ಪಂಪ್ ವೆಲ್ ಫ್ಲೈಒವರ್ ನಿಂದ ಕೆಳಗೆ ಬಿದ್ದ ಕಾರು ➤ ಓರ್ವ ಮೃತ್ಯು, ಇಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ.08. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಂಪ್ ವೆಲ್ ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದ ಘಟನೆ ಶನಿವಾರ ಸಂಜೆ ನಡೆದಿದೆ. ಘಟನೆಯಲ್ಲಿ ಪ್ರಯಾಣಿಕರೋರ್ವರು ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತ ವ್ಯಕ್ತಿಯನ್ನು ಸ್ವಾಗತ್ ಗ್ಯಾರೇಜ್‌ನ ಮುಖ್ಯಸ್ಥ ಪ್ರವೀಣ್ ಫೆರ್ನಾಂಡಿಸ್ (45) ಎಂದು ಗುರುತಿಸಲಾಗಿದೆ. ನಂತೂರಿನಿಂದ ಉಳ್ಳಾಲ ಕಡೆಗೆ ತೆರಳುತ್ತಿದ್ದ ಮಾರುತಿ ಆಲ್ಟೋ 800 ಕಾರು ಚಾಲಕನ ನಿಯಂತ್ರಣ ತಪ್ಪಿ ಪಂಪ್ವೆಲ್ ಫ್ಲೈಓವರ್ ಕೊನೆಯಲ್ಲಿ ವಿರುದ್ದ ದಿಕ್ಕಿನಿಂದ ಆಗಮಿಸುತ್ತಿದ್ದ ಡಸ್ಟರ್ ಕಾರಿಗೆ ಢಿಕ್ಕಿ ಹೊಡೆದು […]

ಪಂಪ್ ವೆಲ್ ಫ್ಲೈಒವರ್ ನಿಂದ ಕೆಳಗೆ ಬಿದ್ದ ಕಾರು ➤ ಓರ್ವ ಮೃತ್ಯು, ಇಬ್ಬರು ಗಂಭೀರ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸುಳ್ಯ: ಕೆಎಸ್ಸಾರ್ಟಿಸಿ ಬಸ್ ಮತ್ತು ಬೈಕ್ ನಡುವೆ ಢಿಕ್ಕಿ ➤ ಸವಾರ ಮೃತ್ಯು, ಸಹ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಸುಳ್ಯ, ಫೆ.08. ಬೈಕ್ ಮತ್ತು ಬಸ್ ನಡುವೆ ಢಿಕ್ಕಿ ಉಂಟಾದ ಪರಿಣಾಮ ಬೈಕ್ ಸವಾರ ಮೃತಪಟ್ಟು, ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಶನಿವಾರ ಸಂಜೆ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅರಂತೋಡು ಎಂಬಲ್ಲಿ ನಡೆದಿದೆ. ಮೃತ ಸವಾರನನ್ನು ಜೋಡುಪಾಲ ಸಮೀಪದ ನಿವಾಸಿ ವಿನುತ್ ಎಂದು ಗುರುತಿಸಲಾಗಿದ್ದು, ಗಾಯಾಳುವನ್ನು ರಾಜಪ್ಪ ಎಂದು ತಿಳಿದುಬಂದಿದೆ. ಗಂಭೀರ ಗಾಯಗೊಂಡ ರಾಜಪ್ಪರವರನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಸುಳ್ಯ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ

ಸುಳ್ಯ: ಕೆಎಸ್ಸಾರ್ಟಿಸಿ ಬಸ್ ಮತ್ತು ಬೈಕ್ ನಡುವೆ ಢಿಕ್ಕಿ ➤ ಸವಾರ ಮೃತ್ಯು, ಸಹ ಸವಾರ ಗಂಭೀರ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ನಾದಿನಿಯ ಮೇಲೆ ಆ್ಯಸಿಡ್ ಎರಚಿದ ಪ್ರಕರಣ ➤ ಕರ್ತವ್ಯ ಲೋಪ ಎಸಗಿದ ಎಎಸ್ಐ ಚಂದ್ರಶೇಖರ್ ಅಮಾನತು

