ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ಅತಿಥಿ ಶಿಕ್ಷಕರು/ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.18. ದಕ್ಷಿಣ ಕನ್ನಡ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖಾ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಂಗಳೂರು ತಾಲೂಕಿನ ಮೆನ್ನಬೆಟ್ಟು ಗ್ರಾಮದ ಕಮ್ಮಾಜೆಯ ಮೊರಾರ್ಜಿ ದೇಸಾಯಿ ವಸತಿ ಶಾಲಾ ವಿಭಾಗದಲ್ಲಿನ ಗಣಿತ, ವಿಜ್ಞಾನ, ಕನ್ನಡ ಸಹಶಿಕ್ಷಕರ ಹುದ್ದೆಗಳಿಗೆ ಹಾಗೂ ಕಾಲೇಜು ವಿಭಾಗದ ಗಣಿತ, ಭೌತಶಾಸ್ತ್ರ, ಜೀವಶಾಸ್ತ್ರ, ರಸಾಯನಶಾಸ್ತ್ರ ಮತ್ತು ಗಣಕ ವಿಜ್ಞಾನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಮಾಸಿಕ ಗೌರವಧನದ ಮೇರೆಗೆ ನಿಗದಿತ ವಿದ್ಯಾರ್ಹತೆಯನ್ನು ಹೊಂದಿರುವ ಆಸಕ್ತ ಅಭ್ಯರ್ಥಿಗಳು ಅತಿಥಿü ಶಿಕ್ಷಕರು ಹಾಗೂ ಉಪನ್ಯಾಸಕರ ಹುದ್ದೆಗಳಿಗೆ ಮೇ […]

ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ಅತಿಥಿ ಶಿಕ್ಷಕರು/ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ

ಪರಿಶಿಷ್ಟವರ್ಗ ಮತ್ತು ಸಮಾಜ ಕಲ್ಯಾಣ ಇಲಾಖಾ ವತಿಯಿಂದ ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.18. ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಮತ್ತು ಪರಿಶಿಷ್ಟವರ್ಗ ಕಲ್ಯಾಣ ಇಲಾಖಾ ವತಿಯಿಂದ ನಡೆಸಲ್ಪಡುತ್ತಿರುವ ವಿದ್ಯಾರ್ಥಿನಿಲಯಗಳಿಗೆ 2019-20 ನೇ ಸಾಲಿಗೆ ವಿದ್ಯಾರ್ಥಿಗಳನ್ನು ಸೇರ್ಪಡೆಗೊಳಿಸಲು ಆನ್‍ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ. ಆಸಕ್ತ ಪ.ಜಾತಿ ವಿದ್ಯಾರ್ಥಿಗಳು www://admissions.kar.nic.in/hosteladmission ವೆಬ್‍ಸೈಟ್ ಮೂಲಕ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು www:kar.nic.in/hosteladmission  ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳಿಗೆ ವಿದ್ಯಾರ್ಥಿಗಳ ಹೆತ್ತವರ ಆದಾಯ ರೂ. 2 ಲಕ್ಷ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ವಿದ್ಯಾರ್ಥಿಗಳ ಹೆತ್ತವರ

