ನೂತನ ಮುಖ್ಯಮಂತ್ರಿಯಾಗಿ ಬಿ.ಎಸ್. ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.17. ಕರ್ನಾಟಕದ 23 ನೇ ಮುಖ್ಯಮಂತ್ರಿಯಾಗಿ ಬಿ.ಎಸ್. ಯಡಿಯೂರಪ್ಪ ಗುರುವಾರ ಬೆಳಗ್ಗೆ ರೈತರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ ಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ವಜೂಭಾಯ್ ವಾಲಾ ಅವರು ಯಡಿಯೂರಪ್ಪರಿಗೆ ಪ್ರಮಾಣವಚನ ಬೋಧಿಸಿದರು. ಪದಗ್ರಹಣ ಕಾರ್ಯಕ್ರಮದಲ್ಲಿ ಬಿಜೆಪಿಯ ಹಲವು ನಾಯಕರು ಉಪಸ್ಥಿತರಿದ್ದರು.

ನೂತನ ಮುಖ್ಯಮಂತ್ರಿಯಾಗಿ ಬಿ.ಎಸ್. ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರ Read More »

ಕರ್ನಾಟಕ

ನೆಕ್ಕಿತ್ತಡ್ಕ: ಕಾರುಗಳ ಮಧ್ಯೆ ಮುಖಾಮುಖಿ ಢಿಕ್ಕಿ ► ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಮೇ.16. ಕಾರುಗಳೆರಡರ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಕ್ಕಿತ್ತಡ್ಕ ಎಂಬಲ್ಲಿ ಬುಧವಾರ ಸಂಜೆ ನಡೆದಿದೆ. ಸುಬ್ರಹ್ಮಣ್ಯದಿಂದ ಕಡಬ ಕಡೆಗೆ ತೆರಳುತ್ತಿದ್ದ ಸ್ವಿಫ್ಟ್ ಕಾರಿಗೆ ಕಡಬದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕಾರು ನೆಕ್ಕಿತ್ತಡ್ಕ ತಿರುವಿನಲ್ಲಿ ವಿರುದ್ಧ ದಿಕ್ಕಿನಲ್ಲಿ ಢಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಸ್ವಿಫ್ಟ್ ಕಾರಿನಲ್ಲಿದ್ದ ಕಡಬ ಸಮೀಪದ ಹೊಸ್ಮಠ ನಿವಾಸಿ ಲಾರೆನ್ಸ್ ಹಾಗೂ ಬಾಲಕನೋರ್ವ ಗಾಯಗೊಂಡಿದ್ದು, ಕಡಬ

ನೆಕ್ಕಿತ್ತಡ್ಕ: ಕಾರುಗಳ ಮಧ್ಯೆ ಮುಖಾಮುಖಿ ಢಿಕ್ಕಿ ► ಇಬ್ಬರಿಗೆ ಗಾಯ Read More »

ಕರಾವಳಿ

ಕಡಬ ಪೊಲೀಸ್ ಠಾಣೆಯಲ್ಲಿ ದೊಡ್ಡ ಸ್ಫೋಟ ► ತಪ್ಪಿದ ಭಾರೀ ಅನಾಹುತ

ಕಡಬ, ಮೇ.16. ಇಲ್ಲಿನ ಪೊಲೀಸ್ ಠಾಣೆಯ ಹಳೆಯ ಕಟ್ಟಡದಲ್ಲಿ ಭಾರೀ ಸದ್ದಿನೊಂದಿಗೆ ಸ್ಫೋಟವೊಂದು ನಡೆದಿದ್ದು, ಕಟ್ಟಡಕ್ಕೆ ಹಾನಿಯಾದ‌ ಘಟನೆ ಬುಧವಾರ ರಾತ್ರಿ ನಡೆದಿದೆ. ಠಾಣೆಯ ಹಳೆಯ ಕಟ್ಟಡದಲ್ಲಿ ಗೃಹ ರಕ್ಷಕ ದಳದ ಕಛೇರಿಯನ್ನಾಗಿ ಬಳಸಲಾಗುತ್ತಿದ್ದು, ಬುಧವಾರ ರಾತ್ರಿ 7 ಗಂಟೆಯ ಸುಮಾರಿಗೆ ಇದ್ದಕ್ಕಿದ್ದಂತೆ ಭಾರೀ ಸದ್ದಿನೊಂದಿಗೆ ಸ್ಫೋಟವೊಂದು ನಡೆದಿದೆ. ಘಟನೆಗಿಂತ ಕೆಲವೇ ಕ್ಷಣಗಳ ಮುಂಚೆ ಸ್ಥಳದಲ್ಲಿದ್ದ ಇಬ್ಬರು ಅಲ್ಲಿಂದ ತೆರಳಿದ್ದು, ಸಂಭಾವ್ಯ ಪ್ರಾಣಾಪಾಯ ತಪ್ಪಿದೆ. ಈ ಸಂದರ್ಭದಲ್ಲಿ ಕಟ್ಟಡದ ಪಕ್ಕದಲ್ಲಿ ನಿಲ್ಲಿಸಲಾಗಿದ್ದ ಕೆಲವು ವಾಹನಗಳಿಗೆ ಹಾನಿಯಾಗಿವೆ. ಅಲ್ಲದೆ

