breaking news ಕನ್ನಡ ಹಾಸ್ಯ ನಟ ಬುಲೆಟ್ ಪ್ರಕಾಶ್ ನಿಧನ

ಬೆಂಗಳೂರು, ಎ.6: ಕನ್ನಡದ ಹಾಸ್ಯ ನಟ ಬುಲೆಟ್ ಪ್ರಕಾಶ್ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಸಂಜೆ ನಿಧನರಾದರು. ಅವರಿಗೆ 44 ವರ್ಷ ವಯಸ್ಸಾಗಿತ್ತು. ಲಿವರ್ ಮತ್ತು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಸ್ಪಂಧಿಸದೆ ಅವರು ಸೋಮವಾರ ಸಂಜೆ ನಿಧರಾಗಿದ್ದಾರೆ. ಕಳೆದ ಹಲವು ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬುಲೆಟ್ ಪ್ರಕಾಶ್ ಅವರು ಬಳಲುತ್ತಿದ್ದರು. ಸುಮಾರು 300ಕ್ಕೂ ಹೆಚ್ಚು ಚಿತ್ರಗಳಲ್ಲಿ ಬುಲೆಟ್ ಪ್ರಕಾಶ್ ನಟಿಸಿದ್ದಾರೆ. ಸ್ವಲ್ಪ ಕಾಲ ಚಿತ್ರರಂಗದಿಂದ ದೂರ ಉಳಿದಿದ್ದ ಅವರು […]

breaking news ಕನ್ನಡ ಹಾಸ್ಯ ನಟ ಬುಲೆಟ್ ಪ್ರಕಾಶ್ ನಿಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸೋಮವಾರ 12 ಮಂದಿಗೆ ಕೊರೋನ ಸೋಂಕು ದೃಢ: ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 163ಕ್ಕೇರಿಕೆ

ಮೈಸೂರು, ಎ.6: ರಾಜ್ಯದಲ್ಲಿ ಸೋಮವಾರ ಹೊಸದಾಗಿ 12 ಮಂದಿಗೆ ಕೊರೋನ ಸೋಂಕು ಇರುವುದು ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 163ಕ್ಕೇರಿದೆ. ಈ ಪೈಕಿ ಮೈಸೂರು ಜಿಲ್ಲೆಯಲ್ಲಿ 7 ಸೋಂಕಿತರು ಪತ್ತೆಯಾಗಿದ್ದರೆ, ಬಾಗಲಕೋಟೆಯಲ್ಲಿ ಇಬ್ಬರಿಗೆ ಕೊರೋನ ಪಾಸಿಟಿವ್ ಆಗಿದೆ. ಹಾಗೆಯೇ ಬೆಂಗಳೂರು ನಗರ ಜಿಲ್ಲೆ ಹಾಗೂ ಗ್ರಾಮಾಂತರ ಜಿಲ್ಲೆಯ ಹಾಗೂ ಕೇರಳ ಮೂಲದ ತಲಾ ಒಬ್ಬರಲ್ಲಿ ಕೊರೋನ ಸೋಂಕು ಹರಡಿರುವುದು ದೃಢಪಟ್ಟಿದೆ. ಇದರೊಂದಿಗೆ ಕರ್ನಾಟಕದಲ್ಲಿ ಕೊರೋನ ಸೋಂಕಿತರ ಒಟ್ಟು ಸಂಖ್ಯೆ163ಕ್ಕೆ ಏರಿದೆ.

