ಮುಲ್ಕಿ ಬಳಿ ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ಸವಾರ ಸಾವು

(ನ್ಯೂಸ್‌ ಕಡಬ) newskadaba.com,  ನ.03: ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ಸವಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ಘಟನೆ ಕಿನ್ನಿಗೋಳಿ-ಎಸ್.ಕೋಡಿ ಬಳಿಯ ರೋಹನ್ ಎಸ್ಟೇಟ್ ಮುಂಭಾಗ ನಡೆದಿದೆ. ಘಟನೆಯಿಂದ ಮುಲ್ಕಿ ಪುನರೂರು ಮೊಗೇರ ದೈವಸ್ಥಾನ ಬಳಿಯ ನಿವಾಸಿಗಳಾದ ಸುರೇಂದ್ರ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದರು. ರವಿವಾರ ಸಂಜೆ ಸಾವನ್ನಪ್ಪಿದ್ದು ಹಿಂಬದಿ ಸವಾರ ಸಂದೀಪ್ ಯಾನೆ ಲೋಲಾಕ್ಷ ಎಂಬವರಿಗೆ ಅಲ್ಪಪ್ರಮಾಣದ ಗಾಯಗಳಾಗಿವೆ. ಗಾಯಾಳುಗಳು ಎಸ್. ಕೋಡಿಯಾಗಿ ಹಳೆಯಂಗಡಿ ಕಡೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ವಿರುದ್ಧ […]

ಮುಲ್ಕಿ ಬಳಿ ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ಸವಾರ ಸಾವು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ: ಕಾಪು ಮಾರಿಗುಡಿಗೆ ಸೂರ್ಯಕುಮಾರ್ ಯಾದವ್ ಪತ್ನಿ ಭೇಟಿ

(ನ್ಯೂಸ್‌ ಕಡಬ) newskadaba.com,  ನ.03: ಟೀಮ್ ಇಂಡಿಯಾದ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಅವರ ಪತ್ನಿ ದೇವಿಶಾ ಶೆಟ್ಟಿ (Devisha Shetty) ಕಾಪು ಶ್ರೀ ಹೊಸ ಮಾರಿಗುಡಿಗೆ ಭೇಟಿ ನೀಡಿದ್ದಾರೆ. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿಗಳು ಅಮ್ಮನ ಅನುಗ್ರಹ ಪ್ರಸಾದ ನೀಡಿದರು. ವ್ಯವಸ್ಥಾಪನಾ ಸಮಿತಿ ಮತ್ತುಅಭಿವೃದ್ಧಿ ಸಮಿತಿ ವತಿಯಿಂದ ಈ ಸಂದರ್ಭದಲ್ಲಿ ಗೌರವಿಸಲಾಯಿತು. ದೇವಸ್ಥಾನದ ಪ್ರಾಂಗಣದ ಮುಂದಿರುವ ಬೃಹತ್ ಕಲ್ಲಿನ ಕಂಬವನ್ನು ಸೇವೆ ರೂಪದಲ್ಲಿ ಸೂರ್ಯಕುಮಾರ್ ದಂಪತಿ ಕೊಟ್ಟಿದ್ದರು. ಆ ಕಂಬದ ಮುಂದೆ ದೇವಿಶಾ

ಉಡುಪಿ: ಕಾಪು ಮಾರಿಗುಡಿಗೆ ಸೂರ್ಯಕುಮಾರ್ ಯಾದವ್ ಪತ್ನಿ ಭೇಟಿ Read More »