ಕಡಬ ಪೊಲೀಸ್ ಠಾಣೆಯಲ್ಲಿ ದೊಡ್ಡ ಸ್ಫೋಟ ► ತಪ್ಪಿದ ಭಾರೀ ಅನಾಹುತ Read More »

ಕರಾವಳಿ

ಮೇ.20 : ಕಾಡೂರು ಮಲರಾಯ ಧರ್ಮ ದೈವದ ದೈವಸ್ಥಾನ ಮತ್ತು ತರವಾಡು ಮನೆಯ ಶಿಲಾನ್ಯಾಸ

ಪುತ್ತೂರು: ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಪೈವಳಿಕೆ ಗ್ರಾಮದ ಕಾಡೂರು ಮಲರಾಯ ಧರ್ಮದೈವದ ದೈವಸ್ಥಾನ ಮತ್ತು ತರವಾಡು ಮನೆಯ ಶಿಲಾನ್ಯಾಸ ಸಮಾರಂಭ ಮೇ.20ರಂದು ನಡೆಯಲಿದೆ. ಶ್ರೀಧಾಮ ಮಾಣಿಲದ ಶ್ರೀಮೋಹನದಾಸ ಪರಮಹಂಸ ಸ್ವಾಮೀಜಿ ಅವರು ಶಿಲಾನ್ಯಾಸ ನೆರವೇರಿಸುವರು.ಅಧ್ಯಕ್ಷತೆಯನ್ನು ಕಾಸರಗೋಡು ತಾ.ಕುಲಾಲ ಸುಧಾರಕ ಸಂಘದ ಅಧ್ಯಕ್ಷ ಕೆ.ಜಯಂರ ಅರಿಬÉೈಲು ವಹಿಸುವರು. ಅತಿಥಿಗಳಾಗಿ ತಂತ್ರಿಗಳಾದ ಬ್ರಹ್ಮಶ್ರೀ ರಾಜೇಶ್ ತಾಳಿತ್ತಾಯ,ದೈವಜ್ಞ ಉನ್ನಿಕೃಷ್ಣನ್,ಪುತ್ತೂರು ಕುಲಾಲ ಸಮಾಜ ಸೇವಾ ಸಂಘದ ಅಧ್ಯಕ್ಷ ದಿನೇಶ್ ಪಿ.ವಿ, ಕಾಸರಗೋಡು ತಾ.ಕುಲಾಲ ಸುಧಾರಕ ಸಂಘದ ಕಾರ್ಯದರ್ಶಿ ,ನ್ಯಾಯವಾದಿ ರವೀಂದ್ರ ಮುನ್ನಿಪ್ಪಾಡಿ,ಉದ್ಯಮಿ

ಮೇ.20 : ಕಾಡೂರು ಮಲರಾಯ ಧರ್ಮ ದೈವದ ದೈವಸ್ಥಾನ ಮತ್ತು ತರವಾಡು ಮನೆಯ ಶಿಲಾನ್ಯಾಸ Read More »

