ಕಾಸರಗೋಡು: ಪತ್ರಕರ್ತ ಸೇರಿದಂತೆ ಇಬ್ಬರಿಗೆ ಕೊರೋನ ಪಾಸಿಟಿವ್

ಕಾಸರಗೋಡು, ಎ.29: ಓರ್ವ ಪತ್ರಕರ್ತ ಸೇರಿದಂತೆ ಬುಧವಾರ ಕಾಸರಗೋಡಿನಲ್ಲಿ ಇಬ್ಬರಿಗೆ ಕೊರೋನ ಸೋಂಕು ದೃಢಪಟ್ಟಿದೆ. ಖಾಸಗಿ ಚಾನೆಲ್‌ವೊಂದರ ವರದಿಗಾರನಿಗೆ ಸೋಂಕು ದೃಢಪಟ್ಟಿದೆ. ಕೇರಳದಲ್ಲಿ ಪ್ರಥಮ ಬಾರಿಗೆ ಪತ್ರಕರ್ತರೋರ್ವರಿಗೆ ಸೋಂಕು ದೃಢಪಟ್ಟಿದೆ. ಇದರಿಂದ ಕಾಸರಗೋಡಿನಲ್ಲಿ ಸೋಂಕಿತರ ಸಂಖ್ಯೆ 178ಕ್ಕೇರಿದೆ. ಇಬ್ಬರಿಗೆ ಸೋಂಕಿತರ ಸಂಪರ್ಕ ದಿಂದ ಸೋಂಕು ತಗಲಿದ್ದು, ಬುಧವಾರ ಮೂವರು ಗುಣಮುಖರಾಗಿದ್ದಾರೆ. ಕೇರಳದಲ್ಲಿ ಇಂದು 10 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. 1,990 ಮಂದಿ ನಿಗಾದಲ್ಲಿದ್ದು, ಈ ಪೈಕಿ 29 ಮಂದಿ ಐಸೋಲೇಶನ್ ವಾರ್ಡ್‌ನಲ್ಲಿದ್ದಾರೆ. 695 ಮಂದಿಯ ಸ್ಯಾಂಪಲ್ ಪರೀಕ್ಷಾ […]

ಕಾಸರಗೋಡು: ಪತ್ರಕರ್ತ ಸೇರಿದಂತೆ ಇಬ್ಬರಿಗೆ ಕೊರೋನ ಪಾಸಿಟಿವ್ Read More »

ಕರಾವಳಿ

ಬಂಟ್ವಾಳ: ಮಲಗಿದ್ದಲ್ಲೇ ಮಾಜಿ ಸೈನಿಕ ನಿಧನ; ಐದು ದಿನಗಳ ಬಳಿಕ ಪ್ರಕರಣ ಬೆಳಕಿಗೆ

ಬಂಟ್ವಾಳ, ಎ.29: ಮಾಜಿ ಸೈನಿಕರೊಬ್ಬರು ಮನೆಯಲ್ಲಿ ಮಲಗಿದ್ದಲ್ಲೇ ಮೃತಪಟ್ಟಿದ್ದು, 5 ದಿನಗಳ ಬಳಿಕ ವಿಚಾರ ಬೆಳಕಿಗೆ ಬಂದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಪಂಜಿಕಲ್ಲು ಗ್ರಾಮದ ಪಲ್ಲೊಟ್ಟು ಎಂಬಲ್ಲಿ ನಡೆದಿದೆ. ಮೃತರನ್ನು ಮಾಜಿ ಸೈನಿಕ ಅವಿವಾಹಿತ ರಿಚಾರ್ಡ್ ಫೆರ್ನಾಂಡಿಸ್(50) ಎಂದು ಗುರುತಿಸಲಾಗಿದೆ. ದಿನ ನಿತ್ಯ ಇವರು ಹತ್ತಿರದ ಹಾಲಿನ ಡೈರಿಗೆ ಹಾಲು ಕೊಂಡುಹೋಗುತ್ತಿದ್ದರು. ಆದರೆ ಕಳೆದ ಕೆಲವು ದಿನಗಳಿಂದ ಹಾಲಿನ ಡೈರಿಗೆ ಬರದೇ ಇರುವುದನ್ನು ಗಮನಿಸಿ ಮನೆಯತ್ತ ಸ್ಥಳೀಯರು ಬಂದು ಗಮನಿಸಿದ ಸಂದರ್ಭದಲ್ಲಿ ಮೃತಪಟ್ಟಿರುವ