ಕರಾವಳಿ, ಕರ್ನಾಟಕ

ರೇಣುಕಾಸ್ವಾಮಿ ಕೊಲೆ ಪ್ರಕರಣ-ನವೆಂಬರ್ 10ಕ್ಕೆ ವಿಚಾರಣೆ ಮುಂದೂಡಿಕೆ

(ನ್ಯೂಸ್‌ ಕಡಬ) newskadaba.com,  ನ.03: ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ 57ನೇ ಸೆಷನ್ ಕೋರ್ಟ್ ದರ್ಶನ್‌ ಸೇರಿದಂತೆ ಆರೋಪಿಗಳ ವಿಚಾರಣೆಯನ್ನು ನವೆಂಬರ್‌ 10ಕ್ಕೆ ಮುಂದೂಡಿದೆ. ಜೈಲು ಸೇರಿರುವ ದರ್ಶನ್‌ ಸೇರಿದಂತೆ ಆರೋಪಿಗಳು ನವೆಂಬರ್‌ 3ರಂದು ಬೆಂಗಳೂರು 57ನೇ ಸೆಷನ್ ಕೋರ್ಟ್ ಹಾಜರಾದರು. ಖುದ್ದು ಹಾಜರಾಗಲು ಕೋರ್ಟ್ ಸೂಚಿಸಿತ್ತು. ಇದರಂತೆ ಭಾರಿ ಬಿಗಿ ಭದ್ರತೆಯೊಂದಿಗೆ ಎ2 ಆರೋಪಿ ನಟ ದರ್ಶನ್, ಎ1 ಆರೋಪಿ ಪವಿತ್ರ ಗೌಡ ಸೇರಿದಂತೆ 6 ಆರೋಪಿಗಳು ಸೆಷನ್ ಕೋರ್ಟ್‌ಗೆ ಹಾಜರಾದರು. ಇದೀಗ ದರ್ಶನ್‌ ಸೇರಿದಂತೆ

ರೇಣುಕಾಸ್ವಾಮಿ ಕೊಲೆ ಪ್ರಕರಣ-ನವೆಂಬರ್ 10ಕ್ಕೆ ವಿಚಾರಣೆ ಮುಂದೂಡಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಟ್ರಾಫಿಕ್ ಪೊಲೀಸರಿಂದ ದಂಡ ತಪ್ಪಿಸಿಕೊಳ್ಳಲು ಬಾಣಲೆ ಧರಿಸಿದ ಚಾಲಕ

(ನ್ಯೂಸ್‌ ಕಡಬ) newskadaba.com,  ನ.03: ಹೈಲ್ಮೆಟ್ ಧರಿಸದಿದ್ರೆ, ಸೀಟ್ ಬೆಲ್ಟ್ ಧರಿಸದಿದ್ರೆ ಹಾಗೇ ಟ್ರಾಫಿಕ್ ರೂಲ್ಸ್‌ಗಳನ್ನು ಬ್ರೇಕ್ ಮಾಡಿದ್ರೆ ಟ್ರಾಫಿಕ್ ಪೊಲೀಸರು ದಂಡ ವಿಧಿಸುವುದು ಸಾಮಾನ್ಯ. ಹೀಗೆ ಬೈಕ್‌ನಲ್ಲಿ ಕುಳಿತಿರುವ ಹಿಂಬದಿ ಸವಾರ ದಂಡ ತಪ್ಪಿಸಲು ಹೆಲ್ಮೆಟ್ ಬದಲಿಗೆ ಬಾಣಲೆ ಹಿಡಿದು ಸವಾರಿ ಮಾಡಿರುವುದು ಕಂಡುಬಂದಿದೆ. ನವೆಂಬರ್ 1 ರಂದು ಹಂಚಿಕೊಳ್ಳಲಾದ ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದುವರೆಗೆ ಮೂರು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಇದು ಬೇಜವಾಬ್ದಾರಿತನದ

ಟ್ರಾಫಿಕ್ ಪೊಲೀಸರಿಂದ ದಂಡ ತಪ್ಪಿಸಿಕೊಳ್ಳಲು ಬಾಣಲೆ ಧರಿಸಿದ ಚಾಲಕ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸರ್ಕಾರಿ ಬಸ್ ಮೇಲೆ ಜಲ್ಲಿ ತುಂಬಿದ್ದ ಟಿಪ್ಪರ್ ಬಿದ್ದು: 20 ಮಂದಿ ಸಾವು

