ನೆಲ್ಯಾಡಿ: ಟ್ಯಾಂಕರ್ ಪಲ್ಟಿಯಾಗಿ ಗ್ಯಾಸ್ ಸೋರಿಕೆ ➤ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ.28. ಗ್ಯಾಸ್ ಟ್ಯಾಂಕರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬೆದ್ರೋಡಿ ಬಳಿ ಶನಿವಾರ ಬೆಳಗ್ಗೆ ಸಂಭವಿಸಿದೆ. ಗ್ಯಾಸ್ ಟ್ಯಾಂಕರ್ ಹೆದ್ದಾರಿಗೆ ಅಡ್ಡ ಬಿದ್ದುದರಿಂದ ಗ್ಯಾಸ್ ಸೋರಿಕೆ ಉಂಟಾಗಿದ್ದು, ಉಪ್ಪಿನಂಗಡಿಯಲ್ಲಿದ್ದ HPCL ಕಂಪೆನಿಯ ಅಧೀನದಲ್ಲಿದ್ದ ತುರ್ತು ಪರಿಸ್ಥಿತಿ ವಾಹನದವರು ಸ್ಥಳಕ್ಕೆ ಆಗಮಿಸಿ ಗ್ಯಾಸ್ ಸೋರಿಕೆಯನ್ನು ತಡೆಗಟ್ಟಲು ವ್ಯವಸ್ಥೆ ಮಾಡುತ್ತಿದ್ದಾರೆ‌. ಘಟನೆಯಲ್ಲಿ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿದೆ.

ನೆಲ್ಯಾಡಿ: ಟ್ಯಾಂಕರ್ ಪಲ್ಟಿಯಾಗಿ ಗ್ಯಾಸ್ ಸೋರಿಕೆ ➤ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪ್ರೇಮ ವಿಚಾರಕ್ಕೆ ಸರಳ ಪರಿಹಾರ ಮತ್ತು ದಿನ ಭವಿಷ್ಯ 9945410150

ಪ್ರೇಮವನ್ನು ಕಾಪಾಡಿಕೊಳ್ಳುವುದು ಹೇಗೆ ಮತ್ತು ಅದನ್ನು ಪಡೆದುಕೊಳ್ಳುವುದು ಹೇಗೆ ಎಂಬ ವಿಷಯ ನಿಮ್ಮಲ್ಲಿ ಕಾಡುತ್ತಿದ್ದರೆ ಚಿಂತಿಸಬೇಡಿ ಶನಿವಾರದ ದಿವಸ ತುಳಸಿಯನ್ನು ಪ್ರಾಣದೇವರಿಗೆ ಅರ್ಪಿಸಿ ಇದರಿಂದ ನಿಮ್ಮ ಕಾರ್ಯಕ್ಕೆ ಜಯ ಸಿಗುವುದು ಹೆಚ್ಚಿನ ಮಾಹಿತಿಗೆ ಕರೆ ಮಾಡಿ. ಶ್ರೀ ಜಯ ಆಂಜನೇಯಸ್ವಾಮಿ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ,

ಪ್ರೇಮ ವಿಚಾರಕ್ಕೆ ಸರಳ ಪರಿಹಾರ ಮತ್ತು ದಿನ ಭವಿಷ್ಯ 9945410150 Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಹಾಲು ಡೈರಿ, ಆಸ್ಪತ್ರೆ ಬಿಟ್ಟು ಮಿಕ್ಕಿದ್ದೆಲ್ಲಾ ಬಂದ್ ➤ ಬೆಳ್ಳಂಬೆಳಗ್ಗೆ ಪೇಟೆಗೆ ಬಂದವರಿಗೆ ಕಡಬ ಪೊಲೀಸರಿಂದ ತರಾಟೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.28. ದಕ್ಷಿಣ ಕನ್ನಡ ಜಿಲ್ಲಾದ್ಯಂತ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಆದೇಶ ಹೊರಡಿಸಲಾಗಿದ್ದು, ಯಾರೂ ಪೇಟೆಗೆ ಕಾಲಿಡದಂತೆ ಪೊಲೀಸರು ತಡೆಯುತ್ತಿದ್ದಾರೆ. ಆಸ್ಪತ್ರೆ, ಹಾಲು ಡೈರಿಯನ್ನು ಬಿಟ್ಟು ಉಳಿದೆಲ್ಲಾ ಸೇವೆಗಳನ್ನು ನಿಲ್ಲಿಸಲಾಗಿದ್ದು, ಅನಗತ್ಯವಾಗಿ ಕಡಬ ಪೇಟೆಗೆ ಆಗಮಿಸಿದ್ದವರನ್ನು ತರಾಟೆಗೆ ತೆಗೆದುಕೊಂಡ ಕಡಬ ಪೊಲೀಸರು ಹಿಂದಕ್ಕೆ ಕಳುಹಿಸುವುದು ಕಂಡುಬಂತು. ದಕ್ಷಿಣ ಕನ್ನಡ ಜಿಲ್ಲಾದ್ಯಂತ ಸಂಪೂರ್ಣ ಬಂದ್ ಮಾಡಲಾಗಿರುವುದರಿಂದ ಯಾರೂ ಮನೆಯಿಂದ ಹೊರಬಾರದೆ ಸಂಯಮ ಪಾಲಿಸಬೇಕು. ರಸ್ತೆಯಲ್ಲಿ ತಿರುಗಾಡುವುದು ಕಂಡುಬಂದರೆ ಕಾನೂನು ಕ್ರಮ‌ ಕೈಗೊಳ್ಳುವುದಾಗಿ ಕಡಬ