ಆರೋಪಿ ಜಯಾನಂದ (ನ್ಯೂಸ್ ಕಡಬ) newskadaba.com ಕಡಬ, ಫೆ‌.08. ಮಹಿಳೆಯೋರ್ವರ ಮುಖಕ್ಕೆ ಆಕೆಯ ಬಾವ ಆ್ಯಸಿಡ್ ಎರಚಿದ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ಕಡಬ ಠಾಣಾ ಎಎಸೈ ಯನ್ನು ಅಮಾನತುಗೊಳಿಸಿ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಲಕ್ಷ್ಮೀ ಪ್ರಸಾದ್ ಆದೇಶಿಸಿದ್ದಾರೆ. ಕೋಡಿಂಬಾಳ ಗ್ರಾಮದ ಕೊಠಾರಿ ನಿವಾಸಿ ಜಯಾನಂದ ಕೊಠಾರಿ(55) ಎಂಬಾತ ತನ್ನ ತಮ್ಮನ ಪತ್ನಿ ವಿಧವೆ ಸ್ವಪ್ನಾ(35) ಹಾಗೂ ಆಕೆಯ ಹೆಣ್ಣುಮಗಳ ಮುಖಕ್ಕೆ ಆ್ಯಸಿಡ್ ಎರಚಿದ್ದ ವೇಳೆ ಕಡಬ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಎಎಸ್ಐ ಚಂದ್ರಶೇಖರ್ ಎಂಬವರು

ಕಡಬ: ನಾದಿನಿಯ ಮೇಲೆ ಆ್ಯಸಿಡ್ ಎರಚಿದ ಪ್ರಕರಣ ➤ ಕರ್ತವ್ಯ ಲೋಪ ಎಸಗಿದ ಎಎಸ್ಐ ಚಂದ್ರಶೇಖರ್ ಅಮಾನತು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ರಾಷ್ಟ್ರಮಟ್ಟದಲ್ಲಿ ಚಿನ್ನಕ್ಕೆ ಮುತ್ತಿಕ್ಕಿದ ಕಡಬದ ಮೋಹನ್ ಕೆರೆಕೋಡಿ ➤ ಕಡಬದಿಂದ ಜಪಾನ್ ತಲುಪಿದ ಕ್ರೀಡಾ ಸಾಧಕನಿಗೊಂದು ಸಲಾಂ

(ನ್ಯೂಸ್ ಕಡಬ) newskadaba.com ಕಡಬ, ಫೆ.08. ಭಾರತೀಯ ಮಾಸ್ಟರ್ ಫೆಡರೇಷನ್ ವತಿಯಿಂದ ಗುಜರಾತಿನ ವಡೋದರದಲ್ಲಿ ಫೆಬ್ರವರಿ 5 ರಿಂದ 9 ರವರೆಗೆ ನಡೆದ ರಾಷ್ಟ್ರಮಟ್ಟದ ಅತ್ಲೇಟಿಕ್ಸ್ ನಲ್ಲಿ ಕಡಬದ ಮೋಹನ್ ಕೆರೆಕೋಡಿ 800 ಮೀಟರ್ ಓಟದಲ್ಲಿ ಕಂಚಿನ ಪದಕ 4×400 ಮೀಟರ್ ರಿಲೇಯಲ್ಲಿ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ. ಇದರೊಂದಿಗೆ 2021ರಲ್ಲಿ ಜಪಾನ್ ನ ಟೋಕಿಯೋದಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ 1 ಚಿನ್ನ, 2 ಬೆಳ್ಳಿ, 1 ಕಂಚಿನ

ರಾಷ್ಟ್ರಮಟ್ಟದಲ್ಲಿ ಚಿನ್ನಕ್ಕೆ ಮುತ್ತಿಕ್ಕಿದ ಕಡಬದ ಮೋಹನ್ ಕೆರೆಕೋಡಿ ➤ ಕಡಬದಿಂದ ಜಪಾನ್ ತಲುಪಿದ ಕ್ರೀಡಾ ಸಾಧಕನಿಗೊಂದು ಸಲಾಂ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್
Astrology

ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಪ್ರಾಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ

ಶ್ರೀ ಆಂಜನೇಯ ಸ್ವಾಮಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ ರಾಶಿ ಆರೋಗ್ಯದಲ್ಲಿ ಹೆಚ್ಚಿನ

ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಪ್ರಾಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ Read More »

