BIG BREAKING NEWS ಮಂಗಳೂರಿನಲ್ಲಿ ಪ್ರಥಮ ಕೊರೋನ ವೈರಸ್ ಧೃಢ

ಮಂಗಳೂರು, ಮಾ.22: ರಾಜ್ಯದ್ಯಾಂತ ಭೀತಿ ಸೃಷ್ಟಿಸಿರು ಕೊರೋನ ವೈರಸ್ ಮಂಗಳೂರಿಗೆ ಕಾಲಿಟ್ಟಿದೆ. ಭಟ್ಕಳ ಮೂಲದ 25ರ ಹರೆಯದ ಯುವಕ ಕೊರೋನ ಸೋಂಕು ಧೃಢಪಟ್ಟ ಬಗ್ಗೆ ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ತಿಳಿಸಿದ್ದಾರೆ. ಈ ಯುವಕ ಮಾ.19ರಂದು ದುಬೈಯಿಂದ ಸ್ಪೈಸ್ ಜೆಟ್ ವಿಮಾನದ ಮೂಲಕ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದು, ಅವರನ್ನು ಪರೀಕ್ಷೆಗೊಳಪಡಿಸಿದಾಗ ಶಂಕಿತ ಕೊರೋನ ಪತ್ತೆಯಾಗಿತ್ತು. ಇಂದು ಅವರ ಪರೀಕ್ಷಾ ವರದಿ ಬಂದಿದ್ದು, ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಇದರೊಂದಿಗೆ ದ.ಕ. ಜಿಲ್ಲೆಯಲ್ಲಿ ಮೊದಲ […]

BIG BREAKING NEWS ಮಂಗಳೂರಿನಲ್ಲಿ ಪ್ರಥಮ ಕೊರೋನ ವೈರಸ್ ಧೃಢ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸೋಮವಾರ ನಡೆಯಬೇಕಿದ್ದ ದ್ವಿತೀಯ ಪಿಯು ಪರೀಕ್ಷೆ ಮುಂದೂಡಿಕೆ

ಬೆಂಗಳೂರು, ಮಾ.22: ಸೋಮವಾರ ನಡೆಯಬೇಕಿದ್ದ ದ್ವಿತೀಯ ಪಿಯು ಪರೀಕ್ಷೆಯನ್ನು ರಾಜ್ಯ ಸರಕಾರ ಮುಂದೂಡಿದೆ ಎಂದು ರಾಜ್ಯ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಪಿಯು ವಿದ್ಯಾರ್ಥಿಗಳಿಗೆ ಈ ವರ್ಷದ ಅಂತಿಮ ವಿಷಯವಾಗಿ ಸೋಮವಾರ ಇಂಗ್ಲಿಷ್ ಭಾಷಾ ಪರೀಕ್ಷೆ ನಡೆಯಬೇಕಿತ್ತು. ಇದೀಗ ಅದನ್ನು ಮುಂದೂಡಲಾಗಿದೆ ಮುಂದಿನ ದಿನಾಂಕವನ್ನು ಮಾರ್ಚ್ 31ರ ನಂತರ ನಿರ್ಧರಿಸಲಾಗುವುದು ಎಂದು ಶಿಕ್ಷಣ ಸಚಿವರು ತಮ್ಮ ಪ್ರಕಟನೆಯಲ್ಲಿ ತಿಳಿಸಿದ್ದಾರೆ.  

ಸೋಮವಾರ ನಡೆಯಬೇಕಿದ್ದ ದ್ವಿತೀಯ ಪಿಯು ಪರೀಕ್ಷೆ ಮುಂದೂಡಿಕೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಾ.31ರವರೆಗೆ ಅಂತರ್ ರಾಜ್ಯ ಸರಕಾರಿ ಬಸ್ ಸೇವೆ ಸ್ಥಗಿತ

