ಪ್ರಧಾನಿ ಮೋದಿ, ಅಮಿತ್ ಶಾ, ಯೋಗಿ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದ ಕಿಡಿಗೇಡಿ ಬಂಧನ

(ನ್ಯೂಸ್‌ ಕಡಬ) newskadaba.com,  ನ.03: ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಾಗೂ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಪೋಸ್ಟ್‌ ಮಾಡಿದ್ದ ವ್ಯಕ್ತಿ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಪೊಲೀಸರ ಪ್ರಕಾರ, ಈ ಮೂವರು ನಾಯಕರ ಚಿತ್ರಗಳು ಮತ್ತು ಅಶ್ಲೀಲ ಹಾಡನ್ನು ಹೊಂದಿರುವ ಪೋಸ್ಟ್‌ ನವೆಂಬರ್‌ 1 ರಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ಆ ಪ್ರದೇಶದಲ್ಲಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಯಿತು.

ಪ್ರಧಾನಿ ಮೋದಿ, ಅಮಿತ್ ಶಾ, ಯೋಗಿ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದ ಕಿಡಿಗೇಡಿ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ; ಜಮೀರ್ ಅಹ್ಮದ್ ಖಾನ್

(ನ್ಯೂಸ್‌ ಕಡಬ) newskadaba.com,  ನ.03 ಹೊಸಪೇಟೆ : ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ಸರ್ಕಾರ ದಿವಾಳಿ ಆಗುತ್ತದೆಂಬ ಆರೋಪ ಸುಳ್ಳಾಗಿದೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ನಿಲ್ಲುವುದಿಲ್ಲ. ಗ್ಯಾರಂಟಿ ನಿಲ್ಲಿಸಲು ನಮ್ಮವರೇ ಹೇಳಿದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸುತಾರಾಂ ಒಪ್ಪಿಲ್ಲ. ಪಂಚ ಗ್ಯಾರಂಟಿಗಳು ಅಬಾಧಿತವಾಗಿ ಮುಂದುವರೆಯಲಿವೆ ಎಂದು ಸಚಿವ ಬಿ.ಜೆಡ್. ಜಮೀರ್ ಅಹಮದ್ ಖಾನ್ ಹೇಳಿದರು.ನಗರದ ಸಾಯಿಲೀಲಾ ರಂಗಮಂದಿರದಲ್ಲಿ ಜಿಲ್ಲಾಡಳಿತ ಮತ್ತು ಜಿಪಂನಿಂದ ಶನಿವಾರ ಹಮ್ಮಿಕೊಂಡಿದ್ದ ಗ್ಯಾರಂಟಿ ಯೋಜನೆಗಳ ಕಾರ್ಯಾಗಾರ ಮತ್ತು ಗ್ಯಾರಂಟಿ ಉತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪಂಚ ಗ್ಯಾರಂಟಿಯಿಂದ

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ; ಜಮೀರ್ ಅಹ್ಮದ್ ಖಾನ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತೆಲಂಗಾಣ: ಬಸ್-ಟ್ರಕ್ ನಡುವೆ ಭೀಕರ ಅಪಘಾತ-20 ಮಂದಿ ಮೃತ್ಯು

