ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಜೂನಿಯರ್ ಅಥ್ಲೇಟ್ ಮೀಟ್ ➤ಜ್ಞಾನೋದಯ ಬೆಥನಿಗೆ 1 ಚಿನ್ನ , 1 ಬೆಳ್ಳಿ ಮತ್ತು 2 ಕಂಚು

(ನ್ಯೂಸ್ ಕಡಬ) newskadaba.com  ನೆಲ್ಯಾಡಿ, ನ.7   ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಜೂನಿಯರ್ ಅಥ್ಲೇಟ್ ಮೀಟ್ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಶನಿವಾರ ಮತ್ತು ಆದಿತ್ಯವಾರ ನಡೆದ ಕ್ರೀಡಾಕೂಟದಲ್ಲಿ ಜ್ಞಾನೋದಯ ಬೆಥನಿ ಪಿ ಯು ಕಾಲೇಜಿನ ವಿದ್ಯಾರ್ಥಿಗಳು ಚಿನ್ನ ,ಬೆಳ್ಳಿ ಮತ್ತು ಕಂಚುಗಳನ್ನು ಪಡೆದುಕೊಂಡಿದ್ದಾರೆ. 14 ರ ವಯೋಮಾನದ ಬಾಲಕರ ವಿಭಾಗದಲ್ಲಿ 8ನೇ ತರಗತಿ ವಿದ್ಯಾರ್ಥಿ ಆದರ್ಶ್ ಶೆಟ್ಟಿ ಎತ್ತರ ಜಿಗಿತದಲ್ಲಿ ಚಿನ್ನದ ಪದಕ, ಬಾಲಕಿಯರ ವಿಭಾಗದಲ್ಲಿ 9ನೇ ತರಗತಿ ವಿದ್ಯಾರ್ಥಿ ರಕ್ಷಾ ಎತ್ತರ ಜಿಗಿತದಲ್ಲಿ ಕಂಚು ಮತ್ತು […]

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಜೂನಿಯರ್ ಅಥ್ಲೇಟ್ ಮೀಟ್ ➤ಜ್ಞಾನೋದಯ ಬೆಥನಿಗೆ 1 ಚಿನ್ನ , 1 ಬೆಳ್ಳಿ ಮತ್ತು 2 ಕಂಚು Read More »

ಕರಾವಳಿ

ಪಾದಚಾರಿಗೆ ಬೈಕ್ ಡಿಕ್ಕಿ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ.7   ಬೈಕೊಂದು ಪಾದಚಾರಿಗೆ ಡಿಕ್ಕಿ ಹೊಡೆದು ಸವಾರನಿಗೂ, ಪಾದಚಾರಿಗೂ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕು ಲಾಯಿಲ ಗ್ರಾಮದ ರಾಘವೇಂದ್ರ ಮಠ ಕ್ರಾಸ್ ಬಳಿ ಬುಧವಾರದಂದು ನಡೆಯಿತು. ಪಾದಚಾರಿ ಶೇಖರರವರಿಗೆ ತಲೆಗೆ ರಕ್ತ ಗಾಯಗೊಂಡಿರುವುದಲ್ಲದೇ, ಸವಾರ ಮಹಮ್ಮದ್ ದರ್ವೀಝ್ ರವರಿಗೆ ಎಡಕೈ, ಎಡಕಾಲು, ಎಡಕಣ್ಣಿನ ಬಳಿ ಗಾಯವಾಗಿರುತ್ತದೆ, ಗಾಯಾಳುಗಳು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಬಗ್ಗೆ ದಾಖಲಾಗಿರುತ್ತಾರೆ ಎಂದು ಬೆಳ್ತಂಗಡಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಾದಚಾರಿಗೆ ಬೈಕ್ ಡಿಕ್ಕಿ Read More »