ಪರಿಶಿಷ್ಟವರ್ಗ ಮತ್ತು ಸಮಾಜ ಕಲ್ಯಾಣ ಇಲಾಖಾ ವತಿಯಿಂದ ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಜಿಲ್ಲೆಯಲ್ಲಿ ತೀವ್ರಗೊಂಡ ನೀರಿನ ಸಮಸ್ಯೆ ➤ ಧರ್ಮಸ್ಥಳ ಭೇಟಿಯನ್ನು ಕೆಲಕಾಲ ಮುಂದೂಡುವಂತೆ ಹೆಗ್ಗಡೆಯವರಿಂದ ಮನವಿ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಮೇ.18. ದೇಶಾದ್ಯಂತ ತೀವ್ರ ತರದಲ್ಲಿ ನೀರಿನ ಕೊರತೆ ಎದುರಾಗಿದ್ದು, ಇದರ ಪರಿಣಾಮ ಇದೀಗ ಹೊರ ಜಿಲ್ಲೆಗಳಿಂದ ದಕ್ಷಿಣ ಕನ್ನಡಕ್ಕೆ ಭೇಟಿ ನೀಡುವ ಯಾತ್ರಾರ್ಥಿಗಳ, ಪ್ರಮುಖ ಪುಣ್ಯಕ್ಷೇತ್ರಗಳ ಭೇಟಿ ಮಾಡುವ ಭಕ್ತರ ಮೇಲೂ ಬಿದ್ದಿದೆ. ಒಂದೆಡೆ ಜಿಲ್ಲೆಯಲ್ಲಿ ರೇಶನ್ ಮೂಲಕ ಜಿಲ್ಲಾಡಳಿತವು ನೀರನ್ನು ಪೂರೈಸುತ್ತಿದ್ದು, ವಾರಕ್ಕೆ ಎರಡು – ಮೂರು ದಿನಕ್ಕೊಮ್ಮೆ‌ ಮಾತ್ರ ನೀರು ದೊರೆಯುತ್ತಿದೆ. ಇನ್ನೊಂದೆಡೆ ಧರ್ಮಸ್ಥಳದಲ್ಲಿ ನೀರಿನ ಸಮಸ್ಯೆ ಉಲ್ಬಣಿಸಿರುವ ಹಿನ್ನಲೆಯಲ್ಲಿ ಕ್ಷೇತ್ರಕ್ಕೆ ಭೇಟಿ ನೀಡುವ ಭಕ್ತಾದಿಗಳು ತಮ್ಮ ಪ್ರವಾಸವನ್ನು

ಜಿಲ್ಲೆಯಲ್ಲಿ ತೀವ್ರಗೊಂಡ ನೀರಿನ ಸಮಸ್ಯೆ ➤ ಧರ್ಮಸ್ಥಳ ಭೇಟಿಯನ್ನು ಕೆಲಕಾಲ ಮುಂದೂಡುವಂತೆ ಹೆಗ್ಗಡೆಯವರಿಂದ ಮನವಿ Read More »

ಕರ್ನಾಟಕ

ಇನ್ಮುಂದೆ ಅಟೋ ರಿಕ್ಷಾಗಳಲ್ಲಿ ಮಿತಿ ಮೀರಿ ಮಕ್ಕಳ ಸಾಗಾಟ ಮಾಡುವಂತಿಲ್ಲ ➤ ನಿಯಮ ಉಲ್ಲಂಘಿಸಿದ್ದಲ್ಲಿ ಸಾರಿಗೆ ಇಲಾಖೆಯಿಂದ ಕ್ರಮ

(ನ್ಯೂಸ್ ಕಡಬ) newskadaba.com,ಮಂಗಳೂರು,ಮೇ.18.  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವಾರು ಕಾರ್ಖಾನೆಗಳಿದ್ದು, ಬಹಳ ಜನ ಕೆಲಸ ನಿರ್ವಹಿಸುತ್ತಿದ್ದಾರೆ. ಇವರಿಗೆ ವ್ಯವಸ್ಥಾಪಕರು ವಾಹನ ವ್ಯವಸ್ಥೆ ಮಾಡಿದ್ದಾರೆಯೇ? ಅಥವಾ ಇವರಿಗೆ ಸಮರ್ಪಕ ಬಸ್ ವ್ಯವಸ್ಥೆ ಇದೆಯೇ, ಇಲ್ಲದಿದ್ದಲ್ಲಿ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳನ್ನು ನಿಯೋಜಿಸುವಂತೆ ಬೆಂಗಳೂರು, ಕಾರ್ಮಿಕ ಇಲಾಖೆಯ ಆಯುಕ್ತ ಪಾಲಯ್ಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.  ಇವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸರಕು ಸಾಗಾಣಿಕೆ ವಾಹನಗಳಲ್ಲಿ ಮಾನವ ಸಾಗಾಣಿಕೆ ತಡೆ ಕುರಿತ ಸಮಾಲೋಚನಾ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದರು.