ಕರಾವಳಿ

ನಿಧನ ನ್ಯೂಸ್ ➤ ನೆಲ್ಯಾಡಿ: ಕೊಣಾಲು ಪುದುಕಾಟಿಲ್ ನಿವಾಸಿ ಜಾರ್ಜ್

(ನ್ಯೂಸ್ ಕಡಬ) newskadaba.com ನೆಲ್ಯಾಡಿ ಫೆ.08. ಕೊಣಾಲು ಪುದುಕಾಟಿಲ್ ನಿವಾಸಿ, ಹಿರಿಯರಾದ ಜಾರ್ಜ್ (97) ರವರು ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ಕೊಣಾಲಿನ ಸ್ವಗೃಹದಲ್ಲಿ ನಿಧನರಾದರು. ಆರಂಭಿಕ ಕಾಲದಲ್ಲಿ ನೆಲ್ಯಾಡಿಯ ಆರ್ಲದಲ್ಲಿ ವ್ಯಾಪಾರಸ್ಥರಾಗಿದ್ದ ಇವರು ಕೊಣಾಲು ಸಂತ ತೋಮಸ್ ಜಾಕೋಬೈಟ್ ಚರ್ಚಿನ ನಿರ್ಮಾಣ ರೂವಾರಿಗಳಲ್ಲಿ ಓರ್ವರಾಗಿದ್ದರು. ಹಲವಾರು ಸಮಾಜಮುಖಿ ಸೇವೆಗಳು, ದಾನ ಧರ್ಮಗಳ ಮೂಲಕ ನೆಲ್ಯಾಡಿ ಪರಿಸರದಲ್ಲಿ ಚಿರಪರಿಚಿತರು. ಮೃತರ ಮನೆಗೆ ವಿವಿಧ ರಾಜಕೀಯ, ಧಾರ್ಮಿಕ, ಸಾಮಾಜಿಕ ಮುಖಂಡರು ಆಗಮಿಸಿ ಅಂತಿಮ ದರ್ಶನ ಮಾಡುತ್ತಿದ್ದು, ಮೃತರ ಅಂತಿಮ

ನಿಧನ ನ್ಯೂಸ್ ➤ ನೆಲ್ಯಾಡಿ: ಕೊಣಾಲು ಪುದುಕಾಟಿಲ್ ನಿವಾಸಿ ಜಾರ್ಜ್ Read More »

ಕರಾವಳಿ

ಕಾಸರಗೋಡು: ಬೈಕ್ ಹಾಗೂ ವ್ಯಾನ್ ನಡುವೆ ಢಿಕ್ಕಿ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com, ಕಾಸರಗೋಡು. ಫೆ. 7. ಬೈಕ್ ಹಾಗೂ ವ್ಯಾನ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟು ಸಹ ಸವಾರ ಗಾಯಗೊಂಡ ಘಟನೆ ಬಂದ್ಯೋಡು ಸಮೀಪದ ಮುಟ್ಟ ಎಂಬಲ್ಲಿ ಇಂದು ನಡೆದಿದೆ. ಮೃತರನ್ನು ಕಾಸರಗೋಡು ಸಿರಿಬಾಗಿಲು ನಿವಾಸಿ ಮುಹಮ್ಮದ್ ಶಾಬಿಲ್ (22) ಎಂದು ಗುರುತಿಸಲಾಗಿದೆ. ಈತ ಮಂಗಳೂರು ಖಾಸಗಿ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ಗಾಯಗೊಂಡ ಸಹಸವಾರ ಆಶಿಮ್ (22) ಎಂಬಾತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕುಂಬಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ

ಕಾಸರಗೋಡು: ಬೈಕ್ ಹಾಗೂ ವ್ಯಾನ್ ನಡುವೆ ಢಿಕ್ಕಿ ➤ ಸವಾರ ಮೃತ್ಯು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕೊರೊನೊ ವೈರಸ್ ➤ 20,000 ಕ್ಕೂ ಅಧಿಕ ರೋಗಿಗಳ ಸಾಮೂಹಿಕ ಹತ್ಯೆಗೆ ಮುಂದಾದ ಚೀನಾ

(ನ್ಯೂಸ್ ಕಡಬ)newskadaba.com, ಚೀನಾ. ಫೆ.7. ಮಾರಕವಾಗಿ ಪರಿಣಮಿಸುತ್ತಿರುವ ಮಾರಣಾಂತಿಕ ಕೊರೊನೊ ವೈರಸ್ ಇನ್ನಷ್ಟು ಹರಡುವುದನ್ನು ತಪ್ಪಿಸಲು 20,000ಕ್ಕೂ ಅಧಿಕ ಕೊರೊನೊ ವೈರಸ್ ಬಾಧಿತ ರೋಗಿಗಳನ್ನು ಸಾಮೂಹಿಕವಾಗಿ ಹತ್ಯೆ ಮಾಡಲು ಚೀನಾ ಸರಕಾರ ನ್ಯಾಯಾಲಯದ ಅನುಮತಿಗೆ ಕಾಯುತ್ತಿದೆ ಎಂಬ ಬೆಚ್ಚಿಬೀಳಿಸುವ ಆತಂಕಕಾರಿ ಸುದ್ದಿ ಬಹಿರಂಗವಾಗಿದೆ. ಕೊರೊನೊ ವೈರಸ್ ಗೆ ಒಳಗಾದ ರೋಗಿಗಳನ್ನು ಸಾಮೂಹಿಕವಾಗಿ ಹತ್ಯೆ ಮಾಡಲು ಚೀನಾದ ಅತ್ಯುನ್ನತ ಮಟ್ಟದ ನ್ಯಾಯಾಲಯ, ಸುಪ್ರೀಂ ಪೀಪಲ್ಸ್ ಕೋರ್ಟ್ ಇಂದು ಅನುಮತಿ ನೀಡುವ ನಿರೀಕ್ಷೆಯಿದೆ. ವೈರಸ್ ವಿರುದ್ಧದ ಹೋರಾಟದಲ್ಲಿ ಯಾವುದೇ ಭರವಸೆಯಿಲ್ಲದ

