ಮಂಗಳೂರು ಆಸ್ಪತ್ರೆಯೊಂದರ ಬಳಿ ನಿಲ್ಲಿಸಿದ್ದ ಬೈಕ್ ಕಳವು – ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com,  ಅ.21 ಮಂಗಳೂರು: ಫಳ್ನೀರ್ ರಸ್ತೆಯಲ್ಲಿರುವ ಆಸ್ಪತ್ರೆಯೊಂದರ ಸಮೀಪ ನಿಲ್ಲಿಸಿದ್ದ ಬೈಕ್ ಕಳವಾಗಿರುವ ಬಗ್ಗೆ ಪ್ರದೀಪ್ ಆಚಾರ್ಯ ಅವರು ಕದ್ರಿ ಠಾಣೆಯ ಪೊಲೀಸರಿಗೆ ದೂರು ನೀಡಿದ್ದಾರೆ. ರಾತ್ರಿ 7.10ಕ್ಕೆ ಬೈಕನ್ನು ನಿಲ್ಲಿಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಚಿಕ್ಕಪ್ಪನನ್ನು ನೋಡಲು ಹೋಗಿದ್ದರು. 9 ಗಂಟೆಗೆ ಬಂದು ನೋಡಿದಾಗ ನಿಲ್ಲಿಸಿದ್ದ ಸ್ಥಳದಲ್ಲಿ ಬೈಕ್ ಇರಲಿಲ್ಲ. ಎಲ್ಲೆಡೆ ಹುಡುಕಾಡಿದರೂ ಪತ್ತೆಯಾಗಿಲ್ಲ. ಬೈಕಿನ ಮೌಲ್ಯ 45,000 ರೂ. ಎಂದು ದೂರಿನಲ್ಲಿ ತಿಳಿಸಿದ್ದಾರೆ.  

ಮಂಗಳೂರು ಆಸ್ಪತ್ರೆಯೊಂದರ ಬಳಿ ನಿಲ್ಲಿಸಿದ್ದ ಬೈಕ್ ಕಳವು – ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಕರ್ನಾಟಕ ಹವಾಮಾನ ವರದಿ; ಧಾರಾಕಾರ ಮಳೆ ನಿರೀಕ್ಷೆ

(ನ್ಯೂಸ್‌ ಕಡಬ) newskadaba.com,  ಅ.21 ಬೆಂಗಳೂರು: ರಾಜ್ಯದಲ್ಲಿ ಮುಂದಿನ 7 ದಿನ ರಾಜ್ಯದಾದ್ಯಂತ ಗುಡುಗು ಸಹಿತ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ಘೋಷಿಸಿದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29°C ಮತ್ತು 21°C ಇರುವ ಸಾಧ್ಯತೆ ಇದೆ. ಅ.21ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ

ಇಂದಿನ ಕರ್ನಾಟಕ ಹವಾಮಾನ ವರದಿ; ಧಾರಾಕಾರ ಮಳೆ ನಿರೀಕ್ಷೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಕರ್ನಾಟಕ ಹವಾಮಾನ ವರದಿ; ಧಾರಾಕಾರ ಮಳೆ ನಿರೀಕ್ಷೆ

(ನ್ಯೂಸ್‌ ಕಡಬ) newskadaba.com,  ಅ.21 ಬೆಂಗಳೂರು: ರಾಜ್ಯದಲ್ಲಿ ಮುಂದಿನ 7 ದಿನ ರಾಜ್ಯದಾದ್ಯಂತ ಗುಡುಗು ಸಹಿತ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ಘೋಷಿಸಿದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29°C ಮತ್ತು 21°C ಇರುವ ಸಾಧ್ಯತೆ ಇದೆ. ಅ.21ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ

ಇಂದಿನ ಕರ್ನಾಟಕ ಹವಾಮಾನ ವರದಿ; ಧಾರಾಕಾರ ಮಳೆ ನಿರೀಕ್ಷೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರಿನ ಜನ-ಮನ ಕಾರ್ಯಕ್ರಮದಲ್ಲಿ ನೂಕುನುಗ್ಗಲು, 11ಕ್ಕೂ ಹೆಚ್ಚು ಮಂದಿ ಅಸ್ವಸ್ಥ

