ಶಿರಾಡಿ ಘಾಟ್ ನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಗೆ ಗುಡ್ಡ ಕುಸಿತ ➤ ಆಗಸ್ಟ್ 12ರ ವರೆಗೆ ವಾಹನ ಸಂಚಾರ ನಿಷೇಧ
(ನ್ಯೂಸ್ ಕಡಬ) newskadaba.com ಮಂಗಳೂರು, ಆ.10. ಶಿರಾಡಿ ಘಾಟ್‌ನಲ್ಲಿ ಬಿರುಗಾಳಿ ಸಹಿತ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು, ಗುಡ್ಡಕುಸಿತದ ಮಣ್ಣು ತೆರವು ಕಾರ್ಯಾಚರಣೆ ಪ್ರಗತಿಯಲ್ಲಿರುವುದರಿಂದ ಆ.12ರವರೆಗೆ ಷರತ್ತು ಬದ್ಧವಾಗಿ ಎಲ್ಲ ವಾಹನಗಳ ಸಂಚಾರವನ್ನು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ನಿಷೇಧಿಸಿ ಆದೇಶಿಸಿದ್ದಾರೆ. ಶಿರಾಡಿ ಘಾಟ್ ನಲ್ಲಿ ಮಳೆಯ ಆರ್ಭಟ ಶುಕ್ರವಾರ ಮುಂದುವರಿದಿದೆ. ಅಲ್ಲದೆ ಹಲವೆಡೆ ಗುಡ್ಡ ಕುಸಿತದ ಜಾಗದಲ್ಲಿ ಪದೇಪದೇ ವಾಹನ ದಟ್ಟಣೆ ಉಂಟಾಗುತ್ತಿರುವುದರಿಂದ ಮಣ್ಣು ತೆರವು ಕಾರ್ಯಾಚರಣೆ ಕಷ್ಟಸಾಧ್ಯವಾಗಿದ್ದು, ಷರತ್ತಿನ ಮೇರೆಗೆ ಮೂರು ದಿನಗಳ ಕಾಲ ವಾಹನ […]




