ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗೆ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಉದ್ಯೋಗ ಮಾಹಿತಿ, ಜೂ.05. ಪೊಲೀಸ್ ಸಬ್ – ಇನ್ಸ್‌ಪೆಕ್ಟರ್ (ಸಿವಿಲ್) (ಪುರುಷ & ಮಹಿಳೆ) ಹಾಗೂ ಸೇವೆಯಲ್ಲಿರುವವರು ಒಳಗೊಂಡಂತೆ ಖಾಲಿ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಸಲ್ಲಿಸಲು 2018 ನೇ ಎಪ್ರಿಲ್ 19 ಕ್ಕೆ ವಿಸ್ತರಿಸಿ ನಿಗದಿಪಡಿಸಲಾಗಿತ್ತು. ವಿಧಾನಸಭೆ ಮಾದರಿ ಚುನಾವಣೆ ನೀತಿ ಸಂಹಿತೆ ಜಾರಿಗೆ ಬಂದ ಕಾರಣ ನಿಗದಿಪಡಿಸಿದ ಕೊನೆಯ ದಿನಾಂಕವನ್ನು ವಿಸ್ತರಿಸಿ ಜೂನ್ 11 ಕ್ಕೆ ಪರಿಗಣಿಸಲಾಗುವುದು.   ಅರ್ಜಿ ಶುಲ್ಕವನ್ನು ಜೂನ್ 13 ರ ವರೆಗೆ ವಿಸ್ತರಿಸಲಾಗಿದೆ. ಬ್ಯಾಂಕ್ […]

ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗೆ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ Read More »

ಉದ್ಯೋಗ

ಕಾರ್ಕಳದಲ್ಲಿ ರಸ್ತೆ ಅಪಘಾತ ► ಕಡಬದ ಯುವಕ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಜೂ.05. ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್‌ ಸವಾರ ಕಡಬ ನಿವಾಸಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಕಾರ್ಕಳದಲ್ಲಿ ಮಂಗಳವಾರದಂದು ನಡೆದಿದೆ.   ಮೃತ ಯುವಕನನ್ನು ಕಡಬ ತಾಲೂಕಿನ ಬಂಟ್ರ ಗ್ರಾಮದ ನೀರಾಜೆ ನಿವಾಸಿ ಪ್ರಕಾಶ್ ಭಟ್ ಎಂಬವರ ಪುತ್ರ ಅಕ್ಷತ್ ಭಟ್(21) ಎಂದು ಗುರುತಿಸಲಾಗಿದೆ. ಅಕ್ಷತ್ ತನ್ನ ಬೈಕಿನಲ್ಲಿ ಕಾರ್ಕಳ ಕಡೆಗೆ ತೆರಳುತ್ತಿದ್ದಾಗ ಕಾರ್ಕಳದ ನೆಲ್ಲಿಕಾರು ಬಳಿ ಲಾರಿ ಢಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಮೂಡುಬಿದಿರೆ

ಕಾರ್ಕಳದಲ್ಲಿ ರಸ್ತೆ ಅಪಘಾತ ► ಕಡಬದ ಯುವಕ ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಇನ್ನೆರಡು ದಿನದಲ್ಲಿ ಭಾರೀ ಮಳೆಯ ಮುನ್ನೆಚ್ಚರಿಕೆ ನೀಡಿದ ಹವಾಮಾನ ಇಲಾಖೆ ► ಮತ್ತೊಮ್ಮೆ ಪ್ರವಾಹದ ಭೀತಿಯಲ್ಲಿ ಕರಾವಳಿ

ಸಾಂದರ್ಭಿಕ ಚಿತ್ರ (ನ್ಯೂಸ್ ಕಡಬ) newskadaba.com ನವದೆಹಲಿ, ಜೂ.05. ಭಾರೀ ಮಳೆಗೆ ಕರಾವಳಿಯು ತತ್ತರಿಸಿ ವಾರವಾಗುವುದರೊಳಗೆ ಇದೀಗ ಮುಂಗಾರಿನ ಪ್ರಭಾವದಿಂದ ಜೂನ್‌ 10 ರ ಬಳಿಕ ಕರಾವಳಿಯು ಮತ್ತೊಮ್ಮೆ ಪ್ರವಾಹದ ಭೀತಿಯನ್ನು ಎದುರಿಸುತ್ತಿದೆ. ಈ ಬಗ್ಗೆ ಮುನ್ನೆಚ್ಚರಿಕೆ ನೀಡಿರುವ ಭಾರತೀಯ ಹವಾಮಾನ ಇಲಾಖೆ (ಐಎಂಡಿ), ಜೂನ್‌ 7 ರ ಬಳಿಕ ಕೇರಳ, ಕರಾವಳಿ ಕರ್ನಾಟಕ ಸೇರಿದಂತೆ ಗೋವಾದಲ್ಲಿ ಭಾರೀ ಮಳೆಯಾಗಲಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗುವ ಮಾಹಿತಿ ನೀಡಿದೆ. ಮುಂಬಯಿಯಲ್ಲಿ ಜೂನ್‌ ಆರರಿಂದ ಮಳೆಯಾಗಲಿದ್ದು, 8/9/10ರಂದು ಅದು ಜಡಿ