ಹಾಲು ಡೈರಿ, ಆಸ್ಪತ್ರೆ ಬಿಟ್ಟು ಮಿಕ್ಕಿದ್ದೆಲ್ಲಾ ಬಂದ್ ➤ ಬೆಳ್ಳಂಬೆಳಗ್ಗೆ ಪೇಟೆಗೆ ಬಂದವರಿಗೆ ಕಡಬ ಪೊಲೀಸರಿಂದ ತರಾಟೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಅಸ್ವಸ್ಥಗೊಳ್ಳುವುದಕ್ಕೆ ಮೊದಲು ಕಡಬದಲ್ಲಿ ಮಾತನಾಡಿದ್ದ ಸುಳ್ಯ ಶಾಸಕ ಎಸ್. ಅಂಗಾರ

➤➤ ವೀಡಿಯೋ | Video ಅಸ್ವಸ್ಥಗೊಳ್ಳುವುದಕ್ಕೆ ಮೊದಲು ಕಡಬದಲ್ಲಿ ಮಾತನಾಡಿದ ಸುಳ್ಯ ಶಾಸಕ ಎಸ್. ಅಂಗಾರ ವೀಡಿಯೋಗಾಗಿ??ಕ್ಲಿಕ್ ಮಾಡಿ

ಅಸ್ವಸ್ಥಗೊಳ್ಳುವುದಕ್ಕೆ ಮೊದಲು ಕಡಬದಲ್ಲಿ ಮಾತನಾಡಿದ್ದ ಸುಳ್ಯ ಶಾಸಕ ಎಸ್. ಅಂಗಾರ Read More »

ಬ್ರೇಕಿಂಗ್ ನ್ಯೂಸ್

ನೆಲ್ಯಾಡಿ: ಹಸಿವಿನಿಂದ ಕಂಗೆಟ್ಟಿದ್ದ ಭಿಕ್ಷುಕನಿಗೆ ಪೊಲೀಸರಿಂದ ಉಪಚಾರ ➤ ಮಾಸ್ಕ್, ಉಪಹಾರ, ಹಣ್ಣುಹಂಪಲು ನೀಡಿದ ಪೊಲೀಸರು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮಾ.27. ನೆಲ್ಯಾಡಿ ಬಳಿ ರಸ್ತೆಯಲ್ಲಿ ಹಸಿವಿನಿಂದ ಸಂಚರಿಸುತ್ತಿದ್ದ ಭಿಕ್ಷುಕನೋರ್ವನನ್ನು ಉಪಚರಿಸಿ ನೆಲ್ಯಾಡಿ ಹೊರ ಠಾಣೆಯ ಪೊಲೀಸರು ಮಾನವೀಯತೆ ಮೆರೆದಿದ್ದಾರೆ. ಭಿಕ್ಷುಕನನ್ನು ಗಮನಿಸಿದ ನೆಲ್ಯಾಡಿ ಹೊರ ಠಾಣೆಯ ಪೊಲೀಸ್ ಸಿಬ್ಬಂದಿಗಳು ಮಾಸ್ಕ್ ಹಾಕಿಸಿ, ಹಣ್ಣು ಹಂಪಲು, ಉಪಾಹಾರ ನೀಡಿದ್ದು, ಕರ್ತವ್ಯದ ನಡುವೆ ನಿರ್ಗತಿಕರಿಗೆ ಸಹಾಯ ಮಾಡುವುದರೊಂದಿಗೆ ಭೇಷ್ ಅನಿಸಿಕೊಂಡಿದ್ದಾರೆ.