(ನ್ಯೂಸ್‌ ಕಡಬ) newskadaba.com,  ನ.03 ಹೈದರಾಬಾದ್:  ಬಸ್ ಮೇಲೆ ಜಲ್ಲಿ ತುಂಬಿದ್ದ ಟಿಪ್ಪರ್ ಪಲ್ಟಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕನಿಷ್ಟ ೨೦ ಮಂದಿ ಪ್ರಯಾಣಿಕರು ಸಾವನ್ನಪ್ಪಿ ಹಲವರು ಗಂಭೀರ ಗಾಯಗೊಂಡಿರುವ ದಾರುಣ ಘಟನೆ ಹೈದರಾಬಾದ್-ಬಿಜಾಪುರ ರಾಷ್ಟ್ರೀಯ ಹೆದ್ದಾರಿಯ ರಂಗಾರೆಡ್ಡಿ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ರಂಗಾರೆಡ್ಡಿ ಜಿಲ್ಲೆಯ ಚೆವೆಲ್ಲಾ ತಾಲೂಕಿನ ಮಿರಾಜಗುಡಾ ಬಳಿ ಆರ್‌ಟಿಸಿ ಬಸ್ ಮೇಲೆ ಟಿಪ್ಪರ್‌ನಲ್ಲಿದ್ದ ಜಲ್ಲಿಕಲ್ಲು ಬಿದ್ದ ಪರಿಣಾಮ ೨೦ ಮಂದಿ ಪ್ರಯಾಣಿಕರು ಮೃತಪಟ್ಟಿದ್ದರೆ, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಯಾಣಿಕರು ಜಲ್ಲಿಕಲ್ಲಿನ ಅಡಿ

ಸರ್ಕಾರಿ ಬಸ್ ಮೇಲೆ ಜಲ್ಲಿ ತುಂಬಿದ್ದ ಟಿಪ್ಪರ್ ಬಿದ್ದು: 20 ಮಂದಿ ಸಾವು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿಶ್ವಕಪ್ ಗೆದ್ದ ಭಾರತ ಮಹಿಳಾ ತಂಡಕ್ಕೆ ₹51 ಕೋಟಿ ಬಹುಮಾನ ಘೋಷಿಸಿದ ಬಿಸಿಸಿಐ

(ನ್ಯೂಸ್‌ ಕಡಬ) newskadaba.com,  ನ.03: 2025 ರ ಮಹಿಳಾ ವಿಶ್ವಕಪ್‌ನ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ಮಹಿಳೆಯರ ತಂಡವನ್ನು ಸೋಲಿಸುವ ಮೂಲಕ ಇತಿಹಾಸ ಬರೆದ ಹರ್ಮನ್‌ಪ್ರೀತ್‌ ಕೌರ್‌ಸಾರಥ್ಯದ ಭಾರತ ಮಹಿಳಾ ತಂಡಕ್ಕೆ ಬಿಸಿಸಿಐ(BCCI) (ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ) ನಗದು ಬಹುಮಾನವನ್ನು ಘೋಷಿಸಿದೆ. ಭಾರತೀಯ ತಂಡ, ಸಹಾಯಕ ಸಿಬ್ಬಂದಿ ಮತ್ತು ತರಬೇತುದಾರರಿಗೆ 51 ಕೋಟಿ ರೂ. ನಗದು ಬಹುಮಾನವನ್ನು ಘೋಷಿಸಿದೆ. ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಅವರು ಈ ನಗದು ಬಹುಮಾನವನ್ನು ಘೋಷಿಸಿದರು. “ಜಯ್ ಶಾ ಬಿಸಿಸಿಐನ ಮುಖ್ಯಸ್ಥರಾದಾಗಿನಿಂದ,

ವಿಶ್ವಕಪ್ ಗೆದ್ದ ಭಾರತ ಮಹಿಳಾ ತಂಡಕ್ಕೆ ₹51 ಕೋಟಿ ಬಹುಮಾನ ಘೋಷಿಸಿದ ಬಿಸಿಸಿಐ Read More »

