ಬಂಟ್ವಾಳ ಹೋಮ್ ಕ್ವಾರಂಟೈನ್ ನಿಯಮ ಮೀರಿದಾತನ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com.ಬಂಟ್ವಾಳ,ಜು.15:  ಕೊರೊನಾ ತನ್ನ ವೇಗವನ್ನು ಹೆಚ್ಚಿಸುತ್ತಾ ಮುಂದುವರಿಯುತ್ತಿದೆ ಇದರ ನಡುವೆ ವ್ಯಕ್ತಿಯೊಬ್ಬರ ವಿರುದ್ಧ ಹೋಮ್ ಕ್ವಾರಂಟೈನ್ ಉಲ್ಲಂಘಿಸಿ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡಿದ ಆರೋಪದಡಿ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತುಂಬೆ ಗ್ರಾಮದ ಕಾಣೆಮಾರ್ ನಿವಾಸಿ ಸಾಹಿದ್ (32) ವಿರುದ್ಧ ಕಾನೂನು ಉಲ್ಲಂಘಿಸಿದ ಆರೋಪ ಕೇಳಿಬಂದಿರುವುದು. ಸಾಹಿದ್ ಗೆ ಜು.೦೯ ರಿಂದ ಜು.23 ರವರೆಗೆ ಹೋಮ್ ಕಾರಂಟೈನ್ ಇರುವಂತೆ ತುಂಬೆ ಗ್ರಾಮ ಪಂಚಾಯತ್ ನಿಂದ ನೋಟಿಸು ಕೂಡ ಜಾರಿ ಮಾಡಿತ್ತು. ಆದರೆ ಜುಲೈ 14 […]

ಬಂಟ್ವಾಳ ಹೋಮ್ ಕ್ವಾರಂಟೈನ್ ನಿಯಮ ಮೀರಿದಾತನ ವಿರುದ್ಧ ಪ್ರಕರಣ ದಾಖಲು Read More »

ಕರಾವಳಿ

ದ. ಕನ್ನಡ ಜಿಲ್ಲೆಯಲ್ಲಿ ಇಂದು ರಾತ್ರಿಯಿಂದಲೇ ಲಾಕ್ ಡೌನ್ ➤ ಅಗತ್ಯ ವಸ್ತು ಖರೀದಿಗೆ ಮುಗಿಬಿದ್ದ ಜನ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜು.15: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಎರಡು ಸಾವಿರದ ಗಡಿ ದಾಟಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಹೀಗಾಗಿ ಜಿಲ್ಲೆಯಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ಲಾಕ್‌ಡೌನ್ ನಿರ್ಧಾರವನ್ನು ತೆಗೆದುಕೊಂಡಿದೆ. ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಬಳಿಕ ಜಿಲ್ಲೆಯ ಜನಪ್ರತಿನಿಧಿಗಳ, ಅಧಿಕಾರಿಗಳ ಅಭಿಪ್ರಾಯ ಪಡೆದು ಒಂದು ವಾರಗಳ ಲಾಕ್‌ಡೌನ್ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.ಇಂದು ರಾತ್ರಿ ಎಂಟು ಗಂಟೆಯಿಂದ ಮುಂದಿನ ಜುಲೈ 23ರ ಬೆಳಗ್ಗೆ 5 ಗಂಟೆವರೆಗೂ ಜಿಲ್ಲೆಯಲ್ಲಿ ಲಾಕ್‌ಡೌನ್ ಇರಲಿದೆ. ನಿನ್ನೆ

ದ. ಕನ್ನಡ ಜಿಲ್ಲೆಯಲ್ಲಿ ಇಂದು ರಾತ್ರಿಯಿಂದಲೇ ಲಾಕ್ ಡೌನ್ ➤ ಅಗತ್ಯ ವಸ್ತು ಖರೀದಿಗೆ ಮುಗಿಬಿದ್ದ ಜನ Read More »