ಇನ್ನೆರಡು ದಿನದಲ್ಲಿ ಭಾರೀ ಮಳೆಯ ಮುನ್ನೆಚ್ಚರಿಕೆ ನೀಡಿದ ಹವಾಮಾನ ಇಲಾಖೆ ► ಮತ್ತೊಮ್ಮೆ ಪ್ರವಾಹದ ಭೀತಿಯಲ್ಲಿ ಕರಾವಳಿ Read More »

ಕರಾವಳಿ

ಜೂನ್ 07 ರಿಂದ ಕೆಎಸ್ಸಾರ್ಟಿಸಿ ಉಚಿತ ಬಸ್ ಪಾಸ್ ವಿತರಣೆ

(ನ್ಯೂಸ್ ಕಡಬ) newskadaba.com ಕಡಬ, ಜೂ.05. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ 2018 -19 ನೆ ಸಾಲಿನ ಜೂ.7 ರಿಂದ ರಿಯಾಯಿತಿ ಬಸ್ ಪಾಸ್‌ಗಳನ್ನು ವಿತರಿಸಲಿದೆ. ವಿದ್ಯಾರ್ಥಿಗಳು ಉಚಿತ ಬಸ್‌ಪಾಸ್ ಪಡೆಯಲು ಅರ್ಜಿಯೊಂದಿಗೆ ಜಾತಿ ಪ್ರಮಾಣ ಪತ್ರದ ಪ್ರತಿಯನ್ನು ಲಗತ್ತಿಸಿ ಸಂಸ್ಕರಣಾ ಶುಲ್ಕ ಹಾಗೂ ಅಪಘಾತ ಪರಿಹಾರ ನಿಧಿಯ ಒಟ್ಟು 150 ರೂ. ಮೊತ್ತವನ್ನು ಪಾವತಿಸಬೇಕಿದೆ. ನಿಗಮದ ಎಲ್ಲ ಬಸ್ ನಿಲ್ದಾಣಗಳಲ್ಲಿ ಹಾಗೂ ನಿಗಮದ ವೆಬ್‌ಸೈಟ್‌ನಲ್ಲಿ (www.ksrtc.in)

ಜೂನ್ 07 ರಿಂದ ಕೆಎಸ್ಸಾರ್ಟಿಸಿ ಉಚಿತ ಬಸ್ ಪಾಸ್ ವಿತರಣೆ Read More »

ಕರಾವಳಿ

ಎಡಕುಮೇರಿ: ರೈಲು ಢಿಕ್ಕಿ ► ತಾಯಿ ಆನೆ ಹಾಗೂ ಮರಿಯಾನೆ ಸಾವು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜೂ.04. ಆನೆ ಹಾಗೂ ಮರಿ ಆನೆಯೊಂದು ರೈಲಿಗೆ ಸಿಲುಕಿ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಎಡಕುಮೇರಿ ಸಮೀಪ ಸೋಮವಾರದಂದು ನಡೆದಿದೆ. ಮಂಗಳೂರು – ಬೆಂಗಳೂರು ರೈಲು ಮಾರ್ಗದ ಹಾಸನದಿಂದ ಸುಮಾರು 72 ಕಿಲೋಮೀಟರ್ ದೂರದಲ್ಲಿ ಎಡಕುಮೇರಿ ಹಾಗೂ ಅರೆ ಘಟ್ಟ ಪ್ರದೇಶದ ನಡುವೆ ರೈಲ್ವೇ ಸೇತುವೆಯಲ್ಲಿ ಭಾನುವಾರ ರಾತ್ರಿ ರೈಲಿಗೆ ಆನೆಗಳು ಅಡ್ಡ ಬಂದಿದೆ ಎನ್ನಲಾಗಿದೆ. ಢಿಕ್ಕಿಯ ರಭಸಕ್ಕೆ ಮರಿಯಾನೆ ಸ್ಥಳದಲ್ಲೇ ಮೃತಪಟ್ಟಿದ್ದು, ತಾಯಿ ಆನೆ ಗಂಭೀರ ಗಾಯಗೊಂಡು ಸೋಮವಾರದಂದು ಅಸುನೀಗಿದೆ.