ಸೋಮವಾರ 12 ಮಂದಿಗೆ ಕೊರೋನ ಸೋಂಕು ದೃಢ: ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 163ಕ್ಕೇರಿಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕನ್ನಡ ಹಾಸ್ಯ ನಟ ಬುಲೆಟ್ ಪ್ರಕಾಶ್ ಆರೋಗ್ಯ ಸ್ಥಿತಿ ಗಂಭೀರ

ಬೆಂಗಳೂರು, ಎ.6: ಕನ್ನಡದ ಹಾಸ್ಯ ನಟ ಬುಲೆಟ್ ಪ್ರಕಾಶ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಲಿವರ್ ಮತ್ತು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಅವರಿಗೆ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ನಗರದ ಪೋರ್ಟಿಸ್ ಆಸ್ಪತ್ರೆಯ ಮೂಲಗಳು ತಿಳಿಸಿದೆ. ಕಳೆದ ಹಲವು ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬುಲೆಟ್ ಪ್ರಕಾಶ್ ಅವರು ಬಳಲುತ್ತಿದ್ದಾರೆ. ಸದ್ಯ ಅವರು ಕಿಡ್ನಿ ವೈಫಲ್ಯ ಮತ್ತು ಸೋಂಕಿನಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ. ಬುಲೆಟ್ ಪ್ರಕಾಶ್ ಅವರು ನಿಧನ ಹೊಂದಿದ್ದಾರೆ ಎಂದು ವದಂತಿ ಹರಡಿದ ಬೆನ್ನಲ್ಲೇ ಆಸ್ಪತ್ರೆ ಹೆಲ್ತ್ ಬುಲೆಟಿನ್

ಕನ್ನಡ ಹಾಸ್ಯ ನಟ ಬುಲೆಟ್ ಪ್ರಕಾಶ್ ಆರೋಗ್ಯ ಸ್ಥಿತಿ ಗಂಭೀರ Read More »

ಕರ್ನಾಟಕ

ಕೊರೋನ ಹೆಸರಲ್ಲಿ ಪ್ರಚೋದನಕಾರಿ, ಸುಳ್ಳು ಸುದ್ದಿ ಹರಡಿದಲ್ಲಿ ಕಠಿಣ ಕ್ರಮ: ಎಸ್ಪಿ ಎಚ್ಚರಿಕೆ

ಮಂಗಳೂರು, ಎ.6: ಇತ್ತೀಚಿನ ದಿನಗಳಲ್ಲಿ ದ.ಕ. ಜಿಲ್ಲೆಯಾದ್ಯಂತ ಕೊರೋನ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಒಂದು ಕೋಮಿನ ವಿರುದ್ಧ ಪ್ರಚೋದನಕಾರಿ ಮತ್ತು ಸುಳ್ಳು ಸುದ್ದಿ ಪ್ರಸಾರ ಮಾಡುತ್ತಿರುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಕ್ಕೆ ಪೊಲೀಸ್ ಇಲಾಖೆ ಮುಂದಾಗಿದೆ. ಅದರಂತೆ ದ.ಕ. ಜಿಲ್ಲೆಯಲ್ಲಿ ಈಗಾಗಲೇ ಕೋಮು ಭಾವನೆ ಕೆರಳಿಸುವ ಮೂಲಕ ಒಂದು ಕೋಮಿನ ವಿರುದ್ಧ ಅಪಪ್ರಚಾರ ಮತ್ತು ಸುಳ್ಳು ಸುದ್ದಿಗಳನ್ನು ಹರಿದಾಡುತ್ತಿರುವ ಆರೋಪದ ಮೇಲೆ ನಾಲ್ಕು ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ

ಕೊರೋನ ಹೆಸರಲ್ಲಿ ಪ್ರಚೋದನಕಾರಿ, ಸುಳ್ಳು ಸುದ್ದಿ ಹರಡಿದಲ್ಲಿ ಕಠಿಣ ಕ್ರಮ: ಎಸ್ಪಿ ಎಚ್ಚರಿಕೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಲಾಕ್ ಡೌನ್ ‌ಉಲ್ಲಂಘಿಸುವವರ ವಿರುದ್ಧ ಮುಂದುವರಿದ ಕಾರ್ಯಾಚರಣೆ ➤ ಕಡಬದಲ್ಲಿ ಬೆಳ್ಳಂಬೆಳಗ್ಗೆ ಹಲವು ಕಾರುಗಳು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಎ.06. ಕಳೆದೆರಡು ದಿನಗಳಿಂದ ಲಾಕ್ ಡೌನ್ ಉಲ್ಲಂಘನೆ ಮಾಡುತ್ತಿದ್ದ ಹಲವು ಖಾಸಗಿ ಕಾರುಗಳನ್ನು ವಶಪಡಿಸಿಕೊಂಡಿದ್ದ ಕಡಬ ಪೊಲೀಸರು, ಸೋಮವಾರ ಬೆಳಗ್ಗಿನಿಂದ ಮತ್ತೆ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಲಾಕ್ ಡೌನ್ ವೇಳೆಯಲ್ಲಿ ಖಾಸಗಿ ವಾಹನಗಳು ರಸ್ತೆಗಿಳಿಯಬಾರದು ಎಂಬ ಸೂಚನೆಯಿದ್ದರೂ, ಜಿಲ್ಲಾಧಿಕಾರಿಯವರ ಆದೇಶವನ್ನು ಮೀರಿ ಸಾರ್ವಜನಿಕರು ಖಾಸಗಿ ವಾಹನಗಳಲ್ಲಿ ಆಗಮಿಸುತ್ತಿದ್ದರು. ಅಂತಹವರಿಗೆ ಶಾಕ್ ನೀಡಿರುವ ಪೊಲೀಸರು ಕಾನೂನು ಉಲ್ಲಂಘಿಸಿದ ಹಲವು ಖಾಸಗಿ ವಾಹನಗಳನ್ನು ಈಗಾಗಲೇ ಮುಟ್ಟುಗೋಲು ಹಾಕಿಕೊಂಡಿದ್ದರು. ಸೋಮವಾರ ಕೂಡಾ ಕಾರ್ಯಾಚರಣೆ ಮುಂದುವರಿದಿದ್ದು, ಮತ್ತೆ ಹಲವರಿಗೆ

ಲಾಕ್ ಡೌನ್ ‌ಉಲ್ಲಂಘಿಸುವವರ ವಿರುದ್ಧ ಮುಂದುವರಿದ ಕಾರ್ಯಾಚರಣೆ ➤ ಕಡಬದಲ್ಲಿ ಬೆಳ್ಳಂಬೆಳಗ್ಗೆ ಹಲವು ಕಾರುಗಳು ಪೊಲೀಸ್ ವಶಕ್ಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮರ್ಧಾಳ ಗ್ರಾ.ಪಂ. ಬಿಲ್ ಕಲೆಕ್ಟರ್ ವಾಮನ ನಾಯ್ಕ್ ನಿಧನ

(ನ್ಯೂಸ್ ಕಡಬ) newskadaba.com ಕಡಬ, ಎ.06. ಇಲ್ಲಿನ ಮರ್ಧಾಳ ಗ್ರಾಮ ಪಂಚಾಯತ್ ನಲ್ಲಿ ಬಿಲ್ ಕಲೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ವಾಮನ ನಾಯ್ಕ್(50) ಸೋಮವಾರದಂದು ನಿಧನರಾದರು. ಭಾನುವಾರ ರಾತ್ರಿ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ 108 ಆಂಬ್ಯುಲೆನ್ಸ್ ಮೂಲಕ ಅವರನ್ನು ಪುತ್ತೂರಿಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮರ್ಧಾಳ ಗ್ರಾ.ಪಂ. ಬಿಲ್ ಕಲೆಕ್ಟರ್ ವಾಮನ ನಾಯ್ಕ್ ನಿಧನ Read More »