ಕರಾವಳಿ

ಕೌಟುಂಬಿಕ ಸಮಸ್ಯೆ ಪರಿಹಾರ ಮತ್ತು ದಿನ ಭವಿಷ್ಯ

ಕೌಟುಂಬಿಕ ಸಮಸ್ಯೆಗೆ ಈ ತಂತ್ರ ರಾಮಬಾಣ ನಿಮ್ಮ ಹಿಂದಿನ ದೈವ ಹರಕೆಗಳನ್ನು ಜ್ಞಾಪಿಸಿಕೊಳ್ಳುವುದು ಸೂಕ್ತ. ಕುಲದೇವರನ್ನು ಆರಾಧನೆ ಮಾಡಿ ಹಾಗೂ ಅದರಂತೆ ನಡೆದುಕೊಳ್ಳಿ. ಮನೆಯ ದೇವರ ಕೋಣೆಯಲ್ಲಿ ತುಪ್ಪದ ದೀಪವನ್ನು ಬೆಳಗಿ ಇದರಲ್ಲಿ ಏಲಕ್ಕಿಯನ್ನು ಹಾಕಿ ಇದರಿಂದ ಋಣಾತ್ಮಕ ಸಮಸ್ಯೆಗಳು ದೂರವಾಗಿ ಜೀವನದ ಸಂತೋಷದ ಸವಿಗಳಿಗೆ ಪ್ರಾರಂಭವಾಗುತ್ತದೆ. ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ,

ಕೌಟುಂಬಿಕ ಸಮಸ್ಯೆ ಪರಿಹಾರ ಮತ್ತು ದಿನ ಭವಿಷ್ಯ Read More »

ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಬೆಳ್ಳಾರೆ: ಕೋಳಿ ಅಂಕಕ್ಕೆ ದಾಳಿ

(ನ್ಯೂಸ್ ಕಡಬ)newskadaba.com ಬೆಳ್ಳಾರೆ, ಜು.13, ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಕೋಳಿ ಅಂಕ ಹಾಗೂ ಜೂಜಾಟ ನಡೆಸುತ್ತಿರುವ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಬೆಳ್ಳಾರೆ ಪೊಲೀಸರು ಜೂಜಾಟದಲ್ಲಿ ನಿರತರಾಗಿದ್ದ ಆರು ಮಂದಿಯನ್ನು ಬಂಧಿಸಿ 13 ಕೋಳಿಗಳು ಹಾಗೂ ನಗದು ವಶಪಡಿಸಿಕೊಂಡ ಘಟನೆ ಕೊಡಿಯಾಲ ಗ್ರಾಮದ ಬೇರ್ಯ ಎಂಬಲ್ಲಿ ನಡೆದಿದೆ.   ಕೋಳಿ ಅಂಕ ನಿರತರಾಗಿದ್ದ ಹುಕ್ರಪ್ಪ ಶೆಟ್ಟಿ ಕೋಡಿಮಜಲು, ಪಾಂಡುರಂಗ ಕೆ. ಕೈಕುಡೆ, ಸುಂದರ ಎಂ. ಮರಿಕೈ, ವಿಶ್ವಾಸ್ ಕೆ. ಪಲ್ಲತ್ತಾರು, ಉಮೇಶ್ ಗೌಡ ಕೈಕುಡೆ, ಚೇತನ್

ಬೆಳ್ಳಾರೆ: ಕೋಳಿ ಅಂಕಕ್ಕೆ ದಾಳಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಪಡುಕೋಣೆ ಶ್ರೀ ರಾಮ ದೇವಸ್ಥಾನದಲ್ಲಿ ಕಳ್ಳತನ ➤ 1.5 ಲಕ್ಷ ಮೌಲ್ಯದ ಪ್ರಭಾವಳಿ ಕಳವು

