ಕೈಮಗ್ಗ ಮತ್ತು ಜವಳಿ ಇಲಾಖೆಯ ನೂತನ ಜವಳಿ ನೀತಿ ಯೋಜನೆ ➤ ಇಂಡಸ್ಟ್ರಿಯಲ್ ಸೀವಿಂಗ್ ಮೆಷಿನ್ ಖರೀದಿಗೆ ಸಹಾಯಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.20.ಕೈಮಗ್ಗ ಮತ್ತು ಜವಳಿ ಇಲಾಖೆಯ ನೂತನ ಜವಳಿ ನೀತಿ ಯೋಜನೆಯಡಿ ಇಂಡಸ್ಟ್ರಿಯಲ್ ಸೀವಿಂಗ್ ಮೆಷಿನ್ ಅಪರೇಟರ್ ತರಬೇತಿ ಪಡೆದ ಸಾಮಾನ್ಯ/ಪರಿಶಿಷ್ಟಜಾತಿ/ಪರಿಶಿಷ್ಟಪಂಗಡ ಮಹಿಳಾ ಫಲಾನುಭವಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಇಂಡಸ್ಟ್ರಿಯಲ್ ಸೀವಿಂಗ್ ಮೆಷಿನ್ ಖರೀದಿಸಲು ಸಹಾಯಧನ ಒದಗಿಸಲಾಗುವುದು. ಶೇ. 50 ರಷ್ಟು ಸಹಾಯಧನದೊಂದಿಗೆ 2019-20 ನೇ ಸಾಲಿನ ಆಯವ್ಯಯದಲ್ಲಿ ನಿಧಿ ಯೋಜನೆ ಜಾರಿಗೊಳಿಸಲಾಗಿದೆ. ಗಾರ್ಮೆಂಟ್ಸ್ ಕಾರ್ಖಾನೆಗಳಲ್ಲಿ ಕೆಲಸ ಮಾಡಲಾಗದ ಗ್ರಾಮೀಣ ಮಹಿಳೆಯರಿಗೆ ಸ್ವಯಂ ಉದ್ಯೋಗ ಕಲ್ಪಿಸಲು ರೂ. 30,000/- ಘಟಕ ವೆಚ್ಚದಲ್ಲಿ ಒಂದು ಇಂಡಸ್ಟ್ರಿಯಲ್ […]

ಕೈಮಗ್ಗ ಮತ್ತು ಜವಳಿ ಇಲಾಖೆಯ ನೂತನ ಜವಳಿ ನೀತಿ ಯೋಜನೆ ➤ ಇಂಡಸ್ಟ್ರಿಯಲ್ ಸೀವಿಂಗ್ ಮೆಷಿನ್ ಖರೀದಿಗೆ ಸಹಾಯಧನ Read More »

ಕರಾವಳಿ

ಜವಾಹರ ನವೋದಯ ವಿದ್ಯಾಲಯ ➤ 6ನೇ ತರಗತಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.20.ಭಾರತ ಸರಕಾರದ ಸಂಪನ್ಮೂಲ ಅಭಿವೃದ್ಧಿ ಇಲಾಖೆಯ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ, ಸಿ.ಬಿ.ಎಸ್.ಇ. ಪಠ್ಯಕ್ರಮ ಆಧಾರಿತ ವಸತಿ ಶಾಲೆಯಾದ ಮುಡಿಪು ಜವಾಹರ ನವೋದಯ ವಿದ್ಯಾಲಯದ 2020-21ನೇ ಸಾಲಿಗೆ ಆರನೇ ತರಗತಿ ಪ್ರವೇಶಾತಿಯ ಆಯ್ಕೆ ಪರೀಕ್ಷೆಗಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಮಾತ್ರ ಅರ್ಜಿ ಆಹ್ವಾನಿಸಲಾಗಿದೆ. ಪ್ರಸ್ತುತ ಸರಕಾರದಿಂದ ಮಾನ್ಯತೆ ಪಡೆದ ಶಾಲೆಗಳಲ್ಲಿ ಐದನೇ ತರಗತಿಯಲ್ಲಿ ಕಲಿಯುತ್ತಿರುವ ಎಲ್ಲಾ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉಚಿತ ವಸತಿ ಹಾಗು ಶಿಕ್ಷಣ ನೀಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು

ಜವಾಹರ ನವೋದಯ ವಿದ್ಯಾಲಯ ➤ 6ನೇ ತರಗತಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ Read More »

ಕರಾವಳಿ

ಭಾರತೀಯ ಹವಾಮಾನ ಇಲಾಖೆ ➤ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ!

