ಜೂನ್ 10 ರ ವರೆಗೆ ರಾಜ್ಯದೆಲ್ಲೆಡೆ ಭಾರೀ ಮಳೆಯಾಗುವ ಸಾಧ್ಯತೆ ► ಕರಾವಳಿಯಲ್ಲಿ ಹೈ-ಅಲರ್ಟ್ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.08. ಮಹಾರಾಷ್ಟ್ರದಿಂದ ಕೇರಳದವರೆಗೆ ದಟ್ಟಮೋಡ ಕವಿದ ವಾತಾವರಣ ನಿರ್ಮಾಣವಾಗಿದೆಯಲ್ಲದೆ, ಮುಂಬಯಿಯಾದ್ಯಂತ ಭಾರೀ ಮಳೆಯಾಗಿದ್ದು, ಕರಾವಳಿಯಲ್ಲೂ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ‌. ಗುರುವಾರದಿಂದ ಕರಾವಳಿಯಲ್ಲಿ ವಿವಿಧೆಡೆ ಭಾರೀ ಮಳೆಯಾಗುತ್ತಿದ್ದು, ರಾಜ್ಯದೆಲ್ಲೆಡೆ ಜೂನ್ 10 ರವರೆಗೆ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹೈ-ಅಲರ್ಟ್ ಘೋಷಿಸಲಾಗಿದೆ. ಸಮುದ್ರದ ಮಟ್ಟದಲ್ಲಿ ಏರಿಕೆಯಾಗುವ ಲಕ್ಷಣಗಳಿದ್ದು, ಕಡಲ ತೀರದ […]

ಜೂನ್ 10 ರ ವರೆಗೆ ರಾಜ್ಯದೆಲ್ಲೆಡೆ ಭಾರೀ ಮಳೆಯಾಗುವ ಸಾಧ್ಯತೆ ► ಕರಾವಳಿಯಲ್ಲಿ ಹೈ-ಅಲರ್ಟ್ ಘೋಷಣೆ Read More »

ಕರ್ನಾಟಕ

ಬಲ್ಯ: ಕೆಲಸಕ್ಕೆಂದು ತೆರಳಿದ ಯುವತಿ ನಾಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಜೂ.07. ಕೆಲಸಕ್ಕೆಂದು ತೆರಳಿದ್ದ ಯುವತಿಯೋರ್ವಳು ನಾಪತ್ತೆಯಾಗಿರುವ ಘಟನೆ ಠಾಣಾ ವ್ಯಾಪ್ತಿಯ ಬಲ್ಯದಲ್ಲಿ ನಡೆದಿದೆ. ನಾಪತ್ತೆಯಾಗಿರುವ ಯುವತಿಯನ್ನು ಬಲ್ಯ ಗ್ರಾಮದ ದೇರಾಜೆ ಪನ್ಯಾಡಿ ನಿವಾಸಿ ದಿ.ಗುರುವ ಎಂಬವರ ಪುತ್ರಿ ಕು|ಸುಂದರಿ(30)‌ ಎಂದು ಗುರುತಿಸಲಾಗಿದೆ. ಕೂಲಿ ಕೆಲಸ ಮಾಡುತ್ತಿದ್ದ ಈಕೆ ಕಳೆದ ಸುಮಾರು ಒಂದು ತಿಂಗಳ ಹಿಂದೆ ಕೆಲಸಕ್ಕೆಂದು ತೆರಳಿದ್ದು, ಆ ಬಳಿಕ ಮನೆಗೆ ಬಾರದೆ ನಾಪತ್ತೆಯಾಗಿರುವುದಾಗಿ ಈಕೆಯ ತಾಯಿ ಚೋಮು ದೂರು ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಲ್ಯ: ಕೆಲಸಕ್ಕೆಂದು ತೆರಳಿದ ಯುವತಿ ನಾಪತ್ತೆ Read More »