(ನ್ಯೂಸ್‌ ಕಡಬ) newskadaba.com,  ನ.03: ಜಲ್ಲಿಕಲ್ಲು ಸಾಗಿಸುತ್ತಿದ್ದ ಟಿಪ್ಪರ್‌ ಲಾರಿಯೊಂದು ಸಾರಿಗೆ ಬಸ್‌‍ ಡಿಕ್ಕಿ ಹೊಡೆದ ಪರಿಣಾಮ ಅದರಲ್ಲಿದ್ದ 20 ಜನರು ಸಾವನ್ನಪ್ಪಿರುವ ಘಟನೆ ಇಂದು ಬೆಳಿಗ್ಗೆ ತೆಲಂಗಾಣಾದ ರಂಗಾ ರೆಡ್ಡಿ ಜಿಲ್ಲೆಯ ಚೆವೆಲ್ಲಾ ಬಳಿ ನಡೆದಿದೆ. ಟಿಪ್ಪರ್‌ ತೆಲಂಗಾಣ ರಸ್ತೆ ಸಾರಿಗೆ ನಿಗಮ (ಆರ್‌ಟಿಸಿ) ವಾಹನಕ್ಕೆ ಡಿಕ್ಕಿ ಹೊಡೆದ ಡಿಕ್ಕಿ ರಭಸಕ್ಕೆ ಬಸ್‌‍ ಬಸ್‌‍ ಒಳಗೆ ಜಲ್ಲಿಕಲ್ಲು ಬಿದ್ದಿದ್ದು ಸ್ಥಳದಲ್ಲೇ 16 ಜನರು ಸಾವನ್ನಪ್ಪಿದರು, ಎಂಟು ಮಂದಿ ಗಾಯಗೊಂಡರು ಎಂದು ಪೊಲೀಸ್‌‍ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತೆಲಂಗಾಣ: ಬಸ್-ಟ್ರಕ್ ನಡುವೆ ಭೀಕರ ಅಪಘಾತ-20 ಮಂದಿ ಮೃತ್ಯು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮೆಕ್ಸಿಕೋ ಸೂಪರ್ ಮಾರ್ಕೆಟ್‌ನಲ್ಲಿ ಭೀಕರ ಬೆಂಕಿ ಅವಘಡ – 23 ಜನ ಸಾವು

(ನ್ಯೂಸ್‌ ಕಡಬ) newskadaba.com,  ನ.03 ಮೆಕ್ಸಿಕೋ: ಮೆಕ್ಸಿಕೋದ ಸೊನಾರಾ ರಾಜ್ಯದಲ್ಲಿರುವ ಒಂದು ಸೂಪರ್ ಮಾರ್ಕೆಟ್‌ನಲ್ಲಿ ಗುರುವಾರ ರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಕನಿಷ್ಠ 23 ಮಂದಿ ಜೀವ ಕಳೆದುಕೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ ಸಂಭವಿಸಿದ ಸಮಯದಲ್ಲಿ ಮಾರ್ಕೆಟ್ ಒಳಗೆ ಗ್ರಾಹಕರು ಹಾಗೂ ಸಿಬ್ಬಂದಿ ಇದ್ದರೆಂದು ವರದಿಯಾಗಿದೆ. ಬೆಂಕಿ ಅಷ್ಟರ ಮಟ್ಟಿಗೆ ಉಗ್ರವಾಗಿ ಹೊತ್ತಿಕೊಂಡಿತ್ತು ಎಂಬುದಾಗಿ ಪ್ರತ್ಯಕ್ಷ ಸಾಕ್ಷಿಗಳು ತಿಳಿಸಿದ್ದಾರೆ. ಮಾರ್ಕೆಟ್ ಹೊರಗೆ ನಿಲ್ಲಿಸಿದ್ದ ಹಲವು ಕಾರುಗಳಿಗೂ ಬೆಂಕಿ ತಗುಲಿ ಅವು ಸಂಪೂರ್ಣ

ಮೆಕ್ಸಿಕೋ ಸೂಪರ್ ಮಾರ್ಕೆಟ್‌ನಲ್ಲಿ ಭೀಕರ ಬೆಂಕಿ ಅವಘಡ – 23 ಜನ ಸಾವು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶುದ್ಧ ನೀರಿನ ಘಟಕದಲ್ಲಿ ಏಕರೂಪ ದರ

