ಇನ್ಮುಂದೆ ಮನೆ ಬಾಗಿಲಲ್ಲೇ ಲಭ್ಯವಾಗಲಿದೆ ಪಡಿತರ ಚೀಟಿ

(ನ್ಯೂಸ್ ಕಡಬ)newskadaba.com ಮನೆಮನೆಗೆ ಅಗತ್ಯ ಸೇವೆ ತಲುಪಿಸುವ ‘ಜನ ಸೇವಕ’ ಯೋಜನೆಯನ್ನು ವಿಸ್ತರಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಹೀಗಾಗಿ ಆಧಾರ್, ಎಪಿಎಲ್ ಪಡಿತರ ಚೀಟಿ ಹಾಗೂ ಮತದಾರರ ಪಟ್ಟಿ ಈ ಸೇವೆಗೆ ಸೇರ್ಪಡೆಗೊಳ್ಳಲಿದೆ. ಇದರಿಂದಾಗಿ ಮನೆ ಬಾಗಿಲಲ್ಲೇ ಆಧಾರ್ ನೋಂದಣಿ ಮಾಡಿಸುವ, ಎಪಿಎಲ್ ಪಡಿತರ ಚೀಟಿ ಪಡೆಯುವ ಹಾಗೂ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಿಕೊಳ್ಳಲು ಅಥವಾ ಪರಿಷ್ಕರಿಸಿಕೊಳ್ಳಲು ಅವಕಾಶ ಸಿಗಲಿದೆ. ‘ಜನ ಸೇವಕ’ ಯೋಜನೆಯಡಿ ಆದಾಯ ಜಾತಿ ಪ್ರಮಾಣ ಪತ್ರ, ಹಿರಿಯ ನಾಗರಿಕರ ಪಿಂಚಣಿ […]

ಇನ್ಮುಂದೆ ಮನೆ ಬಾಗಿಲಲ್ಲೇ ಲಭ್ಯವಾಗಲಿದೆ ಪಡಿತರ ಚೀಟಿ Read More »

ಕರಾವಳಿ

ಅಡಿಕೆ ಬೆಳೆಗಾರರ ಹಿತರಕ್ಷಣೆ ಮಾಡುವಲ್ಲಿ ಕ್ಯಾಂಪ್ಕೊ ಯಶಸ್ವಿ ➤ ಸತೀಶ್ಚಂದ್ರ

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.9: ಕೊರೋನ ಲಾಕ್ ಡೌನ್ ಸಂದರ್ಭದಲ್ಲಿ ಕ್ಯಾಂಪ್ಕ್ಕೊ ಸಂಸ್ಥೆಯು ಬೆಳೆಗಾರರ ಮತ್ತು ನೌಕರರ ಹಿತರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದೆ. ಸಂಸ್ಥೆಯ 2 ಸಾವಿರ ಉದ್ಯೋಗಿಗಳಿಗೆ ಲಾಕ್ ಡೌನ್ ಸಂದರ್ಭದಲ್ಲಿ ಯಾವುದೇ ಕಡಿತ ಮಾಡದೆ ವೇತನವನ್ನು ಕ್ಲಪ್ತ ಸಮಯದಲ್ಲಿ ಪಾವತಿಸಿದೆ. 8 ಸಾವಿರ ಕ್ವಿಂಟಾಲ್ ಅಡಿಕೆಯನ್ನು ಬೆಳೆಗಾರರಿಂದ ಖರೀದಿಸಿದೆ ಎಂದು ಕ್ಯಾಂಪ್ಕೊ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ತಿಳಿಸಿದ್ದಾರೆ. ಅವರು ನಗರದ ಪ್ರತಿಕಾಭವನದಲ್ಲಿಂದು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಿದ್ದ ಮಾಧ್ಯಮ ಸಂವಾದ ಗೋಷ್ಠಿಯನ್ನುದ್ದೇಶಿ ಮಾತನಾಡುತ್ತಿದ್ದರು.    

