ನೆಲ್ಯಾಡಿ: ಹಿಂಸಾತ್ಮಕ ರೀತಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ ➤ 29 ಜಾನುವಾರುಗಳ ಸಹಿತ ಓರ್ವನ ಬಂಧನ, ಮೂವರು ಪರಾರಿ
(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಅ.01. ಅಕ್ರಮವಾಗಿ ಹಿಂಸಾತ್ಮಕ ರೀತಿಯಲ್ಲಿ ಜಾನುವಾರು ಸಾಗಾಟ ಮಾಡುತ್ತಿದ್ದುದನ್ನು ಪತ್ತೆ ಹಚ್ಚಿರುವ ಪೊಲೀಸರು 29 ಜಾನುವಾರುಗಳ ಸಹಿತ ಓರ್ವ ಆರೋಪಿಯನ್ನು ಬಂಧಿಸಿದ ಘಟನೆ ಮಂಗಳವಾರದಂದು ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ನೆಲ್ಯಾಡಿಯಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಲಾರಿ ಚಾಲಕ ಹಾಸನ ಜಿಲ್ಲೆಯ ಹೊಳೆನರಸೀಪುರ ನಿವಾಸಿ ಇಮ್ರಾನ್ ಪಾಷಾ (30) ಎಂದು ಗುರುತಿಸಲಾಗಿದೆ. ಲಾರಿಯಲ್ಲಿದ್ದ ಹಾಸನದ ಸಯ್ಯದ್ ಅಶ್ಫಾಕ್, ಜಯಣ್ಣ, ಬುಲ್ಲಿ ಪರಾರಿಯಾಗಿದ್ದಾರೆ. ಆರೋಪಿಗಳು ಹಾಸನ ಕಡೆಯಿಂದ ಈಚರ್ […]





