ಬೆಂಗಳೂರು ಘಟನೆ ಮಾಸುವ ಮುನ್ನವೇ ಬಿ.ಸಿ ರೋಡ್ ನಲ್ಲಿ ಅಂತಹದೇ ಘಟನೆ ➤ ಲಾಕ್ಡೌನ್ ಉಲ್ಲಂಘನೆ ಪ್ರಶ್ನಿಸಿದ್ದಕ್ಕೆ ಸರಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ
(ನ್ಯೂಸ್ ಕಡಬ) newskadaba.com ಮಂಗಳೂರು, ಎ.20. ಲಾಕ್ಡೌನ್ ಇದ್ದರೂ ಅಂಗಡಿ ತೆರೆದು ವ್ಯಾಪಾರ ಮಾಡುತ್ತಿದ್ದುದನ್ನು ಪ್ರಶ್ನಿಸಿದ ಸರಕಾರಿ ಅಧಿಕಾರಿಗೆ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ಸೋಮವಾರದಂದು ಬಂಟ್ವಾಳದಲ್ಲಿ ನಡೆದಿದೆ. ಬಂಟ್ವಾಳ ಪುರಸಭೆಯ ಪರಿಸರ ಅಭಿಯಂತರರಾದ ವೀರಪ್ಪ ಕೆ. ಎಂಬವರು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಸಿಬ್ಬಂದಿಗಳೊಂದಿಗೆ ಕರ್ತವ್ಯದ ನಿಮಿತ್ತ ಕಾರಿನಲ್ಲಿ ಬಂಟ್ವಾಳ ಕಸಬ ಗ್ರಾಮದ ಬಾರೆಕಾಡು ಎಂಬಲ್ಲಿಗೆ ತಲುಪಿದಾಗ ಮಧ್ಯಾಹ್ನ 1.00 ಗಂಟೆಗೆ ರಫೀಕ್ ಎಂಬವರ ಅಂಗಡಿ ತೆರೆದಿದ್ದು, ಅಂಗಡಿಯ ಎದುರು ಸುಮಾರು 5 ರಿಂದ 10 ಜನರು […]