ಬಂಟ್ವಾಳ: ಮಲಗಿದ್ದಲ್ಲೇ ಮಾಜಿ ಸೈನಿಕ ನಿಧನ; ಐದು ದಿನಗಳ ಬಳಿಕ ಪ್ರಕರಣ ಬೆಳಕಿಗೆ Read More »

ಕರಾವಳಿ

ಕಾಸರಗೋಡು ಜಿಲ್ಲಾಧಿಕಾರಿಗೆ ಕ್ವಾರಂಟೈನ್

ಕಾಸರಗೋಡು, ಎ.29: ಜಿಲ್ಲೆಯಲ್ಲಿ ಬುಧವಾರದಂದು ಪತ್ರಕರ್ತರೊಬ್ಬರಲ್ಲಿ ಸೋಂಕು ಪತ್ತೆಯಾಗಿರುವ ಹಿನ್ನೆಲೆ ಮುಂಜಾಗೃತ ಕ್ರಮವಾಗಿ ಕಾಸರಗೋಡು ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ಅವರಿಗೆ ಕ್ವಾರಂಟೈನ್ ವಿಧಿಸಲಾಗಿದೆ. ಕಾಸರಗೋಡು ಜಿಲ್ಲಾಧಿಕಾರಿ ಮಾತ್ರವಲ್ಲದೆ, ಅವರ ಚಾಲಕ ಹಾಗೂ ಗನ್‌ಮ್ಯಾನ್ ಕೂಡ ನಿಗಾದಲ್ಲಿದ್ದಾರೆ. ಸೋಂಕು ಪತ್ತೆಯಾದ ಪತ್ರಕರ್ತ ಕೆಲ ದಿನಗಳ ಹಿಂದೆ ಜಿಲ್ಲಾಧಿಕಾರಿಯ ಸಂದರ್ಶನ ನಡೆಸಿದ್ದರು. ಇದೀಗ ಪತ್ರಕರ್ತನಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅವರು ನಿಗಾದಲ್ಲಿರಲು ತೀರ್ಮಾನಿಸಿದ್ದಾರೆ.

ಕಾಸರಗೋಡು ಜಿಲ್ಲಾಧಿಕಾರಿಗೆ ಕ್ವಾರಂಟೈನ್ Read More »

ಕರಾವಳಿ

ದ.ಕ. ಜಿಲ್ಲೆಯಲ್ಲಿ ತಂಬಾಕು ಪದಾರ್ಥ ಮಾರಾಟ, ಸೇವನೆ ನಿಷೇಧ

ಮಂಗಳೂರು, ಎ.29: ಕೊರೋನ ಸೋಂಕು ವಿಶ್ವದೆಲ್ಲೆಡೆ ವ್ಯಾಪಕವಾಗಿ ಹರಡುತ್ತಿದ್ದು, ಪಾನ್ ಮಸಾಲ, ಜರ್ದಾ, ಚೈನಿ ಖೈನಿ ಇತ್ಯಾದಿ ಜಗಿಯುವ ತಂಬಾಕು ಪದಾರ್ಥಗಳನ್ನು ಬಳಕೆ ಮಾಡಿ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುವ ಜೊತೆಗೆ ಸಾಂಕ್ರಾಮಿಕ ರೋಗಗಳಾದ ಕ್ಷಯರೋಗ, ನ್ಯುಮೋನಿಯ ಮತ್ತು ಕೊರೋನ ವೈರಸ್ ಒಬ್ಬರಿಂದ ಮತ್ತೊಬ್ಬರಿಗೆ ಹರಡಲು ಕಾರಣವಾಗಬಹುದು. ಬೀಡಿ, ಸಿಗರೇಟ್ ಸೇದುವುದರಿಂದ ಕೈಯಿಂದ ಬಾಯಿಯ ಮೂಲಕ ವೈರಸ್‌ಗಳು ಮಾನವನ ದೇಹವನ್ನು ಪ್ರವೇಶಿಸುವ ಸಾಧ್ಯತೆ ಇರುವುದರಿಂದ ಹಾಗೂ ದೇಹದ ಇತರೆ ಭಾಗಗಳಿಗೆ ಸೋಂಕು ಹರಡಿ ಶ್ವಾಸಕೋಶ, ಹೃದಯ