ಕರಾವಳಿ

ಬಿಳಿನೆಲೆ: ಕಾರು ಮರಕ್ಕೆ ಢಿಕ್ಕಿ ► ಚಾಲಕನಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಜೂ.07. ಚಾಲಕನ ನಿಯಂತ್ರಣ ತಪ್ಪಿದ ಮಾರುತಿ ಓಮ್ನಿ ಕಾರೊಂದು ರಸ್ತೆ ಬದಿಯಲ್ಲಿನ ಮರಕ್ಕೆ ಢಿಕ್ಕಿಯಾದ ಪರಿಣಾಮ ಚಾಲಕ ಗಾಯಗೊಂಡ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಿಳಿನೆಲೆಯಲ್ಲಿ ಗುರುವಾರದಂದು ನಡೆದಿದೆ. ಶಿವಮೊಗ್ಗದ ತೀರ್ಥಹಳ್ಳಿಯಿಂದ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ದೇವರ ದರ್ಶನ ಪಡೆದು ಬಳಿಕ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದಾಗ ಬಿಳಿನೆಲೆ ಸಿಪಿಸಿಆರ್ಐ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾರು ಚಾಲಕ‌ ತೀರ್ಥಹಳ್ಳಿ ನಿವಾಸಿ

ಬಿಳಿನೆಲೆ: ಕಾರು ಮರಕ್ಕೆ ಢಿಕ್ಕಿ ► ಚಾಲಕನಿಗೆ ಗಾಯ Read More »

ಕರಾವಳಿ

ಮಾರ್ ಇವಾನಿಯೋಸ್ ಕಾಲೇಜು: ಚಿತ್ರಕಲಾ ತರಬೇತಿ

(ನ್ಯೂಸ್ ಕಡಬ) newskadaba.com ಕಡಬ ಜೂ.06. ಕುಂತೂರು ಗ್ರಾಮದ ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದಲ್ಲಿ ಪ್ರಶಿಕ್ಷಣಾರ್ಥಿಗಳಿಗಾಗಿ ಒಂದು ದಿನದ ಚಿತ್ರಕಲಾ ತಯಾರಿ ಕಾರ್ಯಕ್ರಮವನ್ನು ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಚಿತ್ರಕಲಾ ಶಿಕ್ಷಕ ಶ್ರೀಪತಿ ರಾವ್ ವಿವಿಧ ಆಕೃತಿ, ರೇಖಾಚಿತ್ರ, ವರ್ಣಚಿತ್ರ, ಪೆನ್ಸಿಲ್ ಷೇಡಿಂಗ್ ಇತ್ಯಾದಿಗಳ ಮೂಲಕ ಸರಳವಾಗಿ ಆಕರ್ಷಕ ರೀತಿಯ ಚಿತ್ರ ರಚನೆಯ ಕುರಿತು ತರಬೇತಿ ಕಾಯರ್ಾಗಾರವನ್ನು ನಡೆಸಿಕೊಟ್ಟರು. ಉಪನ್ಯಾಸಕ ಶ್ರೀ ರಘುನಂದನ್ ಸಹಕರಿಸಿದರು.

ಮಾರ್ ಇವಾನಿಯೋಸ್ ಕಾಲೇಜು: ಚಿತ್ರಕಲಾ ತರಬೇತಿ Read More »

