ಗುರುವಾರ 4 ವರ್ಷದ ಮಗು ಸೇರಿ 10 ಮಂದಿಗೆ ಕೊರೋನ ಪಾಸಿಟಿವ್: ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 191ಕ್ಕೆ ಏರಿಕೆ

ಬೆಂಗಳೂರು, ಎ.9: 4 ವರ್ಷದ ಮಗು ಸೇರಿದಂತೆ ಗುರುವಾರ ಒಟ್ಟು 10 ಮಂದಿಗೆ ಕೊರೋನ ಸೋಂಕು ತಗುಲಿದ್ದು, ಗದಗಿನ 80 ವರ್ಷದ ವೃದ್ಧೆ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಇದರಿಂದ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 191ಕ್ಕೇರಿಕೆಯಾಗಿದ್ದು, 6 ಮಂದಿ ಮೃತಪಟ್ಟಿದ್ದಾರೆ. 28 ಮಂದಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಬೆಳಗಾವಿಯ 50 ವರ್ಷದ ವ್ಯಕ್ತಿ, ಮೈಸೂರಿನ 55 ಹಾಗೂ 68 ವರ್ಷದ ವ್ಯಕ್ತಿಗಳು, ನಂಜನಗೂಡಿನ ಔಷಧ ಕಂಪೆನಿಯ ಉದ್ಯೋಗಿಯ ಸಹ ಪ್ರಯಾಣಿಕನಾಗಿದ್ದ 32 ವರ್ಷದ ವ್ಯಕ್ತಿಯಲ್ಲಿ ಸೋಂಕು […]

ಗುರುವಾರ 4 ವರ್ಷದ ಮಗು ಸೇರಿ 10 ಮಂದಿಗೆ ಕೊರೋನ ಪಾಸಿಟಿವ್: ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 191ಕ್ಕೆ ಏರಿಕೆ Read More »

ಕರ್ನಾಟಕ

ಲಾಕ್‌ಡೌನ್ ವಿಸ್ತರಣೆ ಬಗ್ಗೆ ನಾಳೆ ತೀರ್ಮಾನ: ಸಿಎಂ ಬಿಎಸ್‌ವೈ

ಬೆಂಗಳೂರು, ಎ.9: ಈವರೆಗೆ ರಾಜ್ಯದಲ್ಲಿ ಲಾಕ್‌ಡೌನ್ ವಿಸ್ತರಣೆ ಮಾಡಬೇಕೇ ಎನ್ನುವ ಬಗ್ಗೆ ನಾಳೆ ತೀರ್ಮಾನ ಮಾಡಲಾಗುವುದು. ಸಂಪುಟ ಸಹೋದ್ಯೋಗಿಗಳು 15 ದಿನ ಲಾಕ್‌ಡೌನ್ ವಿಸ್ತರಣೆಗೆ ಸಲಹೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಹೋದ್ಯೋಗಿ ಸಚಿವರಿಗೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಚರ್ಚಿಸಿದ ನಂತರ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದೇನೆ. ಲಾಕ್‌ಡೌನ್ ಮುಂದುವರಿಸಬೇಕು ಎಂಬುದು ಬಹುತೇಕ ಸಚಿವರ ಅಭಿಪ್ರಾಯವಾಗಿದೆ ಎಂದರು. ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿಯನ್ನು ಇಂದು ಸಂಜೆಯ

ಲಾಕ್‌ಡೌನ್ ವಿಸ್ತರಣೆ ಬಗ್ಗೆ ನಾಳೆ ತೀರ್ಮಾನ: ಸಿಎಂ ಬಿಎಸ್‌ವೈ Read More »