(ನ್ಯೂಸ್‌ ಕಡಬ) newskadaba.com,  ನ.03: ಬೆಂಗಳೂರು ಜಲಮಂಡಳಿಯು ನಗರದಲ್ಲಿರುವ ಶುದ್ಧ ನೀರಿನ ಘಟಕಗಳಿಂದ ಕ್ಯೂ ಆರ್‌ಕೋಡ್ ಸ್ಕ್ಯಾನಿಂಗ್ ಮೂಲಕ ಅಥವಾ ಪ್ರೀಪೇಯ್ಡ್‌ ಕಾರ್ಡ್ ಮೂಲಕ ನೀರು ಪಡೆಯುವ ಹಾಗೂ ಏಕರೂಪ ದರ ನಿಗದಿ ಸಂಬಂಧ ಯೋಜನೆಯನ್ನು ರೂಪಿಸಿದೆ ಶುದ್ದ ಕುಡಿಯುವ ನೀರಿನ ಘಟಕಗಳ ನಿರ್ವಹಣೆಯನ್ನು ಸಂಪೂರ್ಣ ತಂತ್ರಜ್ಞಾನ ಆಧಾರಿತವಾಗಿ ನಿರ್ವಹಿಸಲು ಜಲಮಂಡಳಿ ಮುಂದಾಗಿದ್ದು, ವರ್ಷದ ಹಿಂದೆಯೇ ಬಿಬಿಎಂಪಿಯಿಂದ ವಶಕ್ಕೆ ಪಡೆದಂತಹ ಶುದ್ದ ನೀರಿನ ಘಟಕಗಳ ನಿರ್ವಹಣಾ ಸ್ವರೂಪವನ್ನೇ ಬದಲಾಯಿಸಲು ಮುಂದಾಗಿದೆ. ಈ ನಿಟ್ಟಿನಲ್ಲಿ ಯೋಜನೆಯನ್ನು ರೂಪಿಸಿ ಟೆಂಡರ್

ಶುದ್ಧ ನೀರಿನ ಘಟಕದಲ್ಲಿ ಏಕರೂಪ ದರ Read More »

ಬ್ರೇಕಿಂಗ್ ನ್ಯೂಸ್

ಇಂದಿನ ಚಿನ್ನದ ದರ ಚೆಕ್ ಮಾಡಿ

(ನ್ಯೂಸ್‌ ಕಡಬ) newskadaba.com,  ನ.03: ಚಿನ್ನದ ದರದಲ್ಲಿ ಇಂದು ಮತ್ತೆ ಏರಿಕೆ ಕಂಡು ಬಂದಿದೆ . ಇಂದು 22ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 15 ರೂ. ಏರಿಕೆ ಕಂಡು ಬಂದಿದ್ದು, 11,290 ರೂ. ಗೆ ತಲುಪಿದೆ. 24 ಕ್ಯಾರಟ್‌ 1 (Gold Price) ಗ್ರಾಂ ಚಿನ್ನದ ದರದಲ್ಲಿ 17 ರೂ. ಏರಿಕೆಯಾಗಿ, 12,317 ರೂ ಆಗಿದೆ.   22 ಕ್ಯಾರಟ್‌ನ 8 ಗ್ರಾಂ ಚಿನ್ನ 90,320 ರೂ. ಬಾಳಿದರೆ, 10 ಗ್ರಾಂಗೆ ನೀವು 1,12,900 ಹಾಗೂ

ಇಂದಿನ ಚಿನ್ನದ ದರ ಚೆಕ್ ಮಾಡಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರಿನ ಕೆಂಪೇಗೌಡ ಮೆಟ್ರೊ ನಿಲ್ದಾಣದಲ್ಲಿ ತಾಯಿಯಿಂದ ತಪ್ಪಿ ಹೋದ 6 ವರ್ಷದ ಮಗು;ಕೊನೆಗೂ ಮಗು ತಾಯಿಯ ಮಡಿಲಿಗೆ…!