ಕರಾವಳಿ

ಬುಡೋಳಿ: ಆ್ಯಕ್ಟಿವಾ – ಲಾರಿ ಢಿಕ್ಕಿ ► ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ವಿಟ್ಲ, ಜೂ.07. ಮರಳು ಸಾಗಾಟದ ಲಾರಿ ಹಾಗೂ ಹೋಂಡಾ ಆ್ಯಕ್ಟಿವಾ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಸವಾರ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ಗುರುವಾರದಂದು ನಡೆದಿದೆ. ಉಪ್ಪಿನಂಗಡಿ ಕಡೆಗೆ ಮರಳು ಸಾಗಾಟ ಮಾಡುತ್ತಿದ್ದ ಲಾರಿ ಮತ್ತು ಮಂಗಳೂರು ಕಡೆಗೆ ತೆರಳುತ್ತಿದ್ದ ಆ್ಯಕ್ಟಿವಾ ನಡುವೆ ಮುಖಾಮುಖಿ ಢಿಕ್ಕಿಯಾಗಿದೆ. ಘಟನೆಯಲ್ಲಿ ಆ್ಯಕ್ಟಿವಾ ಸವಾರ ಬೆಳ್ತಂಗಡಿ ನಿವಾಸಿ ಗಂಭೀರ ಗಾಯಗೊಂಡಿದ್ದು, ಗಾಯಾಳುವನ್ನು ಮಾಣಿಯ 108 ಆಂಬ್ಯುಲೆನ್ಸ್ ಮೂಲಕ ಮಂಗಳೂರಿನ ಆಸ್ಪತ್ರೆಗೆ

ಬುಡೋಳಿ: ಆ್ಯಕ್ಟಿವಾ – ಲಾರಿ ಢಿಕ್ಕಿ ► ಸವಾರ ಗಂಭೀರ Read More »

ಕರಾವಳಿ

ಜಾಲ್ಸೂರು ಪಯನೀರ್ ಪಬ್ಲಿಕ್ ಸ್ಕೂಲ್‌ನಲ್ಲಿ ‘ವಿಶ್ವ ಪರಿಸರ ದಿನಾಚರಣೆ’

(ನ್ಯೂಸ್ ಕಡಬ)‌ newskadaba.com ಸುಳ್ಯ, ಜೂ.06. ಜಾಲ್ಸೂರಿನ ಪಯನೀರ್ ಪಬ್ಲಿಕ್ ಸ್ಕೂಲ್‌ನಲ್ಲಿ ಗಿಡವನ್ನು ನೆಡುವುದರ ಮೂಲಕ ‘ವಿಶ್ವ ಪರಿಸರ ದಿನ’ವನ್ನು ಮಂಗಳವಾರದಂದು ಆಚರಿಸಲಾಯಿತು. ಸಂಸ್ಥೆಯ ಸ್ಥಾಪಕಾಧ್ಯಕ್ಷರಾದ ಅಬ್ದುಲ್ ರಝಾಕ್ ರವರು ಗಿಡ ನೆಟ್ಟು ಪರಿಸರ ಸಂರಕ್ಷಣೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ವಿಜಯಲಕ್ಷ್ಮಿ, ಸಹ ಶಿಕ್ಷಕಿಯರಾದ ದೀಕ್ಷಿತ, ಜ್ಯೋತಿ ಲಕ್ಷ್ಮಿ, ಜ್ಯೋತಿ, ಜಯಂತಿ ಸೇರಿದಂತೆ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಜಾಲ್ಸೂರು ಪಯನೀರ್ ಪಬ್ಲಿಕ್ ಸ್ಕೂಲ್‌ನಲ್ಲಿ ‘ವಿಶ್ವ ಪರಿಸರ ದಿನಾಚರಣೆ’ Read More »