(ನ್ಯೂಸ್‌ ಕಡಬ) newskadaba.com,  ಅ.21 ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಶಾಸಕ ಅಶೋಕ ರೈ ನೇತೃತ್ವದಲ್ಲಿ ಸಿಎಂ ಉಪಸ್ಥಿತಿಯಲ್ಲಿ ಪುತ್ತೂರಿನ ಕೊಂಬೆಟ್ಟು ಮೈದಾನದಲ್ಲಿ ಹಮ್ಮಿಕೊಂಡ ‘ಅಶೋಕ ಜನಮನ -2025’ ಕಾರ್ಯಕ್ರಮದಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಜನ ಭಾಗಿಯಾದ ಪರಿಣಾಮ ನೂಕು ನುಗ್ಗಲು ಉಂಟಾಗಿ ಕೆಲವು ಜನರು ಅಸ್ವಸ್ಥರಾದ ಘಟನೆ ನಡೆದಿದೆ. ಅಸ್ವಸ್ಥರಾದವರಿಗೆ ಪುತ್ತೂರು ತಾಲೂಕು ಸರ್ಕಾರಿ‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ರೈ ಎಸ್ಟೇಟ್ ಎಜುಕೇಶನ್ ಮತ್ತು ಚ್ಯಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ಶಾಸಕ ಅಶೋಕ ರೈ ನೇತೃತ್ವದಲ್ಲಿ

ಪುತ್ತೂರಿನ ಜನ-ಮನ ಕಾರ್ಯಕ್ರಮದಲ್ಲಿ ನೂಕುನುಗ್ಗಲು, 11ಕ್ಕೂ ಹೆಚ್ಚು ಮಂದಿ ಅಸ್ವಸ್ಥ Read More »

ಕರಾವಳಿ

ಶಾಲೆಗೆ ಗೈರು ಹಾಜರಿಯಾದ ವಿದ್ಯಾರ್ಥಿಗೆ ಕೂಡಿ ಹಾಕಿ PVC ಪೈಪ್‌ನಿಂದ ಹೊಡೆತ – FIR ದಾಖಲು

(ನ್ಯೂಸ್‌ ಕಡಬ) newskadaba.com,  ಅ.21 ಬೆಂಗಳೂರು: ಶಾಲೆಗೆ ಚಕ್ಕರ್ ಹಾಕುತ್ತಿದ್ದ 5ನೇ ತರಗತಿ ವಿದ್ಯಾರ್ಥಿಯನ್ನು ಕೂಡಿ ಹಾಕಿ, ಪಿವಿಸಿ ಪೈಪ್’ನಿಂದ ಮನಬಂದಂತೆ ಅಮಾನುಷವಾಗಿ ದಂಡಿಸಿದ ಆರೋಪದ ಮೇರೆಗೆ ಖಾಸಗಿ ಶಾಲೆಯ ಪ್ರಾಂಶುಪಾಲ ಹಾಗೂ ಶಿಕ್ಷಕ ಸೇರಿದಂತೆ ಇತರರ ವಿರುದ್ಧ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಂಕದಕಟ್ಟೆಯ ಹೊಯ್ಸಳ ನಗರದ ನಿವಾಸಿ ದಿವ್ಯಾ (30) ಅವರು ಸುಂಕದಕಟ್ಟೆಯ ಪೈಪ್‌ಲೈನ್ ರಸ್ತೆಯಲ್ಲಿರುವ ನ್ಯೂ ಸೇಂಟ್ ಮೇರಿ ಪಬ್ಲಿಕ್ ಶಾಲೆಯ ಪ್ರಾಂಶುಪಾಲ ರಾಕೇಶ್ ಕುಮಾರ್, ಶಾಲೆಯ ಮಾಲೀಕ ವಿಜಯ್ ಕುಮಾರ್

ಶಾಲೆಗೆ ಗೈರು ಹಾಜರಿಯಾದ ವಿದ್ಯಾರ್ಥಿಗೆ ಕೂಡಿ ಹಾಕಿ PVC ಪೈಪ್‌ನಿಂದ ಹೊಡೆತ – FIR ದಾಖಲು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬದ ಕದಂಬ ಕ್ರಾಕರ್ಸ್ ನಲ್ಲಿ ದೀಪಾವಳಿ ಪಟಾಕಿ ಮೇಳ – ಟಿವಿ, ಮಿಕ್ಸಿ ಗೆಲ್ಲುವ ಅವಕಾಶ