ಎಡಕುಮೇರಿ: ರೈಲು ಢಿಕ್ಕಿ ► ತಾಯಿ ಆನೆ ಹಾಗೂ ಮರಿಯಾನೆ ಸಾವು Read More »

ಕರಾವಳಿ

ಸುಳ್ಯ: ಟ್ಯಾಂಕರ್ ಢಿಕ್ಕಿಯಾಗುವುದನ್ನು ತಪ್ಪಿಸಿದ ಕೆಎಸ್ಸಾರ್ಟಿಸಿ ಚಾಲಕ ► ಬಸ್ ಚಾಲಕನ ಸಮಯಪ್ರಜ್ಞೆಗೆ ವ್ಯಾಪಕ ಪ್ರಶಂಸೆ

(ನ್ಯೂಸ್ ಕಡಬ) newskadaba.com ಸುಳ್ಯ, ಜೂ.04. ಟ್ಯಾಂಕರೊಂದು ವಿರುದ್ಧ ದಿಕ್ಕಿನಲ್ಲಿ ಬಂದು ಢಿಕ್ಕಿಯಾಗುತ್ತದೆ ಎನ್ನುವುದನ್ನು ಅರಿತ ಕೆಎಸ್ಸಾರ್ಟಿಸಿ ಚಾಲಕನೋರ್ವ ತನ್ನ ಸಮಯ ಪ್ರಜ್ಞೆಯಿಂದಾಗಿ ಸಂಭಾವ್ಯ ಅಪಾಯವನ್ನು ತಪ್ಪಿಸಿದ ಘಟನೆ ಸೋಮವಾರದಂದು ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ಕೊಯನಾಡು ಸಮೀಪ ನಡೆದಿದೆ. ಕುಕ್ಕೇ ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಗೆ ಕೊಯನಾಡು ಸಮೀಪ ರಾಂಗ್ ಬಂದು ಢಿಕ್ಕಿಯಾಗುವುದರಲ್ಲಿತ್ತು. ಅಪಾಯವನ್ನು ಅರಿತ ಬಸ್ ಚಾಲಕ ಬಸ್ಸನ್ನು ರಸ್ತೆಯ ಎಡಬದಿಗೆ ಚಲಾಯಿಸಿ ಸಂಭಾವ್ಯ ಅಪಾಯವನ್ನು ತಪ್ಪಿಸಿದರಾದರೂ ಬಸ್ ರಸ್ತೆ

ಸುಳ್ಯ: ಟ್ಯಾಂಕರ್ ಢಿಕ್ಕಿಯಾಗುವುದನ್ನು ತಪ್ಪಿಸಿದ ಕೆಎಸ್ಸಾರ್ಟಿಸಿ ಚಾಲಕ ► ಬಸ್ ಚಾಲಕನ ಸಮಯಪ್ರಜ್ಞೆಗೆ ವ್ಯಾಪಕ ಪ್ರಶಂಸೆ Read More »

