ಬೆಂಗಳೂರು : ವಂದೇ ಭಾರತ್ ರೈಲಿಗೆ ಸಿಲುಕಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು

(ನ್ಯೂಸ್‌ ಕಡಬ) newskadaba.com,  ನ.24 ಬೆಂಗಳೂರು : ಇಲ್ಲಿನ ಚಿಕ್ಕಬಾಣಾವರ ರೈಲು ನಿಲ್ದಾಣದಲ್ಲಿ ದಾರುಣ ಘಟನೆಯೊಂದು ನಡೆದಿದೆ. ವಂದೇ ಭಾರತ್‌ ಹೈಸ್ಪೀಡ್‌ ರೈಲಿಗೆ ಸಿಲುಕಿ ಇಬ್ಬರು ನರ್ಸಿಂಗ್‌ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮೇಲ್ನೋಟಕ್ಕೆ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ……… ಕೇರಳ ಮೂಲದ ಸ್ಟೆರ್ಲಿನ್ ಎಲಿಜ ಶಾಜಿ (19), ಜಸ್ಟಿನ್ ಜೋಸೆಫ್ (20) ಮೃತ ವಿದ್ಯಾರ್ಥಿಗಳು. ಇಬ್ಬರು ವಿದ್ಯಾರ್ಥಿಗಳು ಸಪ್ತಗಿರಿ ಕಾಲೇಜಿನಲ್ಲಿ ಪ್ರಥಮ ವರ್ಷದ BSc ನರ್ಸಿಂಗ್‌ ವ್ಯಾಸಂಗ ಮಾಡ್ತಿದ್ದರು…………ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಇರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆದ್ರೆ ರೈಲ್ವೆ ಪೊಲೀಸರ […]

ಬೆಂಗಳೂರು : ವಂದೇ ಭಾರತ್ ರೈಲಿಗೆ ಸಿಲುಕಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಸರಗೋಡು : ರಸಮಂಜರಿ ಕಾರ್ಯಕ್ರಮದ ಸಮಯದಲ್ಲಿ ಕಾಲ್ತುಳಿತ – 15 ಮಂದಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ನ.24: ನಗರದ ಹೊರವಲಯದಲ್ಲಿ ನಡೆದ ರಸಮಂಜರಿ ಕಾರ್ಯಕ್ರಮದ ವೇಳೆ ನಿರೀಕ್ಷೆಗೂ ಮೀರಿ ಸೇರಿದ್ದ ಜನಸಂದಣಿಯಿಂದ ನೂಕುನುಗ್ಗಲು ಸಂಭವಿಸಿ, ಕಾಲ್ತುಳಿತದಿಂದ ಕನಿಷ್ಠ 15 ಮಂದಿ ಗಾಯಗೊಂಡಿರುವ ಘಟನೆ ರವಿವಾರ ರಾತ್ರಿ ನಡೆದಿದೆ. ಗಾಯಗೊಂಡವರಲ್ಲಿ ಮಹಿಳೆಯರು, ಮಕ್ಕಳು ಸೇರಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಕಾಸರಗೋಡು ನಗರದ ಹಲವು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಸರಗೋಡು ಫ್ಲೀ ಯುವಜನ ಸಂಘಟನೆ ವತಿಯಿಂದ ನುಳ್ಳಿಪ್ಪಾಡಿ ಪ್ರದೇಶದಲ್ಲಿ ಆಯೋಜಿಸಿದ್ದ ಸಾಮಾಜಿಕ ಮಾಧ್ಯಮ ಹೆಸರಾಂತ, ಗಾಯಕ ಹನಾನ್ ಷಾ ಅವರ ಕಾರ್ಯಕ್ರಮಕ್ಕೆ ಸಾವಿರಾರು

