ಕರಾವಳಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ ➤ ಶುಕ್ರವಾರದವರೆಗೆ ರೆಡ್ ಅಲೆರ್ಟ್ ಘೋಷಣೆ ➤ ನಾಳೆ (ಆ.08) ದಕ್ಷಿಣ ಕನ್ನಡದ ಎಲ್ಲಾ ಶಾಲಾ ಕಾಲೇಜುಗಳಿಗೆ ಮತ್ತೆ ರಜೆ
(ನ್ಯೂಸ್ ಕಡಬ) newskadaba.com ಮಂಗಳೂರು, ಆ.07. ಕರಾವಳಿಯಲ್ಲಿ ನಿರಂತರವಾಗಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ (ಪದವಿ ತರಗತಿವರೆಗೆ) ಗುರುವಾರದಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ. ಕರಾವಳಿ ಸೇರಿದಂತೆ ಮಲೆನಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಜಿಲ್ಲೆಯ ಬೆಳ್ತಂಗಡಿ, ಸುಳ್ಯ, ಪುತ್ತೂರು, ಕಡಬ ತಾಲೂಕುಗಳಲ್ಲಿ ಕಳೆದ 24 ಗಂಟೆಗಳಲ್ಲಿ ಅತಿ ಹೆಚ್ಚಿನ ಮಳೆ ದಾಖಲಾಗಿದೆ. ಜಿಲ್ಲೆಯ ಹೆಚ್ಚಿನ ನದಿಗಳು ತುಂಬಿ […]





