ಉಳ್ಳಾಲ: ಒಂದೇ ಕುಟುಂಬದ 17 ಮಂದಿಗೆ ಕೋವಿಡ್- 19 ಪಾಸಿಟಿವ್

(ನ್ಯೂಸ್ ಕಡಬ)newskadaba.com ಉಳ್ಳಾಲ, ಜೂ.27, ಉಳ್ಳಾಲದ ಪ್ರಥಮ ಸೋಂಕಿತೆಯ ಮನೆಯಲ್ಲಿದ್ದ ಎಲ್ಲಾ 16 ಮಂದಿ ಸದಸ್ಯರಿಗೆ ಸೋಂಕು ತಗುಲಿದ್ದು, ಮಹಿಳೆ ಸೇರಿದಂತೆ ಒಂದೇ ಮನೆಯ 17 ಸದಸ್ಯರಿಗೆ ಸೋಂಕು ದೃಢಪಟ್ಟಿರುವ ಬಗ್ಗೆ ವರದಿಯಾಗಿದೆ. ಉಳ್ಳಾಲ ಪ್ರದೇಶದಲ್ಲಿ ಪೊಲೀಸರು ಸೇರಿದಂತೆ 22 ಮಂದಿಗೆ ಸೋಂಕು ಶನಿವಾರ ದೃಢವಾಗಿದೆ. ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಉಳ್ಳಾಲ, ದೇರಳಕಟ್ಟೆ, ಅಸೈಗೋಳಿ ಸೇರಿ ಸೋಂಕಿತರ ಸಂಖ್ಯೆ 29ಕ್ಕೇರಿದ್ದು ಒರ್ವ ಮಹಿಳೆ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಇದೆ. ಆರಂಭದಲ್ಲಿ ಉಳ್ಳಾಲ ಆಝಾದ್ ನಗರದ 57ರ

ಉಳ್ಳಾಲ: ಒಂದೇ ಕುಟುಂಬದ 17 ಮಂದಿಗೆ ಕೋವಿಡ್- 19 ಪಾಸಿಟಿವ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಪತ್ರಕರ್ತನಿಗೂ ವಕ್ಕರಿಸಿದ ಕೊರೋನಾ ➤ ಪ್ರೆಸ್ ಕ್ಲಬ್ ಸೀಲ್ ಡೌನ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.27, ರಾಷ್ಟ್ರೀಯ ಸುದ್ದಿವಾಹಿನಿಯ ವರದಿಗಾರರೊಬ್ಬರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರಿಂದಾಗಿ ಅವರು ಭೇಟಿ ನೀಡಿದ್ದ ಪ್ರೆಸ್ ಕ್ಲಬ್ ಗೆ ಸೀಲ್ ಡೌನ್ ಮಾಡಲಾಗಿದೆ ಎಂದು ವರದಿ ತಿಳಿಸಿದೆ. ನೃತತುಂಗ ರಸ್ತೆಯ ರಾಜ್ಯ ಪೊಲೀಸ್ ಪ್ರಧಾನಿ ಕಾರ್ಯದರ್ಶಿ ಕಚೇರಿಯಲ್ಲಿ ನಡೆದಿದ್ದ ಡಿಜಿ ಐಜಿಪಿ ಸಭೆಯಲ್ಲಿ ಪಾಲ್ಗೊಂಡಿದ್ದ ಕೊರೋನಾ ಸೋಂಕಿತ ಪತ್ರಕರ್ತ ಬಳಿಕ ಪ್ರೆಸ್ ಕ್ಲಬ್ ಗೆ ಹೋಗಿದ್ದ ಅವರು ಸುಮಾರು 1 ಗಂಟೆಗಳ ಕಾಲ ಅಲ್ಲಿಯೇ ಇದ್ದರು ಎಂದು ತಿಳಿದು ಬಂದಿದೆ.