ಕರಾವಳಿ

ನಾಳೆ (ಮೇ.17) ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ..? ► ಬಹುಮತ ಸಾಬೀತು ಪಡಿಸಲು ಹನ್ನೊಂದು ದಿನಗಳ ಕಾಲಾವಕಾಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.16. ಸ್ಪಷ್ಟ ಬಹುಮತವಿಲ್ಲದೆ ಅತಂತ್ರ ಸ್ಥಿತಿಯಲ್ಲಿ ಓದ್ದಾಡುತ್ತಿರುವ ಬಿಜೆಪಿ ಪಕ್ಷದ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಮೇ.17 ಗುರುವಾರದಂದು ನಿಗದಿಯಂತೆ‌ ಪ್ರಮಾಣವಚನ ಸ್ವೀಕರಿಸಲಿದ್ದಾರೆ‌ ಎಂದು ತಿಳಿದುಬಂದಿದೆ. ಕ್ಷಣ ಕ್ಷಣವೂ ಕುತೂಹಲಕಾರಿ ತಿರುವು ಪಡೆಯುತ್ತಿರುವ ರಾಜ್ಯ ರಾಜಕಾರಣದಲ್ಲಿ ಶಾಸಕರ ಕುದುರೆ ವ್ಯಾಪಾರ ನಡೆಯಬಹುದೆಂಬ ಅನುಮಾನದ ಬೆನ್ನಲ್ಲೇ ಬಹುಮತ ಸಾಬೀತು ಪಡಿಸಲು ಬಿಜೆಪಿಗೆ ರಾಜ್ಯಪಾಲರು ಹನ್ನೊಂದು ದಿನಗಳ ಕಾಲಾವಕಾಶ ನೀಡಿದ್ದಾರೆ ಎನ್ನಲಾಗಿದೆ. ಇದರ ನಡುವೆ ಕುದುರೆ ವ್ಯಾಪಾರದ ಭೀತಿಯಿಂದ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ತಮ್ಮ ಪಕ್ಷದ

ನಾಳೆ (ಮೇ.17) ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ..? ► ಬಹುಮತ ಸಾಬೀತು ಪಡಿಸಲು ಹನ್ನೊಂದು ದಿನಗಳ ಕಾಲಾವಕಾಶ Read More »

ಕರ್ನಾಟಕ

ಅಡ್ಯಾರು: ಬಿಜೆಪಿ ವಿಜಯೋತ್ಸವದ ವೇಳೆ ಕಲ್ಲು ತೂರಾಟ ► ಹಲವರಿಗೆ ಗಾಯ, ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.15. ವಿಧಾನಸಭಾ ಚುನಾವಣೆಯ ಮತ ಎಣಿಕೆ ಮುಗಿದ ಮರು ಕ್ಷಣದಲ್ಲೇ ಭಿನ್ನಕೋಮಿನ ಯುವಕರ ನಡುವೆ ಮಾರಾಮಾರಿ ನಡೆದ ಘಟನೆ ನಗರದ ಹೊರವಲಯದ ಅಡ್ಯಾರಿನಲ್ಲಿ ಸಂಭವಿಸಿದೆ. ಬಿಜೆಪಿ ವಿಜಯೋತ್ಸವದ ಸಂದರ್ಭದಲ್ಲಿ ಯಾರೋ ಕಿಡಿಗೇಡಿಗಳು ಧಾರ್ಮಿಕ ಕೇಂದ್ರದ ಕಡೆಗೆ ಹಾಗೂ ಮೆರವಣಿಗೆ ಕಡೆಗೆ ಪರಸ್ಪರ ಕಲ್ಲೆಸೆದಿದ್ದು, ಇದರಿಂದಾಗಿ ಹಲವರಿಗೆ ಗಾಯಗಳಾಗಿವೆ. ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದ್ದು, ಸೂಕ್ತ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಅಡ್ಯಾರು: ಬಿಜೆಪಿ ವಿಜಯೋತ್ಸವದ ವೇಳೆ ಕಲ್ಲು ತೂರಾಟ ► ಹಲವರಿಗೆ ಗಾಯ, ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ Read More »