ಕರಾವಳಿ

ನಾಳೆ (ಜೂ.07) ಪುತ್ತೂರಿನಲ್ಲಿ ತುಳು ಭಾಷಾ ವಿದ್ಯಾರ್ಥಿಗಳಿಗೆ ಅಭಿನಂದನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.06. ಪ್ರಸಕ್ತ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್.ಸಿ  ಪರೀಕ್ಷೆಯಲ್ಲಿ ತುಳು ಭಾಷೆಯ ಪಠ್ಯದಲ್ಲಿ ಶೇಕಡಾ 100 ಫಲಿತಾಂಶ ದಾಖಲಿಸಿದ ವಿದ್ಯಾರ್ಥಿಗಳು ಹಾಗೂ ಶಾಲೆಗಳ ಮುಖ್ಯಸ್ಥರನ್ನು ಅಭಿನಂದಿಸುವ ಕಾರ್ಯಕ್ರಮವು ಜೂನ್ 7 ರಂದು ಬೆಳಿಗ್ಗೆ 10 ಗಂಟೆಗೆ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ನಡೆಯಲಿದೆ. ದಕ್ಷಿಣ ಕನ್ನಡ ಜಿಲ್ಲೆಯ 22 ಶಾಲೆಗಳಲ್ಲಿ 417 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಎಲ್ಲರೂ ಉತ್ತೀರ್ಣರಾಗಿದ್ದಾರೆ. ಹೆಚ್ಚಿನ ಶಾಲೆಗಳು ಹಾಗೂ ವಿದ್ಯಾರ್ಥಿಗಳು ಪುತ್ತೂರು ತಾಲೂಕಿನವರಾಗಿರುವುದರಿಂದ ಪುತ್ತೂರಿನಲ್ಲಿ ಕರ್ನಾಟಕ ತುಳು

ನಾಳೆ (ಜೂ.07) ಪುತ್ತೂರಿನಲ್ಲಿ ತುಳು ಭಾಷಾ ವಿದ್ಯಾರ್ಥಿಗಳಿಗೆ ಅಭಿನಂದನೆ Read More »

ಕರಾವಳಿ

ಕರಾವಳಿಯ ಏಕೈಕ ಕಾಂಗ್ರೆಸ್ ಶಾಸಕ ಯು.ಟಿ.ಖಾದರ್ ಗೆ ಸಚಿವ ಸ್ಥಾನ ► ಇಂದು ಪ್ರಮಾಣ ವಚನ ಸ್ವೀಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.06. ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಯ ಏಕೈಕ ಕಾಂಗ್ರೆಸ್ ಶಾಸಕ ಯು.ಟಿ.ಖಾದರ್ ಗೆ ಸಮ್ಮಿಶ್ರ ಸರಕಾರದ ಕ್ಯಾಬಿನೆಟ್ ದರ್ಜೆಯ ಸಚಿವರಾಗಿ ಮುಂದುವರಿಯಲು ಕಾಂಗ್ರೆಸ್ ಹೈಕಮಾಂಡ್ ಹಸಿರು ನಿಶಾನೆ ತೋರಿದೆ. ಬುಧವಾರ ಮಧ್ಯಾಹ್ನ ನೂತನ ಸಚಿವ ಸಂಪುಟದ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಹಲವು ಗೊಂದಲಗಳ ನಡುವೆಯೂ ನೂತನ ಸಚಿವರ ಪಟ್ಟಿಯಲ್ಲಿ ಖಾದರ್ ಹೆಸರು ಸೇರ್ಪಡೆಯಾಗಿದೆ. ಹಿಂದಿನ ಸರ್ಕಾರದಲ್ಲಿ ಆರೋಗ್ಯ ಹಾಗು ಆಹಾರ ಸಚಿವರಾಗಿ ಸೇವೆ ಸಲ್ಲಿಸಿ ಗಮನ

ಕರಾವಳಿಯ ಏಕೈಕ ಕಾಂಗ್ರೆಸ್ ಶಾಸಕ ಯು.ಟಿ.ಖಾದರ್ ಗೆ ಸಚಿವ ಸ್ಥಾನ ► ಇಂದು ಪ್ರಮಾಣ ವಚನ ಸ್ವೀಕಾರ Read More »

