ಮಾಜಿ ಸಚಿವ ಅಮರನಾಥ ಶೆಟ್ಟಿ ನಿಧನ

  ಮಂಗಳೂರು, ಜ.27: ಮಾಜಿ ಸಚಿವ, ಜೆಡಿಎಸ್ ಹಿರಿಯ ಮುಖಂಡ ಅಮರನಾಥ ಶೆಟ್ಟಿ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಬೆಳಗ್ಗೆ ನಿಧನರಾದರು. ಅವರಿಗೆ 81 ವರ್ಷ ವಯಸ್ಸಾಗಿತ್ತು. ಎರಡು ವಾರಗಳಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಮೂಡುಬಿದಿರೆ ವಿಧಾನಸಭಾ ಕ್ಷೇತ್ರದಿಂದ ಸತತ ಮೂರು ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ದಾಖಲಿಸಿ ಸಚಿವರಾಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರಿಯರ ಸಹಿತ ಅಪಾರ ಬಂಧು ಬಳಗ, ಅಭಿಮಾನಿಗಳನ್ನು ಅಗಲಿದ್ದಾರೆ.

ಮಾಜಿ ಸಚಿವ ಅಮರನಾಥ ಶೆಟ್ಟಿ ನಿಧನ Read More »

ಕರಾವಳಿ

ಬೆಂಗಳೂರು: ಪೊಲೀಸ್ ಮಾಹಿತಿದಾರನ ಬರ್ಬರ ಕೊಲೆ

ಬೆಂಗಳೂರು, ಜ.27: ಪೊಲೀಸ್ ಮಾಹಿತಿದಾರನೋರ್ವನನ್ನು ಇರಿದು ಬರ್ಬರವಾಗಿ ಹತ್ಯೆಗೈದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೊಲೆಯಾದವರನ್ನು ಪ್ರಭು ಅಲಿಯಾಸ್ ಅಪ್ಪು(27) ಎಂದು ಗುರುತಿಸಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ ಸಿದ್ದೇಶ್ವರ ಕೋ ಆಪರೇಟಿವ್ ಬ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿದ್ದ ಪ್ರಭು ಬ್ಯಾಂಕ್‌ನಲ್ಲಿ ಚೆಕ್ ಸಂಗ್ರಹಿಸುವ ಕೆಲಸವನ್ನು ಮಾಡುತ್ತಿದ್ದರು. ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ವೇಳೆ ಹಿಂಬಾಲಿಸಿಕೊಂಡು ಬಂದ ದುಷ್ಕರ್ಮಿಗಳು ಪ್ರಭು ಅವರಿಗೆ ಹಲವು ಬಾರಿ ಇರಿದಿದ್ದಾರೆ. ರಕ್ತಸ್ರಾವದಿಂದ ಪ್ರಭು ಸ್ಥಳದಲ್ಲೇ ಮೃತಪಟ್ಟರು ಎಂದು ಪೊಲೀಸರು ಹೇಳಿದರು. ಪ್ರಕರಣ ದಾಖಲಿಸಿಕೊಂಡಿರುವ ಬಸವೇಶ್ವರ ನಗರ

ಬೆಂಗಳೂರು: ಪೊಲೀಸ್ ಮಾಹಿತಿದಾರನ ಬರ್ಬರ ಕೊಲೆ Read More »

ಕರ್ನಾಟಕ

ಪ್ರಖ್ಯಾತ ನಿರೂಪಕ, ನಟ ಸಂಜೀವ್ ಕುಲಕರ್ಣಿ ನಿಧನ

ಬೆಂಗಳೂರು, ಜ.27: ಪ್ರಖ್ಯಾತ ನಿರೂಪಕ, ಕಿರುತರೆ ನಟ ಸಂಜೀವ್ ಕುಲಕರ್ಣಿ (49) ಅನಾರೋಗ್ಯದಿಂದ ಶನಿವಾರದಂದು ನಿಧನ ಹೊಂದಿದ್ದಾರೆ. ಸಂಜೀವ್ ಕಳೆದ ಹಲವು ವರ್ಷಗಳಿಂದ ಗಂಭೀರ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಸಂಜೀವ ಕುಲಕರ್ಣಿಯವರು ಕಿರುತರೆ ನಟರಾಗಿದ್ದು, ಸಾಕಷ್ಟು ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಅಲ್ಲದೆ, ಪ್ರಖ್ಯಾತ ನಿರೂಪಕರೂ ಆಗಿದ್ದು, ವಿವಿಧ ಕಾರ್ಯಕ್ರಮಗಳ ವೇದಿಕೆಯಲ್ಲಿ ನಿರೂಪಣೆ ಮಾಡಿ ಮೆಚ್ಚುಗೆ ಗಳಿಸಿದ್ದಾರೆ. ಅಂತ್ಯಕ್ರಿಯೆಯನ್ನು ಚಾಮರಾಮಪೇಟೆಯ ಟಿಆರ್’ ಮಿಲ್ ಬಳಿಯ ಸ್ಮಶಾನದಲ್ಲಿ ಇಂದು ಬೆಳಿಗ್ಗೆ 9 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಸಂಜೀವ ಕುಲಕರ್ಣಿಯವರ

