ಇಪಿಎಫ್‌ಒ ತಂದ ಹೊಸ ನಿಯಮ; ಕನಿಷ್ಠ ಒಂದು ತಿಂಗಳ ಕಾಲ ಕೆಲಸ ಮಾಡಿದರೂ ಪಿಂಚಣಿ

(ನ್ಯೂಸ್‌ ಕಡಬ) newskadaba.com,  ಅ.30 ನೌಕರರ ಭವಿಷ್ಯ ನಿಧಿ ಸಂಸ್ಥೆ ನೌಕರರ ಪಿಂಚಣಿ ಯೋಜನೆಯ  ನಿಯಮಗಳಲ್ಲಿ ಐತಿಹಾಸಿಕ ಬದಲಾವಣೆಯನ್ನು ಮಾಡಿದೆ. ಈಗ, ಉದ್ಯೋಗಿ ಆರು ತಿಂಗಳ ಮೊದಲು ತಮ್ಮ ಕೆಲಸವನ್ನು ತೊರೆದರೂ ಪಿಂಚಣಿಯಿಂದ ವಂಚಿತರಾಗುವುದಿಲ್ಲ. ಹೊಸ ವ್ಯವಸ್ಥೆಯಡಿಯಲ್ಲಿ, ಕನಿಷ್ಠ ಒಂದು ತಿಂಗಳ ಕಾಲ ಕೆಲಸ ಮಾಡಿದರೂ ಪಿಂಚಣಿ ಪಡೆಯಬಹುದು. ಹಿಂದೆ, ಇಪಿಎಸ್‌ನಲ್ಲಿ ಆರು ತಿಂಗಳಿಗಿಂತ ಕಡಿಮೆ ಸೇವೆ ಸಲ್ಲಿಸಿದವರನ್ನು “ಶೂನ್ಯ ಪೂರ್ಣಗೊಂಡ ವರ್ಷಗಳು” ಎಂದು ಪರಿಗಣಿಸಲಾಗುತ್ತಿತ್ತು. ಇದರರ್ಥ ಐದು ತಿಂಗಳ ನಂತರ ರಾಜೀನಾಮೆ ನೀಡಿದ ಉದ್ಯೋಗಿಗಳು ತಮ್ಮ ಪಿಂಚಣಿಯಿಂದ ವಂಚಿತರಾಗುತ್ತಿದ್ದರು. […]

ಇಪಿಎಫ್‌ಒ ತಂದ ಹೊಸ ನಿಯಮ; ಕನಿಷ್ಠ ಒಂದು ತಿಂಗಳ ಕಾಲ ಕೆಲಸ ಮಾಡಿದರೂ ಪಿಂಚಣಿ Read More »

ಕರಾವಳಿ

ಬೆಂಗಳೂರು: “ವಿದ್ಯಾರ್ಥಿಗಳ ಉತ್ತೀರ್ಣ ಕನಿಷ್ಠ ಅಂಕ ಇಳಿಕೆ ಬೇಡ” : ಸಭಾಪತಿ ಬಸವರಾಜ ಹೊರಟ್ಟಿ

(ನ್ಯೂಸ್‌ ಕಡಬ) newskadaba.com,  ಅ.30 ಬೆಂಗಳೂರು:  ಶಾಲಾ ವಿದ್ಯಾರ್ಥಿಗಳಿಗೆ ಕನಿಷ್ಠ ಉತ್ತೀರ್ಣ ಅಂಕಗಳನ್ನು 35ಕ್ಕೆ ತರುವಂತೆ ರಾಜ್ಯ ಸರ್ಕಾರಕ್ಕೆ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿಯವರು ಆಗ್ರಹಿಸಿದ್ದಾರೆ. 33 ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳನ್ನು ಉತ್ತೀರ್ಣರೆಂದು ಪರಿಗಣಿಸಲಾಗುತ್ತದೆ ಎಂದು ಸಚಿವ ಮಧು ಬಂಗಾರಪ್ಪ ಅವರು ಈ ಹಿಂದೆ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಮಧು ಬಂಗಾರಪ್ಪ ಅವರಿಗೆ ಪತ್ರ ಬರೆದಿರುವ ಹೊರಟ್ಟಿಯವರು 33 ಅಂಕದ ಬದಲಿಗೆ 35 ಅಂಕಗಳನ್ನೇ ನಿಗದಿಪಡಿಸಬೇಕು. ವಿದ್ಯಾರ್ಥಿಗಳ ಭವಿಷ್ಯತ್ತಿನ ದೃಷ್ಟಿಯಿಂದ ಹಿಂದಿದ್ದ ನಿಯಮವೇ ಉತ್ತಮ ಎಂದು

