ಕೆಎಸ್ಸಾರ್ಟಿಸಿ ಬಸ್ಸನ್ನು ಅಟ್ಟಾಡಿಸಿಕೊಂಡು ಬಂದು ಢಿಕ್ಕಿ ಹೊಡೆದ ಕಾಡಾನೆ ► ಬಿಳಿನೆಲೆಯಲ್ಲಿ ಕಾರಿನ ಮೇಲೆ ಕಾಡಾನೆ ದಾಳಿಯಂತಹುದೇ ಇನ್ನೊಂದು ಘಟನೆ
(ನ್ಯೂಸ್ ಕಡಬ) newskadaba.com ಮೈಸೂರು, ಜೂ.24. ಮರಿಯಾನೆಯನ್ನು ರಕ್ಷಿಸುವ ಸಲುವಾಗಿ ತಾಯಿ ಆನೆಯೊಂದು ಬಸ್ಸೊಂದನ್ನು ಅಟ್ಟಾಡಿಸಿಕೊಂಡು ಹೋದ ಘಟನೆ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಬಳಿ ಭಾನುವಾರದಂದು ನಡೆದಿದೆ. ಚಿಕ್ಕಮಗಳೂರಿನಿಂದ ಗುಂಡ್ಲುಪೇಟೆ ಮಾರ್ಗವಾಗಿ ಕಲ್ಲಿಕೋಟೆಗೆ ಪ್ರಯಾಣಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಚಾಮರಾಜನಗರ ಜಿಲ್ಲೆಯ ಬಂಡೀಪುರ ಅರಣ್ಯ ಪ್ರದೇಶಕ್ಕೆ ತಲುಪಿದಾಗ ಮರಿಯಾನೆಯೊಂದಿಗೆ ತಾಯಿ ಆನೆಯು ರಸ್ತೆಯಲ್ಲಿ ಹಾದು ಹೋಗುತ್ತಿತ್ತೆನ್ನಲಾಗಿದ್ದು, ಈ ವೇಳೆ ಮರಿಯಾನೆಯ ರಕ್ಷಣೆಗೋಸ್ಕರ ಬಸ್ಸನ್ನೇ ಅಟ್ಟಾಡಿಸಿಕೊಂಡು ಬಂದು ಢಿಕ್ಕಿ ಹೊಡೆದಿದೆ. ಇದರಿಂದ ಆತಂಕಗೊಂಡ ಪ್ರಯಾಣಿಕರು ಬೊಬ್ಬೆ ಹೊಡೆದಾಗ ಆನೆಯು ಹಿಂತಿರುಗಿ […]