ಪ್ರಖ್ಯಾತ ನಿರೂಪಕ, ನಟ ಸಂಜೀವ್ ಕುಲಕರ್ಣಿ ನಿಧನ Read More »

ಕರಾವಳಿ

ಧಾರವಾಡದಲ್ಲಿ ಕಾರುಗಳ ಮುಖಾಮುಖಿ ಢಿಕ್ಕಿ: ಶಿವಾನಂದ ಮಠದ ಬಸವೇಶ್ವರ ಸ್ವಾಮೀಜಿ ಸೇರಿ ನಾಲ್ವರು ಮೃತ್ಯು

ಧಾರವಾಡ, ಜ.27: ಎರಡು ಕಾರುಗಳು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಕುಂದಗೊಳದ ಶಿವಾನಂದ ಮಠದ ಬಸವೇಶ್ವರ ಸ್ವಾಮೀಜಿ ಸೇರಿ ನಾಲ್ವರು ಮೃತಪಟ್ಟು, ಮೂವರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 4ರ ಯರಿಕೊಪ್ಪಬಳಿ ನಡೆದಿದೆ. ಇಂಡಿಕಾ ಕಾರಿನಲ್ಲಿ ಹೊರಟಿದ್ದ ಸ್ವಾಮೀಜಿ ಕಾರಿನ ಮುಂಭಾಗದಲ್ಲಿ ಕುಳಿತಿದ್ದರು. ಅಪಘಾತದಲ್ಲಿ ಚಿಕ್ಕೊಡಿ ತಾಲೂಕಿನ ಕಬ್ಬೂರು ಗ್ರಾಮದ ಚಾಲಕ ಕೂಡಾ ಮೃತಪಟ್ಟಿದ್ದಾರೆ. ಕಾರಿನ ಹಿಂಬದಿ ಕುಳಿತಿದ್ದ ಬಸಪ್ಪಪೂಜಾರ, ಸಿದ್ದಪ್ಪ ಇಂಗಳಳ್ಳಿ, ಕಾಂಗ್ರೆಸ್ ಮುಖಂಡ ವಿನಯ ಕುಲಕರ್ಣಿ ಸಂಬಂಧಿ ಸೋಮಣ್ಣ ದೇಸಾಯಿ ಗಾಯಗೊಂಡಿದ್ದು, ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ

ಧಾರವಾಡದಲ್ಲಿ ಕಾರುಗಳ ಮುಖಾಮುಖಿ ಢಿಕ್ಕಿ: ಶಿವಾನಂದ ಮಠದ ಬಸವೇಶ್ವರ ಸ್ವಾಮೀಜಿ ಸೇರಿ ನಾಲ್ವರು ಮೃತ್ಯು Read More »

ಕರ್ನಾಟಕ

ನಾರಾವಿ: ಬಸ್ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು

ಬೆಳ್ತಂಗಡಿ, ಜ.27: ಬೈಕ್‌ಗೆ ಬಸ್ ಢಿಕ್ಕಿಯೊಡೆದು ಸವಾರ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ನಾರಾವಿಯಲ್ಲಿ ರವಿವಾರ ಸಂಜೆ ಸಂಭವಿಸಿದೆ. ಮೃತರನ್ನು ಅಳದಂಗಡಿ ನಿವಾಸಿ ಸದಾಶಿವ ಹೆಗ್ಡೆ ಅವರ ಪುತ್ರ ಅರವಿಂದ ಹೆಗ್ಡೆ (27) ಎಂದು ಗುರುತಿಸಲಾಗಿದೆ. ಕಾರ್ಕಳದಿಂದ ನಾರಾವಿ ಮಾರ್ಗವಾಗಿ ಬೆಳ್ತಂಗಡಿ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ರಾಜ್ಯ ಹೆದ್ದಾರಿ ನಾರಾವಿ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗ ಬೈಕ್‌ಗೆ ಢಿಕ್ಕಿಯೊಡೆಯಿತು ಎನ್ನಲಾಗಿದೆ. ತಕ್ಷಣ ಗಾಯಾಳನ್ನು ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ಸಾಗಿಸಲಾಯಿತಾದರೂ ದಾರಿ ಮಧ್ಯೆ ಅಸುನೀಗಿದ್ದಾರೆ. ಈ ಬಗ್ಗೆ

ನಾರಾವಿ: ಬಸ್ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು Read More »

ಕರಾವಳಿ

ಮಂಜುನಾಥ ಸ್ವಾಮಿಯ ಕೃಪೆಯಿಂದ ದಿನ ಭವಿಷ್ಯ ತಿಳಿಯೋಣ.

