ಜಿಲ್ಲೆಯ ಸೌಹಾರ್ದತೆ ಪರಂಪರೆ ಎತ್ತಿಹಿಡಿಯಿರಿ- ಗೃಹ ಸಚಿವ ಬಸವರಾಜ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.1   ದಕ್ಷಿಣ ಕನ್ನಡ ಜಿಲ್ಲೆಯನ್ನು ಹಲವಾರು ಹಿರಿಯರು ಕಟ್ಟಿ ಬೆಳೆಸಿ ಇಲ್ಲಿನ ಆರ್ಥಿಕ ಹಾಗೂ ಶೈಕ್ಷಣಿಕ ಪ್ರಗತಿಗೆ ಕಾರಣರಾಗಿದ್ದು, ಈ ಪರಂಪರೆಯನ್ನು ಎತ್ತಿಹಿಡಿದು ಜನತೆ ಶಾಂತಿ ನೆಮ್ಮದಿಯನ್ನು ಮುಂದುವರಿಸಲು ಸಹಕರಿಸಬೇಕು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಮಂಗಳವಾರ ದ.ಕ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಆಯೋಜಿಸಿದ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತಾಡಿದರು. ಸೌಹಾರ್ದತೆ ಸೌಜನ್ಯದಿಂದ ಬದುಕು ರೂಪಿಸಿಕೊಳ್ಳಬೇಕು. ಗಲಭೆ ಗಲಾಟೆಗಳನ್ನು […]

ಜಿಲ್ಲೆಯ ಸೌಹಾರ್ದತೆ ಪರಂಪರೆ ಎತ್ತಿಹಿಡಿಯಿರಿ- ಗೃಹ ಸಚಿವ ಬಸವರಾಜ ಬೊಮ್ಮಾಯಿ Read More »

ಕರಾವಳಿ

ಜ.19 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.1  ಜಿಲ್ಲೆಯಲ್ಲಿ ಜನವರಿ 19 ರಿಂದ 22 ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ ರಾವ್ ಹೇಳಿದರು. ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೋ ಜಿಲ್ಲಾ ಮಟ್ಟದ ಚಾಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು 2020-21 ನೇ ಸಾಲಿನ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ 5 ವರ್ಷದೊಳಗಿನ 1,49,713 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ

ಜ.19 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ Read More »

ಕರಾವಳಿ

ಸಿಎಂ ಬೆಂಗಾವಲು ವಾಹನ ಢಿಕ್ಕಿ: ನಾಲ್ವರಿಗೆ ಗಾಯ

ಬೆಂಗಳೂರು, ಜ.1: ಸಿಎಂ ಬಿ.ಎಸ್.ಯಡಿಯೂರಪ್ಪ ಬೆಂಗಾವಲು ವಾಹನ ಬೇರೆ ಎರಡು ವಾಹನಗಳಿಗೆ ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡ ಘಟನೆ  ಬೆಂಗಳೂರಿನ ಯಶವಂತಪುರ ಮೇಲ್ಸೇತುವೆ ಬಳಿ ನಡೆದಿದೆ. ತುಮಕೂರಿಗೆ ಪ್ರಧಾನಿ ಆಗಮಿಸಲಿರುವ ಹಿನ್ನಲೆಯಲ್ಲಿ ಭದ್ರತೆ ಪರಿಶೀಲನೆ ನಡೆಸಲು ಮುಖ್ಯಮಂತ್ರಿ ಯಡಿಯೂರಪ್ಪ ಹೊರಟಿದ್ದರು. ಯಶವಂತಪುರ ಮೇಲ್ಸೇತುವೆ ಬಳಿ ಬೆಳಗ್ಗೆ 11 ಗಂಟೆಗೆ ಹೋಗುತ್ತಿರಬೇಕಾದರೆ ಹಿಂದಿನಿಂದ ಬರುತ್ತಿದ್ದ ಬೆಂಗಾವಲು ಪಡೆ ಕಾರಿನ ಚಾಲಕ ವಿನಯ್ ಕುಮಾರ್ ನಿಯಂತ್ರಣ ಕಳೆದುಕೊಂಡು ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದಿದ್ದಾರೆನ್ನಲಾಗಿದೆ. ಕಾರು ವಿಭಜಕಕ್ಕೆ ಹೊಡೆದು ನುಗ್ಗಿ