(ನ್ಯೂಸ್‌ ಕಡಬ) newskadaba.com,  ನ.03 ಬೆಂಗಳೂರು: ಬೆಂಗಳೂರಿನ ನಮ್ಮ ಮೆಟ್ರೊ ನಿಲ್ದಾಣದಲ್ಲಿ ತಾಯಿಯಿಂದ ತಪ್ಪಿ ಹೋದ 6 ವರ್ಷದ ಮಗುವನ್ನು ಸುರಕ್ಷಿತವಾಗಿ ಪತ್ತೆ ತಾಯಿಯ ಮಡಿಲಿಗೆ ಸೇರಿಸುವ ಘಟನೆಯೊಂದು ಶನಿವಾರ ನಡೆದಿದೆ. ನ.1ರಂದು ಮಧ್ಯಾಹ್ನ ಸುಮಾರು 12.30ಕ್ಕೆ ಮೆಜೆಸ್ಟಿಕ್ ನಿಲ್ದಾಣದಲ್ಲಿ 6 ವರ್ಷದ ಹೆಣ್ಣು ಮಗು, ತಾಯಿಯಿಂದ ಬೇರ್ಪಟ್ಟಿದ್ದಳು. ಪ್ರಯಾಣಿಕರೊಬ್ಬರು ಮಗುವನ್ನು ಗುರುತಿಸಿ ಭದ್ರತಾ ಸಿಬ್ಬಂದಿಗೆ ಹಸ್ತಾಂತರಿಸಿದ್ದರು. ಸಿಬ್ಬಂದಿ ಮೆಜೆಸ್ಟಿಕ್ ನಿಲ್ದಾಣದಲ್ಲಿಯೇ ಮಗುವನ್ನು ಕೂರಿಸಿ, ಎಲ್ಲಾ ನಿಲ್ದಾಣಗಳ ನಿಯಂತ್ರಕರಿಗೆ ಮಾಹಿತಿ ನೀಡಿದ್ದರು. ಕೂಡಲೇ ಕಾರ್ಯಪ್ರವೃತ್ತರಾದ ನಿಲ್ದಾಣದ ನಿಯಂತ್ರಕರು

ಬೆಂಗಳೂರಿನ ಕೆಂಪೇಗೌಡ ಮೆಟ್ರೊ ನಿಲ್ದಾಣದಲ್ಲಿ ತಾಯಿಯಿಂದ ತಪ್ಪಿ ಹೋದ 6 ವರ್ಷದ ಮಗು;ಕೊನೆಗೂ ಮಗು ತಾಯಿಯ ಮಡಿಲಿಗೆ…! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಮಳೆರಾಯನ ಆರ್ಭಟ ಕಡಿಮೆ; ಇಂದಿನ ಹವಾಮಾನ ಇಲಾಖೆ ವರದಿ

(ನ್ಯೂಸ್‌ ಕಡಬ) newskadaba.com,  ನ.03 ಬೆಂಗಳೂರು:ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಕೆಲವೆಡೆ ಒಣ ಹವೆಯಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಕರಾವಳಿಯ ಜಿಲ್ಲೆಗಳಲ್ಲಿ, ಉತ್ತರ ಒಳನಾಡು ಮತ್ತು ದಕ್ಷೀಣ ಒಳನಾಡು ಪ್ರದೇಶಗಳ ಕೆಲ ಪ್ರದೇಶಗಳಲ್ಲಿ ಸ್ವಲ್ಪ ಪ್ರಮಾಣದಲ್ಲಿ ಮಳೆಯಿರಲಿದೆ. ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಮಳೆರಾಯನ ಆರ್ಭಟ ಕಡಿಮೆ; ಇಂದಿನ ಹವಾಮಾನ ಇಲಾಖೆ ವರದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು| ಕಾರು-ಆಟೋ ನಡುವೆ ಭೀಕರ ಅಪಘಾತ: ನಾಲ್ಕೂವರೆ ವರ್ಷದ ಮಗು ಸಹಿತ ಇಬ್ಬರು ಸಾವು