ಮಂಜುನಾಥ ಸ್ವಾಮಿಯ ಕೃಪೆಯಿಂದ ಆಂಜನೇಯ ಸ್ವಾಮಿ ಉಪಾಸಕರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ಮಕ್ಕಳ ವಿದ್ಯಾಭ್ಯಾಸದಲ್ಲಿ ತೊಂದರೆ, ಆರೋಗ್ಯದ ಸಮಸ್ಯೆ, ವ್ಯವಹಾರದಲ್ಲಿನ ನಷ್ಟ, ಪ್ರೇಮ ವಿಷಯದಲ್ಲಿ ಸೋಲು, ಪತಿ-ಪತ್ನಿ ಮನಸ್ತಾಪ, ಸಂತಾನದಲ್ಲಿನ ಸಮಸ್ಯೆ, ಹಿತಶತ್ರುಗಳ ಕೈವಾಡ ದೋಷ, ಹಣಕಾಸಿನಲ್ಲಿ ಸಮಸ್ಯೆ, ಜನವಶ, ಮನವಶ, ಧನವಶ ಯಾವುದೇ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ದ. ಪೂಜ, ಹೋಮ ಹವನಗಳಿಗೆ ಸಂಪರ್ಕಿಸಿ. 9945410150 ಮೇಷ ರಾಶಿ ನಿಮ್ಮ ಯೋಚನೆಗಳಿಂದ ಹಾಗೂ ಕೆಲಸದ ದೃಷ್ಟಿಕೋನದಿಂದ ಕಾರ್ಯಗಳು ಸಾಕಾರಗೊಳ್ಳಲಿದೆ. ಮನಸ್ಸಿನಲ್ಲಿ

ಮಂಜುನಾಥ ಸ್ವಾಮಿಯ ಕೃಪೆಯಿಂದ ದಿನ ಭವಿಷ್ಯ ತಿಳಿಯೋಣ. Read More »

ವಿಶೇಷ ಲೇಖನಗಳು

ಉಪ್ಪಿನಂಗಡಿ: ಗದ್ದೆಗೆ ಉರುಳಿದ ಆಟೋ ರಿಕ್ಷಾ ➤ ಮೂವರು ಗಂಭೀರ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ.26. ಆಟೋರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗದ್ದೆಗೆ ಉರುಳಿ ಬಿದ್ದ ಪರಿಣಾಮ ಮೂವರು ಗಂಭೀರ ಗಾಯಗೊಂಡ ಘಟನೆ ಭಾನುವಾರದಂದು ಉಪ್ಪಿನಂಗಡಿಯಲ್ಲಿ ನಡೆದಿದೆ. ಉಪ್ಪಿನಂಗಡಿ – ಕಡಬ ರಾಜ್ಯ ಹೆದ್ದಾರಿಯ ಉಪ್ಪಿನಂಗಡಿ ಸಮೀಪದ ಪುಳಿತ್ತಡಿ ಎಂಬಲ್ಲಿ ಭಾನುವಾರ ಬೆಳಿಗ್ಗೆ ಚಾಲಕನ ನಿಯಂತ್ರಣ ತಪ್ಪಿದ ಆಪೆ ಆಟೋರಿಕ್ಷಾ ಹೆದ್ದಾರಿ ಪಕ್ಕದ ಗದ್ದೆಗೆ ಉರುಳಿ ಬಿದ್ದಿದೆ. ಘಟನೆಯಲ್ಲಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಉಪ್ಪಿನಂಗಡಿ: ಗದ್ದೆಗೆ ಉರುಳಿದ ಆಟೋ ರಿಕ್ಷಾ ➤ ಮೂವರು ಗಂಭೀರ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಸಂಭ್ರಮದ ಗಣರಾಜ್ಯೋತ್ಸವ: ರಾಜ್ಯಪಾಲರಿಂದ ಧ್ವಜಾರೋಹಣ