(ನ್ಯೂಸ್ ಕಡಬ) newskadaba.com ಕಡಬ, ಅ.20. ದೀಪಾವಳಿ ಹಬ್ಬದ ಪ್ರಯುಕ್ತ ಕಡಬದ ಮಾಡ ದೈವಸ್ಥಾನದ ಬಳಿ ಆರಂಭಗೊಂಡಿರುವ ಕದಂಬ ಕ್ರಾಕರ್ಸ್ ನಲ್ಲಿ ವಿಶೇಷ ರಿಯಾಯಿತಿ ದರದಲ್ಲಿ ಪಟಾಕಿ‌ ಮಾರಾಟ ಆರಂಭಗೊಂಡಿದೆ‌. 2 ಸಾವಿರ ಮೇಲ್ಪಟ್ಟ ಖರೀದಿಗೆ ಟಿವಿ ಹಾಗೂ ಮಿಕ್ಸಿ ಜೊತೆಗೆ ಆಕರ್ಷಕ ಬಹುಮಾನಗಳನ್ನು ಗೆಲ್ಲುವ ಅವಕಾಶ ಕಲ್ಪಿಸಲಾಗಿದ್ದು, ಅಕ್ಟೋಬರ್ 22 ರಂದು ಸಂಜೆ 6 ಗಂಟೆಗೆ ಲೈವ್ ಡ್ರಾ ಇರಲಿದೆ. ಗ್ರಾಹಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ಮಾಲಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಡಬದ ಕದಂಬ ಕ್ರಾಕರ್ಸ್ ನಲ್ಲಿ ದೀಪಾವಳಿ ಪಟಾಕಿ ಮೇಳ – ಟಿವಿ, ಮಿಕ್ಸಿ ಗೆಲ್ಲುವ ಅವಕಾಶ Read More »

ಕರಾವಳಿ

ಕಲಬುರಗಿ : ಅ.23 ರಿಂದ ರಾಷ್ಟ್ರೀಯ ಹೆದ್ದಾರಿ ಕಛೇರಿ ಎದುರಿಗೆ ಉಪವಾಸ ಸತ್ಯಾಗ್ರಹ

(ನ್ಯೂಸ್‌ ಕಡಬ) newskadaba.com,  ಅ.20 ಜೇವರಗಿ ತಾಲೂಕು ನರಿಬೋಳ, ಚಿತಾಪುರ ತಾಲೂಕು ಚಾಮನೂರ ನಡುವಿನ ಭೀಮಾ ನದಿಯ ಸೇತುವೆ ಕೆಲಸ 7 ವರ್ಷಗಳಿಂದ ನಿಂತಲ್ಲೆ ನಿಂತಿದ್ದು,ಗುಣಮಟ್ಟದ ಕಾಮಗಾರಿ ನಡೆಸದ ಗುತ್ತಿಗೆ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಿ,ಜಮೀನು ನೀಡಿದ ರೈತರಿಗೆ ಪರಿಹಾರ ನೀಡಲು ಆಗ್ರಹಿಸಿ ಅ.23 ರಿಂದ ರಾಷ್ಟ್ರೀಯ ಹೆದ್ದಾರಿ ಕಛೇರಿ ಎದುರುಗಡೆ ಉಪವಾಸ ಸತ್ಯಾಗ್ರಹ ಆರಂಭಿಸಲಾಗುವದು ಎಂದು ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಅಧ್ಯಕ್ಷ ಎಂ ಎಸ್ ಪಾಟೀಲ ನರಿಬೋಳ ತಿಳಿಸಿದ್ದಾರೆ. ಜಿಲ್ಲಾ ಉಸ್ತುವಾರಿ

ಕಲಬುರಗಿ : ಅ.23 ರಿಂದ ರಾಷ್ಟ್ರೀಯ ಹೆದ್ದಾರಿ ಕಛೇರಿ ಎದುರಿಗೆ ಉಪವಾಸ ಸತ್ಯಾಗ್ರಹ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರಿನಲ್ಲಿ ಸಿಡಿಲು ಬಡಿದು ಮನೆ ಸಂಪೂರ್ಣವಾಗಿ ಹಾನಿ- ಮಗು ಸಹಿತ 5 ಮಂದಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ಅ.20 ಪುತ್ತೂರು:  ಭಾನುವಾರ ಸಂಜೆ ಸುರಿದ ಭಾರೀ ಗಾಳಿ ಮಳೆಯ ಜೊತೆಗೆ ಸಿಡಿಲು ಬಡಿದು ಮನೆ ಸಂಪೂರ್ಣ ಹಾನಿಯಾಗಿ, ಮನೆಯಲ್ಲಿದ್ದ ಮಗು ಸಹಿತ ಐದು ಮಂದಿ ಸಣ್ಣಪುಟ್ಟ ಗಾಯಗೊಂಡ ಘಟನೆ ಪುತ್ತೂರು ನರಿಮೊಗ್ರು ಗ್ರಾಮದ ಬೆದ್ರಾಳದಲ್ಲಿ ನಡೆದಿದೆ. ಬೆದ್ರಾಳ ನಿವಾಸಿ ದಯಾನಂದ ಮೂಲ್ಯ ಅವರಿಗೆ ಸೇರಿದ ಮನೆಗೆ ಸಿಡಿಲು ಬಡಿದು ಹಂಚಿನ ಛಾವಣಿ ಸಂಪೂರ್ಣ ಹಾನಿಯಾಗಿದೆ. ಗೋಡೆ ಕುಸಿತಗೊಂಡಿದ್ದು, ಒಂದು ಭಾಗಕ್ಕೆ ಹಾಕಿದ್ದ ಸಿಮೆಂಟ್ ಶೀಟ್ ಹಾನಿಯಾಗಿದೆ. ಮನೆ ಮಂದಿಗೆ ಹೆಂಚಿನ ತುಂಡುಗಳು