ಬೆಂಗಳೂರು: “ವಿದ್ಯಾರ್ಥಿಗಳ ಉತ್ತೀರ್ಣ ಕನಿಷ್ಠ ಅಂಕ ಇಳಿಕೆ ಬೇಡ” : ಸಭಾಪತಿ ಬಸವರಾಜ ಹೊರಟ್ಟಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗರ್ಭಕಂಠ ಕ್ಯಾನ್ಸರ್ ತಡೆಗಟ್ಟಲು ಕ್ರಮ: 13 ರಿಂದ 15 ವರ್ಷದೊಳಗಿನ ಸರ್ಕಾರಿ ಶಾಲಾ ಬಾಲಕಿಯರಿಗೆ HPV ಲಸಿಕೆ ಅಭಿಯಾನ

(ನ್ಯೂಸ್‌ ಕಡಬ) newskadaba.com,  ಅ..30: ಬೆಂಗಳೂರು: ರಾಜ್ಯದ ಮಹಿಳೆಯರಲ್ಲಿ ಇತ್ತೀಚೆಗೆ ಹೆಚ್ಚುತ್ತಿರುವ ಗರ್ಭಕಂಠದ ಕ್ಯಾನ್ಸರ್ ನ್ನು ಕಡಿಮೆ ಮಾಡುವ ಉದ್ದೇಶದಿಂದ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ (RGUHS) ಸರ್ಕಾರಿ ಶಾಲೆಗಳಲ್ಲಿ 13 ರಿಂದ 15 ವರ್ಷದೊಳಗಿನ ಬಾಲಕಿಯರಿಗೆ ಹ್ಯೂಮನ್ ಪ್ಯಾಪಿಲೋಮವೈರಸ್ (HPV) ಲಸಿಕೆಗಳನ್ನು ಒದಗಿಸಲು ಖಾಸಗಿ ಹೂಡಿಕೆದಾರರು ಮತ್ತು ವೈದ್ಯರೊಂದಿಗೆ ಚರ್ಚೆ ನಡೆಸುತ್ತಿದೆ. RGUHS ನ ಅಧಿಕಾರಿಯೊಬ್ಬರು ಈ ಬಗ್ಗೆ ಮಾಹಿತಿ ನೀಡಿ, ಈ ಲಸಿಕೆಗಳ ಮಿತಿಯ ಬೆಲೆ ನಿರ್ಧರಿಸಲು, ಲಸಿಕೆಯ ಬ್ರ್ಯಾಂಡ್ ಮತ್ತು ಅದರಲ್ಲಿರುವ ಅಂಶಗಳೇನೇನು

ಗರ್ಭಕಂಠ ಕ್ಯಾನ್ಸರ್ ತಡೆಗಟ್ಟಲು ಕ್ರಮ: 13 ರಿಂದ 15 ವರ್ಷದೊಳಗಿನ ಸರ್ಕಾರಿ ಶಾಲಾ ಬಾಲಕಿಯರಿಗೆ HPV ಲಸಿಕೆ ಅಭಿಯಾನ Read More »

