ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವರ ಕಿರುಷಷ್ಠಿ ರಥೋತ್ಸವ
(ನ್ಯೂಸ್ ಕಡಬ) newskadaba.com.ಸುಬ್ರಹ್ಮಣ್ಯ,ಜ.13.ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಶನಿವಾರ ಸುಬ್ರಹ್ಮಣ್ಯ ದೇವರ ಕಿರುಷಷ್ಠಿ ರಥೋತ್ಸವ ನೆರವೇರಿತು. ಸಹಸ್ರಾರು ಭಕ್ತರ ಪರಾಕುಗಳೊಂದಿಗೆ ತಳಿರು, ತೋರಣ, ಸೀಯಾಳ, ಅಡಕೆ, ಬಾಳೆ, ಬಾಳೆಗೊನೆ ಮತ್ತು ವಿದ್ಯುತ್ ಅಲಂಕಾರದ ರಥದಲ್ಲಿ ದೇವರ ಉತ್ಸವ ನೆರವೇರಿತು.ರಥಾರೋಹಣದ ಬಳಿಕ ಶ್ರೀ ದೇವಳದ ಪ್ರಧಾನ ಅರ್ಚಕ ಸೀತಾರಾಮ ಎಡಪಡಿತ್ತಾಯ ದೇವರಿಗೆ ಪೂಜೆ ನೆರವೇರಿಸಿದರು. ಬಳಿಕ ಸವಾರಿ ಮಂಟಪದ ಕಿರುಷಷ್ಠಿ ಕಟ್ಟೆಯಲ್ಲಿ ದೇವರಿಗೆ ಪೂಜೆ ನಡೆಯಿತು. ಈ ಸಂದರ್ಭ ಸುಡುಮದ್ದು ಪ್ರದರ್ಶನ, ಬಳಿಕ ದೇವಳದ ಹೊರಾಂಗಣದಲ್ಲಿ ಪಾಲಕಿ ಉತ್ಸವ, […]
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವರ ಕಿರುಷಷ್ಠಿ ರಥೋತ್ಸವ Read More »
ಕರಾವಳಿ