ಕ್ರೀಡಾ ನ್ಯೂಸ್

ಪಾಕ್, ಚೀನಾ, ರಷ್ಯಾ ಪರಮಾಣು ಪರೀಕ್ಷೆ ನಡೆಸುತ್ತಿವೆ, ನಾವೂ ಸಹ ನಡೆಸುತ್ತೇವೆ-ಟ್ರಂಪ್

(ನ್ಯೂಸ್‌ ಕಡಬ) newskadaba.com,  ನ.03: ಪಾಕಿಸ್ತಾನ, ಚೀನಾ, ರಷ್ಯಾ, ಉತ್ತರ ಕೊರಿಯಾ ದೇಶಗಳು ಪರಮಾಣು ಪರೀಕ್ಷೆಗಳನ್ನು ನಡೆಸುತ್ತಿವೆ. ಹೀಗಿರುವಾಗ ಅಮೆರಿಕ ಮಾತ್ರ ಸಂಯಮ ತೋರಿಸುವ ದೇಶವಾಗಿ ಉಳಿಯಲು ಸಾಧ್ಯವಿಲ್ಲ. ನಾವೂ ಪರಮಾಣು ಪರೀಕ್ಷೆಗಳನ್ನು ನಡೆಸುತ್ತೇವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, “ವಿಶ್ವದಾದ್ಯಂತ ಅನೇಕ ದೇಶಗಳು ಪರಮಾಣು ಬಾಂಬ್‌ಗಳನ್ನ ಪರೀಕ್ಷಿಸುತ್ತಿವೆ. ರಷ್ಯಾ, ಚೀನಾ, ಉತ್ತರ ಕೊರಿಯಾ, ಪಾಕಿಸ್ತಾನ ಕೂಡ ಈ ಕೆಲಸದಲ್ಲಿ ನಿರತವಾಗಿವೆ. ಆದ್ರೆ ಯಾರೂ ಅದರ ಬಗ್ಗೆ ಮಾತನಾಡ್ತಿಲ್ಲ. ಆದ್ರೆ

ಪಾಕ್, ಚೀನಾ, ರಷ್ಯಾ ಪರಮಾಣು ಪರೀಕ್ಷೆ ನಡೆಸುತ್ತಿವೆ, ನಾವೂ ಸಹ ನಡೆಸುತ್ತೇವೆ-ಟ್ರಂಪ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಂಗಳೂರು : ನಮ್ಮ ಮೆಟ್ರೋ ಗುಲಾಬಿ ಮಾರ್ಗ ಮೇ ತಿಂಗಳಲ್ಲಿ ಪೂರ್ಣ

(ನ್ಯೂಸ್‌ ಕಡಬ) newskadaba.com,  ನ.03 ಬೆಂಗಳೂರು: ನಗರದ ಸಂಚಾರ ದಟ್ಟಣೆ ತಗ್ಗಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿರುವ ಮೆಟ್ರೋ ವಿವಿಧ ಹಂತಗಳ ಕಾಮಗಾರಿ ಪ್ರಗತಿಯಲ್ಲಿರುವ ಸಂದರ್ಭದಲ್ಲೇ ನಮ ಮೆಟ್ರೋ ಗುಲಾಬಿ ಮಾರ್ಗ 2026ರ ಮೇ ತಿಂಗಳಲ್ಲಿ ಪೂರ್ಣಗೊಳ್ಳಲಿದೆ. ನಮ್ಮ ಮೆಟ್ರೋ ಗುಲಾಬಿ ಮಾರ್ಗ 2026 ಮೇ ತಿಂಗಳಲ್ಲಿ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಸ್ವತಃ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರೇ ಎಕ್‌್ಸ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದಾರೆ. ಹೀಗಾಗಿ ಬಹುನಿರೀಕ್ಷಿತ ಗುಲಾಬಿ ಮಾರ್ಗದ ಸಂಚಾರ ಮೇ ತಿಂಗಳಿನಿಂದ ಕಾರ್ಯರಂಭಗೊಳ್ಳುವುದು ಬಹುತಕ

ಬೆಂಗಳೂರು : ನಮ್ಮ ಮೆಟ್ರೋ ಗುಲಾಬಿ ಮಾರ್ಗ ಮೇ ತಿಂಗಳಲ್ಲಿ ಪೂರ್ಣ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಫ್ಘಾನಿಸ್ತಾನ: 6.3 ತೀವ್ರತೆಯ ಭೂಕಂಪ : 20 ಮಂದಿ ಸಾವು