ನೆಲ್ಯಾಡಿ: ಹಸಿವಿನಿಂದ ಕಂಗೆಟ್ಟಿದ್ದ ಭಿಕ್ಷುಕನಿಗೆ ಪೊಲೀಸರಿಂದ ಉಪಚಾರ ➤ ಮಾಸ್ಕ್, ಉಪಹಾರ, ಹಣ್ಣುಹಂಪಲು ನೀಡಿದ ಪೊಲೀಸರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಾಳೆ ದಕ್ಷಿಣ ಕನ್ನಡ ಜಿಲ್ಲೆ ಸಂಪೂರ್ಣ ಬಂದ್ ➤ ಯಾರೂ ಮನೆಯಿಂದ ಹೊರಬರದಂತೆ ಜಿಲ್ಲಾಧಿಕಾರಿ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.27. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸಾರ್ವಜನಿಕ ಓಡಾಟ ನಿರ್ಬಂಧಿಸಿ, ಎಲ್ಲಾ ಚಟುವಟಿಕೆ, ವಾಣಿಜ್ಯ, ವ್ಯವಹಾರಗಳನ್ನು ಅಂಗಡಿ ಮುಂಗಟ್ಟುಗಳನ್ನು ಸಂಪೂರ್ಣವಾಗಿ ಬಂದ್ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಕಚೇರಿಯ ಪ್ರಕಟಣೆ ತಿಳಿಸಿದೆ.     ಶುಕ್ರವಾರದಂದು ನಡೆದ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ದಿನೇ ದಿನೇ ಕೊರೋನಾ ಅಟ್ಟಹಾಸ ಜೋರಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ

ನಾಳೆ ದಕ್ಷಿಣ ಕನ್ನಡ ಜಿಲ್ಲೆ ಸಂಪೂರ್ಣ ಬಂದ್ ➤ ಯಾರೂ ಮನೆಯಿಂದ ಹೊರಬರದಂತೆ ಜಿಲ್ಲಾಧಿಕಾರಿ ಆದೇಶ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿಗೂ ಕಾಲಿಟ್ಟ ಕೊರೋನಾ ➤ ಉಪ್ಪಿನಂಗಡಿ‌ ಕರಾಯದ ಯುವಕನಲ್ಲಿ ಕೊರೋನಾ ಸೋಂಕು ದೃಢ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ.27. ಬೆಳ್ತಂಗಡಿ ತಾಲೂಕಿಗೂ ಕೊರೋನಾ ಕಾಲಿಟ್ಟಿದ್ದು, ವಿದೇಶದಿಂದ ಆಗಮಿಸಿದ ಯುವಕನಿಗೆ ಕೊರೋನ ಸೋಂಕು ತಗುಲಿರುವುದು ಶುಕ್ರವಾರ ದೃಢವಾಗಿದ್ದು, ಇದರೊಂದಿಗೆ ದ.ಕ.ಜಿಲ್ಲೆಯಲ್ಲಿ ಕೊರೋನ ಸೋಂಕಿತರ ಸಂಖ್ಯೆ ಏಳಕ್ಕೇರಿದೆ. ದುಬೈಯಲ್ಲಿದ್ದ ಉಪ್ಪಿನಂಗಡಿ ಸಮೀಪದ ಕರಾಯ ನಿವಾಸಿ 21 ವರ್ಷ ಪ್ರಾಯದ ಯುವಕ ಮಾರ್ಚ್ 21ರಂದು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಎನ್ನಲಾಗಿದೆ. ಅಲ್ಲಿಂದ ಕೆಎಸ್ಸಾರ್ಟಿಸಿ ಬಸ್ ಮೂಲಕ ಊರಿಗೆ ಬಂದಿದ್ದ ಯುವಕನಿಗೆ ಜ್ವರ ಮತ್ತು ಕೆಮ್ಮುವಿನಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಮಾರ್ಚ್ 24ರಂದು ಪುತ್ತೂರಿನ ಸರಕಾರಿ

ಬೆಳ್ತಂಗಡಿಗೂ ಕಾಲಿಟ್ಟ ಕೊರೋನಾ ➤ ಉಪ್ಪಿನಂಗಡಿ‌ ಕರಾಯದ ಯುವಕನಲ್ಲಿ ಕೊರೋನಾ ಸೋಂಕು ದೃಢ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಅನಗತ್ಯ ತಿರುಗಾಡುವವರ ವಿರುದ್ಧ ಕ್ರಿಮಿನಲ್ ಕೇಸ್: ಎಸಿ ಯತೀಶ್ ಉಳ್ಳಾಲ್ ಎಚ್ಚರಿಕೆ