ಇನ್ಮುಂದೆ ಅಟೋ ರಿಕ್ಷಾಗಳಲ್ಲಿ ಮಿತಿ ಮೀರಿ ಮಕ್ಕಳ ಸಾಗಾಟ ಮಾಡುವಂತಿಲ್ಲ ➤ ನಿಯಮ ಉಲ್ಲಂಘಿಸಿದ್ದಲ್ಲಿ ಸಾರಿಗೆ ಇಲಾಖೆಯಿಂದ ಕ್ರಮ Read More »

ಕರ್ನಾಟಕ

ಮೇ.21ರಂದು ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಸುಳ್ಯ ಮತ್ತು ಕಡಬಕ್ಕೆ..!! ➤ ಸರಕಾರಿ ಕಛೇರಿಗಳಲ್ಲಿ ನಡೆಯುವ ಲಂಚದ ಬಗ್ಗೆ ದೂರು ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.18. ದಕ್ಷಿಣ ಕನ್ನಡ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಮೇ 21 ರಂದು ಪೂರ್ವಾಹ್ನ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯ ವರೆಗೆ ಸುಳ್ಯ ಸರ್ಕಾರಿ ಪ್ರವಾಸಿ ಮಂದಿರ ಅಪರಾಹ್ನ 2 ಗಂಟೆಯಿಂದ 4 ಗಂಟೆಯ ವರೆಗೆ ಡಾ ಅಂಬೇಡ್ಕರ್ ಭವನ ಕಡಬ ಇಲ್ಲಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಭ್ರಷ್ಟಾಚಾರಕ್ಕೆ ಸಂಬಂಧಪಟ್ಟ ದೂರುಗಳನ್ನು ಸ್ವೀಕರಿಸಲಿದ್ದಾರೆ ಎಂದು ಪೊಲೀಸ್ ನಿರೀಕ್ಷಕರು, ಭ್ರಷ್ಟಾಚಾರ ನಿಗ್ರಹ ದಳ ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಇವರ ಪ್ರಕಟಣೆ

ಮೇ.21ರಂದು ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಸುಳ್ಯ ಮತ್ತು ಕಡಬಕ್ಕೆ..!! ➤ ಸರಕಾರಿ ಕಛೇರಿಗಳಲ್ಲಿ ನಡೆಯುವ ಲಂಚದ ಬಗ್ಗೆ ದೂರು ಸ್ವೀಕಾರ Read More »

ಕರಾವಳಿ

ಲೋಕಾಯುಕ್ತರ ಭೇಟಿ – ದೂರು ಅರ್ಜಿ ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.18. ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ವಿವಿಧ ದಿನ ವಿವಿಧ ಸ್ಥಳಗಳಿಗೆ ಭೇಟಿ ನೀಡಿ, ಸಾರ್ವಜನಿಕರಿಂದ ದೂರು ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ. ಮೇ 27 ರಂದು ಪೂರ್ವಾಹ್ನ 11 ಗಂಟೆಯಿಂದ ಅಪರಾಹ್ನ 1 ಗಂಟೆಯವರೆಗೆ ಸುಳ್ಯ ತಾಲೂಕು ಕಚೇರಿ, ಮೇ 28 ರಂದು ಪೂರ್ವಾಹ್ನ 11 ಗಂಟೆಯಿಂದ 1 ಗಂಟೆಯವರೆಗೆ ಪುತ್ತೂರು ತಾಲೂಕು ಕಚೇರಿ, ಮೇ 29 ರಂದು ಪೂರ್ವಾಹ್ನ 11 ಗಂಟೆಯಿಂದ ಅಪರಾಹ್ನ 1 ಗಂಟೆಯವರೆಗೆ

ಲೋಕಾಯುಕ್ತರ ಭೇಟಿ – ದೂರು ಅರ್ಜಿ ಸ್ವೀಕಾರ Read More »