(ನ್ಯೂಸ್ ಕಡಬ) newskadaba.com ಬೈಂದೂರು,ಜು.14:  ಪಡುಕೋಣೆಯ ಶ್ರೀರಾಮ ದೇವಸ್ಥಾನಕ್ಕೆ ಜು.13ರ ತಡರಾತ್ರಿ ನುಗ್ಗಿದ ಕಳ್ಳರು 1.5 ಲಕ್ಷ ಮೌಲ್ಯದ ಬೆಳ್ಳಿಯ ಪ್ರಭಾವಳಿಯನ್ನು ಕಳವು ಗೈದಿದ್ದಾರೆ.ದೇವಸ್ಥಾನದ ಮುಖ್ಯದ್ವಾರದ ಚಿಲಕ ಮುರಿದು ಒಳ ನುಗ್ಗಿದ ಕಳ್ಳರು ಈ ಕೃತ್ಯವೆಸಗಿದ್ದಾರೆ. ಮಂಗಳವಾರ ಬೆಳಿಗ್ಗೆ ಅರ್ಚಕರು ಪೂಜೆಗೆ ಬಂದಾಗ ಬಾಗಿಲು ಒಡೆದಿರುವುದು ಕಂಡು ಬಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬೈಂದೂರು ಸರ್ಕಲ್ ಇನ್ಸ್‍ಪೆಕ್ಟರ್ ಸುರೇಶ್, ಗಂಗೊಳ್ಳಿ ಠಾಣಾಧಿಕಾರಿ ಭೀಮಾಶಂಕರ್ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.ದೇವಸ್ಥಾನಗಳ ಭದ್ರತೆಗೆ ಸಂಬಂಧಿಸಿದಂತೆ ಕೆಲವು ದಿನಗಳ ಹಿಂದೆಯಷ್ಟೇ

ಪಡುಕೋಣೆ ಶ್ರೀ ರಾಮ ದೇವಸ್ಥಾನದಲ್ಲಿ ಕಳ್ಳತನ ➤ 1.5 ಲಕ್ಷ ಮೌಲ್ಯದ ಪ್ರಭಾವಳಿ ಕಳವು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ದ.ಕ, ಉಡುಪಿ ಜಂಟಿ ಅಗ್ರ ಸ್ಥಾನ

(ನ್ಯೂಸ್ ಕಡಬ) newskadaba.com.ಮಂಗಳೂರು,ಜು.14: ಈಗಾಗಲೇ ದ್ವಿತೀಯ ಪಿಯುಸಿ ಪಿ.ಯು.ಸಿ ಫಲಿತಾಂಶ ಹೊರಬಿದ್ದಿದ್ದು ಅಚ್ಚರಿಯ ಫಲಿತಾಂಶದೊಂದಿಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಜಂಟಿಯಾಗಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ 90.71 ಫಲಿತಾಂಶ ಪಡೆದುಕೊಂಡರೆ ನಂತರದ ಸ್ಥಾನ ಕೊಡಗಿನ ಪಾಲಾಗಿದೆ 81.53, ಉತ್ತರ ಕನ್ನಡ 80.97,ಚಿಕ್ಕಮಗಳೂರು 79.11 ನಂತರದ ಸ್ಥಾನ ಪಡೆದ ಜಿಲ್ಲೆಗಳಾಗಿವೆ. ಈ ಬಾರಿಯೂ ಪಿಯುಸಿ ಫಲಿತಾಂಶದಲ್ಲಿ ಬಾಲಕಿಯರದ್ದೇ ಮೇಲುಗೈ ಆಗಿದೆ.

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ದ.ಕ, ಉಡುಪಿ ಜಂಟಿ ಅಗ್ರ ಸ್ಥಾನ Read More »