ಕೊರೊನೊ ವೈರಸ್ ➤ 20,000 ಕ್ಕೂ ಅಧಿಕ ರೋಗಿಗಳ ಸಾಮೂಹಿಕ ಹತ್ಯೆಗೆ ಮುಂದಾದ ಚೀನಾ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಳ್ಳಾರೆ: ಡಾ| ಬಿ.ಎಂ ಶೆಟ್ಟಿ ಇನ್ನಿಲ್ಲ

(ನ್ಯೂಸ್ ಕಡಬ) newskadaba.com, ಸುಳ್ಯ. ಫೆ.7. ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ, ವೈದ್ಯ ಡಾ.ಬಿ.ಎಂ.ಶೆಟ್ಟಿ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ವೈದ್ಯರಾಗಿ, ಪ್ರಗತಿಪರ ಕೃಷಿಕರಾಗಿ, ಧಾರ್ಮಿಕ ನೇತಾರರಾಗಿ ಸಮಾಜದಲ್ಲಿ ಗುರುತಿಸಿಕೊಂಡಿದ್ದ ಬೆಳ್ಳಾರೆಯ ಡಾ.ಬಿ.ಎಂ. ಶೆಟ್ಟಿ ತಡಗಜೆ ಅವರು ದಾವಣಗೆರೆ ಜಿಲ್ಲೆಯ ಜಗಳೂರು ಎಂಬಲ್ಲಿ 25 ವರ್ಷ ವೈದ್ಯಕೀಯ ಸೇವೆ ಸಲ್ಲಿಸಿದ್ದರು. ಬಳಿಕ ಊರಿಗೆ ಹಿಂತಿರುಗಿ ಕೃಷಿ ಹಾಗೂ ಧಾರ್ಮಿಕ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಮೃತರು ಪತ್ನಿ, ನಾಲ್ವರು ಪುತ್ರರು, ಸೊಸೆಯಂದಿರು,

ಬೆಳ್ಳಾರೆ: ಡಾ| ಬಿ.ಎಂ ಶೆಟ್ಟಿ ಇನ್ನಿಲ್ಲ Read More »

ಕರಾವಳಿ, ಕ್ರೈಮ್ ನ್ಯೂಸ್

ಪ್ರಮಾಣ ವಚನ ಸ್ವೀಕರಿಸಿದ ದಿನವೇ ಬಿಗ್ ಶಾಕ್ ನೀಡಿದ ಬಿಜೆಪಿ ಸರಕಾರ

(ನ್ಯೂಸ್ ಕಡಬ)newskadaba.com, ಫೆ. 7. ರಾಜ್ಯದ ಬಿಜೆಪಿಯ ನೂತನ ಸಚಿವರಿಗೆ ಮೊದಲ ದಿನವೇ ಬಿಗ್ ಟಾಸ್ಕ್ ನೀಡಲಾಗಿದ್ದು, ರಾಜ್ಯ ಬಿಜೆಪಿ ಕಚೇರಿಯಲ್ಲಿ ವಾರದಲ್ಲಿ ಒಂದು ದಿನ 2 ಗಂಟೆ ಇರಲೇಬೇಕೆಂದು ಸೂಚನೆ ನೀಡಲಾಗಿದೆ. ನಿಮ್ಮ ಕಚೇರಿಗಳಲ್ಲಿಯೂ ಕೆಲಸ ಮಾಡುವಂತೆ ಹಾಗೂ ಪಕ್ಷದ ಕಚೇರಿಗೂ ಕಡ್ಡಾಯವಾಗಿ ಭೇಟಿ ನೀಡಬೇಕು ಎಂದು ಬಿಜೆಪಿ ಕಚೇರಿಯಿಂದ ನೂತನ ಸಚಿವರಿಗೆ ಸಂದೇಶ ನೀಡಲಾಗಿದೆ. ಸಚಿವರಾದ ನಾರಾಯಣಗೌಡ, ಶಿವರಾಮ್ ಹೆಬ್ಬಾರ್, ಸುಧಾಕರ್ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಬಿಜೆಪಿ ಕಚೇರಿಗೆ ಭೇಟಿ ನೀಡಿದ್ದಾರೆ. ಪಕ್ಷದ

ಪ್ರಮಾಣ ವಚನ ಸ್ವೀಕರಿಸಿದ ದಿನವೇ ಬಿಗ್ ಶಾಕ್ ನೀಡಿದ ಬಿಜೆಪಿ ಸರಕಾರ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್
Scroll to Top