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.20.ಭಾರತೀಯ ಹವಾಮಾನ ಇಲಾಖೆಯವರು ನೀಡಿದ ಹವಾಮಾನ ಮುನ್ಸೂಚನೆಯಂತೆ ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ, ಹವಾಮಾನ ಇಲಾಖೆ ಸೂಚನೆ ನೀಡಿದೆ. ಅರಬ್ಬಿ ಸಮುದ್ರವು ಪ್ರಕ್ಷುಬ್ಧವಾಗುವ ಸಂಭವವಿರುವುದರಿಂದ ಜುಲೈ 20 ರಿಂದ 22 ರವರೆಗೆ ಎಲ್ಲಾ ಮೀನುಗಾರರು ಕಡ್ಡಾಯವಾಗಿ ಮೀನುಗಾರಿಕೆಗಾಗಿ ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ ಎಂದು ಮೀನುಗಾರಿಕೆ ಉಪನಿರ್ದೇಶಕರು ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

ಭಾರತೀಯ ಹವಾಮಾನ ಇಲಾಖೆ ➤ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ! Read More »

ಕರಾವಳಿ

ಕಡಬ: ಕಲ್ಲಂತಡ್ಕ ಸರಕಾರಿ ಜಾಗದಲ್ಲಿದ್ದ ಅಕ್ರಮ ಕಟ್ಟಡಗಳ ತೆರವು

(ನ್ಯೂಸ್ ಕಡಬ) newskadaba.com ಕಡಬ, ಜು.19. ಕಡಬ ಗ್ರಾ.ಪಂ ವ್ಯಾಪ್ತಿಯ ಕೋಡಿಂಬಾಳ ಗ್ರಾಮದ ಕಲ್ಲಂತಡ್ಕ ಎಂಬಲ್ಲಿರುವ ಸಾರ್ವಜನಿಕ ಸ್ಮಶಾನದ ಬಳಿಯ ಸರಕಾರಿ ಜಾಗವನ್ನು ಅತಿಕ್ರಮಿಸಿ ಅಕ್ರಮವಾಗಿ ಕಟ್ಟಡ ನಿರ್ಮಿಸಿರುವುದನ್ನು ಕಂದಾಯ ಅಧಿಕಾರಿಗಳು ಗುರುವಾರ ತೆರವುಗೊಳಿಸಿದರು. ಪುತ್ತೂರು ಸಹಾಯಕ ಆಯುಕ್ತರು ಎಚ್.ಕೆ ಕೃಷ್ಣಮೂರ್ತಿ ಆದೇಶದಂತೆ ಕಡಬ ತಹಶೀಲ್ದಾರ್ ಜಾನ್ ಪ್ರಕಾಶ್ ರೋಡ್ರೀಗಸ್ ಅವರ ನೇತೃತ್ವದ ಕಂದಾಯ ಅಧಿಕಾರಿಗಳ ತಂಡದ ಉಪಸ್ಥಿತಿಯಲ್ಲಿ ಅಕ್ರಮ ಕಟ್ಟಡ ನಿರ್ಮಿಸಿದ ಜನರೇ ಸ್ವಯಂಪ್ರೇರಿತವಾಗಿ ಅಕ್ರಮ ಕಟ್ಟಡ ತೆರವು ಕಾರ್ಯಚರಣೆ ನೇರವೇರಿಸಿದರು. ಈಗಾಗಲೇ ಆಕ್ರಮ ಕಟ್ಟಡ

ಕಡಬ: ಕಲ್ಲಂತಡ್ಕ ಸರಕಾರಿ ಜಾಗದಲ್ಲಿದ್ದ ಅಕ್ರಮ ಕಟ್ಟಡಗಳ ತೆರವು Read More »