ಕರಾವಳಿ

ಕೊರೊನಾ ಸೋಂಕನ್ನು ಹಿಮ್ಮೆಟ್ಟಿಸಲು ರಾಜ್ಯ ಸರಕಾರದಿಂದ ಕಟ್ಟುನಿಟ್ಟಿನ ಕ್ರಮ ಜಾರಿ

(ನ್ಯೂಸ್ ಕಡಬ) newskadaba.com.ಬೆಂಗಳೂರು,ಜು.14: ಕೊರೊನಾ ಸೋಂಕನ್ನು ಹಿಮ್ಮೆಟ್ಟಿಸುವ ನಿಟ್ಟಿನಲ್ಲಿ ಹೋರಾಟ ನಡೆಸುತ್ತಿರು ರಾಜ್ಯ ಸರಕಾರ ಇದರ ನಿಯಂತ್ರಣಕ್ಕೆ ಮತ್ತೊಂದು ಕಟ್ಟುನಿಟ್ಟಿನ ನಿಯಮ ಜಾರಿ ಮಾಡಿದೆ. ಆರೋಗ್ಯ ಇಲಾಖೆ ಹೊರಡಿಸಿರುವ ಆದೇಶದಂತೆ ಗಂಟಲು ದ್ರವ ಪರೀಕ್ಷೆಗೊಳಪಟ್ಟವರು ಪರೀಕ್ಷಾ ವರದಿ ಬರುವವರೆಗೂ ಐಸೋಲೇಷನ್, ಕ್ವಾರಂಟೈನ್ ಕಡ್ಡಾಯವಾಗಿ ಪಾಲಿಸಬೇಕು ಎಂದಿದೆ. ಕೊವೀಡ್ -೧೯ ಸೋಂಕಿನ ಪರೀಕ್ಷೆಗಾಗಿ ಗಂಟಲಿನ ದ್ರವ ಮಾದರಿ ಕೊಟ್ಟಿದ್ದರೆ ಅಂತಹ ವ್ಯಕ್ತಿಗಳು, ಪರೀಕ್ಷಾ ವರದಿ ಬರೋ ತನಕ ಐಸೋಲೇಷನ್‌ನಲ್ಲಿರುವುದು ಕಡ್ಡಾಯವಾಗಿದೆ. ಫಲಿತಾಂಶ ಬರುವ ಮುನ್ನ ಅಜಾಗರೂಕತೆಯಿಂದ ಇತರರೊಂದಿಗೆ ಬೆರೆಯುವುದು,

ಕೊರೊನಾ ಸೋಂಕನ್ನು ಹಿಮ್ಮೆಟ್ಟಿಸಲು ರಾಜ್ಯ ಸರಕಾರದಿಂದ ಕಟ್ಟುನಿಟ್ಟಿನ ಕ್ರಮ ಜಾರಿ Read More »

ಕರ್ನಾಟಕ

ಕೋವಿಡ್-19 ಇವತ್ತಿನಿಂದ ತೆಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಯಂ ಪ್ರೇರಿತ ಬಂದ್

(ನ್ಯೂಸ್ ಕಡಬ) newskadaba.com.ಉಪ್ಪಿನಂಗಡಿ,ಜು.14: ಕೋವಿಡ್-19 ದಿನನಿತ್ಯ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಬೆಳ್ತಂಗಡಿ ಶಾಸಕರ ಮತ್ತು ತೆಕ್ಕಾರು ಗ್ರಾಮ ಪಂಚಾಯತ್ ನಿರ್ದೇಶನದಂತೆ ತೆಕ್ಕಾರು ಗ್ರಾಮ ಪಂಚಾಯತ್ ಇವತ್ತಿನಿಂದ ಜುಲೈ 28 ರ ವರೆಗೆ ಸ್ವಯಂ ಪ್ರೇರಿತ ಬಂದ್ ನಡೆಸಲಾಗುವುದು ಎಂದು ತೆಕ್ಕಾರು ಗ್ರಾಮ ವರ್ತಕರ ಮುಖ್ಯಸ್ಥ ಎ.ಟಿ ಅಶ್ರಫ್ ತೆಕ್ಕಾರು ತಿಳಿಸಿದರು. ಇವತ್ತಿನಿಂದಲೇ ಮದ್ಯಾಹ್ನ 3 ರಿಂದ ಬೆಳಿಗ್ಗೆ 6ರ ವರೆಗೆ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಿತವಾಗಿ ಮುಚ್ಚಲಾಗುತ್ತದೆ. ತೆಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಈ ವೇಳೆಯಲ್ಲಿ ವಾಹನ

ಕೋವಿಡ್-19 ಇವತ್ತಿನಿಂದ ತೆಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಯಂ ಪ್ರೇರಿತ ಬಂದ್ Read More »