ಅಡಿಕೆ ಬೆಳೆಗಾರರ ಹಿತರಕ್ಷಣೆ ಮಾಡುವಲ್ಲಿ ಕ್ಯಾಂಪ್ಕೊ ಯಶಸ್ವಿ ➤ ಸತೀಶ್ಚಂದ್ರ Read More »

ಕರಾವಳಿ, ಕರ್ನಾಟಕ

ಕರಾವಳಿಯಲ್ಲಿ ಜೂ.11 ರಿಂದ ಭಾರೀ ಮಳೆ ಸಾಧ್ಯತೆ ➤ ‘ಆರೆಂಜ್ ಅಲರ್ಟ್’ ಘೋಷಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು ,ಜೂ.9: ರಾಜ್ಯದ ಕರಾವಳಿ ವ್ಯಾಪ್ತಿಯಲ್ಲಿ ಜೂ.11 ಹಾಗೂ 12 ರಂದು ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಹವಾಮಾನ ಇಲಾಖೆ ‘ಆರೆಂಜ್ ಅಲರ್ಟ್’ ಘೋಷಿಸಿದೆ.   ಜೂ.11ರಿಂದ ದಕ್ಷಿಣ ಒಳನಾಡಿನಲ್ಲಿ ಹಾಗೂ ಜೂ.12ರಿಂದ ಉತ್ತರ ಒಳನಾಡಿನಲ್ಲಿ ಮಳೆ ಹೆಚ್ಚಾಗಲಿದೆ. ಉತ್ತರ ಕನ್ನಡ ಜಿಲ್ಲೆ ಹಾಗೂ ಸುತ್ತಮುತ್ತಲಿನಲ್ಲಿ ಕನಿಷ್ಠ 5 ಸೆಂ.ಮೀ ಮಳೆಯಾಗುತ್ತಿದೆ. ಹೀಗಾಗಿ, ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ

ಕರಾವಳಿಯಲ್ಲಿ ಜೂ.11 ರಿಂದ ಭಾರೀ ಮಳೆ ಸಾಧ್ಯತೆ ➤ ‘ಆರೆಂಜ್ ಅಲರ್ಟ್’ ಘೋಷಣೆ Read More »

ಕರಾವಳಿ, ಕರ್ನಾಟಕ

ನಾಳೆಯಿಂದ ವೀಕ್ಷಣೆಗೆ ಮುಕ್ತವಾಗಲಿದೆ ಪಿಲಿಕುಳದ ನಿಸರ್ಗಧಾಮ

(ನ್ಯೂಸ್ ಕಡಬ) newskadaba.com.,ಮಂಗಳೂರುಜೂ.9:ಕೊರೊನಾ ಕಾರಣದಿಂದ ಮುಚ್ಚಲ್ಪಟ್ಟಿದ್ದ ಪಿಲಿಕುಳದ ಡಾ ಶಿವರಾಮ ಕಾರಂತ್ ನಿಸರ್ಗಧಾಮ ಜೂ 10 ರಿಂದ ಪ್ರವಾಸಿಗರಿಗೆ ಮತ್ತೆ ಬಾಗಿಲು ತೆರೆಯಲಿದೆ. ಸರಕಾರದ ಮಾರ್ಗಸೂಚಿಯನ್ನು ಪಾಲಿಸಿಕೊಂಡು ಪಿಲಿಕುಳದ ಜೈವಿಕ ಉದ್ಯಾನ, ಸಂಸ್ಕøತಿ ಗ್ರಾಮ, ಆರ್ಬೋರೇಟಮ್, ಮತ್ತು ಗುತ್ತು ಮನೆಯ ಆಕರ್ಷಣೆಗಳನ್ನು ಮಾತ್ರ ಸಾರ್ವಜನಿಕರ ವೀಕ್ಷಣೆಗೆ ತೆರೆಯಲಾಗುವುದು, ಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ತಾರಾಲಯಗಳಿಗೆ ಸಾರ್ವಜನಿಕ ಪ್ರವೇಶಕ್ಕೆ ಇನ್ನೂ ಕೆಲದಿನಗಳ ಕಾಲ ಕಾಯಬೇಕಾಗಿದೆ. ಸಾರ್ವಜನಿಕರು ನಿಸರ್ಗಧಾಮದ ಆಕರ್ಷಣೆಗಳನ್ನು ವೀಕ್ಷಿಸುವಾಗ 6ಅಡಿ ಭೌತಿಕ ಅಂತರವನ್ನು ಕಾಯ್ದುಕೊಳ್ಳಬೇಕು, ಮಾಸ್ಕ್ ಧಾರಣೆ

ನಾಳೆಯಿಂದ ವೀಕ್ಷಣೆಗೆ ಮುಕ್ತವಾಗಲಿದೆ ಪಿಲಿಕುಳದ ನಿಸರ್ಗಧಾಮ Read More »