ಕರಾವಳಿ

ಐಶಾರಾಮಿ ಆಡಳಿತಕ್ಕೆ ಮೇಜರ್ ಸರ್ಜರಿ ► ಅನಗತ್ಯ ದುಂದುವೆಚ್ಚಕ್ಕೆ ಕತ್ತರಿ: ಕುಮಾರಸ್ವಾಮಿ ನಿರ್ಧಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.04. ಸರಕಾರದ ಬೊಕ್ಕಸಕ್ಕೆ ಆಗುತ್ತಿರುವ ನಷ್ಟವನ್ನು ಸರಿದೂಗಿಸಲು ಕ್ರಮ ಕೈಗೊಂಡಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಅನಗತ್ಯ ದುಂದು ವೆಚ್ಚಗಳನ್ನು ಕಡಿತಗೊಳಿಸಲು ನಿರ್ಧರಿಸಿದ್ದಾರೆ. ಆರ್ಥಿಕ ಭದ್ರತೆ ಕಾಯ್ದುಕೊಳ್ಳುವ ಹಿತದೃಷ್ಟಿಯಿಂದ ಸರಕಾರದ ವತಿಯಿಂದ ತನಗೆ ಸಹಿತ ಯಾರಿಗೂ ವಿಶೇಷ ವಿಮಾನದ ಸೌಕರ್ಯವನ್ನು ಕಡಿತಗೊಳಿಸಲಾಗುವುದು. ತುರ್ತು ಸಂದರ್ಭ ಮಾತ್ರ ವಿಶೇಷ ವಿಮಾನ ಬಳಕೆಗೆ ಕ್ರಮಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಸಿಎಂ ಬೆಂಗಾವಲು ಪಡೆಯನ್ನು ಕಡಿತಗೊಳಿಸಲು ಕುಮಾರಸ್ವಾಮಿ ನಿರ್ಧರಿಸಿದ್ದು, ಸಿಎಂ ಕಚೇರಿಯಲ್ಲೂ ಅನಗತ್ಯ ಸಿಬ್ಬಂದಿಗೆ ಗೇಟ್ ಪಾಸ್ ನೀಡಲು ತೀರ್ಮಾನ ಮಾಡಿದ್ದಾರೆ.

ಐಶಾರಾಮಿ ಆಡಳಿತಕ್ಕೆ ಮೇಜರ್ ಸರ್ಜರಿ ► ಅನಗತ್ಯ ದುಂದುವೆಚ್ಚಕ್ಕೆ ಕತ್ತರಿ: ಕುಮಾರಸ್ವಾಮಿ ನಿರ್ಧಾರ Read More »

ಕರ್ನಾಟಕ

ಅಲ್-ಫತಹ್ ಟ್ರಸ್ಟ್ ವತಿಯಿಂದ ನೆಕ್ಕಿತ್ತಡ್ಕ ದರ್ಗಾ ವಠಾರದಲ್ಲಿ ಇಫ್ತಾರ್ ಕೂಟ

(ನ್ಯೂಸ್ ಕಡಬ) newskadaba.com ಕಡಬ, ಜೂ.03. ಅಲ್ ಫತಹ್ ಟ್ರಸ್ಟ್ (ರಿ) ನೆಕ್ಕಿತ್ತಡ್ಕ ಇದರ ವತಿಯಿಂದ ಇಫ್ತಾರ್ ಕೂಟವು ನೆಕ್ಕಿತ್ತಡ್ಕ ದರ್ಗಾ ವಠಾರದಲ್ಲಿ ಭಾನುವಾರದಂದು ನಡೆಯಿತು. ಈ ಸಂದರ್ಭದಲ್ಲಿ ಮರ್ಧಾಳ ತಕ್ವೀಯತ್ತುಲ್ ಇಸ್ಲಾಂ ಜುಮಾ‌ ಮಸೀದಿಯ ಖತೀಬರಾದ ಹನೀಫ್ ಸಖಾಫಿ ಎಮ್ಮೆಮಾಡು ನೇತೃತ್ವದಲ್ಲಿ ಬದರ್ ಮೌಲಿದ್ ನಡೆಯಿತು. ಇಫ್ತಾರ್ ಕೂಟದಲ್ಲಿ ಹಲವರು ಉಪಸ್ಥಿತರಿದ್ದರು.

ಅಲ್-ಫತಹ್ ಟ್ರಸ್ಟ್ ವತಿಯಿಂದ ನೆಕ್ಕಿತ್ತಡ್ಕ ದರ್ಗಾ ವಠಾರದಲ್ಲಿ ಇಫ್ತಾರ್ ಕೂಟ Read More »

ಕರಾವಳಿ

ಕಾಂಪೋಸ್ಟ್ ಪೈಪ್ ಖರೀದಿಯಲ್ಲಿ ಅವ್ಯವಹಾರ ನಡೆಸಿರುವ ಹಿನ್ನೆಲೆ ► ಬಿಳಿನೆಲೆ ಗ್ರಾ.ಪಂ. ಅಧ್ಯಕ್ಷರನ್ನು ತಕ್ಷಣವೇ ಬಂಧಿಸಿ: ಬಿಳಿನೆಲೆ ಬಿಜೆಪಿ ಆಗ್ರಹ