➤➤ ವೀಡಿಯೋ | Video ಅನಗತ್ಯ ತಿರುಗಾಡುವವರ ವಿರುದ್ಧ ಕ್ರಿಮಿನಲ್ ಕೇಸ್: ಎಸಿ ಯತೀಶ್ ಉಳ್ಳಾಲ್ ಎಚ್ಚರಿಕೆ ➤ ಕಡಬದಲ್ಲಿ ಎಸಿ ಹೇಳಿದ್ದೇನು ಗೊತ್ತೇ..? ವೀಡಿಯೋ ಗಾಗಿ??ಕ್ಲಿಕ್ ಮಾಡಿ

ಅನಗತ್ಯ ತಿರುಗಾಡುವವರ ವಿರುದ್ಧ ಕ್ರಿಮಿನಲ್ ಕೇಸ್: ಎಸಿ ಯತೀಶ್ ಉಳ್ಳಾಲ್ ಎಚ್ಚರಿಕೆ Read More »

ಬ್ರೇಕಿಂಗ್ ನ್ಯೂಸ್

ಕ್ರೈಸ್ತ ಧರ್ಮಗುರು ವಂ| ರೆ| ಅಬ್ರಹಾಂ ಪಿ.ಕೆ. ಕೋರ್ ಎಪಿಸ್ಕೋಪಾ ರವರಿಂದ ಕೊರೋನಾ ಬಗ್ಗೆ ಸಾರ್ವಜನಿಕರಲ್ಲಿ ಮನವಿ

➤➤ ವೀಡಿಯೋ | Video ಕ್ರೈಸ್ತ ಧರ್ಮಗುರು ವಂ| ರೆ| ಅಬ್ರಹಾಂ ಪಿ.ಕೆ. ಕೋರ್ ಎಪಿಸ್ಕೋಪಾ ರವರಿಂದ ➤ ಕೊರೋನಾ ಬಗ್ಗೆ ಸಾರ್ವಜನಿಕರಲ್ಲಿ ಮನವಿ ವೀಡಿಯೋಗಾಗಿ??ಕ್ಲಿಕ್ ಮಾಡಿ

ಕ್ರೈಸ್ತ ಧರ್ಮಗುರು ವಂ| ರೆ| ಅಬ್ರಹಾಂ ಪಿ.ಕೆ. ಕೋರ್ ಎಪಿಸ್ಕೋಪಾ ರವರಿಂದ ಕೊರೋನಾ ಬಗ್ಗೆ ಸಾರ್ವಜನಿಕರಲ್ಲಿ ಮನವಿ Read More »

ಬ್ರೇಕಿಂಗ್ ನ್ಯೂಸ್

ಲಾಕ್ ಡೌನ್ ವೇಳೆ ಗೋಲಿಬಾರ್ ನಡೆಸಿದ ಪೊಲೀಸರ ಮೇಲೆ ಕ್ರಮಕೈಗೊಳ್ಳಲು ಪಾಪ್ಯುಲರ್ ಫ್ರಂಟ್ ಆಗ್ರಹ

ಬೆಂಗಳೂರು : ಕೊರೋನ ಮುಂಜಾಗ್ರತಾ ಕ್ರಮವಾಗಿ ದೇಶಾದ್ಯಂತ ಘೋಷಿಸಲಾಗಿರುವ ಲಾಕ್ ಡೌನ್ ವೇಳೆಯಲ್ಲಿ ಗೋಲಿಬಾರ್ ನಡೆಸಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಬೆಂಗಳೂರು ಪೊಲೀಸ್ ಸಿಬ್ಬಂದಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಸಿರ್ ಪಾಶ ಆಗ್ರಹಿಸಿದ್ದಾರೆ. ಇದೇ ವೇಳೆ ಕರ್ತವ್ಯನಿರತ ಪೊಲೀಸರೊಂದಿಗೆ ನಾಗರಿಕರು ಸಂಪೂರ್ಣವಾಗಿ ಕೈಜೋಡಿಸಬೇಕಾಗಿದ್ದು, ಸಂಯಮ ಕಳೆದು ಪೊಲೀಸರ ಮೇಲೆ ನಡೆಸುವ ಹಲ್ಲೆ ಕೃತ್ಯವನ್ನೂ ಪಾಪ್ಯುಲರ್ ಫ್ರಂಟ್ ಖಂಡಿಸುತ್ತದೆ. ಕೊರೋನ ಸಾಂಕ್ರಾಮಿಕ ರೋಗ ಹರಡದಂತೆ

ಲಾಕ್ ಡೌನ್ ವೇಳೆ ಗೋಲಿಬಾರ್ ನಡೆಸಿದ ಪೊಲೀಸರ ಮೇಲೆ ಕ್ರಮಕೈಗೊಳ್ಳಲು ಪಾಪ್ಯುಲರ್ ಫ್ರಂಟ್ ಆಗ್ರಹ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top