ಬೆಂಗಳರು, ಜ.26: ಬಿಬಿಎಂಪಿ ನಗರ ಜಿಲ್ಲೆ ಹಾಗೂ ಪೊಲೀಸ್ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿರುವ 71ನೇ ಗಣರಾಜ್ಯೋತ್ಸವ ನಗರದ ಕಬ್ಬನ್ ರಸ್ತೆಯ ಫೀಲ್ಡ್ ಮಾರ್ಷಲ್ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಆರಂಭಗೊಂಡಿದ್ದು, ರಾಜ್ಯಪಾಲ ವಜುಭಾಯ್ ವಾಲಾ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ. ರಾಜ್ಯಪಾಲ ವಿ.ಆರ್ ವಾಲಾ ಬೆಳಿಗ್ಗೆ 9 ಗಂಟೆಗೆ ಧ್ವಜಾರೋಹಣ ನೆರವೇರಿಸಿದ್ದು, ಈ ವೇಳೆ ಭಾರತೀಯ ವಾಯುಪಡೆಯಿಂದ ಹೆಲಿಕಾಪ್ಟ್ ಮೂಲಕ ಪುಷ್ಪವೃಷ್ಟಿ ಮಾಡಲಾಯಿತು. ನಂತರ ರಾಜ್ಯಪಾಲರು ಪರೇಡ್ ವೀಕ್ಷಿಸಿ, ಗೌರವ ನಂದನೆ ಸ್ವೀಕರಿಸಿ ನಾಡಿದನ ಜನತೆಗೆ ಗಣರಾಜ್ಯೋತ್ಸವ ಸಂದೇಶವನ್ನು

ರಾಜ್ಯದಲ್ಲಿ ಸಂಭ್ರಮದ ಗಣರಾಜ್ಯೋತ್ಸವ: ರಾಜ್ಯಪಾಲರಿಂದ ಧ್ವಜಾರೋಹಣ Read More »

ಕರ್ನಾಟಕ

ಕಾಸರಗೋಡು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ; ಶಿಕ್ಷಕನಿಗೆ 20 ವರ್ಷ ಕಠಿಣ ಸಜೆ

ಕಾಸರಗೋಡು, ಜ.26 : ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶಿಕ್ಷಕನಿಗೆ ಕಾಸರಗೋಡು ಹೆಚ್ಚುವರಿ ಜಿಲ್ಲಾ ಸೆಶನ್ಸ್‌ ನ್ಯಾಯಾಲಯ 20 ವರ್ಷಗಳ ಕಠಿಣ ಸಜೆ ವಿಧಿಸಿದೆ.   ಆರೋಪಿ ಶಿಕ್ಷಕ ಕನಾರೂರು ಗ್ರಾಮದ ಪೆರಿಯಾಲಿ ಹೌಸ್‌ನ ರಾಜನ್‌.ಪಿ.ನಾಯರ್‌ ಯಾನೆ ರಾಜನ್‌ ಮಾಸ್ತರ್‌  ಸರಕಾರಿ ಶಾಲೆಯ ವಿದ್ಯಾರ್ಥಿನಿಗೆ ಐ.ಟಿ.ಸ್ಮಾರ್ಟ್ ಕೊಠಡಿಯಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾಗಿ ರಾಜಪುರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆರೋಪಿ ದೋಷಿ ಎಂದು ಸಾಬೀತುಪಡಿಸಿದ ನ್ಯಾಯಾಲಯ ಆತನಿಗೆ 2೦ ವರ್ಷ

ಕಾಸರಗೋಡು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ; ಶಿಕ್ಷಕನಿಗೆ 20 ವರ್ಷ ಕಠಿಣ ಸಜೆ Read More »

ಕರಾವಳಿ

ದಿಲ್ಲಿ: ನಿರ್ಮಾಣ ಹಂತದ ಕಟ್ಟಡ ಕುಸಿದು ಐವರು ಮೃತ್ಯು,13 ಮಂದಿಗೆ ಗಾಯ

ಹೊಸದಿಲ್ಲಿ, ಜ.26: ದಿಲ್ಲಿ ಯ ಭಜನ್ ಪುರ ಪ್ರದೇಶದಲ್ಲಿ ಶನಿವಾರ ನಿರ್ಮಾಣ ಹಂತದ ಕಟ್ಟಡ ಕುಸಿದು ನಾಲ್ವರು ವಿದ್ಯಾರ್ಥಿಗಳು ಸೇರಿದಂತೆ ಐವರು ಮೃತಪಟ್ಟಿದ್ದು, 13 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ರಕ್ಷಣಾ ಸಿಬ್ಬಂದಿ ಹಾಗೂ ಅಗ್ನಿ ಶಾಮಕದಳದ ಸಿಬ್ಬಂದಿ ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಅವಶೇಷಗಳಡಿ ಇನ್ನೂ ಹಲವರು ಸಿಲುಕಿರುವ ಶಂಕೆ ಇದ್ದು, ಶೋಧ ಕಾರ್ಯ ಮುಂದುವರೆದಿದೆ.

ದಿಲ್ಲಿ: ನಿರ್ಮಾಣ ಹಂತದ ಕಟ್ಟಡ ಕುಸಿದು ಐವರು ಮೃತ್ಯು,13 ಮಂದಿಗೆ ಗಾಯ Read More »

ರಾಷ್ಟ್ರೀಯ ನ್ಯೂಸ್
Scroll to Top