ಕರ್ನಾಟಕ

 ಎ.30ರವರೆಗೆ ಲಾಕ್ ಡೌನ್ ಮುಂದುವರಿಕೆ: ಒಡಿಶಾ ಸಿಎಂ ಘೋಷಣೆ

ಹೊಸದಿಲ್ಲಿ, ಎ.9: ಕೊರೋನ ವೈರಸ್ ತಡೆಗಟ್ಟಲು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿರುವ 21 ದಿನಗಳ ಲಾಕ್ ಡೌನ್ ಎಪ್ರಿಲ್ 14ರಂದು ಅಂತ್ಯಗೊಳ್ಳಲಿದೆ. ಏತನ್ಮಧ್ಯೆ ದೇಶಾದ್ಯಂತ ಲಾಕ್ ಡೌನ್ ಮುಂದುವರಿಯಲಿದೆಯೇ ಎಂಬ ಜಿಜ್ಞಾಸೆ ಮೂಡಿದೆ. ಮತ್ತೊಂದೆಡೆ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಎಪ್ರಿಲ್ 30ರವರೆಗೆ ಲಾಕ್ ಡೌನ್ ಮುಂದುವರಿಸುವಂತೆ ಆದೇಶ ಹೊರಡಿಸಿದ್ದಾರೆ ಎಂದು ವರದಿ ತಿಳಿಸಿದೆ. ಕೋವಿಡ್ 19 ವೈರಸ್ ಕ್ಷಿಪ್ರವಾಗಿ ಹರಡುತ್ತಿರುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ರಾಜ್ಯಗಳ ಮುಖ್ಯಮಂತ್ರಿ ಜತೆ ವಿಡಿಯೋ ಕಾನ್ಫರೆನ್ಸ್

 ಎ.30ರವರೆಗೆ ಲಾಕ್ ಡೌನ್ ಮುಂದುವರಿಕೆ: ಒಡಿಶಾ ಸಿಎಂ ಘೋಷಣೆ Read More »

ರಾಷ್ಟ್ರೀಯ ನ್ಯೂಸ್

ಮಂಗಳೂರಿನ ಕೇಂದ್ರ ಭಾಗವಾಗಿದ್ದ ಸೆಂಟ್ರಲ್ ಮಾರ್ಕೆಟ್ ಇನ್ನು ನೆನಪು ಮಾತ್ರ

ವ್ಯಾಪಾರಿಗಳು ಬೈಕಂಪಾಡಿ ಎಪಿಎಂಸಿಗೆ ಸ್ಥಳಾಂತರ ಮಂಗಳೂರು, ಎ.9: ಮಂಗಳೂರಿನ ಕೇಂದ್ರ ಭಾಗವಾಗಿದ್ದ ಸೆಂಟ್ರಲ್ ಮಾರ್ಕೆಟ್ ಇನ್ನು ನೆನಪು ಮಾತ್ರ. ಸುಮಾರು 50 ವರ್ಷಗಳ ಇತಿಹಾಸವಿರುವ ಈ ಮಾರುಕಟ್ಟೆಯನ್ನು ತೆರವು ಮಾಡಲು ಮಂಗಳೂರು ಮಹಾನಗರ ಪಾಲಿಕೆ ನಿರ್ಧರಿಸಿದೆ. ಜೊತೆಗೆ ಪಕ್ಕದ ತರಕಾರಿ ಮತ್ತು ಮೀನು ಮಾರುಕಟ್ಟೆಯನ್ನು ಮುಚ್ಚಲು ನಿರ್ಧರಿಸಲಾಗಿದೆ. ಎರಡೂ ಕಟ್ಟಡಗಳು ತೀರ ಶಿಥಿಲಾವಸ್ಥೆಯಲ್ಲಿದ್ದು ಯಾವುದೇ ಕ್ಷಣದಲ್ಲೂ ಕುಸಿದು ಬೀಳುವ ಹಂತದಲ್ಲಿದೆ. ಆದ್ದರಿಂದ ನೆಲಸಮಗೊಳಿಸಿ ಆ ಸ್ಥಳದಲ್ಲಿ ನೂತನ ಕಟ್ಟಡ ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ ಎಂದು ಪಾಲಿಕೆ ಮೂಲಗಳು

ಮಂಗಳೂರಿನ ಕೇಂದ್ರ ಭಾಗವಾಗಿದ್ದ ಸೆಂಟ್ರಲ್ ಮಾರ್ಕೆಟ್ ಇನ್ನು ನೆನಪು ಮಾತ್ರ Read More »