ಸಿಎಂ ಬೆಂಗಾವಲು ವಾಹನ ಢಿಕ್ಕಿ: ನಾಲ್ವರಿಗೆ ಗಾಯ Read More »

ಕರ್ನಾಟಕ

ತಲಪಾಡಿ: ಟೋಲ್ ವಸೂಲಿ ಮಾಡದಂತೆ ಆಗ್ರಹಿಸಿ ಬಿಜೆಪಿ ಧರಣಿ

ಉಳ್ಳಾಲ, ಜ.1: ಪಂಪ್ ವೆಲ್ ಮೇಲ್ಸೆತುವೆ ಕಾಮಗಾರಿ  ಪೂರ್ಣಗೊಳ್ಳದ ಹಿನ್ನೆಲೆ ತಲಪಾಡಿ ಟೋಟ್ ಗೇಟ್ ನಲ್ಲಿ ಸುಂಕ ಸಂಗ್ರಹ ಮಾಡಬಾರದೆಂದು ಆಗ್ರಹಿಸಿ ಬಿಜೆಪಿ ಧರಣಿ ನಡೆಸಿದೆ. ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ ನೇತೃತ್ವದಲ್ಲಿ ತಲಪಾಡಿ ಟೋಲ್ ಎದುರು ಧರಣಿ ನಡೆಸಿದರು. ಬಿಜೆಪಿ ಕಾರ್ಯಕರ್ತರು  ತಲಪಾಡಿ  ಟೋಲ್ ಗೇಟ್ ನಲ್ಲಿ ಗೇಟುಗಳ ಕಟ್ಟಿ ಹಾಕಿ, ವಾಹನಗಳನ್ನು ಉಚಿತವಾಗಿ ಬಿಡಲಾಗುತ್ತಿದೆ.

ತಲಪಾಡಿ: ಟೋಲ್ ವಸೂಲಿ ಮಾಡದಂತೆ ಆಗ್ರಹಿಸಿ ಬಿಜೆಪಿ ಧರಣಿ Read More »

ಕರಾವಳಿ

ಉಡುಪಿ ನೂತನ ಎಸ್ಪಿಯಾಗಿ ಅಕ್ಷಯ್ ಮಚ್ಚೀಂದ್ರ

ಉಡುಪಿ, ಜ.1: ಉಡುಪಿಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಕ್ಷಯ್‌ ಮಚ್ಚೀಂದ್ರ ಹಾಕೆಯನ್ನು ನಿಯುಕ್ತಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಅವರು ಈ ಮೊದಲು ಕಲಬುರಗಿ ಜಿಲ್ಲೆಯ ಚಿಂಚೋಳಿ ಉಪವಿಭಾಗದ ಸಹಾಯಕ ಪೊಲೀಸ್‌ ಅಧೀಕ್ಷರರಾಗಿ ಸೇವೆ ಸಲ್ಲಿಸಿದರು. ಎಸ್ಪಿಯಾಗಿದ್ದ ನಿಶಾ ಜೇಮ್ಸ್‌ ಅವರನ್ನು ಬೆಂಗಳೂರಿನ ಆಂತರಿಕ ಭದ್ರತಾ ವಿಭಾಗದ ಪೊಲೀಸ್‌ ಅಧೀಕ್ಷಕರಾಗಿ ವರ್ಗಾವಣೆ ಮಾಡಿ ಆದೇಶ ನೀಡಲಾಗಿದೆ. ನೂತನ ಎಸ್ಪಿಯವರು 2015ರ ಬ್ಯಾಂಚ್‌ನ ಐಪಿಎಸ್‌ ಅಧಿಕಾರಿಯಾಗಿದ್ದಾರೆ. ನಿಶಾ ಜೇಮ್ಸ್‌ ಅವರು 2018ರ ಫೆಬ್ರವರಿ 23ರಂದು ಉಡುಪಿ ಎಸ್ಪಿಯಾಗಿದ್ದು ಮಹಿಳೆಯರ

ಉಡುಪಿ ನೂತನ ಎಸ್ಪಿಯಾಗಿ ಅಕ್ಷಯ್ ಮಚ್ಚೀಂದ್ರ Read More »