ದ.ಕ. ಜಿಲ್ಲೆಯಲ್ಲಿ ತಂಬಾಕು ಪದಾರ್ಥ ಮಾರಾಟ, ಸೇವನೆ ನಿಷೇಧ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಲಾಕ್‌ಡೌನ್ ನಡುವೆ ಕಡಬ ಪೊಲೀಸರ ಮಿಂಚಿನ ಕಾರ್ಯಾಚರಣೆ ➤ ಕುಖ್ಯಾತ ಕಳ್ಳನ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಎ.29. ಠಾಣಾ ವ್ಯಾಪ್ತಿಯ ರಾಮಕುಂಜದಲ್ಲಿ ಇತ್ತೀಚೆಗೆ ಎಸ್.ಬಿ.ಐ ಸೇವಾ ಕೇಂದ್ರ, ಮೊಬೈಲ್ ಅಂಗಡಿ, ಕಾಲೇಜು, ಪಂಚಾಯತ್ ಸೇರಿದಂತೆ ಜಿಲ್ಲೆಯ ವಿವಿಧ ಠಾಣೆಯಲ್ಲಿ ಒಟ್ಟು 16 ಪ್ರಕರಣಗಳಲ್ಲಿ ಭಾಗವಹಿಸಿದ್ದ ಕುಖ್ಯಾತ ಕಳ್ಳನನ್ನು ಹಿರಿಯ ಅಧಿಕಾರಿಗಳ ಮಾರ್ಗದರ್ಶನದಂತೆ ಕಡಬ ಎಸ್.ಐ.ರುಕ್ಮ ನಾಯ್ಕ್ ನೇತೃತ್ವದ ತಂಡ ಬಂಧಿಸಿದೆ. ಬಂಧಿತನನ್ನು ಬಂಟ್ವಾಳ ತಾಲೂಕು ಸಜಿಪನಡು ಪೆರುವ ನಿವಾಸಿ ಇಬ್ರಾಹಿಂ ಎಂಬವರ ಪುತ್ರ ಉಮ್ಮರ್ ಫಾರೂಕ್(27ವ.) ಎಂದು ಗುರುತಿಸಲಾಗಿದೆ. ಬಂಧಿತನಿಂದ ಕಳ್ಳತನಕ್ಕೆ ಬಳಸಿದ ರಾಡ್, ಅಲ್ಲದೆ ಕೆಲವು ಸಾಮಾಗ್ರಿಗಳನ್ನು

ಲಾಕ್‌ಡೌನ್ ನಡುವೆ ಕಡಬ ಪೊಲೀಸರ ಮಿಂಚಿನ ಕಾರ್ಯಾಚರಣೆ ➤ ಕುಖ್ಯಾತ ಕಳ್ಳನ ಬಂಧನ Read More »

ಕರಾವಳಿ

ರಾಜ್ಯದಲ್ಲಿ ಇಂದು 9 ಮಂದಿಗೆ ಕೊರೋನ ಸೋಂಕು ಪತ್ತೆ: 532ಕ್ಕೆ ಏರಿಕೆಯಾದ ಸೋಂಕಿತರ ಸಂಖ್ಯೆ

ಬೆಂಗಳೂರು, ಎ.29: ರಾಜ್ಯದಲ್ಲಿ ಬುಧವಾರ 9 ಮಂದಿಯಲ್ಲಿ ಕೊರೋನ ಸೋಂಕು ಪತ್ತೆಯಾಗಿದ್ದು, ಒಟ್ಟಾರೆಯಾಗಿ ಸೋಂಕಿತರ ಸಂಖ್ಯೆ 532ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಕಲಬುರಗಿಯಲ್ಲಿ 8, ಬೆಳಗಾವಿಯ ಹುಕ್ಕೇರಿಯಲ್ಲಿ ಒಂದು ಪ್ರಕರಣ ದಾಖಲಾಗಿದೆ. ಈ ನಡುವೆ ಗುಣಮುಖರಾಗುತ್ತಿರುವ ಸಂಖ್ಯೆ ಕೂಡ ಏರಿಕೆಯಾಗಿದ್ದು, 245 ಮಂದಿ ಗುಣಮುಖರಾಗಿದ್ದಾರೆ ಮತ್ತು ಇಲ್ಲಿಯವರೆಗೆ 21 ಜನರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಇಂದು 9 ಮಂದಿಗೆ ಕೊರೋನ ಸೋಂಕು ಪತ್ತೆ: 532ಕ್ಕೆ ಏರಿಕೆಯಾದ ಸೋಂಕಿತರ ಸಂಖ್ಯೆ Read More »