ಬೆಂಗಳೂರು, ಮಾ.22: ದೇಶದಲ್ಲಿ ಹೆಚ್ಚಾಗುತ್ತಿರುವ ಕೊರೋನ ವೈರಸ್ ಸೋಂಕು ಪ್ರಕರಣಗಳ ಹಿನ್ನೆಲೆಯಲ್ಲಿ ಕೇಂದ್ರ ಸರಕಾರದಿಂದ ಪ್ರಯಾಣಿಕ ರೈಲು ಸೇವೆ ಸ್ಥಗಿತ ಆದೇಶ ಹೊರಬಿದ್ದ ಬೆನ್ನಲ್ಲೇ ಇದೀಗ ಕರ್ನಾಟಕ ಸರಕಾರ ಎಲ್ಲ ಅಂತರರಾಜ್ಯ ಬಸ್ ಸೇವೆಯನ್ನು ಮಾರ್ಚ್ 31ರ ವರೆಗೆ ಸ್ಥಗಿತಗೊಳಿಸಿ ಆದೇಶ ಹೊರಡಿಸಿದೆ. ಮಾರ್ಚ್ 31ರವರೆಗೆ ಹುಬ್ಬಳ್ಳಿ-ಧಾರವಾಡದಲ್ಲಿ ಸಾರಿಗೆ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಧಾರವಾಡ ಜಿಲ್ಲೆಯಲ್ಲಿ ಮೊದಲ ಕೊರೋನ ವೈರಸ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ಹಾಗೂ ಕೊರೋನ ವೈರಸ್ ನಿಯಂತ್ರಣ ಮಾಡುವ ಸದುದ್ದೇಶದಿಂದ ಅವಳಿನಗರದಲ್ಲಿನ

ಮಾ.31ರವರೆಗೆ ಅಂತರ್ ರಾಜ್ಯ ಸರಕಾರಿ ಬಸ್ ಸೇವೆ ಸ್ಥಗಿತ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜನತಾ ಕರ್ಫ್ಯೂ: ಮಂಗಳೂರು ಸ್ತಬ್ಧ

ಮಂಗಳೂರು, ಮಾ.22: ಕೊರೋನ ವೈರಸ್ ತಡೆಯುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಜನತಾ ಕರ್ಫ್ಯೂಗೆ ಮಂಗಳೂರಿನಲ್ಲಿ ಭಾರೀ ಬೆಂಬಲ ದೊರೆತಿದೆ. ಎಂದಿಗೂ ಜನರ ಓಡಾಟದಿಂದ ಕೂಡಿರುವ ಮಂಗಳೂರು ಇಂದು ಮುಂಜಾನೆಯೇ ಮೌನದಿಂದ ಕೂಡಿದೆ. ರವಿವಾರ ಮನೆಯಲ್ಲೇ ಉಳಿದುಕೊಳ್ಳಲು ತೀರ್ಮಾನ ಮಾಡಿರುವ ನಾಗರಿಕರು ಶನಿವಾರವೇ ಪೇಟೆಗೆ ತೆರಳಿ ಬೇಕಾಗಿರುವ ಅಗತ್ಯ ವಸ್ತುಗಳ ಖರೀದಿ ಮಾಡಿದ್ದಾರೆ. ಎಲ್ಲಾ ಅಂಗಡಿ ಮುಗ್ಗಟ್ಟುಗಳು ಸಂಪೂರ್ಣವಾಗಿ ಬಂದ್ ಆಗಿದ್ದು ಕೇವಲ ಬೆರಳೆಣಿಕೆಯ ಬೈಕ್‌ಗಳನ್ನು ಹೊರತುಪಡಿಸಿ ಬೇರಾವ ವಾಹನಗಳು ರಸ್ತೆಗೆ ಇಳಿದಿಲ್ಲ. ದೇವಾಲಯ, ಮಸೀದಿ,

ಜನತಾ ಕರ್ಫ್ಯೂ: ಮಂಗಳೂರು ಸ್ತಬ್ಧ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕೊರೋನ ಭೀತಿ: ಮಾ.31ರವರೆಗೆ ದೇಶದ 75 ಜಿಲ್ಲೆಗಳು, ದ.ಕ. ಸೇರಿ ಕರ್ನಾಟಕದ 9 ಜಿಲ್ಲೆಗಳು ಲಾಕ್‌ಡೌನ್

ಹೊಸದಿಲ್ಲಿ, ಮಾ.22: ಕೊರೋನ ವೈರಸ್ ದೇಶದ ವಿವಿಧ ಭಾಗಗಳಲ್ಲಿ ಹಬ್ಬುತ್ತಿರುವ ಹಿನ್ನಲೆಯಲ್ಲಿ ಮಂಗಳೂರು ಸೇರಿದಂತೆ ದೇಶದ ಒಟ್ಟು 75 ಜಿಲ್ಲೆಗಳನ್ನು ಲಾಕ್ ಡೌನ್ ಸ್ಥಿತಿಯಲ್ಲಿರಿಸಿ ಆದೇಶ ಹೊರಡಿಸಲಾಗಿದೆ. ರಾಜ್ಯದಲ್ಲಿ ಆರು ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ ಡೌನ್ ಸ್ಥಿತಿ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಗಳೂರು, ಕಲಬುರಗಿ, ಮೈಸೂರು, ಕೊಡಗು, ಚಿಕ್ಕಬಳ್ಳಾಪುರ, ಧಾರವಾಡ, ಬೆಳಗಾವಿ ಜಿಲ್ಲೆಗಳನ್ನು ಮಾರ್ಚ್ 31ರವರೆಗೆ ಲಾಕ್‌ಡೌನ್ ಮಾಡಿ ಇಂದು ಆದೇಶ ಹೊರಡಿಸಲಾಗಿದೆ.

