ಜು.16 ರಿಂದ ಒಂದು ವಾರ ದ.ಕ ಜಿಲ್ಲೆ ಲಾಕ್ ಡೌನ್ ➤ ಜಿಲ್ಲಾ ಉಸ್ತುವಾರಿ ಸಚಿವರ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಮಂಗಳೂರು,ಜು.13: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಉಲ್ಬಣಿಸುತ್ತಿರುವ ಕೊರೊನಾ ಸೋಂಕು ಆತಂಕಕ್ಕೆ ಕಾರಣವಾಗಿರುವ ಹಿನ್ನಲೆಯಲ್ಲಿ ಜು.16 ರಿಂದ ಜಿಲ್ಲೆಯಲ್ಲಿ ಒಂದು ವಾರಗಳ ಕಾಲ ಲಾಕ್ ಡೌನ್ ಜಾರಿಗೆ ತರಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ.  ಸೋಮವಾರ 11  ಗಂಟೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರೊಂದಿಗೆ ವಿಡಿಯೋ ಸಂವಾದದಲ್ಲಿ ಭಾಗವಹಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್, ಹಾಗೂ […]

ಜು.16 ರಿಂದ ಒಂದು ವಾರ ದ.ಕ ಜಿಲ್ಲೆ ಲಾಕ್ ಡೌನ್ ➤ ಜಿಲ್ಲಾ ಉಸ್ತುವಾರಿ ಸಚಿವರ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ

ಪಾಣೆಮಂಗಳೂರು ಸೇತುವೆಯಿಂದ ಹಾರಿದ್ದ ಮಹಿಳೆಯ ಮೃತದೇಹ ಪತ್ತೆ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಜು. 13, ಶನಿವಾರದಂದು ಬೆಳಗ್ಗಿನಿಂದ ನಾಪತ್ತೆಯಾಗಿದ್ದ ಮೂಡ ಗ್ರಾಮದ ಮಹಿಳೆಯೋರ್ವರ ಮರಥದೇಹವು ತುಂಬೆ ಸಮೀಪದ ನೇತ್ರಾವತಿ ನದಿಯಲ್ಲಿ ಇಂದು ಪತ್ತೆಯಾಗಿದೆ. ಮೃತರನ್ನು ಗೋಪಿ ಪೂಜಾರಿ(49) ಎಂದು ಗುರುತಿಸಲಾಗಿದೆ. ಇವರು ಬಿ.ಸಿ.ರೋಡಿನ ಚಿಕ್ಕಯ್ಯಮಠ ಎಂಬಲ್ಲಿ ತನ್ನ ಸಹೋದರಿಯ ಮನೆಗೆ ಕಳೆದ ಕೆಲ ದಿನಗಳ ಹಿಂದೆ ಬಂದಿದ್ದು, ಜೂ.10 ರ ಶುಕ್ರವಾರದಂದು ರಾತ್ರಿ ಊಟ ಮಾಡಿ ಮಲಗಿದ್ದ ಇವರು ಶನಿವಾರ ಮುಂಜಾನೆ ಕಾಣೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಕುಟುಂಬಿಕರು ಹುಡುಕಾಟ ನಡೆಸಿದಾಗ ಪಾಣೆಮಂಗಳೂರು ನೂತನ ಸೇತುವೆ ಬಳಿ

ಪಾಣೆಮಂಗಳೂರು ಸೇತುವೆಯಿಂದ ಹಾರಿದ್ದ ಮಹಿಳೆಯ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ಬೀಡಿ ಕೊಡಲೆಂದು ತೆರಳಿದ್ದ ಮಹಿಳೆ ನಾಪತ್ತೆ ➤ ಪಕ್ಕದ ಮನೆಯ ಯುವಕನೊಂದಿಗೆ ಪರಾರಿ ಶಂಕೆ