ಕರ್ನಾಟಕ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಗೃಹ ಸಚಿವರ ಭೇಟಿ

(ನ್ಯೂಸ್ ಕಡಬ) newskadaba.com  ಬೆಳ್ತಂಗಡಿ,ಜೂ.8: ಕರ್ನಾಟಕ ರಾಜ್ಯ ಗೃಹ ಸಚಿವರಾದ ಬಸವರಾಜ್ ಬೊಮ್ಮಾಯಿ ಅವರು ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ್ದಾರೆ.ದೇವಾಲಯಕ್ಕೆ ಆಗಮಿಸಿದ ಬೊಮ್ಮಾಯಿ ಅವರು ಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.   ದೇವರ ದರ್ಶನದ ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಸಚಿವರಿಗೆ ಬಸವರಾಜ್ ಬೊಮ್ಮಾಯಿ ಅವರ ಜೊತೆಗಿದ್ದರು.      

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಗೃಹ ಸಚಿವರ ಭೇಟಿ Read More »

ಕರಾವಳಿ, ಕರ್ನಾಟಕ

ಮುಂಬೈ ಕರಾವಳಿಗರಿಗೆ ಶುಭಸುದ್ದಿ ➤ ತಾಯ್ನಾಡಿಗೆ ಬರುವವರಿಗೆ ಹೋಂ ಕ್ವಾರಂಟೈನ್ ಮಾತ್ರ

(ನ್ಯೂಸ್ ಕಡಬ) newskadaba.com ಉಡುಪಿ,ಜೂ.8: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಸಚಿವರಾದ ಶ್ರೀರಾಮುಲು ಇಂದು ಉಡುಪಿಗೆ ಅಗಮಿಸಿ ತುರ್ತು ಸಭೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಜನಪ್ರತಿನಿಧಿಗಳು ,ಆರೋಗ್ಯಾಧಿಕಾರಿಗಳು ಮತ್ತು ಅಧಿಕಾರಿಗಳು ಪಾಲ್ಗೊಂಡಿದ್ದರು.ಸಭೆಯಲ್ಲಿ ಜಿಲ್ಲೆಯಲ್ಲಿ ಕೊರೋನಾ ಸ್ಥಿತಿಗತಿ ,ಅನುಸರಿಸಬೇಕಾದ ಕ್ರಮಗಳ ಕುರಿತು ಪರಾಮರ್ಶೆ ನಡೆಸಲಾಯಿತು.   ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಹಾರಾಷ್ಟ್ರ ದಿಂದ ಬಂದವರಿಗೆ ಇನ್ಮುಂದೆ ಸಾಂಸ್ಥಿಕ ಕ್ವಾರಂಟೈನ್ ಇರೋದಿಲ್ಲ ಹೋಂ ಕ್ವಾರಂಟೈನ್ ಮಾತ್ರ ಇರುತ್ತೆ.ಈ ಸಮಯದಲ್ಲಿ ವ್ಯಕ್ತಿಯ

ಮುಂಬೈ ಕರಾವಳಿಗರಿಗೆ ಶುಭಸುದ್ದಿ ➤ ತಾಯ್ನಾಡಿಗೆ ಬರುವವರಿಗೆ ಹೋಂ ಕ್ವಾರಂಟೈನ್ ಮಾತ್ರ Read More »

ಕರಾವಳಿ, ಕರ್ನಾಟಕ

ತಮಿಳುನಾಡು, ತೆಲಂಗಾಣದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದು! ➤ ಕರ್ನಾಟಕದಲ್ಲೂ ರದ್ದಾಗುತ್ತಾ ಪರೀಕ್ಷೆ?

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 9, ಕೊರೋನಾ ಭೀತಿಯಿಂದಾಗಿ ಎಲ್ಲಾ ಪರೀಕ್ಷೆಗಳನ್ನೂ ಮುಂದೂಡಲಾಗಿದ್ದು, ತೆಲಂಗಾಣದಲ್ಲಿ ಹಾಗೂ ತಮಿಳುನಾಡಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನೇ ರದ್ದುಗೊಳಿಸಲಾಗಿದೆ. ಹೀಗಾಗಿ ಕರ್ನಾಟಕದಲ್ಲಿ 10ನೇ ತರಗತಿ ಪರೀಕ್ಷೆ ನಡೆಯುತ್ತದೆಯೇ? ರದ್ದಾಗುತ್ತದೆಯೇ? ಎಂಬ ಪ್ರಶ್ನೆಯಂತೂ ಎದುರಾಗಿದೆ. ಈ ಪ್ರಶ್ನೆಗೆ ಖುದ್ದಾಗಿ ಉತ್ತರಿಸಿದ ಶಿಕ್ಷಣ ಸಚಿವರಾದ ಎಸ್‌. ಸುರೇಶ್‌ ಕುಮಾರ್‌ ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದು ಮಾಡಲಾಗದು ಎಂದು ಸ್ಪಷ್ಟನೆ ನೀಡಿದ್ದಾರೆ. ಈಗಾಗಲೇ ಪರೀಕ್ಷಾ ದಿನಾಂಕ ನಿಗದಿಯಾಗಿದ್ದು, ವೇಳಾಪಟ್ಟಿಯಂತೆಯೇ ಪರೀಕ್ಷೆ ನಡೆಯಲಿದೆ. ನಿರ್ಧಾರ ಬದಲಾಯಿಸುವ