ಪತ್ರಕರ್ತನಿಗೂ ವಕ್ಕರಿಸಿದ ಕೊರೋನಾ ➤ ಪ್ರೆಸ್ ಕ್ಲಬ್ ಸೀಲ್ ಡೌನ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

?? Breaking News ➤ ಪುತ್ತೂರಿನಲ್ಲಿ ಒಂದೇ ದಿನ ನಾಲ್ವರಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ)newskadaba.com ಪುತ್ತೂರು, ಜೂ.27, ಇಲ್ಲಿನ ಸರಕಾರಿ ಆಸ್ಪತ್ರೆಯ ಗುತ್ತಿಗೆ ನೌಕರೆ ಹಾಗೂ ಎರಡು ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗಿದ್ದ ಇಬ್ಬರ ಸಹಿತ ತಾಲೂಕಿನ ನಾಲ್ವರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ‘ಡಿ’ ಗ್ರೂಪ್ ನೌಕರರಾಗಿದ್ದು, ಅಡುಗೆ ಕೆಲಸ ನಿರ್ವಹಿಸುತ್ತಿದ್ದ ಮಹಿಳೆ ಹಾಗೂ ಎರಡು ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗಿದ್ದ ಬಜತ್ತೂರಿನ 80ರ ವೃದ್ಧೆ, ಬಪ್ಪಳಿಗೆಯ 20 ವರ್ಷದ ಯುವಕ ಮತ್ತು 32 ವರ್ಷ ಪ್ರಾಯದ ಕೂರ್ನಡ್ಕದ ಮಹಿಳೆಯೊಬ್ಬರಲ್ಲಿ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ.

?? Breaking News ➤ ಪುತ್ತೂರಿನಲ್ಲಿ ಒಂದೇ ದಿನ ನಾಲ್ವರಿಗೆ ಕೊರೋನಾ ಪಾಸಿಟಿವ್ Read More »

ಕರಾವಳಿ

ಕಾರ್ಯನಿರತ ಪತ್ರಕರ್ತರನ್ನು ಕೋವಿಡ್ ವಿಮೆ ವ್ಯಾಪ್ತಿಗೆ ಒಳಪಡಿಸಬೇಕು ➤ H.D. ಕುಮಾರಸ್ವಾಮಿ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜೂ.27:  ಪತ್ರಕರ್ತರನ್ನು ಕೇವಲ ಹೆಸರಿಗೆ ಮಾತ್ರ ಕೊರೋನಾ ವಾರಿಯರ್ಸ್ ಎಂದು ಘೋಷಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ದೃಶ್ಯ ಮತ್ತು ಮುದ್ರಣ ಮಾಧ್ಯಮದ ಕಾರ್ಯನಿರತ ಪತ್ರಕರ್ತರನ್ನು ಕೋವಿಡ್ ವಿಮೆ ವ್ಯಾಪ್ತಿಗೆ ಒಳಪಡಿಸಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೊರೋನಾ ಸೋಂಕು ತಗುಲಿದ ಪತ್ರಕರ್ತರಿಗೆ ಖಾಸಗಿ ಆಸ್ಪತ್ರೆಗಳಲ್ಲಿಯೂ ಉಚಿತವಾಗಿ ಚಿಕಿತ್ಸೆ ಒದಗಿಸಲು ರಾಜ್ಯಸರ್ಕಾರ ತಕ್ಷಣವೇ ನಿರ್ಧಾರ ಕೈಗೊಳ್ಳಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.    

ಕಾರ್ಯನಿರತ ಪತ್ರಕರ್ತರನ್ನು ಕೋವಿಡ್ ವಿಮೆ ವ್ಯಾಪ್ತಿಗೆ ಒಳಪಡಿಸಬೇಕು ➤ H.D. ಕುಮಾರಸ್ವಾಮಿ Read More »

ಕರಾವಳಿ, ಕರ್ನಾಟಕ

SSLC ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗೆ ಕೊರೊನಾ ಪಾಸಿಟಿವ್‌

(ನ್ಯೂಸ್ ಕಡಬ) newskadaba.com ಹಾಸನ,ಜೂ.27:  ಹಾಸನದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗೆ ಕೊರೊನಾ ಪಾಸಿಟಿವ್‌ ಆಗಿದೆ. ಅರಕಲಗೂಡು ತಾಲ್ಲೂಕಿನ ಮಲ್ಲಿಪಟ್ಟಣ ಗ್ರಾಮದ ಪರೀಕ್ಷಾ ಕೇಂದ್ರದಲ್ಲಿ ೧೬ ವರ್ಷ ಪ್ರಾಯದ ವಿದ್ಯಾರ್ಥಿ ಪರೀಕ್ಷೆ ಬರೆದಿದ್ದು ಎರಡು ದಿನಗಳ ಹಿಂದೆ ವಿದ್ಯಾರ್ಥಿಯ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು ಶನಿವಾರ ಬಂದ ವರದಿಯಲ್ಲಿ ಕೊರೊನಾ ಇರುವುದು ದೃಢಪಟ್ಟಿದೆ ಎಂದು ವರದಿ ತಿಳಿಸಿದೆ.  