ಕರ್ನಾಟಕ

ನ. 28 ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ ಮೋದಿ ಭೇಟಿ

(ನ್ಯೂಸ್‌ ಕಡಬ) newskadaba.com,  ಅ.30 ಉಡುಪಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನವೆಂಬರ್ 28 ರಂದು(ಶುಕ್ರವಾರ) ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ . ಮಧ್ಯಾಹ್ನ 12 ಗಂಟೆಗೆ ಶ್ರೀ ಕೃಷ್ಣಮಠಕ್ಕೆ ಆಗಮಿಸಲಿರುವ ಅವರು ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿದ ಬಳಿಕ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ಮಠದ ಮೂಲಗಳು ತಿಳಿಸಿವೆ.ಗೀತಾ ಜಯಂತಿ ಯ ಹಿನ್ನೆಲೆಯಲ್ಲಿ ಶ್ರೀ ಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ನಡೆಯಲಿರುವ “ಲಕ್ಷ ಕಂಠ ಗೀತಾ ಪಾರಾಯಣ-

ನ. 28 ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ ಮೋದಿ ಭೇಟಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೀದರ್: ನ.೨ರಂದು ಡಾ.ಚನ್ನವೀರ ಶಿವಾಚಾರ್ಯರ ೬೩ನೇ ಜನ್ಮದಿನೋತ್ಸವ

(ನ್ಯೂಸ್‌ ಕಡಬ) newskadaba.com,  ಅ.30 ಬೀದರ್: ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಸಿರಗಾಪೂರ ಗ್ರಾಮದಲ್ಲಿ ದಿನಾಂಕ ೦೨. ೧೧.೨೦೨೫ ರಂದು ರವಿವಾರ ಬೆಳಗ್ಗೆ ೧೧ ಗಂಟೆಗೆ ”ಶಿವಾಚಾರ್ಯ ರತ್ನ” ”ಧರ್ಮರತ್ನ” “ದಾಸೋಹ ರತ್ನ” “ಸದ್ದರ್ಮ ಶಿಖಾಮಣಿ” ”ಸಮನ್ವಯ ಸಂತ” ಪರಮ ಪೂಜ್ಯ ಶ್ರೀ ಷ. ಬ್ರ. ಡಾ. ಚನ್ನವೀರ ಶಿವಾಚಾರ್ಯರು ಸಂಸ್ಥಾನ ಹಿರೇಮಠ, ಸುಕ್ಷೇತ್ರ ಹಾರಕೂಡ ಇವರ ೬೩ ಜನ್ಮದಿನೋತ್ಸವ ಮತ್ತು ತುಲಾಭಾರ ಕಾರ್ಯಕ್ರಮ ಜರುಗಲಿದೆ. ಸಮಾರಂಭದ ಸಮ್ಮುಖವನ್ನು ಪೂಜ್ಯ ಶ್ರೀ ಮ.ನಿ.ಪ್ರ. ಶಿವಲಿಂಗ ಮಹಾಸ್ವಾಮಿಗಳು ಸಂಸ್ಥಾನ ಮಠ

ಬೀದರ್: ನ.೨ರಂದು ಡಾ.ಚನ್ನವೀರ ಶಿವಾಚಾರ್ಯರ ೬೩ನೇ ಜನ್ಮದಿನೋತ್ಸವ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೊಳಲು ವಾದನದೊಂದಿಗೆ ಬ್ಯಾಕ್ ಸ್ಟ್ರೋಕ್ ಸ್ವಿಮ್ – ದಾಖಲೆ ಬರೆದ ಸಂಗೀತ ಶಿಕ್ಷಕ ರುಬೆನ್ ಜೇಸನ್ ಮಚಾದೊ