ಪುತ್ತೂರಿನಲ್ಲಿ ಸಿಡಿಲು ಬಡಿದು ಮನೆ ಸಂಪೂರ್ಣವಾಗಿ ಹಾನಿ- ಮಗು ಸಹಿತ 5 ಮಂದಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಂತಾರ ಚಾಪ್ಟರ್ – 1; 18 ದಿನಕ್ಕೆ 765 ಕೋಟಿ ಕಲೆಕ್ಷನ್

(ನ್ಯೂಸ್‌ ಕಡಬ) newskadaba.com,  ಅ.20 : ಅಕ್ಟೋಬರ್ 2ರಂದು ವಿಶ್ವದಾದ್ಯಂತ ತೆರೆಕಂಡು ಭರ್ಜರಿ ರೆಸ್ಪಾನ್ಸ್ ಪಡೆದುಕೊಂಡಿದೆ. ಕೇವಲ ಪ್ರಾದೇಶಿಕವಾಗಿ ಅಲ್ಲದೇ ಪ್ರಪಂಚದಾದ್ಯಂತ ಮೆಚ್ಚುಗೆಯ ಮಹಾಪೂರ ಹರಿದು ಬಂದಿದೆ. ಸಿನಿಮಾ ನೋಡಿ ತಮ್ಮ ಅಭಿಪ್ರಾಯ ಹಂಚಿಕೊಂಡಿದೆ ಅಭಿಮಾನಿ ವರ್ಗ. ಬಹುಭಾಷೆಯಲ್ಲಿ ಏಕಕಾಲಕ್ಕೆ ತೆರೆಕಂಡ ಕಾಂತಾರ ಚಾಪ್ಟರ್-1 ಸಿನಿಮಾಗೆ ಅಭೂತಪೂರ್ವ ಪ್ರತಿಕ್ರಿಯೆ ಸಿಕ್ಕಿದೆ. ಮೂರನೇ ವಾರದಲ್ಲೂ ಕಾಂತಾರ ಸಿನಿಮಾದ ಗಳಿಕೆ ಕುಗ್ಗಿಲ್ಲ. ಸಾಲು ಸಾಲು ರಜಾ ದಿನಗಳ ಜೊತೆ ಹಬ್ಬ ಇರುವ ಕಾರಣ ಚಿತ್ರ ನೋಡಲು ಥಿಯೇಟರ್‌ಗೆ ಜನ ಬರುತ್ತಿದ್ದಾರೆ.

ಕಾಂತಾರ ಚಾಪ್ಟರ್ – 1; 18 ದಿನಕ್ಕೆ 765 ಕೋಟಿ ಕಲೆಕ್ಷನ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಕರ್ನಾಟಕದಾದ್ಯಂತ 26 ಸಾವಿರ ಶಿಕ್ಷಕರ ನೇಮಕಾತಿಗೆ ಸರ್ಕಾರ ನಿರ್ಧಾರ

(ನ್ಯೂಸ್‌ ಕಡಬ) newskadaba.com,  ಅ.20 ಶಿವಮೊಗ್ಗ: 26 ಸಾವಿರ ಶಿಕ್ಷಕರ ನೇಮಕಾತಿಗೆ ಸರ್ಕಾರ ನಿರ್ಧರಿಸಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ.“ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಸೂಚನೆ ಹೊರಡಿಸಲಾಗಿದೆ. ಅಕ್ಟೋಬರ್ 23 ರಿಂದ ನವೆಂಬರ್ 9ರವರೆಗೆ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಡಿಸೆಂಬರ್ 7ರಂದು ಟಿಇಟಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ” ಎಂದು ತಿಳಿಸಿದರು. “ಶೀಘ್ರದಲ್ಲಿ ಅನುದಾನಿತ ಶಾಲೆಯ ಶಿಕ್ಷಕರ ನೇಮಕಾತಿಗೂ ಸರ್ಕಾರ ಆದೇಶ ಹೊರಡಿಸಲಿದೆ. ರಾಜ್ಯದಲ್ಲಿ 800

ಕರ್ನಾಟಕದಾದ್ಯಂತ 26 ಸಾವಿರ ಶಿಕ್ಷಕರ ನೇಮಕಾತಿಗೆ ಸರ್ಕಾರ ನಿರ್ಧಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top