SSLC ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗೆ ಕೊರೊನಾ ಪಾಸಿಟಿವ್‌ Read More »

ಕರಾವಳಿ, ಕರ್ನಾಟಕ

ನಾಡಹಬ್ಬ ‘ದಸರಾ’ ಆಚರಣೆ ಮೇಲೂ ಕೊರೋನಾ ಕರಿ ನೆರಳು!

(ನ್ಯೂಸ್ ಕಡಬ) newskadaba.com ಬೆಂಗಳೂರು,ಜೂ.27:  ಪ್ರಸಕ್ತ ಸಾಲಿನ ನಾಡಹಬ್ಬ ದಸರಾ ಮೇಲೂ ಕೊರೋನಾ ವೈರಸ್ ಕರಿ ಛಾಯೆ ಬಿದ್ದಿದ್ದು, ಈ ಬಾರಿ ಮೈಸೂರು ದಸರಾ ಒಡಿಶಾದಲ್ಲಿ ನಡೆದ ಪೂರಿ ಜಗನ್ನಾಥ ರಥಯಾತ್ರೆಯಂತೆ ನಡೆಯುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಪ್ರಸ್ತುತ ಇರುವ ಪರಿಸ್ಥಿತಿಯಲ್ಲಿ ಹಬ್ಬ ಹಾಗೂ ಸಂಪ್ರದಾಯಗಳನ್ನು ಮುಂದುವರೆಸಲು ಯಾವೆಲ್ಲಾ ಕ್ರಮಗಳನ್ನು ಕೈಗೊಳ್ಳಬಹುದು ಎಂಬುದರ ಕುರಿತು ಚರ್ಚೆ ನಡೆಸುತ್ತಿದ್ದೇವೆ. ರಾಜ್ಯದಲ್ಲಿ ಸೋಂಕು ಪೀಡಿತರ ಸಂಕ್ಯೆ ಹೆಚ್ಚಾಗುತ್ತಿದ್ದು, ಇಂತಹ ಸಂದರ್ಭದಲ್ಲಿ ದಸರಾ ಹಬ್ಬವನ್ನು ಅದ್ದೂರಿಯಾಗಿ ಆಚರಿಸುವುವುದು ಕಷ್ಟಸಾಧ್ಯ. ಹೀಗಾಗಿ ಪೂರಿ

ನಾಡಹಬ್ಬ ‘ದಸರಾ’ ಆಚರಣೆ ಮೇಲೂ ಕೊರೋನಾ ಕರಿ ನೆರಳು! Read More »

ಕರಾವಳಿ, ಕರ್ನಾಟಕ

ಮಂಗಳೂರು: ಚಿನ್ನಾಭರಣ ಮಳಿಗೆ ಸ್ವಯಂಪ್ರೇರಿತ ಬಂದ್

(ನ್ಯೂಸ್ ಕಡಬ)newskadaba.com ಮಂಗಳೂರು, ಜೂ.27, ನಗರದ ಫಲ್ನೀರ್ ನಲ್ಲಿರುವ ಗೋಲ್ಡ್ ಮಳಿಗೆಯೊಂದು ಮುಂಜಾಗೃತಾ ಕ್ರಮವಾಗಿ ಸ್ವಯಂ ಸೀಲ್ ಡೌನ್ ಮಾಡಲಾಗಿದೆ.   ಜ್ಯುವೆಲ್ಲರಿ ಅಂಗಡಿಯ ಸಿಬ್ಬಂದಿಯಲ್ಲಿ ಕೊರೋನಾ ಶಂಕೆಯ ಹಿನ್ನೆಲೆ ಸ್ವಯಂ ಸೀಲ್ ಡೌನ್ ಮಾಡಲಾಗಿದೆ. ಅವರ ಗಂಟಲ ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಿಕೊಟ್ಟಿದ್ದು, ಅಧಿಕೃತ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ಮಂಗಳೂರು: ಚಿನ್ನಾಭರಣ ಮಳಿಗೆ ಸ್ವಯಂಪ್ರೇರಿತ ಬಂದ್ Read More »