ಕರಾವಳಿ

➤➤ Big Breaking News ಬಂಟ್ವಾಳ: ಕಾರು – ಟ್ಯಾಂಕರ್ ನಡುವೆ ಢಿಕ್ಕಿ ➤ ನಾಲ್ವರು ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು.19. ಕಾರು ಮತ್ತು ಗ್ಯಾಸ್ ಟ್ಯಾಂಕರ್‌ ನಡುವೆ ಅಪಘಾತವುಂಟಾಗಿ ನಾಲ್ವರು ಮೃತಪಟ್ಟ ದಾರುಣ ಘಟನೆ ಶುಕ್ರವಾರ ಮಧ್ಯಾಹ್ನ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿ.ಸಿ.ರೋಡ್ ಸಮೀಪದ ಬ್ರಹ್ಮರಕೂಟ್ಲು ಟೋಲ್‌ ಗೇಟ್‌ ಸಮೀಪ ಸಂಭವಿಸಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಶೆವರ್ಲೆಟ್ ಟವೇರಾ ಕಾರು ಹಾಗೂ ವಿರುದ್ಧ ದಿಕ್ಕಿನಿಂದ ಆಗಮಿಸಿದ ಟ್ಯಾಂಕರ್‌ ನಡುವೆ ಬ್ರಹ್ಮರಕೂಟ್ಲು ಟೋಲ್‌ ಗೇಟ್‌ ಸಮೀಪದ ರಾಮಲ್‌ ಕಟ್ಟೆ ಬಳಿ ಢಿಕ್ಕಿ ಉಂಟಾಗಿದ್ದು, ಘಟನೆಯ ತೀವ್ರತೆಗೆ ಕಾರಿನಲ್ಲಿದ್ದ ನಾಲ್ವರು

➤➤ Big Breaking News ಬಂಟ್ವಾಳ: ಕಾರು – ಟ್ಯಾಂಕರ್ ನಡುವೆ ಢಿಕ್ಕಿ ➤ ನಾಲ್ವರು ಮೃತ್ಯು Read More »

ಕರ್ನಾಟಕ

ಕರಾವಳಿಯಲ್ಲಿ ಭಾರೀ ಮಳೆಯ ಬಗ್ಗೆ ಹವಾಮಾನ ಇಲಾಖೆಯಿಂದ ಮುನ್ಸೂಚನೆ ➤ ಜಿಲ್ಲೆಯಾದ್ಯಂತ ರೆಡ್ ಅಲೆರ್ಟ್ ಘೋಷಣೆ ➤ ಮುನ್ನೆಚ್ಚರಿಕಾ ಕ್ರಮವಾಗಿ ಶನಿವಾರದಂದು ಶಾಲಾ ಕಾಲೇಜುಗಳಿಗೆ ರಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.19. ಕರ್ನಾಟಕದ ಕರಾವಳಿ ಭಾಗದಲ್ಲಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಬಗ್ಗೆ ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ಹೊರಡಿಸಿದ್ದು, ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ. ಶನಿವಾರದಿಂದ ಸೋಮವಾರದವರೆಗೆ ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಶನಿವಾರದಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.

ಕರಾವಳಿಯಲ್ಲಿ ಭಾರೀ ಮಳೆಯ ಬಗ್ಗೆ ಹವಾಮಾನ ಇಲಾಖೆಯಿಂದ ಮುನ್ಸೂಚನೆ ➤ ಜಿಲ್ಲೆಯಾದ್ಯಂತ ರೆಡ್ ಅಲೆರ್ಟ್ ಘೋಷಣೆ ➤ ಮುನ್ನೆಚ್ಚರಿಕಾ ಕ್ರಮವಾಗಿ ಶನಿವಾರದಂದು ಶಾಲಾ ಕಾಲೇಜುಗಳಿಗೆ ರಜೆ Read More »