ಕರಾವಳಿ

ಕಾರು ಮತ್ತು ಬೈಕ್ ನಡುವೆ ಡಿಕ್ಕಿ

(ನ್ಯೂಸ್ ಕಡಬ) newskadaba.com ಪುತ್ತೂರು, ನ.7    ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರನಿಗೆ ಗಾಯಗೊಂಡ ಘಟನೆ ಪುತ್ತೂರು ತಾಲೂಕಿನ ಬೊಳುವಾರು ಬೈಪಾಸ್ ಜಂಕ್ಷನ್ ಬಳಿಯ ಉದಯಗಿರಿ ಹೋಟೆಲ್ ನ ಎದುರು ಬುಧವಾರದಂದು ನಡೆದಿದೆ. ಶಿವಪ್ರಸಾದ್ ಭಟ್ ರವರಿಗೆ ಎಡಕಾಲಿಗೆ ಗಾಯವಾಗಿ ಪುತ್ತೂರು ಮಹಾವೀರ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ ಎಂದು ಪುತ್ತೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಕಾರು ಮತ್ತು ಬೈಕ್ ನಡುವೆ ಡಿಕ್ಕಿ Read More »

ಕರಾವಳಿ

ಎನ್.ಎಸ್.ಎಸ್. ವಾರ್ಷಿಕ ಶಿಬಿರ ಸಮಾರೋಪ

  (ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ನ.7    ಕಡ್ಯ ಕೊಣಾಜೆ ಸರಕಾರಿ ಉ.ಹಿ.ಪ್ರಾ. ಶಾಲೆಯಲ್ಲಿ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭವು ಮಂಗಳವಾರದಂದು ನಡೆಯಿತು. ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಮೇಶ್ ಕಲ್ಪುರೆ ಅವರು ಸಮಾರೋಪ ಭಾಷಣ ಮಾಡಿದರು. ತಾ.ಪಂ. ಸದಸ್ಯೆ ಪಿ.ವೈ. ಕುಸುಮ ಮಾತನಾಡಿ, ಬೆವರು ಸುರಿಸಿ ದುಡಿಯುವ ಕ್ಷಣಗಳು ದುಡಿಮೆಯ ಬೆಲೆಯನ್ನು ಕಲಿಸುತ್ತದೆ. ಶ್ರಮಕ್ಕೆ ತಕ್ಕ ಪ್ರತಿಫಲ ಖಂಡಿತ ಸಿಗುತ್ತದೆ.

ಎನ್.ಎಸ್.ಎಸ್. ವಾರ್ಷಿಕ ಶಿಬಿರ ಸಮಾರೋಪ Read More »

ಕರಾವಳಿ

ನೆಲ್ಯಾಡಿ : ಪ್ರೌಢಶಾಲಾ ಮಟ್ಟದ ಕ್ರಿಕೆಟ್ ಪಂದ್ಯಾಟ ➤ಟೆಕ್ನೋ ಕಪ್-2019

(ನ್ಯೂಸ್ ಕಡಬ) newskadaba.com  ನೆಲ್ಯಾಡಿ, ನ.7  ನೆಲ್ಯಾಡಿ ಬೆಥನಿ ಕ್ರೀಡಾಂಗಣದಲ್ಲಿ ಪ್ರೌಢ ಶಾಲಾ ಮಟ್ಟದ ಕ್ರಿಕೆಟ್ ಪಂದ್ಯಾಟವನ್ನು ಬೆಥನಿ ಐಟಿಐ ಮತ್ತು ಜ್ಞಾನೋದಯ ಬೆಥನಿ ಪಿಯು ಕಾಲೇಜು ಇವುಗಳ ಜಂಟಿ ಆಶ್ರಯದಲ್ಲಿ ನ. 7 ರಂದು ನಡೆಸಲು ನಿರ್ಧರಿಸಲಾಗಿದೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪುತ್ತೂರು ತಾಲೂಕು ಶಾರೀರಿಕ ಶಿಕ್ಷಣಾಧಿಕಾರಿಗಳಾದ ಸುಂದರ ಗೌಡ, ನೆಲ್ಯಾಡಿ ಗ್ರಾ.ಪಂ. ಅಧ್ಯಕ್ಷರಾದ ಗಂಗಾಧರ ಶೆಟ್ಟಿ ಹೊಸಮನೆ, ಪುತ್ತೂರು ತಾಲೂಕು ಯುವ ಸಬಲೀಕರಣ ಹಾಗೂ ಉಪ ಕ್ರೀಡಾಧಿಕಾರಿಗಳಾದ ಮಾಮಚ್ಚನ್ ಎಂ., ಬೆಥನಿ ಸಂಸ್ಥೆಗಳು ನೆಲ್ಯಾಡಿಯ

ನೆಲ್ಯಾಡಿ : ಪ್ರೌಢಶಾಲಾ ಮಟ್ಟದ ಕ್ರಿಕೆಟ್ ಪಂದ್ಯಾಟ ➤ಟೆಕ್ನೋ ಕಪ್-2019 Read More »