ಕರ್ನಾಟಕ

ಖ್ಯಾತ ಬಾಲಿವುಡ್ ನಟ ಇರ್ಫಾನ್ ಖಾನ್ ನಿಧನ

ಮುಂಬೈ, ಎ.29: ಬಾಲಿವುಡ್ ಖ್ಯಾತ ನಟ ಇರ್ಫಾನ್ ಖಾನ್ (53) ಮುಂಬೈನ ಕೋಕಿಲಾ ಬೆನ್ ಆಸ್ಪತ್ರೆಯಲ್ಲಿ ಬುಧವಾರ ಬೆಳಗ್ಗೆ ನಿಧನರಾಗಿದ್ದಾರೆ. ದೊಡ್ಡ ಕರುಳು ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದ ಇರ್ಫಾನ್ ಖಾನ್‌ರನ್ನು ಮಂಗಳವಾರ ಮಧ್ಯಾಹ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ನಟ ಇರ್ಫಾನ್ ಖಾನ್ ನ್ಯೂರೋಎಂಡೋಕ್ರೈನ್ ಸಮಸ್ಯೆಯಿಂದ ಬಳಲುತ್ತಿದ್ದು, ಇದಕ್ಕಾಗಿ ತಾನು ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು 2018ರಲ್ಲಿ ಘೋಷಿಸಿದ್ದರು. ಇದಕ್ಕಾಗಿ ಅವರು ವಿದೇಶಕ್ಕೆ ತೆರಳಿ ಚಿಕಿತ್ಸೆ ಪಡೆದಿದ್ದರು. ಬಾಲಿವುಡ್‌ನ ವಾರಿಯರ್, ಮಕ್ಬೂಲ್, ಹಾಸಿಲ್, ಪಾನ್

ಖ್ಯಾತ ಬಾಲಿವುಡ್ ನಟ ಇರ್ಫಾನ್ ಖಾನ್ ನಿಧನ Read More »

ರಾಷ್ಟ್ರೀಯ ನ್ಯೂಸ್

ಸಕಲ ವೇದ ಸಾರ, ಸರ್ವ ಪಾಪಗಳನ್ನು ಮುಕ್ತ ಮಾಡುವ ದಿವ್ಯಮಂತ್ರ

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ 9945410150 ಯಾವುದರ ಉಚ್ಚಾರದಿಂದ ಸಂಕಷ್ಟ ಪರಿಹಾರವಾಗುವುದೋ ಅದೇ ಗಾಯತ್ರಿ ಮಂತ್ರ ಎಂಬ ಅರ್ಥ ನೀಡುತ್ತದೆ. ಗಾಯತ್ರಿ ಮಂತ್ರವು ವೇದೋಪನಿಷತ್ತನಲ್ಲಿ ಕಂಡುಬರುತ್ತದೆ. ಇದು ಋಗ್ವೇದದ ಕಿನ್ನ ಮೊದಲು ಕಾಣಿಸಿಕೊಂಡಿರುವುದು ಕಂಡುಬರುತ್ತದೆ. ಗಾಯತ್ರಿ ದೇವಿಯು ವೇದಗಳ ಮಾತೆ ಮತ್ತು ಸರಸ್ವತಿಯ ಸ್ವರೂಪದವಾಗಿದ್ದು ಇದನ್ನು ಸಾವಿತ್ರ ಮಂತ್ರ ಎಂದು ಸಹ ಕರೆಯುವುದುಂಟು. ಮಂತ್ರಗಳಲ್ಲಿ ಅತಿಶ್ರೇಷ್ಠ ಮಂತ್ರವಾಗಿದೆ ಈ ಮಂತ್ರವನ್ನು ವಿಶ್ವಾಮಿತ್ರನಿಂದ ರಚಿಸಲ್ಪಟ್ಟಿದೆ ಮತ್ತು ಬ್ರಹ್ಮನ ಮುಖಾಂತರ ಹೊರಬಂದಿದೆ. ಸಕಲ ವೇದಗಳ ಸಾರ, ಪರಬ್ರಹ್ಮ