ಕರಾವಳಿ

ಕಡಬ: ರಿಕ್ಷಾ ಚಾಲಕನಿಗೆ ಇರಿದ ಪ್ರಕರಣ ► ಮಹಿಳೆ ಸೇರಿ ಇಬ್ಬರ ಬಂಧನ, ತಲವಾರು ವಶಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಮೇ.15. ಠಾಣಾ ವ್ಯಾಪ್ತಿಯ ನೆಕ್ಕಿತ್ತಡ್ಕ ಎಂಬಲ್ಲಿ ರಿಕ್ಷಾ ಚಾಲಕನೋರ್ವನನ್ನು ಇರಿದು ಕೊಲೆಗೆ ಯತ್ನಿಸಿದ ಪ್ರಕರಣವನ್ನು ಭೇದಿಸಿರುವ ಕಡಬ ಪೊಲೀಸರು ಕೃತ್ಯಕ್ಕೆ ಬಳಸಿದ ಮಾರಕಾಯುಧಗಳೊಂದಿಗೆ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕಡಬ ತಾಲೂಕಿನ ಐತ್ತೂರು ಗ್ರಾಮದ ಸುಳ್ಯಕಾಡು ನಿವಾಸಿ ಚಂದ್ರಹಾಸ ಎಂಬವರ ಪತ್ನಿ ಕುಸುಮಾವತಿ(38) ಹಾಗೂ ಬೆಳ್ತಂಗಡಿ ತಾಲೂಕಿನ ನಿಡ್ಲೆ ನಿವಾಸಿ ಚಿನ್ನಕೇಶವ ಪೂಜಾರಿ ಎಂಬವರ ಪುತ್ರ ಸುಬ್ಬು ಯಾನೆ ಸುಬ್ರಮಣ್ಯ ಎಂದು ಗುರುತಿಸಲಾಗಿದೆ. ಇರಿತಕ್ಕೊಳಗಾದ ರಿಕ್ಷಾ ಚಾಲಕ ಐತ್ತೂರು ಗ್ರಾಮದ ಕೇನ್ಯ

ಕಡಬ: ರಿಕ್ಷಾ ಚಾಲಕನಿಗೆ ಇರಿದ ಪ್ರಕರಣ ► ಮಹಿಳೆ ಸೇರಿ ಇಬ್ಬರ ಬಂಧನ, ತಲವಾರು ವಶಕ್ಕೆ Read More »

ಕರಾವಳಿ

ಸುಳ್ಯ: ನಿಷೇಧಾಜ್ಞೆಯ ನಡುವೆಯೇ ಸಂಭ್ರಮಾಚರಣೆ ► ಪೊಲೀಸರ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ

(ನ್ಯೂಸ್ ಕಡಬ) newskadaba.com ಸುಳ್ಯ, ಮೇ.15. ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಎಸ್.ಅಂಗಾರರು ಜಯಗಳಿಸಿದ ಹಿನ್ನಲೆಯಲ್ಲಿ ಬಿಜೆಪಿ ಕಾರ್ಯಕರ್ತರು ನಡೆಸಲುದ್ದೇಶಿಸಿದ ವಿಜಯೋತ್ಸವಕ್ಕೆ ಪೊಲೀಸರು ಅನುಮತಿ ನಿರಾಕರಿಸಿದ ಕಾರಣ ಕಾರ್ಯಕರ್ತರು ಹಾಗೂ ಪೊಲೀಸರು ನಡುವೆ ವಾಗ್ವಾದ ನಡೆಘಟನೆ ಸುಳ್ಯದಲ್ಲಿ ನಡೆದಿದೆ. ಬಿಜೆಪಿ ಕಾರ್ಯಕರ್ತರು ಹರ್ಷಾಚರಣೆಗೆ ಸಿದ್ಧರಾದಾಗ ನಿಷೇಧಾಜ್ಞೆಯ ಹಿನ್ನೆಲೆಯಲ್ಲಿ ಪೊಲೀಸರು ತಡೆಯೊಡ್ಡಿದ್ದು, ಇದರಿಂದ ಆಕ್ರೋಶಗೊಂಡ ಬಿಜೆಪಿ ಕಾರ್ಯಕರ್ತರು ಚುನಾವಣಾ ಕಚೇರಿಯ ಕೆಳಗಿನ ರಸ್ತೆಯ ಬದಿಯಲ್ಲಿ ಘೋಷಣೆ ಕೂಗಿದರು ಎನ್ನಲಾಗಿದೆ. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಪೊಲೀಸರು ಹಾಗೂ ಕಾರ್ಯಕರ್ತರ‌ ನಡುವೆ ವಾಗ್ವಾದ

ಸುಳ್ಯ: ನಿಷೇಧಾಜ್ಞೆಯ ನಡುವೆಯೇ ಸಂಭ್ರಮಾಚರಣೆ ► ಪೊಲೀಸರ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ Read More »