ಕರಾವಳಿ

ದಕ್ಷಿಣ ಕನ್ನಡದಲ್ಲಿ ಕೋವಿಡ್ -19 ಕಾಟ ➤ ಜಿಲ್ಲೆಯಲ್ಲಿ 50ಕ್ಕೇರಿದ ಮೃತರ ಸಂಖ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು,ಜು.14: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ 131 ಮಂದಿಗೆ ಕೋವಿಡ್ 19 ಸೋಂಕು ದೃಢಪಟ್ಟಿದೆ. ಇದೇ ವೇಳೆ ಜಿಲ್ಲೆಯಲ್ಲಿ ನಾಲ್ವರು ಕೋವಿಡ್ 19 ಸೋಂಕಿನಿಂದ ಮೃತಪಟ್ಟಿದ್ದಾರೆ. ಬಾಧಿತರ ಪೈಕಿ 16 ಮಂದಿಗೆ ಸೋಂಕಿತರ ಪ್ರಾಥಮಿಕ ಸಂಪರ್ಕದಿಂದ ಕೋವಿಡ್ 19 ತಗಲಿದೆ. ವಿದೇಶದಿಂದ ಆಗಮಿಸಿದ್ದ ನಾಲ್ವರಿಗೆ, ಇನ್‌ಫ್ಲೂಯೆನ್ಷಾ ಲೈಕ್‌ ಇಲ್‌ನೆಸ್‌ನಿಂದ ಬಳಲುತ್ತಿದ್ದ 63 ಮಂದಿಗೆ ಹಾಗೂ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ 10 ಮಂದಿಗೆ ಕೋವಿಡ್ 19 ಪಾಸಿಟಿವ್‌ ಬಂದಿದೆ. 38 ಮಂದಿಯ ಸಂಪರ್ಕವನ್ನು

ದಕ್ಷಿಣ ಕನ್ನಡದಲ್ಲಿ ಕೋವಿಡ್ -19 ಕಾಟ ➤ ಜಿಲ್ಲೆಯಲ್ಲಿ 50ಕ್ಕೇರಿದ ಮೃತರ ಸಂಖ್ಯೆ Read More »

ಕರಾವಳಿ, ಕರ್ನಾಟಕ

ಕರಾವಳಿ ಜನರಿಗೆ ಕೊರೊನಾ ವಿರುದ್ಧದ ಹೋರಾಟಕ್ಕೆ ಮತ್ತಷ್ಟು ಬಲ ತಂದುಕೊಟ್ಟ ಸಚಿವರು➤ ದ.ಕ ಎಲ್ಲಾ ಮೆಡಿಕಲ್ ಕಾಲೇಜುಗಳಲ್ಲಿ ಕೊರೊನಾಗೆ ಉಚಿತ ಚಿಕಿತ್ಸೆ

(ನ್ಯೂಸ್ ಕಡಬ) newskadaba.com.ಮಂಗಳೂರು,ಜು.14:  ಕೊರೊನಾ ರೋಗಿಗಳಿಗೆ ಆಸ್ಪತ್ರೆಗಳ ಸಮಸ್ಯೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ. ಇನ್ನು ಮುಂದೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಮೆಡಿಕಲ್ ಕಾಲೇಜುಗಳಲ್ಲಿ ಕೊರೊನಾ ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದು, ರೋಗಿಗಳು ತಮ್ಮ ಆಧಾರ್ ಕಾರ್ಡ್ ತೋರಿಸಿ ಚಿಕಿತ್ಸೆ ಪಡೆಯಬಹುದು ಎಂದು ಹೇಳಿದ್ದಾರೆ. ನಗರದ ಕೆಎಂಸಿ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆ ಮತ್ತು ಸಾಮರ್ಥ್ಯ ಪರಿಶೀಲಿಸಿದ ಬಳಿಕ

ಕರಾವಳಿ ಜನರಿಗೆ ಕೊರೊನಾ ವಿರುದ್ಧದ ಹೋರಾಟಕ್ಕೆ ಮತ್ತಷ್ಟು ಬಲ ತಂದುಕೊಟ್ಟ ಸಚಿವರು➤ ದ.ಕ ಎಲ್ಲಾ ಮೆಡಿಕಲ್ ಕಾಲೇಜುಗಳಲ್ಲಿ ಕೊರೊನಾಗೆ ಉಚಿತ ಚಿಕಿತ್ಸೆ Read More »

ಕರಾವಳಿ
Scroll to Top