ತಮಿಳುನಾಡು, ತೆಲಂಗಾಣದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದು! ➤ ಕರ್ನಾಟಕದಲ್ಲೂ ರದ್ದಾಗುತ್ತಾ ಪರೀಕ್ಷೆ? Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹಲಸಿನ ಹಣ್ಣಿಗೆ ವಿಷ ಹಾಕಿ ಮೂರು ಹಸುಗಳ ಹತ್ಯೆ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು,ಜೂ.6: ಇತ್ತೀಚೆಗಷ್ಟೇ ದೇವರ ನಾಡು ಕೇರಳದಲ್ಲಿ ಅನಾನಸ್ ನಲ್ಲಿ ಸ್ಫೋಟಕ ಇಟ್ಟು ಗರ್ಭಿಣಿ ಆನೆಯೊಂದನ್ನು ಕೊಂದ ದುರಂತದ ನಡುವೆಯೇ ರಾಜ್ಯದ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಹಲಸಿನ ಹಣ್ಣಿಗೆ ವಿಷ ಹಾಕಿ ದನಗಳನ್ನು ಕೊಂದಿರುವ ಅಮಾನೀಯ ಘಟನೆ ವರದಿಯಾಗಿದೆ.  ಹಲಸಿನ ಹಣ್ಣಿಗೆ ವಿಷ ಬೇರೆಸಿ ಮೂರು ದನಗಳನ್ನು ಕೊಂದಿರುವ ಪ್ರಕರಣ ಚಿಕ್ಕಮಗಳೂರು ತಾಲೂಕಿನ ಬಸರವಳ್ಳಿ ಗ್ರಾಮದಲ್ಲಿ ನಡೆದಿದೆ.ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.   ತೋಟಕ್ಕೆ ದನಗಳು ಬೇಕಾಬಿಟ್ಟಿ ನುಗ್ಗುತ್ತಿವೆ ಎಂಬ ಕಾರಣಕ್ಕೆ

ಹಲಸಿನ ಹಣ್ಣಿಗೆ ವಿಷ ಹಾಕಿ ಮೂರು ಹಸುಗಳ ಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ದ.ಕ. ಜಿಲ್ಲಾ ಪೊಲೀಸ್ ವಿಶೇಷ ದಳದ ಎಎಸ್ಐ ಹೃದಯಾಘಾತದಿಂದ ನಿಧನ

(ನ್ಯೂಸ್ ಕಡಬ) newskadaba.com ಜೂ.9, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವಿಶೇಷ ದಳದ ಎ.ಎಸ್.ಐ. ಧನಂಜಯ ಅವರು ಹೃದಯಾಘಾತಕ್ಕೀಡಾಗಿ ನಿಧನರಾಗಿದ್ದಾರೆ. ವಿಟ್ಲ, ಬಿಸಿರೋಡ್ ಸೇರಿದಂತೆ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದ ಅವರು, ಮಂಗಳೂರು ಜಿಲ್ಲಾ ಪೊಲೀಸ್ ವಿಶೇಷ ದಳದಲ್ಲಿ ಎ.ಎಸ್.ಐ. ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ನಿನ್ನೆ ಬೆಳಿಗ್ಗೆ ಎದೆನೋವಿನಿಂದ ಬಳಲುತ್ತಿದ್ದ ಅವರು ಹೃದಯಾಘಾತಕ್ಕೀಡಾಗಿ ಮೃತಪಟ್ಟಿದ್ದಾರೆನ್ನಲಾಗಿದೆ.  

ದ.ಕ. ಜಿಲ್ಲಾ ಪೊಲೀಸ್ ವಿಶೇಷ ದಳದ ಎಎಸ್ಐ ಹೃದಯಾಘಾತದಿಂದ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top