ರಾಷ್ಟ್ರೀಯ ನ್ಯೂಸ್

ಪುತ್ತೂರು: ಕ್ಷುಲ್ಲಕ ಕಾರಣಕ್ಕೆ ಜಗಳ ➤ ಚೂರಿಯಿಂದ ಇರಿದು ಹೆಂಡತಿಯ ಕೊಂದ ಗಂಡ

(ನ್ಯೂಸ್ ಕಡಬ) newskadaba.com ಪುತ್ತೂರು, ಜು.19. ನವ ವಿವಾಹಿತೆಯನ್ನು ಚೂರಿಯಿಂದ ಇರಿದು ಬರ್ಬರವಾಗಿ ಕೊಲೆಗೈದ ಘಟನೆ ಪುತ್ತೂರಿನ ಅರ್ಲಪದವು ಸಮೀಪದ ಕಲ್ಲಪದವು ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ. ಮೃತರನ್ನು ಅಕ್ಷತಾ(22) ಎಂದು ಗುರುತಿಸಲಾಗಿದೆ. ವರ್ಷಗಳ ಹಿಂದೆ ಮದುವೆಯಾಗಿದ್ದ ದಂಪತಿಯ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳವೇರ್ಪಟ್ಟಿದ್ದು, ಈ ವೇಳೆ ಪತಿ ಗಣೇಶ್ (35) ತನ್ನ ಪತ್ನಿಗೆ ಚೂರಿಯಿಂದ ಇರಿದು ಪರಾರಿಯಾಗಿದ್ದಾನೆ. ಗಂಭೀರ ಗಾಯಗೊಂಡ ಅಕ್ಷತಾರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅದಾಗಲೇ ಮೃತಪಟ್ಟಿದ್ದರು. ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಪುತ್ತೂರು

ಪುತ್ತೂರು: ಕ್ಷುಲ್ಲಕ ಕಾರಣಕ್ಕೆ ಜಗಳ ➤ ಚೂರಿಯಿಂದ ಇರಿದು ಹೆಂಡತಿಯ ಕೊಂದ ಗಂಡ Read More »

ಕರಾವಳಿ

33ಕೆವಿ ಪುತ್ತೂರು – ಕಡಬ ಏಕಮಾರ್ಗದಿಂದ ದ್ವಿಮಾರ್ಗ ಕಾಮಗಾರಿಯ ಹಿನ್ನೆಲೆ ➤ ಜುಲೈ 18, 20 ರಂದು ಕಡಬ, ಸುಬ್ರಹ್ಮಣ್ಯ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜು.18. 33ಕೆವಿ ಪುತ್ತೂರು – ಕಡಬ ಏಕಮಾರ್ಗವನ್ನು ದ್ವಿಮಾರ್ಗಗೊಳಿಸುವ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಜು.18 ಮತ್ತು 20ರಂದು ಪೂರ್ವಾಹ್ನ 9.30 ರಿಂದ ಅಪರಾಹ್ನ 5.30ರವರೆಗೆ ವಿದ್ಯುತ್ ನಿಲುಗಡೆಯಾಗಲಿದೆ. ಆದುದರಿಂದ 33/11ಕೆವಿ ಕಡಬ, ಸವಣೂರು, ನೆಲ್ಯಾಡಿ, ಕಡಬ, ಬಿಂದು ಫ್ಯಾಕ್ಟರಿ ಮತ್ತು ಸುಬ್ರಹ್ಮಣ್ಯ ಉಪ ವಿದ್ಯುತ್ ಕೇಂದ್ರದಿಂದ ಹೊರಡುವ ಎಲ್ಲಾ 11ಕೆವಿ ಫೀಡರ್‌ಗಳಿಂದ ಸರಬರಾಜಾಗುವ ವಿದ್ಯುತ್ ಬಳಕೆದಾರರು ಸಹಕರಿಸುವಂತೆ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

33ಕೆವಿ ಪುತ್ತೂರು – ಕಡಬ ಏಕಮಾರ್ಗದಿಂದ ದ್ವಿಮಾರ್ಗ ಕಾಮಗಾರಿಯ ಹಿನ್ನೆಲೆ ➤ ಜುಲೈ 18, 20 ರಂದು ಕಡಬ, ಸುಬ್ರಹ್ಮಣ್ಯ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ Read More »