ಕರಾವಳಿ

ಯಶಸ್ವಿಯಾಯಿತು ಮಾತೃಪೂರ್ಣ ಯೋಜನೆಯ ಕಿಟ್ ವಿತರಣೆ

(ನ್ಯೂಸ್ ಕಡಬ) newskadaba.com.ಉಡುಪಿ,ಜೂ.27:ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಇಲಾಖೆಯು ಮೂರು ವರ್ಷಗಳ ಬಳಿಕ ಮಾತೃಪೂರ್ಣ ಯೋಜನೆಯಲ್ಲಿ ಸಫಲತೆಯನ್ನು ಕಾಣುತ್ತಿದೆ. ಇದರೊಂದಿಗೆ ಸರಕಾರದ ಉದ್ದೇಶ ಯಶಸ್ವಿಯತ್ತ ಸಾಗುತ್ತಿದೆ. ಈ ಯೋಜನೆಯಡಿ ಬಿಸಿಯೂಟದ ಬದಲು ಸಾಮಗ್ರಿಗಳ ಕಿಟ್ ವಿತರಣೆ ಮಾಡುತ್ತಿರುವುದರಿಂದ ಕೋವಿಡ್-19ನ ನಡುವೆಯು ಅರ್ಹರಿಗೆ ಪೌಷ್ಟಿಕ ಆಹಾರ ಸರಿಯಾಗಿ ತಲುಪುತ್ತಿರುವುದು ಈ ಯಶಸ್ಸಿಗೆ ಕಾರಣ. ಸರಕಾರ ಮಾತೃಪೂರ್ಣದಡಿ ಅಂಗನವಾಡಿಗಳಲ್ಲಿ ಪೌಷ್ಟಿಕ ಆಹಾರ ತಯಾರಿಸಿ ನೀಡುವುದನ್ನು ಸ್ಥಗಿತಗೊಳಿಸಿದೆ.ಇದರ ಬದಲಾಗಿ ಕಿಟ್ ನೀಡುವ ವ್ಯವಸ್ಥೆಯನ್ನು ಜಾರಿಗೊಳಿಸಿದೆ.ಎಪ್ರಿಲ್, ಮೇ ತಿಂಗಳಿನಲ್ಲಿ

ಯಶಸ್ವಿಯಾಯಿತು ಮಾತೃಪೂರ್ಣ ಯೋಜನೆಯ ಕಿಟ್ ವಿತರಣೆ Read More »

ಕರ್ನಾಟಕ

ಕೆಂಪೇಗೌಡರ ಪ್ರತಿಮೆ ಸ್ಥಾಪಿಸಲು ಮುಖ್ಯಮಂತ್ರಿಯಿಂದ ಭೂಮಿ ಪೂಜೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜೂನ್ 27, ನಗರದ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸ್ಥಾಪಿಸಲು ನಿರ್ಧರಿಸಲಾಗಿರುವ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಕಾಮಗಾರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಭೂಮಿ ಪೂಜೆ ನೆರವೇರಿಸಿದ್ದಾರೆ. ಬಳಿಕ ಮಾತನಾಡಿದ ಅವರು ಬೆಂಗಳೂರನ್ನು ಯೋಜನಾ ಬದ್ಧವಾಗಿ ಬೆಳೆಸಲು ಕೆಂಪೇಗೌಡರ ಕೊಡುಗೆ ಅಪಾರ. ನದಿ ಮೂಲಗಳಿಲ್ಲದ ಬೆಂಗಳೂರಿನಲ್ಲಿ ನೂರಾರು ಕೆರೆಗಳ ನಿರ್ಮಾಣ ಮಾಡಿದರು, ಬೆಂಗಳೂರು ನಗರವನ್ನು ಅತ್ಯಂತ ವೈಜ್ಞಾನಿಕವಾಗಿ ನಿರ್ಮಿಸಿದ್ದಾರೆ ಎಂದರು. ಬೆಂಗಳೂರು ನಗರದ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳ ಅನುಷ್ಠಾನಕ್ಕೆ

ಕೆಂಪೇಗೌಡರ ಪ್ರತಿಮೆ ಸ್ಥಾಪಿಸಲು ಮುಖ್ಯಮಂತ್ರಿಯಿಂದ ಭೂಮಿ ಪೂಜೆ Read More »

ಕರ್ನಾಟಕ
Scroll to Top