ಕರಾವಳಿ

ಶಕ್ತಿ ಶಿಕ್ಷಣ ಸಂಸ್ಥೆಯ ವಾರ್ಷಿಕ ಕ್ರೀಡಾ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ.7  ಶಕ್ತಿನಗರದ ಶ್ರೀ ಗೋಪಾಲಕೃಷ್ಣ ಪೂರ್ವ ಪ್ರಾಥಮಿಕ ಶಾಲೆ, ಶಕ್ತಿ ವಸತಿಯುತ ಶಾಲೆ ಹಾಗೂ ಶಕ್ತಿ ಪ.ಪೂ ಕಾಲೇಜು ವತಿಯಿಂದ ನವಂಬರ್ 8ರಂದು ಬೆಳಗ್ಗೆ 9 ಗಂಟೆಗೆ ವಾರ್ಷಿಕ ಕ್ರೀಡಾ ದಿನಾಚರಣೆಯನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಪುರುಷೋತ್ತಮ ಪೂಜಾರಿ, ನಿವೃತ್ತ ದೈಹಿಕ ಶಿಕ್ಷಕರು ಶ್ರೀ ಗೋಕರ್ಣನಾಥೇಶ್ವರ ಪ್ರಥಮ ದರ್ಜೆ ಕಾಲೇಜು ಮಂಗಳೂರು ಇವರು ನೆರೆವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಡಾ. ಮುರಳೀಧರ ನಾಯಕ್ ಹಾಗೂ ಶಕ್ತಿ ಶಿಕ್ಷಣ ಸಂಸ್ಥೆಯ ಟ್ರಸ್ಟಿ ಕಾರ್ಯಕ್ರಮದಲ್ಲಿ

ಶಕ್ತಿ ಶಿಕ್ಷಣ ಸಂಸ್ಥೆಯ ವಾರ್ಷಿಕ ಕ್ರೀಡಾ ದಿನಾಚರಣೆ Read More »

ಕರಾವಳಿ

ನ.07: ಇಂದಿನ ದಿನ ಭವಿಷ್ಯ

ಗುರುವಾರದ ದಿನದಂದು ಗುರುಗಳ ಆಶೀರ್ವಾದ ಪಡೆಯಿರಿ ಬೃಹಸ್ಪತಿ ಮಂತ್ರವನ್ನು ಜಪಿಸಿ ಇದರಿಂದ ವಿದ್ಯೆಯಲ್ಲಿ ಯಶಸ್ವಿಯಾಗುವುದು ನಿಶ್ಚಿತ. ಶ್ರೀ ಮಂತ್ರಾಲಯ ರಾಘವೇಂದ್ರ ಸ್ವಾಮಿ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ

ನ.07: ಇಂದಿನ ದಿನ ಭವಿಷ್ಯ Read More »

ಭವಿಷ್ಯ

Breaking – ಸುಬ್ರಹ್ಮಣ್ಯ: ಕಾರು ಹಾಗೂ ಬೈಕ್ ಮೇಲೆ ಬಿದ್ದ ಬೃಹತ್ ಮರ ➤ ಕಾರು ಚಾಲಕ ಗಂಭೀರ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ನ.06. ಕಡಬ ತಾಲೂಕಿನ ವಿವಿಧೆಡೆ ಬುಧವಾರ ಸಂಜೆಯಿಂದ ಸುರಿದ ಭಾರೀ ಗಾಳಿ ಮಳೆಗೆ ಕಾರು ಹಾಗೂ ಬೈಕ್ ಗಳೆರಡರ ಮೇಲೆ ಮರ ಬಿದ್ದು, ಕಾರು ಚಾಲಕ ಗಂಭೀರ ಗಾಯಗೊಂಡ ಘಟನೆ ಸುಬ್ರಹ್ಮಣ್ಯ ಸಮೀಪದ ಬಳ್ಪ ಎಂಬಲ್ಲಿ ನಡೆದಿದೆ. ಬುಧವಾರ ಸಂಜೆ ಕಡಬ ಪರಿಸರದಲ್ಲಿ ವ್ಯಾಪಕ ಮಳೆಯಾಗಿರುವುದರಿಂದ ವಿದ್ಯುತ್ ವ್ಯತ್ಯಯ ಉಂಟಾಗಿದ್ದು ವಿವಿಧೆಡೆ ಮರಗಳು ಧರಾಶಾಹಿಯಾಗಿವೆ. ಬಳ್ಪದಲ್ಲಿ ಬೃಹತ್ ಗಾತ್ರದ ಮರ ಬಿದ್ದು ಈ ದುರ್ಘಟನೆ ಸಂಭವಿಸಿದೆ. ಗಾಯಾಳು ಚಾಲಕನನ್ನು ಪುತ್ತೂರಿನ ಆಸ್ಪತ್ರೆಗೆ