ಕರಾವಳಿ

ರಾಜ್ಯದಲ್ಲಿ ಅಧಿಕಾರ ಹಿಡಿಯುವತ್ತ ದಾಪುಗಾಲಿಟ್ಟ ಬಿಜೆಪಿ ► ಕಡಬದಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಮೇ.15. ರಾಜ್ಯದಲ್ಲಿ ಬಿಜೆಪಿ ಜಯಭೇರಿ ಬಾರಿಸುತ್ತಿರುವಂತೆಯೇ ಕಡಬದಲ್ಲೂ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಿಸಿದರು. ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಆರನೇ ಬಾರಿಗೆ ತನ್ನ ವಿಜಯ ಪತಾಕೆಯನ್ನು ಹಾರಿಸಿದ ಎಸ್.ಅಂಗಾರರವರ ಗೆಲುವನ್ನು ಸಂಭ್ರಮಿಸಿದ ಬಿಜೆಪಿ ಕಡಬ ಮಹಾ ಶಕ್ತಿ ಕೇಂದ್ರದ ಕಾರ್ಯಕರ್ತರು ‌ಕಡಬ ಪೇಟೆಯಲ್ಲಿ ಮೆರವಣಿಗೆ ತೆರಳಿ ಪಟಾಕಿ ಸಿಡಿಸಿ‌ ಸಂಭ್ರಮಿಸಿದರು. ಮೋದಿ ಪರ ಘೋಷಣೆ ಕೂಗಿದ ಕಾರ್ಯಕರ್ತರು ಸಂಭ್ರಮಾಚರಿಸಿದರು.

ರಾಜ್ಯದಲ್ಲಿ ಅಧಿಕಾರ ಹಿಡಿಯುವತ್ತ ದಾಪುಗಾಲಿಟ್ಟ ಬಿಜೆಪಿ ► ಕಡಬದಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ Read More »

ಕರಾವಳಿ

ಮೋದಿ ಅಲೆಗೆ ಕೊಚ್ಚಿ ಹೋದ ಕಾಂಗ್ರೆಸ್ ► ಕರಾವಳಿಯಲ್ಲಿ 7 ಕ್ಷೇತ್ರದಲ್ಲಿ ವಿಜಯದ ಪತಾಕೆ ಹಾರಿಸಿದ ಬಿಜೆಪಿ, 1 ಕ್ಷೇತ್ರಕ್ಕೆ ತೃಪ್ತಿಪಟ್ಟ ಕಾಂಗ್ರೆಸ್

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.15. ಕರಾವಳಿಯಲ್ಲಿ ಭರ್ಜರಿ ಯಶ ಸಾಧಿಸಿರುವ ಬಿಜೆಪಿಯು ಕಾಂಗ್ರೆಸ್‌ ಮುಕ್ತ ಕರ್ನಾಟಕದ ಕನಸನ್ನು ನನಸಾಗಿಸಿದ್ದು, ಮೋದಿ ಅಲೆಗೆ ಕಾಂಗ್ರೆಸ್ ಕೊಚ್ಚಿ ಹೋಗಿದೆ. ಕ್ಷೇತ್ರಗಳನ್ನು ತನ್ನ ತೆಕ್ಕೆಗೆ ಎಳೆದುಕೊಂಡಿರುವ ಬಿಜೆಪಿಯು ಕರಾವಳಿಯಲ್ಲಿ ವಿಜಯದ ಪತಾಕೆಯನ್ನು ಹಾರಿಸಿದೆ. ಬಿಜೆಪಿಯು ರಾಜ್ಯದಲ್ಲೇ ಮೊದಲ ಖಾತೆಯನ್ನು ತೆರೆದಿದ್ದು ಮೂಡಬಿದಿರೆಯಲ್ಲಿ. ಮಾಜಿ ಸಚಿವ ಕಾಂಗ್ರೆಸ್‌ನ ಅಭ್ಯರ್ಥಿ ಅಭಯಚಂದ್ರ ಜೈನ್ ರನ್ನು 22 ಸಾವಿರಕ್ಕೂ ಹೆಚ್ಚಿನ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಭರ್ಜರಿಯಾಗಿ ಸೋಲಿಸಿದ್ದಾರೆ. ಬಂಟ್ವಾಳದಲ್ಲಿ ರಮಾನಾಥ ರೈಯವರನ್ನು

ಮೋದಿ ಅಲೆಗೆ ಕೊಚ್ಚಿ ಹೋದ ಕಾಂಗ್ರೆಸ್ ► ಕರಾವಳಿಯಲ್ಲಿ 7 ಕ್ಷೇತ್ರದಲ್ಲಿ ವಿಜಯದ ಪತಾಕೆ ಹಾರಿಸಿದ ಬಿಜೆಪಿ, 1 ಕ್ಷೇತ್ರಕ್ಕೆ ತೃಪ್ತಿಪಟ್ಟ ಕಾಂಗ್ರೆಸ್ Read More »

ಕರಾವಳಿ
Scroll to Top