ಕಾಸರಗೋಡು : ರಸಮಂಜರಿ ಕಾರ್ಯಕ್ರಮದ ಸಮಯದಲ್ಲಿ ಕಾಲ್ತುಳಿತ – 15 ಮಂದಿಗೆ ಗಾಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿಗೆ ನ.28ರಂದು ಮೋದಿ ಭೇಟಿ- ಪ್ರಧಾನಿ ಕಚೇರಿ ದೃಢಪಡಿಸಿದ್ದು, ವೇಳಾಪಟ್ಟಿ ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ನ.22:   ಪ್ರಧಾನಿ ನರೇಂದ್ರ ಮೋದಿ ಅವರು ಉಡುಪಿಗೆ ಭೇಟಿ ನೀಡುತ್ತಿರುವುದನ್ನು ಪ್ರಧಾನ ಮಂತ್ರಿಗಳ ಕಚೇರಿ (ಪಿಎಂಒ) ದೃಢಪಡಿಸಿದೆ. ನವೆಂಬರ್ 28 ರಂದು ಪ್ರಧಾನಿಯವರ ಉಡುಪಿ ಭೇಟಿಗೆ ಸಂಬಂಧಿಸಿದಂತೆ ಪ್ರಧಾನಿ ಕಚೇರಿಯು ರಾಜ್ಯ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದೆ. ವೇಳಾಪಟ್ಟಿಯ ಪ್ರಕಾರ, ಪ್ರಧಾನಿ ಮೋದಿ ಬೆಳಿಗ್ಗೆ 11.05 ಕ್ಕೆ ದೆಹಲಿಯಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ತಕ್ಷಣ 11.10 ಕ್ಕೆ ಹೆಲಿಕಾಪ್ಟರ್ ಮೂಲಕ ಉಡುಪಿಗೆ ತೆರಳಲಿದ್ದಾರೆ. ಅವರು ಬೆಳಿಗ್ಗೆ 11.35 ಕ್ಕೆ

ಉಡುಪಿಗೆ ನ.28ರಂದು ಮೋದಿ ಭೇಟಿ- ಪ್ರಧಾನಿ ಕಚೇರಿ ದೃಢಪಡಿಸಿದ್ದು, ವೇಳಾಪಟ್ಟಿ ಬಿಡುಗಡೆ Read More »

ಕರಾವಳಿ

ಮೇಡ್ ಇನ್ ಚೈನಾ, ಟರ್ಕಿ ಶಸ್ತ್ರಾಸ್ತ್ರ ಭಾರತಕ್ಕೆ ಪೂರೈಕೆ- ನಾಲ್ವರ ಬಂಧನ

(ನ್ಯೂಸ್‌ ಕಡಬ) newskadaba.com,  ನ.22:   ಚೀನಾ ಮತ್ತು ಟರ್ಕಿಯಲ್ಲಿ ತಯಾರಾದ ಶಸ್ತ್ರಾಸ್ತ್ರಗಳನ್ನು ಭಾರತಕ್ಕೆ ಪೂರೈಸುತ್ತಿದ್ದ ಪ್ರಮುಖ ಅಂತರರಾಷ್ಟ್ರೀಯ ಅಕ್ರಮ ಶಸ್ತ್ರಾಸ್ತ್ರ ಕಳ್ಳಸಾಗಣೆ ಜಾಲವನ್ನು ದೆಹಲಿಯ ಪೊಲೀಸರು ಭೇದಿಸಿ, ನಾಲ್ವರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್‌ಐ) ಗೆ ಸಂಬಂಧಿಸಿದ ಸಿಂಡಿಕೇಟ್, ಚೀನಾ ಮತ್ತು ಟರ್ಕಿಯಲ್ಲಿ ತಯಾರಾದ ಉನ್ನತ ದರ್ಜೆಯ ಪಿಸ್ತೂಲ್‌ಗಳನ್ನು ಪಾಕಿಸ್ತಾನದ ಮೂಲಕ ಭಾರತಕ್ಕೆ ಪೂರೈಸುತ್ತಿತ್ತು. ಪೊಲೀಸರು ಈ ಅಕ್ರಮ ಶಸ್ತ್ರಾಸ್ತ್ರ ಗ್ಯಾಂಗ್‌ನ ನಾಲ್ವರು ಪ್ರಮುಖ ಸದಸ್ಯರನ್ನು ಬಂಧಿಸಿ 10 ದುಬಾರಿ ವಿದೇಶಿ