(ನ್ಯೂಸ್ ಕಡಬ) newskadaba.com ಕಡಬ, ಜು.13. ಬೀಡಿ ಬ್ರ್ಯಾಂಚ್ ಗೆಂದು ತೆರಳಿದ ವಿವಾಹಿತ ಮಹಿಳೆಯೋರ್ವರು ಮನೆಗೆ ಹಿಂತಿರುಗದೆ ನಾಪತ್ತೆಯಾಗಿರುವ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾಗಿರುವ ಮಹಿಳೆಯನ್ನು ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ದಾಸರಗುಡ್ಡೆ ನಿವಾಸಿ ಬಾಬು ಎಂಬವರ ಪತ್ನಿ ಸುಮತಿ ಎಂದು ಗುರುತಿಸಲಾಗಿದೆ. ಶನಿವಾರದಂದು ಬೀಡಿ ಕೊಡಲೆಂದು ತೆರಳಿದ್ದ ಸುಮತಿ ನಾಪತ್ತೆಯಾಗಿದ್ದು, ರಾತ್ರಿಯಾದರೂ ಮನೆಗೆ ಹಿಂತಿರುಗದೆ ಇದ್ದುದರಿಂದ ಹುಡುಕಾಡಿದ ಆಕೆಯ ಮನೆಯವರು ಪಕ್ಕದ ಮನೆಯ ವಿನಯ್ ಎಂಬಾತನ ಜೊತೆ ತೆರಳಿರುವ ಶಂಕೆ ವ್ಯಕ್ತಪಡಿಸಿ ಕಡಬ

ಕಡಬ: ಬೀಡಿ ಕೊಡಲೆಂದು ತೆರಳಿದ್ದ ಮಹಿಳೆ ನಾಪತ್ತೆ ➤ ಪಕ್ಕದ ಮನೆಯ ಯುವಕನೊಂದಿಗೆ ಪರಾರಿ ಶಂಕೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ದಕ್ಷಿಣ ಕನ್ನಡ ಲಾಕ್ ಡೌನ್ ➤ ಜಿಲ್ಲಾಧಿಕಾರಿಗಳಿಗೆ ತಿರ್ಮಾನ ಬಿಟ್ಟ ಸಿ ಎಂ

(ನ್ಯೂಸ್ ಕಡಬ) newskadaba.com ಮಂಗಳೂರು,ಜು.13: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚಾಗುತ್ತಿರುವ ಕೊರೋನಾ ಆತಂಕದ ಹಿನ್ನೆಲೆಯಲ್ಲಿ ಒಂದು ವಾರಗಳ ಕಾಲ ಲಾಕ್ ಡೌನ್ ಮಾಡುವಂತೆ ಮನವಿ ಮಾಡಿದ್ದು, ಲಾಕ್ ಡೌನ್ ಮಾಡುವುದಕ್ಕೆ ಅವಕಾಶ ಕೊಡಿ ಎಂದು ಮುಖ್ಯಮಂತ್ರಿಗೆ ಇಂದು ನಳೀನ್ ಕುಮಾರ್ ಕಟೀಲ್ ರವರು ವೀಡಿಯೋ ಕಾನ್ಫರೆನ್ಸ್ ನಲ್ಲಿ ಮನವಿ ಮಾಡಿದ್ದಾರೆ.  ಜಿಲ್ಲಾಡಳಿತವೇ ಸೂಕ್ತ ನಿರ್ಧಾರ ತೆಗೆದುಕೊಳ್ಳಲು ಸಿ ಎಂ ಬಿ ಎಸ್ ಯಡಿಯೂರಪ್ಪರವರು ಸೂಚಿಸಿದ್ದರೆ. ವಿಡಿಯೋ ಕಾನ್ಫರೆನ್ಸ್ ನಲ್ಲಿ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್, ಜಿಲ್ಲಾ ಉಸ್ತುವಾರಿ ಸಚಿವ ಕೋಟ

ದಕ್ಷಿಣ ಕನ್ನಡ ಲಾಕ್ ಡೌನ್ ➤ ಜಿಲ್ಲಾಧಿಕಾರಿಗಳಿಗೆ ತಿರ್ಮಾನ ಬಿಟ್ಟ ಸಿ ಎಂ Read More »

