ಕೊಳಚೆ ನೀರಿನ ಪೈಪು ಒಡೆದು ರಸ್ತೆಯಲ್ಲೇ ಹರಿಯುತ್ತಿರುವ ತ್ಯಾಜ್ಯ ನೀರು ► ಕಡಬದ ವರ್ತಕರಿಂದ ಗ್ರಾಮ ಪಂಚಾಯತ್ ಗೆ ಮುತ್ತಿಗೆ
(ನ್ಯೂಸ್ ಕಡಬ) newskadaba.com ಕಡಬ, ಸೆ.24. ಇಲ್ಲಿನ ಮುಖ್ಯ ಪೇಟೆಯಲ್ಲಿ ಕೊಳಚೆ ನೀರಿನ ಪೈಪ್ ಒಡೆದಿರುವುದನ್ನು ಸರಿಪಡಿಸದೇ ಇರುವ ಗ್ರಾಮ ಪಂಚಾಯತ್ ನಿರ್ಲಕ್ಷ್ಯದ ವಿರುದ್ಧ ತೊಂದರೆಗೊಳಗಾಗಿರುವ ವರ್ತಕರು ಕಡಬ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ ಘಟನೆ ಸೋಮವಾರದಂದು ನಡೆದಿದೆ. ಕಳೆದ ಸುಮಾರು ಆರು ತಿಂಗಳಿನಿಂದ ಮುಖ್ಯ ಪೇಟೆಯಲ್ಲಿ ಅಳವಡಿಸಲಾಗಿದ್ದ ಕೊಳಚೆ ನೀರು ಹರಿಯುವ ಪೈಪ್ ಒಡೆದು ಹೋಗಿದ್ದು, ಈ ಬಗ್ಗೆ ಹಲವು ಬಾರಿ ಕಡಬ ಗ್ರಾಮ ಪಂಚಾಯತಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನ ಉಂಟಾಗಿಲ್ಲ. ತೀವ್ರ […]