Breaking – ಸುಬ್ರಹ್ಮಣ್ಯ: ಕಾರು ಹಾಗೂ ಬೈಕ್ ಮೇಲೆ ಬಿದ್ದ ಬೃಹತ್ ಮರ ➤ ಕಾರು ಚಾಲಕ ಗಂಭೀರ Read More »

ಕರಾವಳಿ

ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆ ➤ ನ.10 ರಂದು ಪೂರ್ವ ವಿದ್ಯಾರ್ಥಿಗಳ ಸಭೆ

(ನ್ಯೂಸ್ ಕಡಬ) newskadaba.com  ಕಡಬ, ನ.06. ಇಲ್ಲಿನ ಸೈಂಟ್ ಜೋಕಿಮ್ಸ್ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಕಾಲೇಜು ವಿಭಾಗದ ಪೂರ್ವ ವಿದ್ಯಾರ್ಥಿಗಳ ಸಭೆಯು ನವೆಂಬರ್ 10 ರಂದು ಅಪರಾಹ್ನ 2:30 ಕ್ಕೆ ಸೈಂಟ್ ಜೋಕಿಮ್ಸ್ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ. ವಿದ್ಯಾ ಸಂಸ್ಥೆಯ ಅಭಿವೃದ್ಧಿ ಕಾರ್ಯಗಳಿಗೆ ಪೂರಕವಾಗಿ 2020 ರ ಜನವರಿ 14 ರಂದು ತುಳು ನಾಟಕವೊಂದನ್ನು ಆಯೋಜಿಸುವ ಕುರಿತು ಈಗಾಗಲೇ ಯೋಜನೆಯನ್ನು ರೂಪಿಸಲಾಗಿದ್ದು, ಈ ಕಾರ್ಯಕ್ರಮಕ್ಕೆ ಸಂಸ್ಥೆಯ ಪೂರ್ವ ವಿದ್ಯಾರ್ಥಿಗಳ ಬೆಂಬಲವನ್ನು ಮನಗಂಡು ಸಭೆ ಕರೆಯಲಾಗಿದೆ. ಎಲ್ಲಾ

ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆ ➤ ನ.10 ರಂದು ಪೂರ್ವ ವಿದ್ಯಾರ್ಥಿಗಳ ಸಭೆ Read More »

ಕರಾವಳಿ

ಗೂಡ್ಸ್ ಟೆಂಪೋ ಮತ್ತು ಸ್ಕೂಟರ್ ನಡುವೆ ಡಿಕ್ಕಿ

(ನ್ಯೂಸ್ ಕಡಬ) newskadaba.com  ಪುತ್ತೂರು, ನ.6  ಗೂಡ್ಸ್ ಟೆಂಪೋ ಮತ್ತು ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ರಸ್ತೆಗೆ ಬಿದ್ದು ಸವಾರನಿಗೂ, ಸಹಸವಾರನಿಗೂ ಗಾಯಗೊಂಡ ಘಟನೆ ಪುತ್ತೂರು ತಾಲೂಕು ಕಸ್ಬಾ ಗ್ರಾಮದ ಅಶ್ವಿನಿ ಸರ್ಕಲ್ ಬಳಿ ಮಂಗಳವಾರದಂದು ನಡೆಯಿತು. ಗಾಯಗೊಂಡ ಹರೀಶ್ ಪಿ ಹಾಗೂ ಸಂತೋಷ್ ಪಿ ಇವರು ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿರುತ್ತಾರೆ ಎಂದು ಪುತ್ತೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗೂಡ್ಸ್ ಟೆಂಪೋ ಮತ್ತು ಸ್ಕೂಟರ್ ನಡುವೆ ಡಿಕ್ಕಿ Read More »

ಕರಾವಳಿ
Scroll to Top