ಕೊರೋನ ಭೀತಿ: ಮಾ.31ರವರೆಗೆ ದೇಶದ 75 ಜಿಲ್ಲೆಗಳು, ದ.ಕ. ಸೇರಿ ಕರ್ನಾಟಕದ 9 ಜಿಲ್ಲೆಗಳು ಲಾಕ್‌ಡೌನ್ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಮತ್ತೊಬ್ಬ ವ್ಯಕ್ತಿಗೆ ಕೊರೋನ ಸೋಂಕು ಧೃಡ: ರಾಜ್ಯದಲ್ಲಿ ಪೀಡಿತರ ಸಂಖ್ಯೆ 21ಕ್ಕೆ ಏರಿಕೆ

ಧಾರವಾಡ, ಮಾ.22: ರಾಜ್ಯದಲ್ಲಿ ಮತ್ತೊಬ್ಬ ವ್ಯಕ್ತಿಗೆ ಕೊರೋನ ಸೋಂಕು ಇರುವುದು ಧೃಡಪಟ್ಟಿದ್ದು, ಇದೀಗ ರಾಜ್ಯದಲ್ಲಿ ಕೊರೋನ ಸೋಂಕಿತರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ. ಸೋಂಕಿತ ವ್ಯಕ್ತಿಯು ಆಸ್ಟ್ರೇಲಿಯಾ, ದುಬೈ, ಮಸ್ಕತ್ ಹಾಗೂ ಗೋವಾ ಮೂಲಕ ಧಾರವಾಡ ನಗರಕ್ಕೆ ಆಗಮಿಸಿರುವುದಾಗಿ ಧಾರವಾಡ ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ. ವ್ಯಕ್ತಿಯಲ್ಲಿ ಶಂಕಿತ ಕೊರೋನದ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ , ಮಾರ್ಚ್ 18 ರಂದು ಅವರು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದರು. ಅದೇ ದಿನ ಅವರ ಅವರ ಗಂಟಲು ಮತ್ತು ಮೂಗಿನ

ಮತ್ತೊಬ್ಬ ವ್ಯಕ್ತಿಗೆ ಕೊರೋನ ಸೋಂಕು ಧೃಡ: ರಾಜ್ಯದಲ್ಲಿ ಪೀಡಿತರ ಸಂಖ್ಯೆ 21ಕ್ಕೆ ಏರಿಕೆ Read More »

ಕರ್ನಾಟಕ

ಕೊರೋನ ವೈರಸ್‌ಗೆ ಮತ್ತೊಂದು ಬಲಿ ದೇಶದಲ್ಲಿ ಮೃತರ ಸಂಖ್ಯೆ 6ಕ್ಕೆ ಏರಿಕೆ

ಹೊಸದಿಲ್ಲಿ, ಮಾ.22: ಮಹಾಮಾರಿ ಕೊರೋನ ವೈರಸ್‌ಗೆ ಮುಂಬೈಯ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ದೇಶದಲ್ಲಿ ವೈರಸ್‌ನಿಂದ ಹಸುನೀಗಿದವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ ಎಂದು ವರದಿಯಾಗಿದೆ. ಮಹಾರಾಷ್ಟ್ರ ಮೂಲದ 56 ವರ್ಷದ ವ್ಯಕ್ತಿಯೊಬ್ಬರು ವೈರಸ್’ಗೆ ಬಲಿಯಾಗಿದ್ದಾರೆಂದು ತಿಳಿದುಬಂದಿದೆ. ಇದರಂತೆ ದೇಶದಲ್ಲಿ ಮಾರಕ ಕೊರೋನ ವೈರಸ್’ಗೆ ಆರು ಮಂದಿ ಬಲಿಯಾದಂತಾಗಿದೆ.