ಮೇಡ್ ಇನ್ ಚೈನಾ, ಟರ್ಕಿ ಶಸ್ತ್ರಾಸ್ತ್ರ ಭಾರತಕ್ಕೆ ಪೂರೈಕೆ- ನಾಲ್ವರ ಬಂಧನ Read More »

ಅಂತರ್ರಾಷ್ಟ್ರೀಯ ನ್ಯೂಸ್

ಮುಂಬೈಯಲ್ಲಿ ರಸ್ತೆ ಅಪಘಾತ-ಕಲ್ಮಾಡಿಯ ಯುವಕ ಮೃತ್ಯು

(ನ್ಯೂಸ್‌ ಕಡಬ) newskadaba.com,  ನ.22:   ಮುಂಬೈಯಲ್ಲಿ ಕಲ್ಮಾಡಿಯ  ಯುವಕನೊಬ್ಬ ಶುಕ್ರವಾರ ತಡರಾತ್ರಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮೃತರನ್ನು ಉಡುಪಿಯ ಕಲ್ಮಾಡಿಯ ಮೂಲದ ಇನಿಶ್ ಲಸ್ರಾದೊ ಎಂದು ಗುರುತಿಸಲಾಗಿದೆ. ಅವರು ಮೋಟಾರ್ ಸೈಕಲ್ ಅಪಘಾತಕ್ಕೆ ಸಿಲುಕಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಇನಿಶ್ ಕಳೆದ 3 ವರ್ಷಗಳಿಂದ ಥಾಣೆಯಲ್ಲಿರುವ ಬಹುರಾಷ್ಟೀಯ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಅವರು ಕಲ್ಮಾಡಿ ಚರ್ಚ್ ನ ಐಸಿವೈಎಂ ಘಟಕದಲ್ಲಿ ಮತ್ತು ವಿವಿಧ ಚರ್ಚ್ ಚಟುವಟಿಕೆಗಳಲ್ಲಿ ಬಹಳ  ಸಕ್ರಿಯರಾಗಿದ್ದರು.

ಮುಂಬೈಯಲ್ಲಿ ರಸ್ತೆ ಅಪಘಾತ-ಕಲ್ಮಾಡಿಯ ಯುವಕ ಮೃತ್ಯು Read More »

ಬ್ರೇಕಿಂಗ್ ನ್ಯೂಸ್

ಶಿಕ್ಷಕರಿಂದ ಕಿರುಕುಳ ಆರೋಪ: ಶಾಲಾ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com,  ನ.22:   ಮುಂಬೈ: ದೇಶದಲ್ಲಿ ಶಾಲಾ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇದೀಗ ಮಹಾರಾಷ್ಟ್ರದ ಜಲ್ನಾದಲ್ಲಿ ಶುಕ್ರವಾರ ಬೆಳಿಗ್ಗೆ 13 ವರ್ಷದ 8 ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಶಾಲಾ ಕಟ್ಟಡದ ಮೂರನೇ ಮಹಡಿಯಿಂದ ಹಾರಿ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ. ಸದ್ಯ ಆಕೆಯ ಸಾವಿಗೆ ನಿಖರ ಕಾರಣವೇನೆಂದು ತಿಳಿದು ಬಂದಿಲ್ಲ. ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದರು. ಬಾಲಕಿಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃತಪಾಟ್ಟಿದ್ದಾಳೆ ಎಂದು ತಿಳಿದು

ಶಿಕ್ಷಕರಿಂದ ಕಿರುಕುಳ ಆರೋಪ: ಶಾಲಾ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ Read More »

ಬ್ರೇಕಿಂಗ್ ನ್ಯೂಸ್

ಕಾರ್ಮಿಕರಿಗೆ ಕನಿಷ್ಠ ವೇತನ, ರಜೆ, ಪಿಎಫ್-ಇಎಸ್ಐ ಕಡ್ಡಾಯದ ಜೊತೆಗೆ 4 ಹೊಸ ಕಾರ್ಮಿಕ ಸಂಹಿತೆ ಜಾರಿ

