ಚರಂಡಿ, ದಾರಿದೀಪ ಅಳವಡಿಕೆ ಕಾಮಗಾರಿ ಶೀಘ್ರ ನಡೆಸಲು ಮನವಿ ➤ಸಮಸ್ಯೆ ಪರಿಹಾರವಾಗದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ
(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜೂನ್.19ಮಳೆಗಾಲ ಆರಂಭವಾದರೂ 34ನೇ ನೆಕ್ಕಿಲಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಚರಂಡಿ ವ್ಯವಸ್ಥೆ ಸಮರ್ಪಕವಾಗಿಲ್ಲ. ಇನ್ನೊಂದೆಡೆ ದಾರಿ ದೀಪಗಳು ಉರಿಯುತ್ತಿಲ್ಲ. ಆದ್ದರಿಂದ 10 ದಿನದೊಳಗೆ ಪಂಚಾಯತ್ ವ್ಯಾಪ್ತಿಯಲ್ಲಿ ಚರಂಡಿ ಹಾಗೂ ದಾರಿ ದೀಪ ಅಳವಡಿಕೆ ಕಾಮಗಾರಿ ಆರಂಭಿಸದಿದ್ದಲ್ಲಿ ಜೂ.27ರಂದು ಗ್ರಾ.ಪಂ. ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ನಮ್ಮೂರು- ನೆಕ್ಕಿಲಾಡಿ ಸಂಘಟನೆ ಎಚ್ಚರಿಕೆ ನೀಡಿದೆ. ಈ ಬಗ್ಗೆ ಜೂ. 17ರಂದು 34ನೇ ನೆಕ್ಕಿಲಾಡಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಅವರಿಗೆ ಮನವಿ ನೀಡಿದ ನಮ್ಮೂರು- ನೆಕ್ಕಿಲಾಡಿ […]