ಕರಾವಳಿ

ಕೊರೋನ ಸೋಂಕು ಸಂಪೂರ್ಣ ನಿರ್ನಾಮಕ್ಕೆ ಡಿಸೆಂಬರ್‌ ವರೆಗೂ ಮುನ್ನೆಚ್ಚರಿಕೆ ವಹಿಸಿ: ಡಿಸಿಎಂ

ಬೆಂಗಳೂರು, ಎ.9: ಕೊರೋನ ವೈರಸ್‌ ಸಂಪೂರ್ಣ ನಿರ್ನಾಮ ಆಗುವವರೆಗೂ ಅಂದರೆ ಕನಿಷ್ಠ ಮುಂದಿನ 7-8 ತಿಂಗಳು ಮುನ್ನೆಚ್ಚರಿಕೆ ವಹಿಸಿ ಸಹಕರಿಸುವಂತೆ ಉಪ ಮುಖ್ಯಮಂತ್ರಿ ಡಾ. ಸಿ ಎನ್‌ ಅಶ್ವತ್ಥನಾರಾಯಣ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಬಿಬಿಎಂಪಿಯ ಪೌರ ಕಾರ್ಮಿಕರು, ಕೂಲಿ ಕಾರ್ಮಿಕರಿಗೆ ಮಲ್ಲೇಶ್ವರದಲ್ಲಿ ಪಡಿತರ ವಿತರಣೆ ಮಾಡಿದ ಡಾ. ಅಶ್ವತ್ಥನಾರಯಣ ಅವರು ಸುದ್ದಿಗಾರರ ಜತೆ ಮಾತನಾಡಿದರು. “ಪ್ರಸ್ತುತ ಸಭೆ, ಸಮಾರಂಭಗಳನ್ನು ಆಯೋಜಿಸದೆ ನಾಗರಿಕರೂ ಉತ್ತಮ ರೀತಿಯಲ್ಲಿ ಸಹಕಾರ ನೀಡುತ್ತಿದ್ದಾರೆ. ಆದರೆ ವೈರಸ್‌ ಸಂಪೂರ್ಣವಾಗಿ ನಿರ್ಮೂಲನೆ ಆಗುವವರೆಗೂ ಅಂದರೆ ಮುಂದಿನ

ಕೊರೋನ ಸೋಂಕು ಸಂಪೂರ್ಣ ನಿರ್ನಾಮಕ್ಕೆ ಡಿಸೆಂಬರ್‌ ವರೆಗೂ ಮುನ್ನೆಚ್ಚರಿಕೆ ವಹಿಸಿ: ಡಿಸಿಎಂ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

24 ಗಂಟೆಯಲ್ಲಿ ವಿಶ್ವದಾದ್ಯಂತ 84,000ಕ್ಕೂ ಹೆಚ್ಚು ಕೊರೋನ ಪ್ರಕರಣ ದೃಢ

ಹೊಸದಿಲ್ಲಿ, ಎ.9: ಬುಧವಾರ ಒಂದೇ ದಿನ  84,000ಕ್ಕೂ ಹೆಚ್ಚು ಕೊರೋನ ಧನಾತ್ಮಕ ಪ್ರಕರಣಗಳು ವಿಶ್ವದಾದ್ಯಂತ ವರದಿಯಾಗಿದ್ದು, ಒಟ್ಟು ಪ್ರಕರಣಗಳು 1.5 ಮಿಲಿಯನ್ ದಾಟಿದೆ. ಕರೋನ ವೈರಸ್‌ನಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 88,502ರಷ್ಟಿದೆ. ನಿನ್ನೆ ಒಂದೇ ದಿನದಲ್ಲಿ ಅಮೆರಿಕಾದಲ್ಲಿ ಹೆಚ್ಚಿನ ಸಂಖ್ಯೆಯ ಕೋವಿಡ್ -19 ಪ್ರಕರಣ ಅಂದರೆ 31,935 ಕರೋನ ವೈರಸ್ ದೃಢಪಟ್ಟಿರುವ ಬಗ್ಗೆ ವರದಿಯಾಗಿದೆ. ಈಗಾಗಲೇ ಅಮೆರಿಕಾದಲ್ಲಿ 4,35,128 ಮಂದಿಯಲ್ಲಿ ಕೊರೋನಾ ಪತ್ತೆಯಾಗಿದ್ದು, ಮೃತರ ಸಂಖ್ಯೆ 14,795ಕ್ಕೆ ಏರಿಕೆಯಾಗಿದೆ. ಸ್ಪೇನ್ನಲ್ಲಿ 148,220 ಪ್ರಕರಣಗಳು ಮತ್ತು 14,792 ಸಾವುಗಳು ವರದಿಯಾಗಿದೆ.