(ನ್ಯೂಸ್‌ ಕಡಬ) newskadaba.com,  ಅ.30 ಮಂಗಳೂರು: ಸಂಗೀತ ಶಿಕ್ಷಕ ರುಬೆನ್ ಜೇಸನ್ ಮಚಾದೊ ಅವರು ಮಂಗಳೂರಿನ ಸಂತ ಅಲೋಶಿಯೆಸ್ ಪರಿಗಣಿತ ವಿವಿಯ ಈಜು ಕೊಳದಲ್ಲಿ ಕೊಳಲನ್ನು ನುಡಿಸುತ್ತಾ ಸುಮಾರು 700 ಮೀಟರ್‌ಗೂ ಅಧಿಕ ದೂರವನ್ನು ಹಿಂದಕ್ಕೆ ಈಜುತ್ತಾ ಸಾಗುವ ಮೂಲಕ ಬ್ಯಾಕ್ ಸ್ಟ್ರೋಕ್ ಸ್ವಿಮ್‌ ಮಾಡುವ ಗೋಲ್ಡನ್ ಬುಕ್ ಆಫ್ ವರ್ಲ್ಡ್ ದಾಖಲೆ ಬರೆದಿದ್ದಾರೆ. 29ರ ಹರೆಯದ ಸಂಗೀತಗಾರ ಮಚಾದೊ ಸ್ವಿಮ್ಮಿಂಗ್ ಪೂಲ್‌ನಲ್ಲಿ ಬುಧವಾರ ಬೆಳಗ್ಗೆ 10 ಗಂಟೆಗೆ ಕೊಳಲು ವಾದನದೊಂದಿಗೆ ಈಜು ಆರಂಭಿಸಿ 5 ಸುತ್ತು

ಕೊಳಲು ವಾದನದೊಂದಿಗೆ ಬ್ಯಾಕ್ ಸ್ಟ್ರೋಕ್ ಸ್ವಿಮ್ – ದಾಖಲೆ ಬರೆದ ಸಂಗೀತ ಶಿಕ್ಷಕ ರುಬೆನ್ ಜೇಸನ್ ಮಚಾದೊ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಚಿನ್ ತೆಂಡೂಲ್ಕರ್ ವಿಶ್ವ ದಾಖಲೆ ಮುರಿದ ರೋಹಿತ್ ಶರ್ಮಾ

(ನ್ಯೂಸ್‌ ಕಡಬ) newskadaba.com,  ಅ..30: ಬರೋಬ್ಬರಿ 18 ವರ್ಷಗಳ ಬಳಿಕ ಭಾರತೀಯ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಐಸಿಸಿ ಏಕದಿನ ಕ್ರಿಕೆಟ್ (ODI) ಬ್ಯಾಟ್ಸ್‌ಮನ್‌ಗಳ ನೂತನ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದ್ದಾರೆ. ಇದರಿಂದ ಅವರು ಕೇವಲ ಶ್ರೇಷ್ಠ ಬ್ಯಾಟರ್ ಆಗಿ ಗುರುತಿಸಿಕೊಂಡಷ್ಟೇ ಅಲ್ಲದೆ, ಕ್ರಿಕೆಟ್ ಇತಿಹಾಸದಲ್ಲೇ ವಿಶಿಷ್ಟ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಐಸಿಸಿ ಪ್ರಕಟಿಸಿರುವ ಹೊಸ ರ‍್ಯಾಂಕಿಂಗ್ ಪಟ್ಟಿಯಲ್ಲಿ ರೋಹಿತ್ ಶರ್ಮಾ ಟಾಪ್ ಸ್ಥಾನ ಪಡೆದಿದ್ದಾರೆ. ಈ ಮೂಲಕ ಅವರು ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ನಂ.1

ಸಚಿನ್ ತೆಂಡೂಲ್ಕರ್ ವಿಶ್ವ ದಾಖಲೆ ಮುರಿದ ರೋಹಿತ್ ಶರ್ಮಾ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಅ..30: ರಾಜ್ಯದಲ್ಲಿ ಅ.30ರಂದು ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬೆಳಗಾವಿ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ಮತ್ತು ಕನಿಷ್ಠ