ಕೊರೋನ ವೈರಸ್‌ಗೆ ಮತ್ತೊಂದು ಬಲಿ ದೇಶದಲ್ಲಿ ಮೃತರ ಸಂಖ್ಯೆ 6ಕ್ಕೆ ಏರಿಕೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೊರೋನ ಹಿನ್ನೆಲೆ: ಎಸೆಸೆಲ್ಸಿ ಪರೀಕ್ಷೆ ಮುಂದೂಡಿಕೆ

ಬೆಂಗಳೂರು, ಮಾ.22: ಕೊರೋನ ವೈರಸ್ ಭೀತಿ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದಲ್ಲಿ ಮಾ. 27ರಿಂದ ನಿಗದಿಯಾಗಿದ್ದ ಎಸೆಸೆಲ್ಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಇಂದು ಬೆಳಗ್ಗೆ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಹಾಗೂ ಡಾ.ದೇವಿಪ್ರಸಾದ್ ಅವರೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ತೀರ್ಮಾನ ಕೈಗೊಂಡಿದ್ದಾರೆ. ಇದರ ಜೊತೆಗೆ, ವಿವಿಧ ನೇಮಕಾತಿಗಳಿಗೆ ಸಂಬಂಧಿಸಿದ ಪರೀಕ್ಷೆಗಳನ್ನು ಕೂಡ ಮುಂದೂಡಲಾಗಿದೆ.

ಕೊರೋನ ಹಿನ್ನೆಲೆ: ಎಸೆಸೆಲ್ಸಿ ಪರೀಕ್ಷೆ ಮುಂದೂಡಿಕೆ Read More »

ಕರ್ನಾಟಕ

ಎಸ್ಸೆಸ್ಸೆಲ್ಸಿ ಪರೀಕ್ಷೆ ಮುಂದೂಡಿಕೆ: ಸಿಎಂ ಘೋಷಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ.22. ಕೊರೋನ ವೈರಸ್ ಸೋಂಕು ಭೀತಿಯ ಹಿನ್ನೆಲೆಯಲ್ಲಿ ಮಾ.27ರಿಂದ ಆರಂಭವಾಗಬೇಕಿದ್ದ ಎಸೆಸೆಲ್ಸಿ ಸೇರಿದಂತೆ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನತೆ ಯಾವುದೇ ರೀತಿಯಲ್ಲಿ ಗಾಬರಿಯಾಗುವ ಅಗತ್ಯವಿಲ್ಲ. ಎಸ್ಸೆಸ್ಸೆಲ್ಸಿ ಜೊತೆಗೆ ವಿವಿಧ ನೇಮಕಾತಿಗಳಿಗೆ ಸಂಬಂಧಿಸಿದ ಪರೀಕ್ಷೆಗಳು, ಸ್ಥಳೀಯ ಸಂಸ್ಥೆಗಳು ಸೇರಿದಂತೆ ಎಲ್ಲ ಚುನಾವಣೆಗಳನ್ನು ಮುಂದೂಡಲಾಗಿದೆ. ಜೀವನಾವಶ್ಯಕ ವಸ್ತುಗಳ ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಎರಡು ತಿಂಗಳ ಪಡಿತರವನ್ನು ವಿತರಿಸಲಾಗುವುದು ಎಂದರು ಹೇಳಿದರು.

ಎಸ್ಸೆಸ್ಸೆಲ್ಸಿ ಪರೀಕ್ಷೆ ಮುಂದೂಡಿಕೆ: ಸಿಎಂ ಘೋಷಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Astrology

ಸಂಗಾತಿಯನ್ನು ಸೇರಬೇಕೆ? ದಿನಭವಿಷ್ಯ ನೋಡಿ.9945410150

ದೂರವಾಗಿರುವ ಸಂಗಾತಿಯನ್ನು ಮರಳಿ ಪಡೆಯುವ ಹಂಬಲವಿದ್ದರೆ ನೀವು ಒಂಬತ್ತು ದಿವಸಗಳ ಕಾಲ ಮೂರು ಮುಷ್ಟಿ ಅಕ್ಕಿಯನ್ನು ದಾನವಾಗಿ ನೀಡಿ ಇದರಿಂದ ಫಲಿತಾಂಶ ಬರಲಿದೆ. ಶ್ರೀ ಚಾಮುಂಡೇಶ್ವರಿ ದೇವಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು

ಸಂಗಾತಿಯನ್ನು ಸೇರಬೇಕೆ? ದಿನಭವಿಷ್ಯ ನೋಡಿ.9945410150 Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು
Scroll to Top