(ನ್ಯೂಸ್‌ ಕಡಬ) newskadaba.com,  ನ.22:   ಕಾರ್ಮಿಕರಿಗೆ ಸಿಹಿ ಸುದ್ದಿಯನ್ನು ಕೇಂದ್ರ ಸರಕಾರ ನೀಡಿದ್ದು, ಕಾರ್ಮಿಕ ಕಾನೂನುಗಳಲ್ಲಿ ಕೆಲವು ಮಹತ್ವದ ಬದಲಾವಣೆಗಳನ್ನು ತಂದಿದೆ. ಎಲ್ಲಉದ್ಯೋಗದಾತರು ಕಡ್ಡಾಯವಾಗಿ ನೇಮಕಾತಿ ಪತ್ರಗಳನ್ನು ನೀಡಬೇಕು. ಪ್ರತಿ ತಿಂಗಳು 7ನೇ ತಾರೀಖಿನ ಒಳಗೆ ವೇತನ ಪಾವತಿಸಬೇಕು ಎಂಬ ಸೂಚನೆಗಳನ್ನು ಸೇರಿದಂತೆ, ವಿವಿಧ ವಲಯಗಳಿಗೆ ಸಂಬಂಧಿಸಿದ 29 ಕಾರ್ಮಿಕ ಕಾನೂನುಗಳನ್ನು ಒಗ್ಗೂಡಿಸಿ ರೂಪಿಸಿರುವ ನಾಲ್ಕು ಕಾರ್ಮಿಕ ಸಂಹಿತೆಗಳ ಜಾರಿಗೆ ಶುಕ್ರವಾರ ಅಧಿಸೂಚನೆ ಹೊರಡಿಸಿದೆ. ವೇತನ ಸಂಹಿತೆ (2020), ಕೈಗಾರಿಕೆ ಸಂಬಂಧಗಳ ಸಂಹಿತೆ (2019), ಸಾಮಾಜಿಕ

ಕಾರ್ಮಿಕರಿಗೆ ಕನಿಷ್ಠ ವೇತನ, ರಜೆ, ಪಿಎಫ್-ಇಎಸ್ಐ ಕಡ್ಡಾಯದ ಜೊತೆಗೆ 4 ಹೊಸ ಕಾರ್ಮಿಕ ಸಂಹಿತೆ ಜಾರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಅಥೆನಾ ಆಸ್ಪತ್ರೆಯ ಛೇರ್ಮನ್, ವ್ಯವಸ್ಥಾಪಕ ನಿರ್ದೇಶಕ ಆರ್.ಎಸ್. ಶೆಟ್ಟಿಯಾನ್ ನಿಧನ

(ನ್ಯೂಸ್‌ ಕಡಬ) newskadaba.com,  ನ.22:   ಅಥೆನಾ ಆಸ್ಪತ್ರೆ ಮತ್ತು ಅಥೆನಾ ಸಮೂಹ ಸಂಸ್ಥೆಗಳ ಛೇರ್ಮನ್ ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ಆರ್.ಎಸ್. ಶೆಟ್ಟಿಯಾನ್(65) ಅವರು ನವೆಂಬರ್ 21 ರಂದು ನಿಧನರಾಗಿದ್ದಾರೆ. ಶೆಟ್ಟಿಯಾನ್ ಅವರು ಪ್ರೈವೇಟ್ ಮತ್ತು ನಾನ್ ಪ್ರೋಫಿಟ್ ಕ್ಷೇತ್ರಗಳಲ್ಲಿ ಅನೇಕ ನಾಯಕತ್ವದ ಹುದ್ದೆಗಳನ್ನು ನಿರ್ವಹಿಸಿದ್ದರು. ಅವರು ವೈ.ಎಂ.ಸಿ.ಎ. ಆಫ್ ಇಂಡಿಯಾದ ರಾಷ್ಟ್ರೀಯ ಖಜಾಂಚಿ ಮತ್ತು ಟ್ರಸ್ಟಿ ಆಗಿ ಆಯ್ಕೆಯಾಗಿದ್ದರು. 158 ವರ್ಷಗಳ ಭಾರತೀಯ ವೈ.ಎಂ.ಸಿ.ಎ. ಚಳವಳಿಯ ಇತಿಹಾಸದಲ್ಲಿ, ಭಾರತೀಯ ವೈ.ಎಂ.ಸಿ.ಎ.ದ ರಾಷ್ಟ್ರೀಯ ಖಜಾಂಚಿ ಮತ್ತು ವೈ.ಎಂ.ಸಿ.ಎ.