ಕರಾವಳಿ

ನಿಮ್ಮ ಪ್ರೇಮಿಯು ನಿಮ್ಮನ್ನು ಬಿಟ್ಟಿರಲಾರರು ನೋಡಿ ದಿನ ಭವಿಷ್ಯ

ಪ್ರೇಮ ಸಫಲತೆಯಿಂದ ಕೂಡಿರಬೇಕು. ಪ್ರೇಮಿಗಳು ಸಂತೋಷ ನೆಮ್ಮದಿ ಇಂದ ಬಾಳಬೇಕು. ಇಂತಹ ವಿಷಯವನ್ನು ನೀವು ಅಪೇಕ್ಷಿಸುವುದು ಸತ್ಯ, ಆದಕಾರಣ ಸರಳ ಪರಿಹಾರ ನಿಮ್ಮ ಅಭಿವೃದ್ಧಿಗೆ ಸಾಕ್ಷಿಯಾಗುತ್ತದೆ. ನಿಮ್ಮ ಪ್ರೇಮಿಯ ಹೆಸರನ್ನು ಐದು ಅಂಜೂರದ ಎಲೆಯಲ್ಲಿ ಬರೆದು ನೀರಿಗೆ ಬಿಡಿ ಎಂದಿಗೂ ಅವರು ನಿಮ್ಮನ್ನು ಬಿಡಲಾರದಂತೆ ಇರುವರು. ಶ್ರೀ ಮಂಜುನಾಥ ಸ್ವಾಮಿಯ ಸ್ವಾಮಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ

ನಿಮ್ಮ ಪ್ರೇಮಿಯು ನಿಮ್ಮನ್ನು ಬಿಟ್ಟಿರಲಾರರು ನೋಡಿ ದಿನ ಭವಿಷ್ಯ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಕಡಬ: ಬ್ರೇಕ್ ವೈಫಲ್ಯಗೊಂಡು ಪಲ್ಟಿಯಾದ ಕಾರು ➤ ಪ್ರಯಾಣಿಕರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಕಡಬ, ಎ.06. ತಾಂತ್ರಿಕ ತೊಂದರೆಗೊಳಗಾದ ಕಾರೊಂದು ರಸ್ತೆ ಬದಿ ಉರುಳಿ ಬಿದ್ದ ಘಟನೆ ಕಡಬ – ಪಂಜ ರಸ್ತೆಯ ಪುಳಿಕುಕ್ಕು ಬಳಿ ಸೋಮವಾರದಂದು ಸಂಭವಿಸಿದೆ. ಸುಳ್ಯ ಸಮೀಪದ ಸಂಬಂಧಿಕರೋರ್ವರ ಮೃತಪಟ್ಟ ಹಿನ್ನಲೆಯಲ್ಲಿ ಕಡಬದ ಕುಟುಂಬವೊಂದು ಮಾರುತಿ 800 ಕಾರಿನಲ್ಲಿ ಸಂಚರಿಸುತ್ತಿದ್ದ ವೇಳೆ ಬ್ರೇಕ್ ವೈಫಲ್ಯಕ್ಕೊಳಗಾಗಿ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಕಡಬ: ಬ್ರೇಕ್ ವೈಫಲ್ಯಗೊಂಡು ಪಲ್ಟಿಯಾದ ಕಾರು ➤ ಪ್ರಯಾಣಿಕರು ಅಪಾಯದಿಂದ ಪಾರು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ದ.ಕ. ಮೊದಲ ಕೊರೋನ ಸೋಂಕಿತ ಗುಣಮುಖ: ನಾಳೆ ಆಸ್ಪತ್ರೆಯಿಂದ ಬಿಡುಗಡೆ