24 ಗಂಟೆಯಲ್ಲಿ ವಿಶ್ವದಾದ್ಯಂತ 84,000ಕ್ಕೂ ಹೆಚ್ಚು ಕೊರೋನ ಪ್ರಕರಣ ದೃಢ Read More »

ಅಂತರ್ರಾಷ್ಟ್ರೀಯ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಿಮ್ಮ ಪ್ರೇಮ ಸಫಲತೆಗೆ ಸುಲಭ ಪರಿಹಾರ ಮತ್ತು ದಿನ ಭವಿಷ್ಯ

ಪ್ರೀತಿಯಲ್ಲಿ ಅನುಮಾನ ಹಾಗೂ ಮುಂದೇನಾಗುತ್ತದೆ ಎನ್ನುವ ಭಯ ಇಂತಹ ವಿಶ್ವಾಸದ ಕೊರತೆ ಮನಸ್ಸಿಗೆ ಬರುವುದು. ನಿಮ್ಮ ಪ್ರೀತಿ ಸಫಲತೆಯಾಗಿ ನಿಮ್ಮ ಜೀವನಕ್ಕೆ ಉತ್ತಮ ರೀತಿಯ ಜ್ಯೋತಿಯಾಗಿ ಬೆಳಗುವ ಪರಿಹಾರವಿದು. ತುಳಸಿಯ ನಡುವೆ ಕೊಳಲನ್ನು ಇಟ್ಟು ದಿನಂಪ್ರತಿ ಪೂಜಿಸಿ ಖಂಡಿತ ಸಮಸ್ಯೆ ಪರಿಹಾರವಾಗುವುದು. ಶ್ರೀ ಗುರು ದತ್ತಾತ್ರೇಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ,

ನಿಮ್ಮ ಪ್ರೇಮ ಸಫಲತೆಗೆ ಸುಲಭ ಪರಿಹಾರ ಮತ್ತು ದಿನ ಭವಿಷ್ಯ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಸುಟ್ಟಗಾಯಗಳೊಂದಿಗೆ ಬಂದ ಬಾಲಕನಿದ್ದ ಕೇರಳದ ಆ್ಯಂಬುಲೆನ್ಸ್ ವಾಪಸ್

ಮಂಗಳೂರು, ಎ.8: ಕೇರಳದ ಕಣ್ಣೂರಿನಿಂದ ಸುಟ್ಟಗಾಯಗಳೊಂದಿಗೆ ಬಂದಿದ್ದ ಆ್ಯಂಬುಲೆನ್ಸ್ ಅನ್ನು ಕರ್ನಾಟಕ ಪೊಲೀಸರು ಕೇರಳ-ಕರ್ನಾಟಕ ಗಡಿಭಾಗ ತಲಪಾಡಿಯಲ್ಲಿ ವಾಪಸ್ ಕಳುಹಿಸಿದ್ದಾರೆ. ಕಣ್ಣೂರು ನಿವಾಸಿ ಆದಿತ್ಯ (11) ಎಂಬಾತನನ್ನು ಮಂಗಳೂರಿನ ಆಸ್ಪತ್ರೆಗೆ ಕರೆ ತರುವ ಸಂದರ್ಭ ಆ್ಯಂಬುಲೆನ್ಸ್ ಅನ್ನು ತಡೆದು ವಾಸಸು ಕಳುಹಿಸಲಾಗಿದೆ. ಕೇರಳ ಮುಖ್ಯಮಂತ್ರಿ ಪಿನರಾಯಿ ವಿಜಯನ್ ಕರ್ನಾಟಕದ ಮುಖ್ಯ ಕಾರ್ಯದರ್ಶಿಗಳ ಜೊತೆಗೆ ಮಾತುಕತೆ ನಡೆಸಿದ್ದು, ಇದರಿಂದಾಗಿ ತುರ್ತು ಚಿಕಿತ್ಸೆಗೆ ಆ್ಯಂಬುಲೆನ್ಸ್ ಗಡಿ ಪ್ರವೇಶ ಮಾಡಬಹುದು ಎಂದು ತಿಳಿಸಿದ್ದರು. ಅದಕ್ಕಾಗಿ ಕಾಸರಗೋಡು ಜಿಲ್ಲಾಧಿಕಾರಿ ಹಾಗೂ ಆರೋಗ್ಯ ಅಧಿಕಾರಿಗಳ

ಸುಟ್ಟಗಾಯಗಳೊಂದಿಗೆ ಬಂದ ಬಾಲಕನಿದ್ದ ಕೇರಳದ ಆ್ಯಂಬುಲೆನ್ಸ್ ವಾಪಸ್ Read More »