ಕರಾವಳಿ, ಕರ್ನಾಟಕ

ಶಾಸಕ ಭರತ್ ಶೆಟ್ಟಿ ಕೊರೋನಾದಿಂದ ಗುಣಮುಖ

(ನ್ಯೂಸ್ ಕಡಬ)newskadaba.com ಮಂಗಳೂರು:‌ ಜು.13, ಕೊರೋನಾ ಸೋಂಕಿನಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ಗುಣಮುಖರಾಗಿದ್ದಾರೆ. ಜುಲೈ 2 ರಂದು ಶಾಸಕ ಭರತ್ ಶೆಟ್ಟಿ ಅವರಿಗೆ ಕೊರೋನಾ ದೃಢಪಟ್ಟಿದ್ದ ಅವರು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಅವರ ಗಂಟಲುದ್ರವ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದ್ದು ಅವರು ಗುಣಮುಖರಾಗಿದ್ದಾರೆ. ಈ ಬಗ್ಗೆ ಟ್ವಿಟರ್ ನಲ್ಲಿ ಅವರು ಪ್ರಕಟಿಸಿದ್ದಾರೆ.

ಶಾಸಕ ಭರತ್ ಶೆಟ್ಟಿ ಕೊರೋನಾದಿಂದ ಗುಣಮುಖ Read More »

ಕರಾವಳಿ, ಕರ್ನಾಟಕ

ಬಹರೈನ್, ಮಸ್ಕತ್‌ನಿಂದ ವಂದೇ ಭಾರತ್ ಯೋಜನೆಯಡಿ 334 ಮಂದಿ ಮಂಗಳೂರಿಗೆ

(ನ್ಯೂಸ್ ಕಡಬ) newskadaba.com.ಮಂಗಳೂರು,ಜು.13:  ಕೊರೋನ ಕಾರಣದಿಂದ ಬಹರೈನ್ ಹಾಗೂ ಮಸ್ಕತ್‌ನಲ್ಲಿದ್ದ ಸಿಲುಕಿದ್ದ ಒಟ್ಟು 334 ಅನಿವಾಸಿ ಕನ್ನಡಿಗರು ವಂದೇ ಭಾರತ್ ಯೋಜನೆಯಡಿ ರವಿವಾರ ಸಂಜೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಎಲ್ಲಾ ಪ್ರಯಾಣಿಕರಿಗೆ ಜಿಲ್ಲಾಡಳಿತದ ಸಾಂಸ್ಥಿಕ ಕ್ಬಾರಂಟೈನ್ ಮಾಡಲಾಗಿದೆ ಎಂದು ವಿಮಾನ ನಿಲ್ದಾಣದ ನೋಡಲ್ ಅಧಿಕಾರಿ ಯತೀಶ್ ಉಳ್ಳಾಲ್ ತಿಳಿಸಿದ್ದಾರೆ. ಸಂಜೆ 4:40ಕ್ಕೆ ಬಹರೈನ್‌ನಿಂದ 107 ಪುರುಷರು ಹಾಗೂ 49 ಮಹಿಳೆಯರು ಸೇರಿದಂತೆ 156 ಪ್ರಯಾಣಿಕರು ಆಗಮಿಸಿದ್ದಾರೆ. ಮಸ್ಕತ್‌ನಿಂದ ಸಂಜೆ 5:30ಕ್ಕೆ ಆಗಮಿಸಿದ ವಿಮಾನದಲ್ಲಿ 140 ಪುರುಷರು,

ಬಹರೈನ್, ಮಸ್ಕತ್‌ನಿಂದ ವಂದೇ ಭಾರತ್ ಯೋಜನೆಯಡಿ 334 ಮಂದಿ ಮಂಗಳೂರಿಗೆ Read More »