ಇಂದಿನ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಮೊಂಥಾ’ ಚಂಡಮಾರುತ – ಆಂಧ್ರಪ್ರದೇಶದಲ್ಲಿ ಇಬ್ಬರು ಸಾವು

(ನ್ಯೂಸ್‌ ಕಡಬ) newskadaba.com,  ಅ.30 ಹೈದರಾಬಾದ್:  ಆಂಧ್ರಪ್ರದೇಶವನ್ನು ತೀವ್ರವಾಗಿ ಬಾಧಿಸಿದ ‘ಮೊಂಥಾ’ ಚಂಡಮಾರುತ ನಂತರ ರಾಜ್ಯದಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಬುಧವಾರ ತಿಳಿಸಿದ್ದಾರೆ. ರಾಜ್ಯ ಸರ್ಕಾರ ಈಗ ಸಂಪೂರ್ಣ ಪ್ರಮಾಣದಲ್ಲಿ ಪರಿಹಾರ ಮತ್ತು ಪುನಃಸ್ಥಾಪನೆ ಕಾರ್ಯಾಚರಣೆಗಳಿಗೆ ತೊಡಗಿಕೊಂಡಿದೆ ಎನ್ನಲಾಗಿದೆ.ಮುಖ್ಯಮಂತ್ರಿ ನಾಯ್ಡು ಅವರು ಬುಧವಾರ ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಸಿ, ಸಂತ್ರಸ್ತರಿಗೆ ಗರಿಷ್ಠ ನೆರವು ನೀಡಲು ಪರಿಹಾರ ಕಾರ್ಯಾಚರಣೆ ಮುಂದುವರಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕರಾವಳಿ ಜಿಲ್ಲೆಗಳಲ್ಲಿ ಅಗತ್ಯ ಸೇವೆಗಳ ಪುನಃಸ್ಥಾಪನೆ

‘ಮೊಂಥಾ’ ಚಂಡಮಾರುತ – ಆಂಧ್ರಪ್ರದೇಶದಲ್ಲಿ ಇಬ್ಬರು ಸಾವು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು : ಲಂಡನ್ ನಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ – ಇಬ್ಬರ ಬಂಧನ

(ನ್ಯೂಸ್‌ ಕಡಬ) newskadaba.com,  ಅ..30: ವಿದೇಶದಲ್ಲಿ ಉದ್ಯೋಗ ಮಾಡಲು ವೀಸಾ ಕೊಡಿಸುವುದಾಗಿ ಹೇಳಿ ಹಲವಾರು ಮಂದಿ ಯನ್ನು ನಂಬಿಸಿ ಅವರಿಂದ ಹಣವನ್ನು ಪಡೆದುಕೊಂಡು ಬಳಿಕ ಉದ್ಯೋಗ ಕೊಡಿಸದೆ ವಂಚಿಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಮಂಗಳೂರಿನ ಕಾವೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬೆಂಗಳೂರಿನ ಆನೆಕಲ್ ತಾಲೂಕಿನ ಪ್ರ್ರಕೃತಿ ಯು (34) ಮತ್ತು ಕುಂದಾಪುರ ತಾಲೂಕಿನ ಗಂಗೊಳ್ಳಿಯ ಆಲ್ಡನ್ ರೆಬೇರೋ (42) ಎಂದು ಗುರುತಿಸಲಾಗಿದೆ. ಕಾವೂರು ಠಾಣಾ ವ್ಯಾಪ್ತಿಯ ಹಲವಾರು ಮಂದಿಗೆ ವಿದೇಶದಲ್ಲಿ ಉದ್ಯೋಗ ಮಾಡಲು ವೀಸಾ ಕೊಡಿಸುವುದಾಗಿ ಹೇಳಿ 1

ಮಂಗಳೂರು : ಲಂಡನ್ ನಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ – ಇಬ್ಬರ ಬಂಧನ Read More »

ಕರಾವಳಿ, ಕರ್ನಾಟಕ
Scroll to Top