ಸಕಲ ವೇದ ಸಾರ, ಸರ್ವ ಪಾಪಗಳನ್ನು ಮುಕ್ತ ಮಾಡುವ ದಿವ್ಯಮಂತ್ರ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಕುಜ ಗಾಯಿತ್ರಿ ಮಂತ್ರದಿಂದ ಶೀಘ್ರ ವಿವಾಹ ನೋಡಿ ದಿನ ಭವಿಷ್ಯ

ಮಂಗಳ ಗಾಯಿತ್ರಿ ಮಂತ್ರ ಜಪಿಸುವುದರಿಂದ ಶೀಘ್ರ ವಿವಾಹ ಮತ್ತು ಜಾತಕದಲ್ಲಿನ ಕುಜ ದೋಷವು ದೂರವಾಗುತ್ತದೆ. ಅಂದುಕೊಂಡಿರುವ ಕೆಲಸ ಕಾರ್ಯಗಳು ಶುಭಪ್ರದವಾಗಿ ನಡೆಯುವುದು. ಅಂಗಾರಕಾಯ ವಿದ್ಮಹೇ! ಶಕ್ತಿ ಹಸ್ತಾ ಯ ಧೀಮಹಿ! ತನ್ನೋ ಭೌಮಃ ಪ್ರಚೋದಯಾತ್!! ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಪ್ರಧಾನ ತಾಂತ್ರಿಕರು, ಆಂಜನೇಯಸ್ವಾಮಿ ಉಪಾಸಕರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ,

ಕುಜ ಗಾಯಿತ್ರಿ ಮಂತ್ರದಿಂದ ಶೀಘ್ರ ವಿವಾಹ ನೋಡಿ ದಿನ ಭವಿಷ್ಯ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಕಡಬ ಬಿಜೆಪಿ ವತಿಯಿಂದ ಪತ್ರಕರ್ತರಿಗೆ ಆಹಾರ ಸಾಮಗ್ರಿ ವಿತರಣೆ ➤ ಡಿಸಿಸಿ ಬ್ಯಾಂಕ್ ನಿಂದಲೂ ಕಿಟ್ ವಿತರಣೆ

(ನ್ಯೂಸ್ ಕಡಬ) newskadaba.com ಕಡಬ, ಎ.28. ಸ್ಥಳೀಯ ಆಗುಹೋಗುಗಳನ್ನು ಸಮಾಜಕ್ಕೆ ತಿಳಿಸುವ ಪತ್ರಕರ್ತರಿಗೆ ಕೊರೋನಾ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಮಹಾಶಕ್ತಿ ಕೇಂದ್ರ ಕಡಬ ಮತ್ತು ಸೇವಾ ಭಾರತಿಯ ವತಿಯಿಂದ ಆಹಾರ ಸಾಮಗ್ರಿಗಳನ್ನು ವಿತರಿಸಲಾಯಿತು. ಕಡಬದ ಎಲ್ಲಾ ಮಾಧ್ಯಮ ಮಿತ್ರರಿಗೆ ಅಕ್ಕಿ, ದಿನಸಿ ಸಾಮಗ್ರಿಗಳನ್ನು ಕಡಬದ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಶ್ರೀ ಕೃಷ್ಣ ಶೆಟ್ಟಿ ಅವರು ವಿತರಿಸಿದರು. ಸುಳ್ಯ ವಿಧಾನಸಭಾ ಕ್ಷೇತ್ರದ ಕಾರ್ಯದರ್ಶಿಯಾದ ಪ್ರಕಾಶ್ ಎನ್.ಕೆ., ಕಡಬ ಸಿ.ಎ. ಬ್ಯಾಂಕ್ ಅಧ್ಯಕ್ಷ ರಮೇಶ್ ಕಲ್ಪುರೆ,

ಕಡಬ ಬಿಜೆಪಿ ವತಿಯಿಂದ ಪತ್ರಕರ್ತರಿಗೆ ಆಹಾರ ಸಾಮಗ್ರಿ ವಿತರಣೆ ➤ ಡಿಸಿಸಿ ಬ್ಯಾಂಕ್ ನಿಂದಲೂ ಕಿಟ್ ವಿತರಣೆ Read More »

ಕರಾವಳಿ
Scroll to Top