ಮಂಗಳೂರು, ಎ.5: ದ.ಕ. ಜಿಲ್ಲೆಯಲ್ಲಿ ದಾಖಲಾಗಿದ್ದ ಮೊದಲ ಕೊರೋನ ಸೋಂಕಿತ ಗುಣಮುಖವಾಗಿದ್ದು, ಎ.6ರಂದು ಆಸ್ಪತ್ರೆಯಿಂದ ಬಿಡುಗಡೆಗೊಳ್ಳಲಿದ್ದಾರೆ. ಈ ಮೂಲಕ ಜಿಲ್ಲೆಯ ಜನತೆಯಲ್ಲಿ ಉಂಟಾಗಿದ್ದ ಆತಂಕ ದೂರವಾಗಿದೆ. ದುಬೈನಿಂದ ಬಂದಿದ್ದ 22 ವರ್ಷದ ಭಟ್ಕಳ ಮೂಲದ ವ್ಯಕ್ತಿಯಲ್ಲಿ ಕೊರೋನ ಸೋಂಕು ದೃಢಪಟ್ಟಿತ್ತು. ಮಂಗಳೂರು ವಿಮಾನ ನಿಲ್ದಾಣದ ಮೂಲಕ ಆ ವ್ಯಕ್ತಿ ಮಂಗಳೂರಿಗೆ ಆಗಮಿಸಿದ್ದ. ಮಾರ್ಚ್ 19ರಂದು ಭಟ್ಕಳ ಮೂಲದ ವ್ಯಕ್ತಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಆಗಮಿಸಿದ್ದ. ವಿಮಾನ ನಿಲ್ದಾಣದಲ್ಲಿ ತಪಾಸಣೆ ಸಂದರ್ಭ ಆತನಲ್ಲಿ ಕೊರೋನ ಸೋಂಕು

ದ.ಕ. ಮೊದಲ ಕೊರೋನ ಸೋಂಕಿತ ಗುಣಮುಖ: ನಾಳೆ ಆಸ್ಪತ್ರೆಯಿಂದ ಬಿಡುಗಡೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

3 ತಿಂಗಳ ಬಿಲ್ ಮುಂದೂಡಿಕೆ ಬಗ್ಗೆ ನಿರ್ದೇಶನ ಬಂದಿಲ್ಲ: ಮೆಸ್ಕಾಂ ಸ್ಪಷ್ಟನೆ

ಮಂಗಳೂರು, ಎ.5: ವಿದ್ಯುತ್ ಗ್ರಾಹಕರು 3 ತಿಂಗಳ ಅವಧಿಗೆ ಬಿಲ್ ಪಾವತಿಸುವುದನ್ನು ಮುಂದೂಡುವ ಕುರಿತು ಕೇಂದ್ರ ಇಂಧನ ಸಚಿವಾಲಯದಿಂದ ರಾಜ್ಯ ಸರಕಾರ ಅಥವಾ ವಿದ್ಯುತ್ ಸರಬರಾಜು ಕಂಪನಿಗಳಿಗೆ ಯಾವುದೇ ನಿರ್ದೇಶನಗಳಿಲ್ಲ. ಗ್ರಾಹಕರು ತಮ್ಮ ವಿದ್ಯುತ್ ಬಿಲ್ ಪಾವತಿಸುವಂತೆ ಮೆಸ್ಕಾಂ ಹಾಗೂ ಬೆಸ್ಕಾಂ ಪ್ರಕಟನೆಯಲ್ಲಿ ತಿಳಿಸಿದೆ. ಎಲ್ಲಾ ವಿದ್ಯುತ್ ಗ್ರಾಹಕರಿಗೆ ಸರಾಸರಿ ಬಿಲ್ ಅನ್ನು ನೀಡುವ ವ್ಯವಸ್ಥೆ ಮಾಡಲಾಗುವುದು. ಹೆಚ್.ಟಿ. ಗ್ರಾಹಕರಿಗೆ ಈಗಾಗಲೇ ವಾಸ್ತವಿಕ ರೀಡಿಂಗ್‌ನಂತೆ ಬಿಲ್ ನೀಡಲಾಗಿರುತ್ತದೆ. ಹಾಲಿ ತಂತ್ರಾಂಶದಲ್ಲಿರುವ ಗ್ರಾಹಕರುಗಳಿಗೆ ವಿದ್ಯುತ್ ಬಿಲ್‌ ಅನ್ನು ಇ-ಮೇಲ್,

3 ತಿಂಗಳ ಬಿಲ್ ಮುಂದೂಡಿಕೆ ಬಗ್ಗೆ ನಿರ್ದೇಶನ ಬಂದಿಲ್ಲ: ಮೆಸ್ಕಾಂ ಸ್ಪಷ್ಟನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top