(ನ್ಯೂಸ್‌ ಕಡಬ) newskadaba.com,  ನ.03 ಪುತ್ತೂರು : ಮಾಣಿ–ಮೈಸೂರು ರಾಷ್ಟ್ರೀಯ ಹೆದ್ದಾರಿಯ ಒಳಮೊಗರು ಗ್ರಾಮದ ಪರ್ಪುಂಜ ಅಬ್ರಾಡ್ ಹಾಲ್ ಬಳಿಯಲ್ಲಿ ಶನಿವಾರ(ನ.01)  ಸಂಜೆ ಕಾರು ಹಾಗೂ ಆಟೋ ರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ ನಾಲ್ಕು ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟಿದ್ದು, ರಾತ್ರಿ ಮಗುವಿನ ಅಜ್ಜಿ ಕೂಡ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಬನ್ನೂರು ನಿವಾಸಿ ಹನೀಫ್ ಅವರ ಮಗಳು ಶಾಝ್ವಾ ಫಾತಿಮಾ (4 ವರ್ಷ 6 ತಿಂಗಳು) ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದ ಪುತ್ತೂರು

ಪುತ್ತೂರು| ಕಾರು-ಆಟೋ ನಡುವೆ ಭೀಕರ ಅಪಘಾತ: ನಾಲ್ಕೂವರೆ ವರ್ಷದ ಮಗು ಸಹಿತ ಇಬ್ಬರು ಸಾವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

11 ಜಿಲ್ಲೆಗಳ 316 ಕೇಂದ್ರಗಳಲ್ಲಿ ಸಸೂತ್ರವಾಗಿ ನಡೆದ ಕೆ-ಸೆಟ್‌ ಪರೀಕ್ಷೆ

(ನ್ಯೂಸ್‌ ಕಡಬ) newskadaba.com,  ನ.03 ಬೆಂಗಳೂರು:- ಪದವಿ ಕಾಲೇಜುಗಳ ಉಪನ್ಯಾಸಕರ ಅರ್ಹತಾ ಪರೀಕ್ಷೆಯಾದ ಕೆ-ಸೆಟ್‌ ಪರೀಕ್ಷೆಯು ಕ್ಯಾಮೆರಾ ಕಣ್ಗಾವಲಿನಲ್ಲಿ ಇಂದು ನಡೆಯಿತು. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಟ್ಟುನಿಟ್ಟಿನ ಬಿಗಿ ಕ್ರಮಗಳನ್ನು ಕೈಗೊಂಡು, ಈ ಬಾರಿಯೂ ಮುಖಚಹರೆ ಪತ್ತೆ ತಂತ್ರಜ್ಞಾನದ ಮೂಲಕ ಅಭ್ಯರ್ಥಿಗಳನ್ನು ತಪಾಸಣೆ ಮಾಡಿಯೇ ಪರೀಕ್ಷಾ ಕೇಂದ್ರಕ್ಕೆ ಬಿಡಲಾಗಿತ್ತು. ಒಟ್ಟು 33 ವಿಷಯಗಳಿಗೆ ನಡೆದ ಕೆ-ಸೆಟ್‌ ಪರೀಕ್ಷೆಯನ್ನು 1.36 ಲಕ್ಷ ಮಂದಿ ತೆಗೆದುಕೊಂಡಿದ್ದರು. ಬೆಂಗಳೂರು ಸೇರಿದಂತೆ 11 ಜಿಲ್ಲೆಗಳ 316 ಕೇಂದ್ರಗಳಲ್ಲಿ ಪರೀಕ್ಷೆಯನ್ನು ಪ್ರಾಧಿಕಾರ ನಡೆಸಿದೆ. ಬೆಂಗಳೂರಿನಲ್ಲಿ ಎಲ್ಲ

11 ಜಿಲ್ಲೆಗಳ 316 ಕೇಂದ್ರಗಳಲ್ಲಿ ಸಸೂತ್ರವಾಗಿ ನಡೆದ ಕೆ-ಸೆಟ್‌ ಪರೀಕ್ಷೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top