: ಏನೆಕಲ್ಲು ದೇವರ ಗುಂಡಿಯಿಂದ ಮೀನು ಹಿಡಿಯುತ್ತಿದ್ದ ಸವಣೂರಿನ ನಾಲ್ವರು ಅನ್ಯಮತಿಯರನ್ನು ಸುಬ್ರಹ್ಮಣ್ಯ ಪೊಲೀಸರು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ.   ಸವಣೂರಿನ ಬಶೀರ್, ಅಬ್ದುಲ್ ರಜಾಕ್, ಬಶೀರ್,ಅಬ್ದುಲ್ ಸಮಾದ್ ಬಂಧಿತರು.ಇವರ ವಿರುದ್ದ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಏನೆಕಲ್ ದೇವರಗುಂಡಿಯಲ್ಲಿ ಮೀನು ಹಿಡಿಯುತ್ತಿದ್ದ ಯುವಕರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಕೆರೆಗೆ ಹಾರಿ ಯುವತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಜು.22. ಯುವತಿಯೋರ್ವಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ಆಲಂಕಾರು ಗ್ರಾಮದ ಶರವೂರು ಎಂಬಲ್ಲಿ ಬುಧವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಆಲಂಕಾರು ಗ್ರಾಮದ ಶರವೂರು ಸಮೀಪದ ಪಾಂಜೋಡಿ ಕಾಲೋನಿ ನಿವಾಸಿ ಕರಿಯ ಎಂಬವರ ಪುತ್ರಿ ಸಂಧ್ಯಾ (22) ಎಂದು ಗುರುತಿಸಲಾಗಿದೆ. ಈಕೆ ಬುಧವಾರ ಬೆಳಿಗ್ಗೆ ಮನೆಯ ಸಮೀಪದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ. ಈ ಬಗ್ಗೆ ಕಡಬ ಪೊಲೀಸರಿಗೆ

ಕಡಬ: ಕೆರೆಗೆ ಹಾರಿ ಯುವತಿ ಆತ್ಮಹತ್ಯೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top