ಕರಾವಳಿ

ಪುತ್ತೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ ➤ ಆರೋಪಿ ಮದರಸ ಅಧ್ಯಾಪಕನ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಮೇ.18. ಅಪ್ರಾಪ್ತ ವಿದ್ಯಾರ್ಥಿಯೋರ್ವನಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿ ಮದರಸ ಅಧ್ಯಾಪಕನನ್ನು ಬಂಧಿಸಿರುವ ಪುತ್ತೂರು ಮಹಿಳಾ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕ ದಿ.ಅಬ್ದುಲ್ಲಾ ಎಂಬವರ ಪುತ್ರ ಪುತ್ತೂರಿನ ಮದರಸವೊಂದರಲ್ಲಿ ಅಧ್ಯಾಪಕನಾಗಿದ್ದ ಅನ್ವರ್ ಮೌಲವಿ(41) ಎಂದು ಗುರುತಿಸಲಾಗಿದೆ. ಆರೋಪಿಯು ಮಾರ್ಚ್ ಮತ್ತು ಎಪ್ರಿಲ್ ತಿಂಗಳಿನಲ್ಲಿ ಬಾಲಕನಿಗೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೆ, ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಸಾಯಿಸುವುದಾಗಿ

ಪುತ್ತೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ ➤ ಆರೋಪಿ ಮದರಸ ಅಧ್ಯಾಪಕನ ಬಂಧನ Read More »

ಕರಾವಳಿ

ಸುಬ್ರಹ್ಮಣ್ಯ: ದೇವರ ಕಾಣಿಕೆ ಹುಂಡಿಗೆ ಕನ್ನ ➤ ಹಣ ಎಗರಿಸುತ್ತಿದ್ದಾಗ ಸಿಕ್ಕಿಬಿದ್ದ ಆರೋಪಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಮೇ.17. ದಕ್ಷಿಣ ಭಾರತದ ಅತ್ಯಂತ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕುಕ್ಕೇ ಸುಬ್ರಹ್ಮಣ್ಯ ದೇವರ ಹುಂಡಿಗೆ ಕನ್ನ ಹಾಕುತ್ತಿದ್ದ ವ್ಯಕ್ತಿಯನ್ನು ಬಂಧಿಸಿರುವ ಸುಬ್ರಹ್ಮಣ್ಯ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತ ಆರೋಪಿಯನ್ನು ತುಮಕೂರು ಮೂಲದ ಅಶ್ವಿನ್ ಎಂದು ಗುರುತಿಸಲಾಗಿದೆ. ಆರೋಪಿಯು ಗುರುವಾರದಂದು ದೇವಸ್ಥಾನದ ಕಾಣಿಕೆ ಹುಂಡಿಯಿಂದ ಹಣವನ್ನು ಎಗರಿಸುತ್ತಿದ್ದ ವೇಳೆ ಸಿಬ್ಬಂದಿಗಳು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸುಬ್ರಹ್ಮಣ್ಯ: ದೇವರ ಕಾಣಿಕೆ ಹುಂಡಿಗೆ ಕನ್ನ ➤ ಹಣ ಎಗರಿಸುತ್ತಿದ್ದಾಗ ಸಿಕ್ಕಿಬಿದ್ದ ಆರೋಪಿ Read More »

ಕರ್ನಾಟಕ

ಶಿವಮೊಗ್ಗದಿಂದ ನಾಪತ್ತೆಯಾಗಿದ್ದ ಬಾಲಕ ಕಡಬದಲ್ಲಿ ಪತ್ತೆ ➤ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದಾಗ ಮಾಹಿತಿ ನೀಡಿದ ಹೋಟೆಲ್ ಮಾಲಕ