ಕರಾವಳಿ

ಪುತ್ತೂರು: ಆಂಬ್ಯುಲೆನ್ಸ್ ಮತ್ತು ಟೆಂಪೊ ನಡುವೆ ಢಿಕ್ಕಿ ➤ ಮಹಿಳೆ ಮೃತ್ಯು, ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಜು.17. ಟೆಂಪೊವೊಂದು ಆಂಬುಲೆನ್ಸ್‌ಗೆ ಢಿಕ್ಕಿ ಹೊಡೆದ ಪರಿಣಾಮ ಆಂಬುಲೆನ್ಸ್‌ನಲ್ಲಿದ್ದ ರೋಗಿಯೊಬ್ಬರ ಪತ್ನಿ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಮಿತ್ತೂರು ಸಮೀಪ ಮಂಗಳವಾರ ತಡರಾತ್ರಿ ಸಂಭವಿಸಿದೆ. ಮೃತರನ್ನು ಮಿತ್ತೂರು ಸಮೀಪದ ಏಮಾಜೆ ನಿವಾಸಿ ವಾಮನ ನಾಯ್ಕ ಎಂಬವರ ಪತ್ನಿ ಪಾರ್ವತಿ ಎಂದು ಗುರುತಿಸಲಾಗಿದೆ. ತೀವ್ರ ಅನಾರೋಗ್ಯದಿಂದಾಗಿ ಪುತ್ತೂರಿನ ಮಹಾವೀರ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವಾಮನ ನಾಯ್ಕರವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆಂದು ಮಹಾವೀರ ಆಸ್ಪತ್ರೆಯ ಆಂಬುಲೆನ್ಸ್‌ನಲ್ಲಿ ಕರೆದೊಯ್ಯುತ್ತಿರುವ ವೇಳೆ

ಪುತ್ತೂರು: ಆಂಬ್ಯುಲೆನ್ಸ್ ಮತ್ತು ಟೆಂಪೊ ನಡುವೆ ಢಿಕ್ಕಿ ➤ ಮಹಿಳೆ ಮೃತ್ಯು, ಮೂವರಿಗೆ ಗಾಯ Read More »

ಕರಾವಳಿ

ಯಾವುದೇ ಸಂಭಾವನೆ ಪಡೆಯದೇ ರಸ್ತೆ ದುರಸ್ತಿ ಮಾಡುವ ಹಿರಿ ಜೀವ ➤ ಪರಿಸರ ಪ್ರೇಮವೆಂದರೆ ಇವರಿಗೆ ಪಂಚಪ್ರಾಣ ✍?ಸದಾನಂದ ಆಲಂಕಾರು

(ನ್ಯೂಸ್ ಕಡಬ) newskadaba.com ಆಲಂಕಾರು, ಜು.16. ನಮ್ಮ ಗ್ರಾಮದ ರಸ್ತೆ ಅದು ವ್ಯವಸ್ಥಿತವಾಗಿರಬೇಕು ಎಂದು ಹಂಬಲಿಸುವ ಜನ ಇಂದು ವಿರಳವಾಗುತ್ತಿದ್ದು, ಊರಿನ ಸಂಪರ್ಕಕ್ಕಿರುವ ರಸ್ತೆಗೆ ಮಳೆ ನೀರನ್ನು ಬಿಟ್ಟು ಸ್ಥಳಿಯಾಡಳಿತವನ್ನು ತರಾಟೆಗೆ ತೆಗೆದುಕೊಂಡು ವಿಘ್ನ ಸಂತೋಷ ಪಡುವ ಜನತೆಯೇ ಇಂದು ಸಮಾಜದಲ್ಲಿ ಹೆಚ್ಚಾಗಿದ್ದಾರೆ. ಇಂತಹ ಕಾಲಘಟ್ಟದಲ್ಲಿ ತನ್ನ ಇಳಿ ವಯಸ್ಸಿನಲ್ಲಿಯು ಗ್ರಾಮದ ಅಭಿವೃದ್ದಿಗೆ ಕಿಂಚಿತ್ತು ಸೇವೆ ನೀಡಬೇಕು ಎಂದು ಹಂಬಲಿಸುವ ಹಿರಿಯ ನಾಗರೀಕರೊಬ್ಬರು ವರ್ಷವಿಡೀ ರಸ್ತೆ ದುರಸ್ತಿ ಮಾಡುತ್ತಾ ಇಡೀ ಸಮಾಜಕ್ಕೆ ಮಾದರಿಯಾಗಿದ್ದಾರೆ. ಕಡಬ ತಾಲೂಕು ಆಲಂಕಾರು

ಯಾವುದೇ ಸಂಭಾವನೆ ಪಡೆಯದೇ ರಸ್ತೆ ದುರಸ್ತಿ ಮಾಡುವ ಹಿರಿ ಜೀವ ➤ ಪರಿಸರ ಪ್ರೇಮವೆಂದರೆ ಇವರಿಗೆ ಪಂಚಪ್ರಾಣ ✍?ಸದಾನಂದ ಆಲಂಕಾರು Read More »

ಕರಾವಳಿ
Scroll to Top