ಕರ್ನಾಟಕ

ಉಳ್ಳಾಲ: ಸಮುದ್ರದಲ್ಲಿ ತಾಂತ್ರಿಕ ದೋಷದಿಂದ ಸಿಲುಕಿದ ಮೀನುಗಾರಿಕಾ ಬೋಟ್

‌(ನ್ಯೂಸ್ ಕಡಬ) newskadaba.com ಉಳ್ಳಾಲ: ಜು.13, ಆಳ ಸಮುದ್ರದಲ್ಲಿ ಎರಡು ದಿನಗಳ ಹಿಂದೆ ಮೀನುಗಾರಿಕೆಗೆಂದು ತೆರಳಿದ್ದ ಬೋಟ್ ಹಿಂತಿರುಗುವ ಸಂದರ್ಭ ತಾಂತ್ರಿಕ ದೋಷ ಉಂಟಾದ ಘಟನೆ ಇಲ್ಲಿನ ಅಳಿವೆಬಾಗಿಲು ಸಮುದ್ರ ತೀರದಲ್ಲಿ ನಡೆದಿದೆ. ಆ ಬೋಟ್ ನ್ನು ಇನ್ನೊಂದು ಬೋಟ್ ಮೂಲಕ ಹೋಗಿ ರಿಪೇರಿ ಮಾಡಿ ದಡಕ್ಕೆ ತರಲಾಗಿದೆ. ಉಳ್ಳಾಲ ಕೋಡಿ ಮೂಲದವರಿಗೆ ಸೇರಿದ ಈ ಬೋಟ್ ಎರಡು ದಿನಗಳ ಹಿಂದೆ ಆಳಸಮುದ್ರ ಮೀನುಗಾರಿಕೆಗೆಂದು ತೆರಳಿದ್ದು, ವಾಪಾಸಾಗುವ ಸಂದರ್ಭದಲ್ಲಿ ಇಂಜಿನ್ ಸಮಸ್ಯೆ ಉಂಟಾಗಿ ಪೆಟ್ರೋಲ್ ಖಾಲಿಯಾಗಿ ತೊಂದರೆ

ಉಳ್ಳಾಲ: ಸಮುದ್ರದಲ್ಲಿ ತಾಂತ್ರಿಕ ದೋಷದಿಂದ ಸಿಲುಕಿದ ಮೀನುಗಾರಿಕಾ ಬೋಟ್ Read More »

ಕರಾವಳಿ, ಕರ್ನಾಟಕ

ದ.ಕ.ಲಾಕ್‌ಡೌನ್ ಸಿಎಂ ಜತೆ ಚರ್ಚಿಸಿ ತೀರ್ಮಾನ ➤ ಜಿಲ್ಲಾ ಉಸ್ತುವಾರಿ ಸಚಿವರಿಂದ ಸ್ಪಷ್ಟನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಲಾಕ್‌ಡೌನ್ ಜಾರಿ ಬಗ್ಗೆ ಅಂತಿಮ ನಿರ್ಧಾರ ಆಗಿಲ್ಲ. ಸೋಮವಾರ ಬೆಳಗ್ಗೆ 11 ಗಂಟೆಗೆ ಜಿಲ್ಲೆಯ ಪರಿಸ್ಥಿತಿ ಬಗ್ಗೆ ಮುಖ್ಯಮಂತ್ರಿ ಜತೆ, ತಾನು, ಸಂಸದರು, ಹಾಗೂ ಜಿಲ್ಲಾಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದು, ಬಳಿಕ ತೀರ್ಮಾನ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.   ಜಿಲ್ಲೆಯ ಕೋವಿಡ್ ಪರಿಸ್ಥಿತಿ ಅಧ್ಯಯನಕ್ಕೆ ಭಾನುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಜಿಲ್ಲಾಧಿಕಾರಿಗಳ ಜತೆ ಸಭೆ ನಡೆಸಲಾಗಿದೆ. ಲಾಕ್‌ಡೌನ್

ದ.ಕ.ಲಾಕ್‌ಡೌನ್ ಸಿಎಂ ಜತೆ ಚರ್ಚಿಸಿ ತೀರ್ಮಾನ ➤ ಜಿಲ್ಲಾ ಉಸ್ತುವಾರಿ ಸಚಿವರಿಂದ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ

ಉಪ್ಪಿನಂಗಡಿ: ಅನಧಿಕೃತ ಕಟ್ಟಡಗಳ ತೆರವು ➤ ಗ್ರಾಮ ಪಂಚಾಯತ್ ಕಾರ್ಯಾಚರಣೆ

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ: ಜು.13, ಇಲ್ಲಿ‌ನ ಗ್ರಾ.ಪಂ. ವ್ಯಾಪ್ತಿಯಲ್ಲಿನ ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆಯು ಸೋಮವಾರ ಬೆಳ್ಳಂಬೆಳಗ್ಗೆ ಆರಂಬಿಸಲಾಗಿದೆ. ಉಪ್ಪಿನಂಗಡಿ ಪೇಟೆ ಹಾಗೂ ರಾಷ್ಟ್ರೀಯ ಹೆದ್ದಾರಿ ಬದಿಗಳಲ್ಲಿ ಹಲವು ಅನಧಿಕೃತ ಅಂಗಡಿಗಳಿದ್ದು, ಇವುಗಳ ತೆರವಿಗೆ ಉಪ್ಪಿನಂಗಡಿ ಗ್ರಾಮ ಪಂಚಾಯತ್ ಮೂರು ದಿನಗಳ ಗಡುವು ನೀಡಿತ್ತು. ಜು.13ರಂದು ಬೆಳಗ್ಗೆ ಆರು ಗಂಟೆಯಿಂದ ಎರಡು ಜೆಸಿಬಿ ಮೂಲಕ ತೆರವು ಕಾರ್ಯಾಚರಣೆ ನಡೆಯಿತು. ಇಂದು ನಡೆದ ಈ ಕಾರ್ಯಾಚರಣೆಯಲ್ಲಿ ತಹಶೀಲ್ದಾರ್ ರಮೇಶ್ ಬಾಬು, ತಾ.ಪಂ. ಇ.ಒ ನವೀನ್ ಭಂಡಾರಿ, ಗ್ರಾ.ಪಂ. ವಿಲ್ಪ್ರೆಡ್

ಉಪ್ಪಿನಂಗಡಿ: ಅನಧಿಕೃತ ಕಟ್ಟಡಗಳ ತೆರವು ➤ ಗ್ರಾಮ ಪಂಚಾಯತ್ ಕಾರ್ಯಾಚರಣೆ Read More »

ಕರಾವಳಿ, ಕರ್ನಾಟಕ

ಕಡಬದ ಫೋಟೋಗ್ರಾಫರ್ ಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಕಡಬ ,ಜು.13: ಕಡಬದ ಫೋಟೋಗ್ರಾಫರ್ ಒಬ್ಬರಿಗೆ ಇಂದು ಕೊರೋನಾ ಪಾಸಿಟಿವ್ ಬಂದಿದ್ದು, ಕಡಬದಲ್ಲಿ ಇದೀಗಾ ಆಂತಕ ಮನೆ ಮಾಡಿದೆ.  ದಿನಕಳೆದಂತೆ ಒಂದೊಂದೆ ಕೊರೋನಾ ಪ್ರಕರಣಗಳು ಕಡಬ ವಲಯದಲ್ಲಿ ಸದ್ದು ಮಾಡುತ್ತಿದೆ. ಸಾರ್ವಜನಿಕರು ಮಾತ್ರ ಇನ್ನು ಎಚ್ಚೆತ್ತುಕೊಳ್ಳದೆ, ಸಾಮಾಜಿಕ ಅಂತರ ಮರೆತು, ಮಾಸ್ಕ್ ಹಾಕದೆ ಬೇಕಾಬಿಟ್ಟಿಯಾಗಿ ಕಡಬ ಪೇಟೆಯಲ್ಲಿ ತಿರುಗುತ್ತಿದ್ದಾರೆ. ಇನ್ನಾದರೂ ಎಚೆತ್ತುಕೊಳ್ಳದಿದ್ದರೆ, ಕೊರೋನಾ ನಿಮ್ಮ ಮನೆ ಬಾಗಿಲಿಗೆ ಬಂದರು ಅಚ್ಚರಿ ಪಡಬೇಕಾಗಿಲ್ಲ.

ಕಡಬದ ಫೋಟೋಗ್ರಾಫರ್ ಗೆ ಕೊರೋನಾ ಪಾಸಿಟಿವ್ Read More »

ಕರಾವಳಿ, ಕರ್ನಾಟಕ
Scroll to Top