(ನ್ಯೂಸ್ ಕಡಬ) newskadaba.com ಕಡಬ, ಜೂ.03. ಸ್ವಚ್ಚತಾ ಆಂದೋಲನದ ಕಾಂಪೋಸ್ಟ್ ಪೈಪು ಖರೀದಿಯಲ್ಲಿ ಅವ್ಯವಹಾರದ ಆರೋಪದಲ್ಲಿ ಬಿಳಿನೆಲೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಾರದಾ ಅವರ ಮೇಲೆ ಭ್ರಷ್ಟಾಚಾರ ನಿಗ್ರಹ ದಳದಲ್ಲಿ ಪ್ರಕರಣ ದಾಖಲಾಗಿದ್ದು, ಅಧ್ಯಕ್ಷರನ್ನು ತಕ್ಷಣವೇ ಬಂಧಿಸಬೇಕು ಎಂದು ಬಿಳಿನೆಲೆ ಬಿಜೆಪಿ ಸಮಿತಿ ಅಗ್ರಹಿಸಿದೆ. ಬಿಳಿನೆಲೆ ಬಿಜೆಪಿ ಗ್ರಾಮ ಸಮಿತಿಯ ಅಧ್ಯಕ್ಷ ವಿಜಯ ಕುಮಾರ್ ಎರ್ಕ ಶನಿವಾರ ಕಡಬ ಪ್ರೆಸ್ ಕ್ಲಬ್‍ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅವ್ಯವಹಾರ ಆರೋಪದಲ್ಲಿ ಸಿಲುಕಿರುವ ಅಧ್ಯಕ್ಷರು ನಿರೀಕ್ಷಣಾ ಜಾಮೀನಿಗಾಗಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿ

ಕಾಂಪೋಸ್ಟ್ ಪೈಪ್ ಖರೀದಿಯಲ್ಲಿ ಅವ್ಯವಹಾರ ನಡೆಸಿರುವ ಹಿನ್ನೆಲೆ ► ಬಿಳಿನೆಲೆ ಗ್ರಾ.ಪಂ. ಅಧ್ಯಕ್ಷರನ್ನು ತಕ್ಷಣವೇ ಬಂಧಿಸಿ: ಬಿಳಿನೆಲೆ ಬಿಜೆಪಿ ಆಗ್ರಹ Read More »

ಕರಾವಳಿ

ಗೋಳಿಯಡ್ಕ: ಕಾರುಗಳ ಮಧ್ಯೆ ಮುಖಾಮುಖಿ ಢಿಕ್ಕಿ ► ನಾಲ್ವರಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಜೂ.02. ಕಾರುಗಳೆರಡರ ಮಧ್ಯೆ ಢಿಕ್ಕಿ ಸಂಭವಿಸಿದ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಗೋಳಿಯಡ್ಕ ಎಂಬಲ್ಲಿ ಶನಿವಾರ ಸಂಜೆ‌ ನಡೆದಿದೆ. ಹೈದರಾಬಾದ್ ಮೂಲದ ಕುಟುಂಬವೊಂದು ಮಂಗಳೂರಿನಿಂದ ಟೊಯೋಟಾ ಎಟಿಯೋಸ್ ಕಾರನ್ನು ಬಾಡಿಗೆಗೆ ಗೊತ್ತುಪಡಿಸಿ ಧರ್ಮಸ್ಥಳ ದೇವರ ದರ್ಶನ ಮುಗಿಸಿಕೊಂಡು ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದಾಗ ಗೋಳಿಯಡ್ಕ ಎಂಬಲ್ಲಿ ಮಡಿಕೇರಿ ಮೂಲದವರಿದ್ದ ಸ್ವಿಫ್ಟ್ ಕಾರು ವಾಹನವೊಂದನ್ನು ಓವರ್ಟೇಕ್ ಮಾಡುವ ಭರದಲ್ಲಿ ಮುಖಾಮುಖಿ ಢಿಕ್ಕಿಯಾಗಿದೆ. ಘಟನೆಯಲ್ಲಿ ಎರಡೂ ಕಾರಿನಲ್ಲಿದ್ದವರು ಸಣ್ಣಪುಟ್ಟದಾಗಿ ಗಾಯಗೊಂಡಿದ್ದು,

ಗೋಳಿಯಡ್ಕ: ಕಾರುಗಳ ಮಧ್ಯೆ ಮುಖಾಮುಖಿ ಢಿಕ್ಕಿ ► ನಾಲ್ವರಿಗೆ ಗಾಯ Read More »

ಕರಾವಳಿ
Scroll to Top