(ನ್ಯೂಸ್‌ ಕಡಬ) newskadaba.com,  ನ.03: ಅಫ್ಘಾನಿಸ್ತಾನದಲ್ಲಿ ಮಧ್ಯರಾತ್ರಿ 6.3 ತೀವ್ರತೆಯ ಭೂಕಂಪನ ಸಂಭವಿಸಿದ್ದು ಸುಮಾರು 20 ಮಂದಿ ಸಾವನ್ನಪ್ಪಿ,320ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸ್ಥಳೀಯ ಕಾಲಮಾನ ಮಧ್ಯರಾತ್ರಿ 1 ಗಂಟೆಗೆ ಭೂಕಂಪದ ಸಂಭವಿಸಿದೆ ಎಂದು ಅಮೆರಿಕದ ಜಿಯೋಲಾಜಿಕಲ್‌ ಸರ್ವೆಹೇಳೆದೆ. ಅಫ್ಘಾನಿಸ್ತಾನದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಂಸ್ಥೆಯು ಸಾವುನೋವುಗಳು ಮತ್ತು ಹಾನಿಗಳ ಮೌಲ್ಯಮಾಪನಗಳನ್ನು ನಂತರ ಮಾಹಿತಿ ಹಂಚಿಕೊಳ್ಳಲಾಗುವುದು ಎಂದು ಹೇಳಿದೆ. ಸಾಮಾಜಿಕ ಮಾಧ್ಯಮದ ವೀಡಿಯೊದಿಂದ ಪಡೆದ ಚಿತ್ರದಲ್ಲಿ ಅಫ್ಘಾನಿಸ್ತಾನದ ಮಜರ್‌ ಇ ಷರೀಫ್‌ನಲ್ಲಿ ಭೂಕಂಪದ ನಂತರ ಬ್ಲೂ ಮಸೀದಿ

ಅಫ್ಘಾನಿಸ್ತಾನ: 6.3 ತೀವ್ರತೆಯ ಭೂಕಂಪ : 20 ಮಂದಿ ಸಾವು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ | ಮೀನು ಮಾರಾಟ ವಿಚಾರದಲ್ಲಿ ಹೊಡೆದಾಟ: ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com,  ನ.03 ಕಡಬ: ಮೀನು ಮಾರಾಟದ ವಿಚಾರವಾಗಿ ಎರಡು ಅಂಗಡಿಯವರಿಗೆ ಮಾತಿನ ಚಕಮಕಿ ನಡೆದು ಬಳಿಕ ಪರಸ್ಪರ ಹೊಡೆದಾಡಿಕೊಂಡ ಘಟನೆ ಕಡಬ ಗ್ರಾಮದ ಸಂತೆಕಟ್ಟೆ ಬಳಿ ಮೀನು ಮಾರುಕಟ್ಟೆಯಲ್ಲಿ ಶನಿವಾರ ನಡೆದಿದೆ. ಈ ಬಗ್ಗೆ ವೈರಲ್ ವೀಡಿಯೊ ಆಧರಿಸಿ ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಂತೆಕಟ್ಟೆ ಬಳಿಯ ಮೀನು ಮಾರುಕಟ್ಟೆಯಲ್ಲಿ ಶನಿವಾರ ಮೀನು ಮಾರಾಟದ ವಿಚಾರವಾಗಿ ರಾಜು ಮ್ಯಾಥ್ಯೂ ಹಾಗೂ ಆದಂ ಎಂಬವರ ಎರಡು ಅಂಗಡಿಯವರ ನಡುವೆ ಮಾತಿನ ಚಕಮಕಿ ನಡೆದಿದ್ದು, ಪರಸ್ಪರ ಹೊಡೆದಾಡಿಕೊಂಡಿದ್ದರು. ಹೊಡೆದಾಟದ

ಕಡಬ | ಮೀನು ಮಾರಾಟ ವಿಚಾರದಲ್ಲಿ ಹೊಡೆದಾಟ: ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top