(ನ್ಯೂಸ್ ಕಡಬ) newskadaba.com ಕಡಬ, ಮೇ.17. ಶಿವಮೊಗ್ಗದಿಂದ ನಾಪತ್ತೆಯಾಗಿದ್ದ ಬಾಲಕನೋರ್ವ ಶುಕ್ರವಾರದಂದು ಕಡಬ ಠಾಣಾ ವ್ಯಾಪ್ತಿಯ ಕೆಂಜಾಳದಲ್ಲಿ ಪತ್ತೆಯಾಗಿದ್ದಾನೆ. ಶಿವಮೊಗ್ಗ ಜಿಲ್ಲೆಯ ಸಿಗೆಟ್ಟಿ ನಿವಾಸಿ ಉಮೇಶ್ ಎಂಬವರ ಪುತ್ರ ಅಶ್ವಥ್(12) ಎಂಬಾತ ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದು, ಈ ಬಗ್ಗೆ ಶಿವಮೊಗ್ಗ ದೊಡ್ಡ ಪೇಟೆ ಪೊಲೀಸ್ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲಾಗಿತ್ತು. ಶಿವಮೊಗ್ಗದಿಂದ ಧರ್ಮಸ್ಥಳಕ್ಕೆ‌ ಬಂದಿದ್ದ ಈತ ಸುಬ್ರಹ್ಮಣ್ಯ ರಸ್ತೆಯ ಕೆಂಜಾಳ ಬಳಿ ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದಾಗ ಕೆಂಜಾಳದ ಹೊಟೇಲ್‌ ಮಾಲಿಕರೋರ್ವರು ಕಡಬ ಠಾಣೆಗೆ ಮಾಹಿತಿ ನೀಡಿದ್ದಾರೆ.

ಶಿವಮೊಗ್ಗದಿಂದ ನಾಪತ್ತೆಯಾಗಿದ್ದ ಬಾಲಕ ಕಡಬದಲ್ಲಿ ಪತ್ತೆ ➤ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದಾಗ ಮಾಹಿತಿ ನೀಡಿದ ಹೋಟೆಲ್ ಮಾಲಕ Read More »

ಕರ್ನಾಟಕ

ಗಡಿಭಾಗದಲ್ಲಿ ಮುಂದುವರಿದ ಉಗ್ರರ ಬೇಟೆ: ಪುಲ್ವಾಮಾದಲ್ಲಿ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿ ಭಾರತೀಯ ಸೇನೆ

(ನ್ಯೂಸ್ ಕಡಬ) newskadaba.com,ಶ್ರೀನಗರ,ಮೇ.17.ಭಾರತೀಯ ಭದ್ರತಾ ಪಡೆಗಳ ಸಿಬ್ಬಂದಿ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಪುಲ್ವಾಮಾದ ದಿಲಿಪೊರ ಗ್ರಾಮದಲ್ಲಿ ಉಗ್ರರು ಅಡಗಿರುವ ಮಾಹಿತಿಯ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳ ಸಿಬ್ಬಂದಿ ಶೋಧಕಾರ್ಯ ನಡೆಸುತ್ತಿದ್ದರು. ಈ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ತಕ್ಷಣವೇ ಸ್ಥಳವನ್ನು ಸುತ್ತುವರಿದ ಭದ್ರತಾಪಡೆ ಸಿಬ್ಬಂದಿ ಪ್ರತಿದಾಳಿ ಆರಂಭಿದರು.ಕಾರ್ಯಾಚರಣೆಯಲ್ಲಿ ಒಬ್ಬ ಯೋಧ ಗುಂಡಿನ ಚಕಮಕಿ ವೇಳೆ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇನ್ನೂ ಇಬ್ಬರು ಯೋಧರು ಗಾಯಗೊಂಡಿದ್ದಾರೆ. ಇವರೊಂದಿಗೆ ಗಾಯಗೊಂಡಿರುವ

ಗಡಿಭಾಗದಲ್ಲಿ ಮುಂದುವರಿದ ಉಗ್ರರ ಬೇಟೆ: ಪುಲ್ವಾಮಾದಲ್ಲಿ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿ ಭಾರತೀಯ ಸೇನೆ Read More »

ರಾಷ್ಟ್ರೀಯ ನ್ಯೂಸ್
Scroll to Top