ಮಂಗಳೂರು: ಅಥೆನಾ ಆಸ್ಪತ್ರೆಯ ಛೇರ್ಮನ್, ವ್ಯವಸ್ಥಾಪಕ ನಿರ್ದೇಶಕ ಆರ್.ಎಸ್. ಶೆಟ್ಟಿಯಾನ್ ನಿಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಕ್ರಿಕೆಟ್ ವಾಪಸ್ ತರುತ್ತೇವೆ ; ಬ್ರಿಜೇಶ್ ಪಟೇಲ್

(ನ್ಯೂಸ್‌ ಕಡಬ) newskadaba.com,  ನ.22:   ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌‍ಸಿಎ) ಚುನಾವಣೆಗೆ ಸಂಬಂಧಿಸಿದಂತೆ ಮಾಜಿ ವೇಗಿ ವೆಂಕಟೇಶ್‌ ಪ್ರಸಾದ್‌ ನೇತೃತ್ವದ ಗೇಮ್‌ ಚೇಂಜರ್ಸ್‌ ತಂಡದ ಆರೋಪಗಳಿಗೆ ಎದುರಾಳಿ ಬಣವನ್ನು ಮುನ್ನಡೆಸುತ್ತಿರುವ ಮಾಜಿ ಕ್ರಿಕೆಟಿಗ, ಹಿರಿಯ ಆಡಳಿತಾಧಿಕಾರಿ ಬ್ರಿಜೇಶ್‌ ಪಟೇಲ್‌ ತಿರುಗೇಟು ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ರಿಜೇಶ್‌ ತಮ್ಮ ತಂಡದಿಂದ ಸ್ಪರ್ಧೆ ಮಾಡುತ್ತಿರುವವರನ್ನು ಪರಿಚಯಿಸಿದ್ದಲ್ಲದೇ, ಎದುರಾಳಿ ಬಣ ಎತ್ತಿರುವ ಪ್ರಶ್ನೆಗಳಿಗೂ ಉತ್ತರಿಸಿದರು. ಕೆಲ ದಿನಗಳ ಹಿಂದೆ ಕ್ರಿಕೆಟಿಗರಾದ ವೆಂಕಟೇಶ್‌ ಪ್ರಸಾದ್‌ ಅವರು, ಬ್ರಿಜೇಶ್‌ ಪಟೇಲ್‌

ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಕ್ರಿಕೆಟ್ ವಾಪಸ್ ತರುತ್ತೇವೆ ; ಬ್ರಿಜೇಶ್ ಪಟೇಲ್ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಇಂದಿನ ಚಿನ್ನದ ದರ

(ನ್ಯೂಸ್‌ ಕಡಬ) newskadaba.com,  ನ.22:   ಚಿನ್ನದ ದರದಲ್ಲಿ ಇಂದು ಮತ್ತೆ ಭಾರೀ ಏರಿಕೆ ಕಂಡು ಬಂದಿದೆ. ಇಂದು 22ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 170 ರೂ. ಏರಿಕೆ ಕಂಡು ಬಂದಿದ್ದು, 11,535 ರೂ. ಗೆ ತಲುಪಿದೆ. 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ 186 ರೂ. ಏರಿಕೆಯಾಗಿ 12,584 ರೂ ಆಗಿದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 92,280 ರೂ. ಆದರೆ 10 ಗ್ರಾಂಗೆ ನೀವು, 1,15,350 ಹಾಗೂ 100 ಗ್ರಾಂಗೆ

ಇಂದಿನ ಚಿನ್ನದ ದರ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top