ಪರಿಶಿಷ್ಟ ಪಂಗಡದ ಜನರ ಆರ್ಥಿಕ ಅಭಿವೃದ್ದಿಗಾಗಿ ವಿವಿಧ ಯೋಜನೆಗಳಡಿಯಲ್ಲಿ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.5.ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮವು, 2019-20ನೇ ಸಾಲಿಗೆ ಪರಿಶಿಷ್ಟ ಪಂಗಡದ ಜನರ ಆರ್ಥಿಕ ಅಭಿವೃದ್ದಿಗಾಗಿ ಉದ್ಯಮ ಶೀಲತಾ ಅಭಿವೃದ್ದಿ ಯೋಜನೆ, ಪ್ರೇರಣಾ (ಮೈಕ್ರೋ ಕ್ರೆಡಿಟ್) ಯೋಜನೆ, ಮತ್ತು ಸಮಗ್ರ ಗಂಗಾ ಕಲ್ಯಾಣ ಯೋಜನೆಗಳಡಿಯಲ್ಲಿ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸ್ವೀಕರಿಸಲು ಕೊನೆಯ ದಿನ ಜುಲೈ 31 ಆಗಿರುತ್ತದೆ. ನಿಗಮದಿಂದ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಇರಬೇಕಾದ ಸಾಮಾನ್ಯ ಅರ್ಹತೆಗಳು ಇಂತಿವೆ: ಅರ್ಜಿದಾರರು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು […]