ಕರಾವಳಿ

ಕಲಬುರಗಿಯಲ್ಲಿ ಕೊರೋನಗೆ ಮತ್ತೋರ್ವ ಬಲಿ

ಚಿಕಿತ್ಸೆ ನೀಡಿದ ಖಾಸಗಿ ಆಸ್ಪತ್ರೆಗೆ ಜಿಲ್ಲಾಡಳಿತದಿಂದ ಬೀಗ ಕಲಬುರಗಿ, ಎ.8: ರಾಜ್ಯದಲ್ಲಿ ಕೋವಿಡ್-19 ಸೋಂಕಿಗೆ ಮತ್ತೊಂದು ಬಲಿಯಾಗಿದೆ. ಕಲಬುರಗಿಯ 65 ವರ್ಷದ ಸೋಂಕಿತ ವ್ಯಕ್ತಿಯೋರ್ವರು ಮೃತಪಟ್ಟಿದ್ದಾರೆ. ಈ ಮೂಲಕ ಕಲಬುರಗಿಯಲ್ಲಿ ಸೋಂಕಿಗೆ ಇಬ್ಬರು ಬಲಿಯಾಗಿದೆ. ರಾಜ್ಯದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿದೆ. ರಾಜ್ಯದಲ್ಲಿ ಮತ್ತೆ 6 ಕೊರೋನ ಪಾಸಿಟಿವ್ ಪ್ರಕರಣ ದೃಢಪಟ್ಟಿದ್ದು, ಮಾರಕ ಸೋಂಕು ತಗುಲಿದವರ ಸಂಖ್ಯೆ 181ಕ್ಕೆ ಏರಿಕೆಯಾಗಿದ್ದು, ಮತ್ತಷ್ಟು ಭೀತಿ ತಂದೊಡ್ಡಿದೆ. ಕಲಬುರಗಿ ಮೂಲದ 65 ವರ್ಷದ ವೃದ್ಧರೊಬ್ಬರು ಕೊರೋನ ಸೋಂಕಿಗೆ ಬಲಿಯಾಗಿದ್ದಾರೆ. ಸೋಂಕಿಗೆ

ಕಲಬುರಗಿಯಲ್ಲಿ ಕೊರೋನಗೆ ಮತ್ತೋರ್ವ ಬಲಿ Read More »

ಕರ್ನಾಟಕ

ಕರಾವಳಿ ಕಾವಲು ಪಡೆಯಿಂದ ಕಡಲ ದಾರಿಯಾಗಿ ನುಸುಳುವಿಕೆಗೆ ಕಟ್ಟೆಚ್ಚರ

ಮಂಗಳೂರು, ಎ.8: ಕಾಸರಗೋಡು- ಕರ್ನಾಟಕ ಸಂಪರ್ಕಿಸುವ ರಸ್ತೆ ಬಂದ್ ಮಾಡಿದ ಕಾರಣದಿಂದ, ಕೆಲವರು ಕಡಲ ಕಿನಾರೆಯ ಮೂಲಕ ಅಕ್ರಮವಾಗಿ ದ.ಕ. ಜಿಲ್ಲೆ ಪ್ರವೇಶಿಸಲು ಪ್ರಯತ್ನ ನಡೆಸುತ್ತಿರುವ ಸಂಗತಿ ಬೆಳಕಿಗೆ ಬಂದಿದ್ದು, ಈಗ ಕರಾವಳಿ ಕಾವಲು ಪೊಲೀಸ್ ಪಡೆ ಕಡಲ ಕಿನಾರೆಯಲ್ಲಿ ಹದ್ದಿನ ಕಣ್ಣಿರಿಸಿದೆ. ಕಾಸರಗೋಡಿನ ಕೋವಿಡ್ 19 ಸೋಂಕಿತರ ಸಂಪರ್ಕದಲ್ಲಿರುವ ಬಹುತೇಕ ಮಂದಿ ಗಡಿ ಭಾಗದಲ್ಲಿಯೇ ಇರುವ ಕಾರಣದಿಂದ ಅವರು ಕಡಲ ಕಿನಾರೆಯ ಮೂಲಕವೂ ದ.ಕ. ಜಿಲ್ಲೆ ಪ್ರವೇಶಿಸುವ ಸಾಧ್ಯತೆಯಿದೆ ಎಂಬ ಸುಳಿವಿನ ಆಧಾರದಲ್ಲಿ ಪೊಲೀಸ್ ಕಣ್ಗಾವಲು

ಕರಾವಳಿ ಕಾವಲು ಪಡೆಯಿಂದ ಕಡಲ ದಾರಿಯಾಗಿ ನುಸುಳುವಿಕೆಗೆ ಕಟ್ಟೆಚ್ಚರ Read More »

ಕರಾವಳಿ
Scroll to Top