ಕರಾವಳಿ

ಮಂಗಳೂರು ಗೋಲಿಬಾರ್ ಪ್ರಕರಣ: ಹಾಲಿ ನ್ಯಾಯಾಧೀಶರಿಂದ ತನಿಖೆ ಒತ್ತಾಯಿಸಿ ನಾಳೆ ಧರಣಿ

ಮಂಗಳೂರು, ಜ.1: ಮಂಗಳೂರು ಗೋಲಿಬಾರ್ ಪ್ರಕರಣವನ್ನು ಹೈಕೋರ್ಟ್ ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆ ಒಳಪಡಿಸಬೇಕೆಂದು ಒತ್ತಾಯಿಸಿದ ದಕ್ಷಿಣ ಕನ್ನಡ ಜಿಲ್ಲಾ ಜಾತ್ಯಾತೀತ ಪಕ್ಷ, ಸಂಘಟನೆಗಳ ಜಂಟಿ ಆಶ್ರಯದಲ್ಲಿ ಜ.2ರಂದು ಅಂಬೇಡ್ಕರ್‌ ಪ್ರತಿಮೆಯ ಮುಂಭಾಗದಲ್ಲಿ ಸಾಮೂಹಿಕ ಧರಣಿ ನಡೆಸಲು ನಿರ್ಧಾರ ಮಾಡಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಅವರು ಹೇಳಿದ್ದಾರೆ. ನಗರದ ಖಾಸಗಿ ಹೊಟೇಲ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಜಾತ್ಯಾತೀತ ಪಕ್ಷ, ಸಂಘಟನೆಗಳ ನಿಯೋಗದ ವತಿಯಿಂದ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಲಾಠಿಚಾರ್ಚ್ ಹಾಗೂ ಗೋಲಿಬಾರ್‌ಗೆ ಕಾರಣವಾಗಿರುವ

ಮಂಗಳೂರು ಗೋಲಿಬಾರ್ ಪ್ರಕರಣ: ಹಾಲಿ ನ್ಯಾಯಾಧೀಶರಿಂದ ತನಿಖೆ ಒತ್ತಾಯಿಸಿ ನಾಳೆ ಧರಣಿ Read More »

ಕರಾವಳಿ

ಆರ್‌ಬಿಐ ಯಲ್ಲಿನ 926 ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಉದ್ಯೋಗ ಮಾಹಿತಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಒಟ್ಟು 926 ಹುದ್ದೆಗಳು ಖಾಲಿಯಿದ್ದು, ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಆರ್‌ಬಿಐ ಯಲ್ಲಿನ 926 ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿಗೆ 1 ಡಿಸೆಂಬರ್ 2019ಕ್ಕೆ ಅನ್ವಯವಾಗುವಂತೆ 20 ರಿಂದ 28 ವರ್ಷದ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು 2020 ರ ಜನವರಿ 16 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದಾದರೂ ಪದವಿಯನ್ನು ಪಡೆದಿರಬೇಕಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ

ಆರ್‌ಬಿಐ ಯಲ್ಲಿನ 926 ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ Read More »

ಉದ್ಯೋಗ, ಲೈಫ್‍ಸ್ಟೈಲ್

ಕಾರು ಮತ್ತು ಸ್ಕೂಟರ್ ಢಿಕ್ಕಿ ➤ ಗಾಯಗೊಂಡ ಸಹಸವಾರಿ

(ನ್ಯೂಸ್ ಕಡಬ) newskadaba.com, ಪುತ್ತೂರು, ಡಿ.31   ಸ್ಕೂಟರ್ ಮತ್ತು ಕಾರು ನಡುವೆ ಅಪಘಾತವಾಗಿ ಸಹಸವಾರಿಗೆ ಗಾಯವಾದ ಘಟನೆ ಪುತ್ತೂರು ತಾಲೂಕು ಕಸ್ಬಾ ಗ್ರಾಮದ ಮಂಜಲ್ಪಡ್ಪು ಎಂಬಲ್ಲಿ ನಿನ್ನೆ ನಡೆದಿದೆ. ಸಹಸವಾರಿ ಬಿಂದಿಯಾ ಅವರಿಗೆ ಬಲ ಕೋಲು ಕಾಲಿಗೆ ಗಾಯವಾಗಿ ಪುತ್ತೂರು ಹಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿರುತ್ತದೆ. ಎಂದು ಪುತ್ತೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರು ಮತ್ತು ಸ್ಕೂಟರ್ ಢಿಕ್ಕಿ ➤ ಗಾಯಗೊಂಡ ಸಹಸವಾರಿ Read More »