ಕರ್ನಾಟಕ

ವಿದ್ಯಾರ್ಥಿಗಳ ಉಚಿತ ಪಾಸ್ ಯೋಜನೆಗೆ ಸರಕಾರದಿಂದ ಕತ್ತರಿ ► ಕಾಸು ಕೊಟ್ರೆ ಮಾತ್ರ ಬಸ್ ಪಾಸ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.06. ಈ ಹಿಂದಿನ ಸರಕಾರವು ಘೋಷಿಸಿದ್ದ ಮಹತ್ವಾಕಾಂಕ್ಷಿ ಯೋಜನೆಯಾದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಪಾಸ್ ಯೋಜನೆಗೆ ನೂತನ ಸಮ್ಮಿಶ್ರ ಸರಕಾರ ಕತ್ತರಿ ಹಾಕಿದ್ದು, ಕಾಸು ಕೊಟ್ಟರೆ ಮಾತ್ರ ಪಾಸು ಎಂದ ನಿರ್ಧರಿಸಲಾಗಿದೆ. ರಾಜ್ಯದ 19.60 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದರಿಂದ ಸುಮಾರು ಎರಡು ಸಾವಿರ ಕೋಟಿಗಳಷ್ಟು ಆರ್ಥಿಕ ಹೊರೆ ಬೀಳುತ್ತದೆ ಎಂಬ ಕಾರಣದಿಂದ ಸಾರಿಗೆ ಇಲಾಖೆಯ ಪ್ರಸ್ತಾವನೆಯನ್ನು ಹಣಕಾಸು ಇಲಾಖೆಯು ತಾತ್ಕಾಲಿಕವಾಗಿ ತಡೆ ಹಿಡಿದಿದೆ ಎನ್ನಲಾಗಿದೆ. ಈಗಾಗಲೇ 1

ವಿದ್ಯಾರ್ಥಿಗಳ ಉಚಿತ ಪಾಸ್ ಯೋಜನೆಗೆ ಸರಕಾರದಿಂದ ಕತ್ತರಿ ► ಕಾಸು ಕೊಟ್ರೆ ಮಾತ್ರ ಬಸ್ ಪಾಸ್ Read More »

ಕರಾವಳಿ

ಅಕ್ರಮ ಮರಳು ಅಡ್ಡೆಗೆ ದಾಳಿ ► ಭಾರೀ ಪ್ರಮಾಣದ 850 ಲೋಡ್ ಮರಳು ವಶ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.05. ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಕಡೆಗಳಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಮರಳನ್ನು ಪತ್ತೆ ಹಚ್ಚಿರುವ ಪೊಲೀಸರು ಸುಮಾರು 850 ಲೋಡು ಅಕ್ರಮ ಮರಳನ್ನು ವಶಪಡಿಸಿಕೊಂಡಿದ್ದಾರೆ. ಠಾಣಾ ವ್ಯಾಪ್ತಿಯ ಬಡಗುಳಿಪಾಡಿ, ಮೂಡುಪೆರಾರ್ ಗ್ರಾಮದ ಚರ್ಚ್ ಬಳಿ ಹಾಗೂ ಮೊಗರು ಗ್ರಾಮದ ನಾರ್ಲಪದವು ಎಂಬಲ್ಲಿ ಅಕ್ರಮವಾಗಿ ಮರಳನ್ನು ಸಂಗ್ರಹಿಸಿ ಗೌಪ್ಯವಾಗಿ ಬಚ್ಚಿಡಲಾಗಿದ್ದುದನ್ನು ಪತ್ತೆಹಚ್ಚಿದ ಪೊಲೀಸರು ಸುಮಾರು 35 ಲಕ್ಷ ಮೌಲ್ಯದ ಅಕ್ರಮ ಮರಳನ್ನು ವಶಪಡಿಸಿಕೊಂಡರು. ಕಾರ್ಯಾಚರಣೆಯಲ್ಲಿ ಮಂಗಳೂರು ನಗರದ ಪೊಲೀಸ್ ಆಯುಕ್ತರಾದ

ಅಕ್ರಮ ಮರಳು ಅಡ್ಡೆಗೆ ದಾಳಿ ► ಭಾರೀ ಪ್ರಮಾಣದ 850 ಲೋಡ್ ಮರಳು ವಶ Read More »

ಕರಾವಳಿ
Scroll to Top