ಕರಾವಳಿ

ರುಚಿಕರವಾದ ಮಶ್ರೂಮ್‌ ಮಸಾಲೆ ತಯಾರಿಸುವ ವಿಧಾನ

(ನ್ಯೂಸ್ ಕಡಬ) newskadaba.com ಅಡುಗೆ ಮಾಹಿತಿ: ಬಾಯಿಯಲ್ಲಿ ನೀರೂರಿಸುವ ಮಶ್ರೂಮ್ ಮಸಾಲೆಯನ್ಮು ತಯಾರಿಸುವ ವಿಧವನ್ನು ಇಂದು ನಾವು ತಿಳಿಸಿಕೊಡುತ್ತೇವೆ. ಮೊದಲು ಒಲೆಯ ಮೇಲೆ ಬಾಣಲೆ ಇಟ್ಟು ಕಾದ ನಂತರ ಲವಂಗ, ಚಕ್ಕೆ, ಏಲಕ್ಕಿ, ದನಿಯಾ, ಕಾಳು ಮೆಣಸು, ಜೀರಿಗೆ ಹಾಕಿ ಕೆಂಪಗೆ ಹುರಿದುಕೊಳ್ಳಬೇಕು. ನಂತರ ಮಿಕ್ಸಿಯಲ್ಲಿ ಪುಡಿ ಮಾಡಿಕೊಳ್ಳಬೇಕು. ನಂತರ ಇದೇ ಬಾಣಲೆಗೆ ಎಣ್ಣೆ ಹಾಕಿ ಮಧ್ಯಮ ಗಾತ್ರದಲ್ಲಿ ಕತ್ತರಿಸಿಕೊಂಡ ಮಶ್ರೂಮ್ ಗಳನ್ನು ಹಾಕಿ ಕೆಂಪಗೆ ಹುರಿದು ತೆಗೆದಿಟ್ಟುಕೊಳ್ಳಬೇಕು. ಅದೇ ಎಣ್ಣೆಯಲ್ಲಿ ಈರುಳ್ಳಿ, ಹಸಿಮೆಣಸಿನ ಕಾಯಿ, ಶುಂಠಿ,

ರುಚಿಕರವಾದ ಮಶ್ರೂಮ್‌ ಮಸಾಲೆ ತಯಾರಿಸುವ ವಿಧಾನ Read More »

ಅಡುಗೆ, ಲೈಫ್‍ಸ್ಟೈಲ್

ವಿದ್ಯಾಭಾರತಿ ಜಿಲ್ಲಾ ಮಟ್ಟದ ಗುಡ್ಡಗಾಡು ಓಟ

ಪುತ್ತೂರಿನ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾ ಮಟ್ಟದ ಗುಡ್ಡಗಾಡು ಓಟದ ಬಾಲಕರ ವಿಭಾಗದಲ್ಲಿ ಸರಸ್ವತೀ ಪದವಿಪೂರ್ವ ವಿದ್ಯಾಲಯದ ತಂಡವು ಗೆಲುವು ಸಾಧಿಸಿ ವಿದ್ಯಾಭಾರತಿ ಪ್ರಾಂತ ಮತ್ತು ಕ್ಷೇತ್ರಿಯ ಮಟ್ಟದಲ್ಲಿ ಗೆದ್ದು ಪ್ರಶಸ್ತಿ ಮುಡಿಗೇರಿಸಿಕೊಂಡಿತು. ರಾಜಸ್ಥಾನದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಈ ತಂಡದ ಗುರು ಪ್ರಸಾದ್, ವಿಜಯ್‍ಕುಮಾರ್, ರಶಿತ್, ಸುಜಿತ್ ಎಂ, ಮನೀಶ್, ತೇಜಪ್ರಕಾಶ್ ದಕ್ಷಿಣ ಮಧ್ಯಕ್ಷೇತ್ರವನ್ನು ಪ್ರತಿನಿಧಿಸಲಿದ್ದಾರೆ. ಈ ತಂಡಕ್ಕೆ ದೈಹಿಕ ಶಿಕ್ಷಕ ಲಕ್ಷ್ಮೀಶ ಗೌಡ ಮಾರ್ಗದರ್ಶನ ನೀಡಿದ್ದಾರೆ.

ವಿದ್ಯಾಭಾರತಿ ಜಿಲ್ಲಾ ಮಟ್ಟದ ಗುಡ್ಡಗಾಡು ಓಟ Read More »

ಕ್ರೀಡಾ ನ್ಯೂಸ್
Scroll to Top